Homeಕರೋನಾ ತಲ್ಲಣ‘ಇಂಡಿಯನ್ ವೇರಿಯೆಂಟ್’ ಪದವಿರುವ ಪೋಸ್ಟ್‌ಗಳನ್ನು ಕಿತ್ತು ಹಾಕಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ನೋಟಿಸ್

‘ಇಂಡಿಯನ್ ವೇರಿಯೆಂಟ್’ ಪದವಿರುವ ಪೋಸ್ಟ್‌ಗಳನ್ನು ಕಿತ್ತು ಹಾಕಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ನೋಟಿಸ್

ಜನರು ಸಾಂಕ್ರಮಿಕದಿಂದ ಸಾಯುತ್ತಿರಬೇಕಾದರೆ ಕೇಂದ್ರ ಸರ್ಕಾರವು ತನ್ನ ‘ಇಮೇಜ್‌’ ಸರಿಪಡಿಸುವ ಕೆಲಸದಲ್ಲಿ ನಿರತವಾಗಿದೆ.

- Advertisement -
- Advertisement -

ಕೊರೊನಾ ವೈರಸ್‌‌ನ “ಭಾರತೀಯ ರೂಪಾಂತರ”( ಇಂಡಿಯನ್ ವೇರಿಯಂಟ್) ವನ್ನು ಸೂಚಿಸುವ ಅಥವಾ ಬಳಸಿರುವ ಯಾವುದೇ ವಿಷಯವನ್ನು ತೆಗೆದುಹಾಕುವಂತೆ ಕೇಂದ್ರದ ಮಾಹಿತಿ ತಂತ್ರಜ್ಞಾನ (ಐಟಿ) ಸಚಿವಾಲಯವು ಎಲ್ಲಾ ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಪತ್ರ ಬರೆದಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಕಳೆದ ವರ್ಷ ಭಾರತದಲ್ಲಿ ಮೊದಲು ಗುರುತಿಸಲ್ಪಟ್ಟ ರೂಪಾಂತರ ಕೊರೊನಾ ವೈರಸ್ ಅನ್ನು ಮೇ 11 ರಂದು ವಿಶ್ವ ಆರೋಗ್ಯ ಸಂಸ್ಥೆಯು ‘ಬಿ .1.617’ ಎಂದು ವರ್ಗೀಕರಿಸಿತ್ತು. ಇದರ ಮರುದಿನ “ಇಂಡಿಯನ್ ವೇರಿಯಂಟ್” ಎಂಬ ಪದವನ್ನು ಮಾಧ್ಯಮಗಳು ಯಾವುದೇ ಆಧಾರವಿಲ್ಲದೆ ಬಳಸುತ್ತಿದೆ ಎಂದು ಕೇಂದ್ರ ಸರ್ಕಾರವು ಆರೋಪಿಸಿತ್ತು.

ಈ ಬಗ್ಗೆ ಶುಕ್ರವಾರ ಕೇಂದ್ರ ಸರ್ಕಾರವು ಸಾಮಾಜಿಕ ಜಾಲತಾಣ ಕಂಪೆನಿಗಳಿಗೆ ಪತ್ರ ಬರೆದಿದ್ದು, “ಕೊರೊನಾ ವೈರಸ್‌ ‘ಇಂಡಿಯನ್ ವೇರಿಯಂಟ್’ ಎಂದು ಹೆಸರಿಸುವ ಅಥವಾ ಸೂಚಿಸುವ ಎಲ್ಲಾ ವಿಷಯವನ್ನು ತೆಗೆದುಹಾಕಿ” ಎಂದು ತಿಳಿಸಿದೆ.

ಇದನ್ನೂ ಓದಿ: ಸುಳ್ಳನ್ನು ಎತ್ತಿ ತೋರಿಸಿದ್ದಕ್ಕೆ ಟ್ವಿಟರ್‌ ಅನ್ನು ಬೆದರಿಸುತ್ತಿರುವ ಕೇಂದ್ರ ಸರ್ಕಾರ!

“ಇಂಡಿಯನ್ ವೇರಿಯೆಂಟ್‌ ಎಂಬ ಹೆಸರು ಸಂಪೂರ್ಣವಾಗಿ ತಪ್ಪಾಗಿದೆ. ಈ ಮಾದರಿಯ ಯಾವುದೆ ಕೊರೊನಾ ವೈರಸ್‌ ‘ರೂಪಾಂತರ’ವನ್ನು ವಿಶ್ವ ಆರೋಗ್ಯ ಸಂಸ್ಥೆ ಉಲ್ಲೇಖಿಸಿಲ್ಲ. ಆರೋಗ್ಯ ಸಂಸ್ಥೆಯ ಯಾವುದೆ ವರದಿಗಳೂ ಕೊರೊನಾ ವೈರಸ್‌ನ ಬಿ .1.617 ರೂಪಾಂತರವನ್ನು ಇಂಡಿಯನ್ ವೇರಿಯೆಂಟ್‌ ಎಂದು ಹೇಳಿಲ್ಲ” ಎಂದು ಪತ್ರವು ಹೇಳಿದೆ.

‘ಇಂಡಿಯನ್ ವೇರಿಯೆಂಟ್‌’ ಉಲ್ಲೇಖವು ದೇಶದ ಚಿತ್ರಣವನ್ನು ಹಾಳುಗೆಡವುತ್ತದೆ ಮತ್ತು ತಪ್ಪು ಸಂದೇಶವನ್ನು ಹರಡುತ್ತದೆ ಎಂಬ ಬಗ್ಗೆ ‘ಗಟ್ಟಿಯಾದ ಮತ್ತು ಸ್ಪಷ್ಟವಾದ’ ಸಂದೇಶ ರವಾನಿಸಲು ಈ ನೋಟಿಸ್ ನೀಡಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆಗೆ ಐಟಿ ಸಚಿವಾಲಯವು ಸಂಪರ್ಕಕ್ಕೆ ಸಿಗಲಿಲ್ಲ ಎಂದು ಅದು ಹೇಳಿದೆ.

ಪ್ರಪಂಚದಾದ್ಯಂತ ವೈದ್ಯರು ಮತ್ತು ಆರೋಗ್ಯ ತಜ್ಞರು ಸಾಮಾನ್ಯವಾಗಿ ಕೊರೊನಾ ವೈರಸ್ ರೂಪಾಂತರಗಳು ಎಲ್ಲಿ ಪತ್ತೆಯಾಗಿದೆಯೊ ಅದರ ಆಧಾರದ ಮೇಲೆಯೆ ಹೆಸರನ್ನು ಉಲ್ಲೇಖಿಸುತ್ತಾರೆ. ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ ರೂಪಾಂತರಗಳನ್ನು ಹಾಗೆಯೆ ಉಲ್ಲೇಖಿಸುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ದೇಶ ಚಿತ್ರಣದ ಹಾಳಾಗುತ್ತಿದೆ ಎಂಬ ಹೆಸರಲ್ಲಿ ಕೇಂದ್ರ ಸರ್ಕಾರವು ತನ್ನ ವೈಫಲ್ಯವನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ. ಕನಿಷ್ಠ ಆರೋಗ್ಯ ಸೌಲಭ್ಯಗಳಿಲ್ಲದೆ ಸಾಂಕ್ರಮಿಕದಿಂದಾಗಿ ಜನರು ಸಾಯುತ್ತಿರುವ ಸಮಯದಲ್ಲಿ ಕೇಂದ್ರ ಸರ್ಕಾರವು ತನ್ನ ಇಮೇಜ್‌ ಸರಿಪಡಿಸಲು ಹೋಗಿ ಅಂತರಾಷ್ಟ್ರೀಯವಾಗಿ ದೇಶದ ಮಾನವನ್ನು ಹರಾಜಾಕುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನರ ಜೀವಕ್ಕಿಂತಲೂ ತನ್ನ ‘ಇಮೇಜ್‌’ ರಕ್ಷಿಸುವುದು ಮುಖ್ಯವಾಗಿದೆ. ಅದಕ್ಕೆ ಈ ರೀತಿಯ ಕಸರತ್ತುಗಳನ್ನು ಮಾಡುತ್ತಿದೆ ಎಂದು ಹಲವಾರು ಜನರು ಕಿಡಿ ಕಾರಿದ್ದಾರೆ.

ಭಾರತವು ಕೊರೊನಾ ಪ್ರಕರಣಗಳಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ. ದೇಶದಲ್ಲಿ ಪ್ರತಿದಿನ ಸುಮಾರು 2.5 ಲಕ್ಷ ಸೋಂಕುಗಳು ಮತ್ತು 4,000 ಸಾವುಗಳನ್ನು ವರದಿಯಾಗುತ್ತಿದೆ.

ಕೊರೊನಾ ವೈರಸ್ ಸಾಂಕ್ರಾಮಿಕವನ್ನು ನಿಭಾಯಿಸಲು ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ವಿಫಲವಾದ ಹಿನ್ನಲೆಯಲ್ಲಿ ಭಾರಿ ಟೀಕೆಗಳನ್ನು ಎದುರಿಸುತ್ತಿದೆ. ಕೊರೊನಾ ಎರಡನೆ ಅಲೆ ಬರಲಿದೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದರೂ ಮೋದಿ ಸರ್ಕಾರವು ಅದನ್ನು ಸಮರ್ಪಕವಾಗಿ ನಿಭಾಯಿಸಲು ಯೋಜನೆ ರೂಪಿಸದ ಕಾರಣಕ್ಕಾಗಿ ದೇಶದಾದ್ಯಂತ ಅಸಮಾಧಾನಗಳು ಎದ್ದಿದೆ.

ಇದನ್ನೂ ಓದಿ: ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರಗಳ ಮತ್ತು ಕೆಲವು ಮುಖಂಡರ ನಡೆ ಕೇಡುಗಾಲಕ್ಕೆ ಕುದುರೆ ಮೊಟ್ಟೆ ಇಟ್ಟಂತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...