Homeಕರೋನಾ ತಲ್ಲಣ“ನಾವೂ ಬದುಕಬೇಕು”: ನಾಳೆ ರಾಜ್ಯಾದ್ಯಂತ ಜನಾಗ್ರಹ ಆಂದೋಲನ

“ನಾವೂ ಬದುಕಬೇಕು”: ನಾಳೆ ರಾಜ್ಯಾದ್ಯಂತ ಜನಾಗ್ರಹ ಆಂದೋಲನ

ಸರ್ಕಾರ ಕಿವಿಗೊಡದಿದ್ದಲ್ಲಿ ಲಾಕ್ ಡೌನ್ ಮುಗಿದ ಕೂಡಲೇ ಮುಖ್ಯಮಂತ್ರಿಗಳು, ಸಚಿವರು ಹಾಗೂ ಆಳುವ ಪಕ್ಷದ ಶಾಸಕರ ಮನೆಗಳೆದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.

- Advertisement -
- Advertisement -

ಜನರ ಜೀವ ಮತ್ತು ಜೀವನೋಪಾಯ ಉಳಿಸಲು ಸರ್ಕಾರ ಕೈಗೊಳ್ಳಬೇಕಾದ ಪಂಚ ತುರ್ತು ಕ್ರಮಗಳ ಬಗ್ಗೆ ತಿಂಗಳಿನಿಂದ ಹೋರಾಟ ಮಾಡುತ್ತಿರುವ ಜನಾಗ್ರಹ ಆಂದೋಲನವು ನಾಳೆ [ಮೇ 24 ರಂದು] ರಾಜ್ಯವ್ಯಾಪಿ ಜನಾಗ್ರಹಕ್ಕೆ ಕರೆ ನೀಡಿದೆ. ಜನರ ಜೀವ ಉಳಿಸುವ ಕ್ರಮಗಳಿಗಾಗಿ ಹಾಗೂ ಸಂಕಷ್ಟದಲ್ಲಿರುವ ಜನರ ಜೀವನೋಪಾಯಕ್ಕೆ ಆಸರೆಯಾಗಬಲ್ಲ ಪ್ಯಾಕೇಜಿಗಾಗಿ ತಮ್ಮ ತಮ್ಮ ಮನೆ ಮುಂದೆಯೇ ತಟ್ಟೆ ಲೋಟ ಬಡಿದು, ಖಾಲಿ ಚೀಲ ಪ್ರದರ್ಶಿಸುವ ಮೂಲಕ ಸರ್ಕಾರದ ಕಣ್ತೆರೆಸಲು ಮುಂದಾಗಿದೆ.

ಎಲ್ಲೆಡೆಯೂ ಉಚಿತ ಚಿಕಿತ್ಸೆ ಸಿಗಬೇಕು, ಸರ್ವರಿಗೂ ವ್ಯಾಕ್ಸಿನ್ ದೊರಕಬೇಕು, ಬಡವರಿಗೆ ದಿನಸಿ ಮತ್ತು ನೆರವು ನೀಡಬೇಕು, ಕೋವಿಡ್‌ನಿಂದ ಸಾವಿಗೀಡಾದ, ಅನಾಥರಾದವರಿಗೆ ಪರಿಹಾರ ಕೊಡಬೇಕು ಮತ್ತು ರೈತರ ಬೀಜ, ಗೊಬ್ಬರದ ಮೇಲೆ ವಿಶೇಷ ಸಬ್ಸಿಡಿ ಘೋಷಿಸಬೇಕು ಎಂಬ ಪಂಚ ತುರ್ತು ಕ್ರಮಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ.

“ನಾವೂ ಬದುಕಬೇಕು” ಎಂಬ ಘೋಷವಾಕ್ಯವನ್ನು ಮುಂದಿಟ್ಟುಕೊಂಡು, ನಾಳೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಜನರು ಬೆಳಿಗ್ಗೆ 9ಕ್ಕೆ ಮನೆಯಿಂದ ಹೊರಬಂದು, ಕೋವಿಡ್ ನಿಯಮಗಳನ್ನು ಪಾಲಿಸುತ್ತಲೇ, ಖಾಲಿ ತಟ್ಟೆ – ಖಾಲಿ ಚೀಲಗಳನ್ನು ಪ್ರದರ್ಶಿಸುತ್ತಾ, ಘೋಷಣೆಗಳನ್ನು ಹಾಕುತ್ತಾ, ತಮ್ಮ ಹಕ್ಕೊತ್ತಾಯಗಳತ್ತ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಲಿದ್ದಾರೆ. ಈ ಬಾರಿ ನಮ್ಮ ನಮ್ಮ ಮನೆ ಬೀದಿಗಳಲ್ಲಿ ಪ್ರತಿಭಟನೆ ನಡೆಯಲಿದೆ. ಸರ್ಕಾರ ಕಿವಿಗೊಡದಿದ್ದಲ್ಲಿ ಲಾಕ್ ಡೌನ್ ಮುಗಿದ ಕೂಡಲೇ ಮುಖ್ಯಮಂತ್ರಿಗಳು, ಸಚಿವರು ಹಾಗೂ ಆಳುವ ಪಕ್ಷದ ಶಾಸಕರ ಮನೆಗಳೆದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಜನಾಗ್ರಹ ಆಂದೋಲನದ ಪರವಾಗಿ ಕೆ.ಎಲ್ ಅಶೋಕ್ ಮತ್ತು ಮಾವಳ್ಳಿ ಶಂಕರ್ ತಿಳಿಸಿದ್ದಾರೆ.

ಜನಾಗ್ರಹ ಒಂದು ಸಂಘಟನೆಯಾಗಲೀ ಅಥವ ವೇದಿಕೆಯಾಗಲೀ ಆಗಿರದೆ ಜನಸಾಮಾನ್ಯರ ಒಕ್ಕೊರಲ ಕೂಗಾಗಿದೆ. ನಾವೆಲ್ಲರೂ ಸೇರಿಯೇ ಇದನ್ನು ಗಟ್ಟಿಗೊಳಿಸಬೇಕಿದೆ. ಈಗಾಗಲೇ ಎಲ್ಲಾ ಜನಪರ ಸಂಘಟನೆಗಳು ಹಾಗೂ ಪ್ರತಿಪಕ್ಷಗಳು ಇದಕ್ಕೆ ದನಿ ಗೂಡಿಸಿವೆ. ಬದುಕು ದುಸ್ತರವಾಗಿರುವ ಈ ಸಂದರ್ಭದಲ್ಲಿ ನಾವೆಲ್ಲರೂ ಒಕ್ಕೊರಲಿನಿಂದ “ನಾವೂ ಬದುಕಬೇಕು” ಎಂದು ಕೂಗಿ ಹೇಳಲೇಬೇಕು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಜನಾಗ್ರಹ ಆಂದೋಲನದ ಹೇಳಿಕೆಗೆ ಶಸಿಕಾಂತ್ ಸೆಂದಿಲ್, ಸಿದ್ದನಗೌಡ ಪಾಟೀಲ್, ಚಾಮರಸ ಮಾಲೀ ಮಾಟೀಲ್, ಹೆಚ್. ಆರ್. ಬಸವರಾಜಪ್ಪ, ಯೂಸೂಫ್ ಕನ್ನಿ, ಯಾಸೀನ್ ಮಲ್ಪೆ, ನೂರ್ ಶ್ರೀಧರ್, ಮಾವಳ್ಳಿ ಶಂಕರ್, ಸ್ವರ್ಣ ಭಟ್, ಕೆ.ಎಲ್. ಅಶೋಕ್ ಮೊದಲಾದವರು ಸಹಿ ಹಾಕಿದ್ದಾರೆ.


ಇದನ್ನೂ ಓದಿ: ಬಹುಜನ ಭಾರತ: ಅಧೋಲೋಕದ ಈ ಲೇಖಕ ಇದೀಗ ಬಂಗಾಳದ ಶಾಸಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...