Homeಕರ್ನಾಟಕದಲಿತ ಯುವಕನಿಗೆ ಮೂತ್ರ ಕುಡಿಸಿದ ಗೋಣಿಬೀಡು PSI ಅರ್ಜುನ್ ವಿರುದ್ಧ FIR: ಅಮಾನತ್ತಿಗೆ ಆಗ್ರಹ

ದಲಿತ ಯುವಕನಿಗೆ ಮೂತ್ರ ಕುಡಿಸಿದ ಗೋಣಿಬೀಡು PSI ಅರ್ಜುನ್ ವಿರುದ್ಧ FIR: ಅಮಾನತ್ತಿಗೆ ಆಗ್ರಹ

ಈ ಅಮಾನವೀಯ ಕೃತ್ಯಕ್ಕೆ ಕೇವಲ ಎಫ್‌ಐಆರ್‌ ದಾಖಲಿಸಿದರೆ ಸಾಲುವುದಿಲ್ಲ, ಅವರನ್ನು ಅಮಾನತು ಮಾಡಬೇಕೆಂದು, ಕಠಿಣ ಶಿಕ್ಷೆ ನೀಡಬೇಕೆಂಬ ಒತ್ತಾಯಗಳು ಕೇಳಿಬಂದಿದೆ.

- Advertisement -
- Advertisement -

ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪದ ಮೇಲೆ ಘಟನೆ ನಡೆದು 12 ದಿನಗಳ ನಂತರ ಗೋಣಿಬೀಡು PSI ಅರ್ಜುನ್ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.

ಗೋಣೀಬೀಡು ಠಾಣೆ ಪಿಎಸ್‌ಐ ತನ್ನ ಮೇಲೆ ವಿನಾಕಾರಣ ತೀವ್ರ ಹಲ್ಲೆ ನಡೆಸಿ, ಮೂತ್ರ ಕುಡಿಸಿ ಜಾತಿ ನಿಂದನೆ ಮಾಡಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಹಿರಿಯ ಪೋಲೀಸ್ ಅಧಿಕಾರಿಗಳಿಗೆ ಸಂತ್ರಸ್ತ ಯುವಕ ಪುನೀತ್ ಮೇ 10 ರಂದೇ ದೂರು ನೀಡಿದ್ದರು.

ನನ್ನನ್ನು ವಿನಾಕಾರಣ ಠಾಣೆಗೆ ಕರೆದೊಯ್ದು ಬೆಳಗ್ಗಿನಿಂದ ರಾತ್ರಿವರೆಗೂ ಕ್ರೂರವಾಗಿ ದೌರ್ಜನ್ಯ ನಡೆಸಿ, ಮೂತ್ರ ಕುಡಿಸಿ, ಜಾತಿ ನಿಂದನೆಮಾಡಿದ ಪಿಎಸ್‌ಐ ಅರ್ಜುನ್ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಪೋಲೀಸ್ ಮಹಾ ನಿರ್ದೇಶಕರು, ಪಶ್ಚಿಮ ವಲಯ ಐಜಿಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ರಾಜ್ಯ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದರು.

ಘಟನೆಯನ್ನು ಜಿಲ್ಲಾ ದಲಿತ ಸಂಘರ್ಷ ಸಮಿತಿ ಮುಖಂಡ ರತನ್ ಊರುಬಗೆ ಖಂಡಿಸಿದ್ದಲ್ಲದೆ,  ಕ್ಷೇತ್ರದ ಶಾಸಕ ಎಂ.ಪಿ ಕುಮಾರಸ್ವಾಮಿಯವರು ಈ ಹಿಂದೆಯೇ ಹಲವು ದೂರುಗಳಿರುವ ಪಿಎಸ್‌ಐ ಅನ್ನು ವರ್ಗಾವಣೆ ಮಾಡಲು ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ತಂದಿದ್ದರು. ಅದರಂತೆ ಪಿಎಸ್‌ಐ ಅರ್ಜುನ್‌ರನ್ನು ವರ್ಗಾವಣೆ ಮಾಡಲಾಗಿತ್ತು. ಉಳಿದಂತೆ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಆದರೆ ಮೇ 22 ರಂದು ಹಲವು ಪತ್ರಿಕೆಗಳಲ್ಲಿ ಮತ್ತು ಇಂಗ್ಲಿಷ್‌ ಮಾಧ್ಯಮಗಳಲ್ಲಿ ಈ ಘಟನೆ ವರದಿಯಾಗಿತ್ತು. ನಂತರ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿ ತೀವ್ರ ಖಂಡನೆ, ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ಸ್ಪಷ್ಟನೆಗಾಗಿ ಹತ್ತಾರು ಮಾಧ್ಯಮಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಫೋನ್ ಮಾಡಿದ್ದರು. ಈ ಎಲ್ಲಾ ಒತ್ತಡಗಳಿಂದ ಕೊನೆಗೂ ಗೋಣಿಬೀಡು PSI ಅರ್ಜುನ್ ವಿರುದ್ಧ ಐಪಿಸಿ ಸೆಕ್ಷನ್ 342/323/504/506/330/348 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಕೇಸು ದಾಖಲಾಗಿದೆ.

ಆದರೆ ಈ ಅಮಾನವೀಯ, ಹೇಯ ಕೃತ್ಯಕ್ಕೆ ಕೇವಲ ಎಫ್‌ಐಆರ್‌ ದಾಖಲಿಸಿದರೆ ಸಾಲುವುದಿಲ್ಲ, ಅವರನ್ನು ಅಮಾನತು ಮಾಡಬೇಕೆಂದು, ಅಷ್ಟು ಮಾತ್ರವಲ್ಲದೇ ಕಠಿಣ ಶಿಕ್ಷೆ ನೀಡಬೇಕೆಂಬ ಒತ್ತಾಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿಬಂದಿದೆ.

ಇಂತಹ ಅಮಾನವೀಯ ಕೃತ್ಯವೆಸಗಿದ ಪೊಲೀಸ್ ಇನ್ಸ್ಪೆಕ್ಟರ್‌ನನ್ನು ಅಮಾನತುಗೊಳಿಸದೆ, ವಿರೋಧ ತಣಿಸಲು ಕೇವಲ ವರ್ಗಾವಣೆ ಮಾಡಿದ್ದು ಬಿಜೆಪಿಯ ದಲಿತ ವಿರೋಧಿ ನೀತಿಗೆ ಸಾಕ್ಷಿ. ಗೃಹ ಸಚಿವ ಬೊಮ್ಮಾಯಿರವರೆ ಕರ್ನಾಟಕಕ್ಕೆ ಈ ಯುಪಿ ಮಾಡೆಲ್ ಬೇಕಿಲ್ಲ. ಕೂಡಲೇ ಇನ್ಸ್ಪೆಕ್ಟರ್‌ನನ್ನು ಅಮಾನತುಗೊಳಿಸಿ ಉನ್ನತ ತನಿಖೆಗೆ ವಹಿಸಿ ಎಂದು ಕರ್ನಾಟಕ ಕಾಂಗ್ರೆಸ್ ಒತ್ತಾಯಿಸಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ದಲಿತ ಯುವಕನಿಗೆ ಪೊಲೀಸ್ ಇನ್ಸ್ಪೆಕ್ಟರ್ ಮೂತ್ರ ಕುಡಿಸಿದ್ದು ಅತ್ಯಂತ ಕ್ರೂರ ಹಾಗೂ ರಾಜ್ಯವೇ ತಲೆ ತಗ್ಗಿಸುವ ಘಟನೆ ಇಂತಹ ಪ್ರಕರಣಗಳು ಬಿಜೆಪಿ ಆಳ್ವಿಕೆಯ ಯುಪಿ, ಮಧ್ಯಪ್ರದೇಶ, ಬಿಹಾರದಂತಹ ರಾಜ್ಯಗಳಿಂದ ಕೇಳಿಬರುತ್ತಿತ್ತು, ಈಗ ಕರ್ನಾಟಕದಲ್ಲೂ ಘಟಿಸಿದ್ದಕ್ಕೆ ದಲಿತ ವಿರೋಧಿ ಬಿಜೆಪಿಯೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.


ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿ ದೌರ್ಜನ್ಯ: ಹೇಯ ಕೃತ್ಯ ಎಸಗಿದ ಪಿಎಸ್‌ಐ ಅಮಾನತ್ತಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...