Homeಮುಖಪುಟದೇವೇಗೌಡರೇ ಮುಂದಿನ ಪ್ರಧಾನಮಂತ್ರಿ : ಪ್ರಕಾಶ್ ಅಂಬೇಡ್ಕರ್

ದೇವೇಗೌಡರೇ ಮುಂದಿನ ಪ್ರಧಾನಮಂತ್ರಿ : ಪ್ರಕಾಶ್ ಅಂಬೇಡ್ಕರ್

- Advertisement -
- Advertisement -

ಹೌದು. ಇದು ಖಾಸಗಿ ಸಂಭಾಷಣೆಯಲ್ಲಿ ಹೇಳಿದ ಮಾತಲ್ಲ. ಅಥವಾ ಸುಮ್ಮನೇ ತೇಲಿಬಿಟ್ಟಿರುವುದೂ ಅಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ಮತ್ತು ಮಹಾರಾಷ್ಟ್ರದಲ್ಲಿ (ಎಐಎಂಐಎಂ ಜೊತೆ ಸೇರಿ ಕಟ್ಟಿಕೊಂಡಿರುವ) ವಂಚತ್ ಬಹುಜನ್ ಅಗಾಢಿಯ ನೇತಾರ ಪ್ರಕಾಶ್ ಅಂಬೇಡ್ಕರ್ ಅವರು ಲೆಕ್ಕಾಚಾರದೊಂದಿಗೆ ಮುಂದಿಟ್ಟಿರುವ ಮಾತು. ಪಿಟಿಐ ಸುದ್ದಿ ಸಂಸ್ಥೆಯನ್ನು ಉಲ್ಲೇಖಿಸಿ ಏಷ್ಯನ್ ಏಜ್, ಮನಿ ಕಂಟ್ರೋಲ್ ಸೇರಿದಂತೆ ಮುಂಬೈನಿಂದ ಪ್ರಕಟವಾಗುವ ಹಲವು ಪತ್ರಿಕೆಗಳಲ್ಲಿ ಇಂದು ಈ ಸುದ್ದಿ ಇದೆ.

ಮಹಾರಾಷ್ಟ್ರದಲ್ಲಿ ಮುಗಿದಿರುವ ಚುನಾವಣೆಯ ಕುರಿತು ಸುದ್ದಿಗಾರರೊಂದಿಗೆ ಪ್ರಕಾಶ್ ಅಂಬೇಡ್ಕರ್ ಮಾತಾಡುತ್ತಾ, ರಾಷ್ಟ್ರ ರಾಜಕಾರಣದ ಸಾಧ್ಯತೆಗಳ ಕುರಿತು ಬೆಳಕು ಚೆಲ್ಲಿದ್ದಾರೆ.

ಅವರ ಪ್ರಕಾರ ಕಾಂಗ್ರೆಸ್ 100 ಸೀಟುಗಳಿಗೆ ಸೀಮಿತವಾದರೆ, ಬಿಜೆಪಿಯು 150ರಿಂದ 200 ಸೀಟುಗಳಿಗೆ ಇಳಿಯಲಿದೆ. ಉಳಿದೆಲ್ಲಾ ಸೀಟುಗಳು ಮಿಕ್ಕ ಪಕ್ಷಗಳ ಪಾಲಾಗಲಿವೆ. ಅಂತಹ ಸಂದರ್ಭದಲ್ಲಿ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಲು ಸಾಧ್ಯವೇ ಇಲ್ಲ. ಉಳಿದಂತೆ ಕಾಂಗ್ರೆಸ್ ಹಲವು ರಾಜ್ಯಗಳಲ್ಲಿ ವಿರೋಧಿಸುತ್ತಿರುವ ಪಕ್ಷಗಳು ರಾಹುಲ್‍ಗಾಂಧಿಯನ್ನು ಪ್ರಧಾನಿಯಾಗಿಸಲು ಒಪ್ಪುವುದಿಲ್ಲ. ಆಗ ದೇವೇಗೌಡರಂತಹ ‘ಕಪ್ಪು ಕುದುರೆ’ಗೇ ಹೆಚ್ಚಿನ ಸಾಧ್ಯತೆ ಎಂಬುದು ಅವರ ಅಭಿಪ್ರಾಯ.

ಉಳಿದ ಪ್ರಾದೇಶಿಕ ನಾಯಕರುಗಳಿಗಿಂತ ಒಮ್ಮೆ ಪ್ರಧಾನಿಯಾದ ಅನುಭವವಿರುವ ದೇವೇಗೌಡರೇ ಈ ಹುದ್ದೆಗೆ ಸೂಕ್ತವಾಗುತ್ತಾರೆ ಮತ್ತು ಎಲ್ಲರಿಗೂ ಅವರ ನಾಯಕತ್ವ ಒಪ್ಪಿಗೆಯಾಗುತ್ತದೆ ಎಂದಿದ್ದಾರೆ.

4 ಹಂತಗಳ ಚುನಾವಣೆ ಮುಗಿದ ನಂತರ, ಬಿಜೆಪಿಗೆ ಹೆಚ್ಚಿನ ಸೀಟುಗಳು ಬರುವುದಿಲ್ಲ ಎಂಬ ವಾತಾವರಣ ಎಲ್ಲೆಡೆ ನಿರ್ಮಾಣವಾಗುತ್ತಿರುವಾಗ ಪ್ರಕಾಶ್ ಅಂಬೇಡ್ಕರ್ ಅವರ ಮಾತು ಹೆಚ್ಚಿನ ಮಹತ್ವ ಪಡೆದುಕೊಂಡಿದೆ. 1996ರಲ್ಲೂ ದೇವೇಗೌಡರು ಪ್ರಧಾನ ಮಂತ್ರಿ ಸ್ಥಾನಕ್ಕೇರಬಹುದು ಎಂದು ಅಥವಾ ಅವರ ನಂತರ ಇಂದ್ರಕುಮಾರ್ ಗುಜ್ರಾಲ್ ಪ್ರಧಾನಿಯಾಗಬಹುದೆಂದು ಯಾರೂ ಊಹಿಸಿರಲಿಲ್ಲ. ಈ ಸಾರಿ ಎರಡೂ ರಾಜಕೀಯ ಪಕ್ಷಗಳು ಬಹುಮತ ಪಡೆದುಕೊಳ್ಳುವ ಸಾಧ್ಯತೆ ಇಲ್ಲವೇ ಇಲ್ಲ ಮಾತ್ರವಲ್ಲಾ ಪ್ರಕಾಶ್ ಅಂಬೇಡ್ಕರ್ ಅವರು ಹೇಳಿದ ಸ್ಥಿತಿ ನಿರ್ಮಾಣವಾದರೆ ಅಚ್ಚರಿಯೇನಿಲ್ಲ.

ಯಾವುದಕ್ಕೂ ಮೇ 23ರ ಎಣಿಕೆಯವರೆಗೆ ಕಾದು ನೋಡಬೇಕು. ಆಗ ಯಾವ ಬಗೆಯ ಅಚ್ಚರಿಯ ಸಮೀಕರಣಗಳು ತೆರೆದುಕೊಳ್ಳುತ್ತವೆ ಎಂಬುದು ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...