ಎರಡು ಬಾರಿ ಒಲಿಂಪಿಕ್ ಪದಕ ವಿಜೇತರಾಗಿರುವ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಭಾನುವಾರ ಬೆಳಿಗ್ಗೆ ಬಂಧಿಸಿದ್ದಾರೆ. ಇವರ ವಿರುದ್ಧ ಸಹ ಕುಸ್ತಿಪಟು ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪವಿದ್ದು, ಪರಾರಿಯಾಗಿದ್ದರು.
ಬಂಧಿತ ಸುಶೀಲ್ ಕುಮಾರ್ ಜೊತೆಗೆ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ವಾಯುವ್ಯ ದೆಹಲಿಯ ಮುಂಡ್ಕಾದ ಇತರ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯ ಕ್ರೀಡಾಂಗಣವೊಂದರಲ್ಲಿ 23 ವರ್ಷದ ಕುಸ್ತಿಪಟು ಸಾವನ್ನಪ್ಪಿದ್ದರು. ಇವರನ್ನು ಕೊಲೆ ಮಾಡಲಾಗಿದೆ ಎಂಬ ಆರೋಪದಲ್ಲಿ ಸುಶೀಲ್ ಕುಮಾರ್ ಅವರನ್ನು ಪೊಲೀಸರು ಹುಡುಕುತ್ತಿದ್ದರು.
ಇದನ್ನೂ ಓದಿ: ಮೇ 24 ರೊಳಗೆ ಭಾರತಕ್ಕೆ ಅಪ್ಪಳಿಸಲಿದೆ ‘ಯಾಸ್ ಚಂಡಮಾರುತ’ – ಹವಾಮಾನ ಇಲಾಖೆ ಎಚ್ಚರಿಕೆ
” ಎಸಿಪಿ ಅತ್ತಾರ್ ಸಿಂಗ್ ಮೇಲ್ವಿಚಾರಣೆಯಲ್ಲಿ ಇನ್ಸ್‌ಪೆಕ್ಟರ್ ಶಿವ್‌ಕುಮಾರ್, ಇನ್ಸ್‌ಪೆಕ್ಟರ್ ಕರಮ್‌ಬೀರ್ ನೇತೃತ್ವದ ವಿಶೇಷ ಎಸ್‌ಆರ್ ತಂಡ, ದೆಹಲಿಯ ಮುಂಡ್ಕಾ ಪ್ರದೇಶದ ಸುಶೀಲ್ ಕುಮಾರ್ ಮತ್ತು ಅಜಯ್ ಅವರನ್ನು ಛತ್ರಾಸಲ್ ಕ್ರೀಡಾಂಗಣದಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮುಂಡ್ಕಾ ಪ್ರದೇಶದಿಂದ ಬಂಧಿಸಲಾಗಿದೆ” ಎಂದು ವಿಶೇಷ ಘಟಕದ ಸಿಪಿ ನೀರಜ್ ಠಾಕೂರ್ ಮಾಹಿತಿ ನೀಡಿದ್ದಾರೆ.
’ಸುಶೀಲ್ ಕುಮಾರ್ ಮತ್ತು ಅವರ ಸಹಚರರು ಮೇ 4 ರಂದು ರಾಷ್ಟ್ರ ರಾಜಧಾನಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ ಸಹ ಕುಸ್ತಿಪಟು 23 ವರ್ಷದ ಸಾಗರ್ ರಾಣಾ ಮತ್ತು ಆತನ ಇಬ್ಬರು ಸ್ನೇಹಿತರ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಾಳಯಗಳು ಆಸ್ಪತ್ರೆಗೆ ದಾಖಲಾಗಿದ್ದರು ಇದರಲ್ಲಿ ಸಾಗರ್ ರಾಣಾ ತೀವ್ರ ಗಾಯಗಳಿಂದ, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.
ಹಲ್ಲೆ ನಡೆಸಿದ ನಂತರ ಸುಶೀಲ್ ಕುಮಾರ್ ಮತ್ತು ಅಜಯ್ ಸ್ಥಳದಿಂದ ಪರಾರಿಯಾಗಿದ್ದಾರೆ. ಅಂದಿನಿಂದ ಇಬ್ಬರು ಆರೋಪಿಗಳನ್ನು ಪೊಲೀಸರು ಹುಡುಕುತ್ತಿದ್ದರು.
ಇದನ್ನೂ ಓದಿ: ‘ಇಂಡಿಯನ್ ವೇರಿಯೆಂಟ್’ ಪದವಿರುವ ಪೋಸ್ಟ್‌ಗಳನ್ನು ಕಿತ್ತು ಹಾಕಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ನೋಟಿಸ್
ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂಪಾಯಿ ಮತ್ತು ಅಜಯ್ ಕುಮಾರ್ ಬಗೆಗಿನ ಮಾಹಿತಿಗೆ 50,000 ರೂಪಾಯಿ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದರು.
ಮೇ 18 ರಂದು ಸುಶೀಲ್ ಕುಮಾರ್ ಬಂಧನದಿಂದ ರಕ್ಷಣೆ ಕೋರಿ ರೋಹಿಣಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯವು ನಿರೀಕ್ಷಿತ ಜಾಮೀನು ಅರ್ಜಿಯನ್ನು ವಜಾಗೊಳಿಸಿ, ಆರೋಪಿಯ ವಿರುದ್ಧದ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ ಎಂದು ಹೇಳಿದೆ.
ಸುಶೀಲ್ ಕುಮಾರ್ ಮತ್ತು ಇತರ ಆರು ಜನರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು.
ಕುಸ್ತಿಪಟು ಸುಶೀಲ್ ಕುಮಾರ್ 2008 ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಮತ್ತು 2012 ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.
ಇದನ್ನೂ ಓದಿ: ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರಗಳ ಮತ್ತು ಕೆಲವು ಮುಖಂಡರ ನಡೆ ಕೇಡುಗಾಲಕ್ಕೆ ಕುದುರೆ ಮೊಟ್ಟೆ ಇಟ್ಟಂತಿದೆ


