Homeಅಂತರಾಷ್ಟ್ರೀಯ14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

- Advertisement -
- Advertisement -

14 ಸಾವಿರ ಕೋಟಿ ರೂ. ಪಿಎನ್‌ಬಿ (ಪಂಜಾಬ್ ನ್ಯಾಷನಲ್ ಬ್ಯಾಂಕ್) ಸಾಲ ವಂಚನೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ವಾಂಟೆಡ್ ಲಿಸ್ಟ್‌ನಲ್ಲಿರುವ, 2018 ರಲ್ಲಿ ಭಾರತದಿಂದ ಓಡಿ ಹೋಗಿರುವ ಗುಜರಾತಿನ ವಜ್ರ ವ್ಯಾಪಾರಿ ಮೆಹೂಲ್ ಚೋಕ್ಸಿ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾದಲ್ಲಿ ನಾಪತ್ತೆಯಾಗಿದ್ದಾರೆ ಎಂದು ಅವರ ವಕೀಲರನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಚೋಕ್ಸಿ ಅವರ ವಕೀಲ ವಿಜಯ್ ಅಗರ್‌ವಾಲ್ ಅವರು ಮಂಗಳವಾರ ಬೆಳಿಗ್ಗೆ ಎನ್‌ಡಿಟಿವಿಗೆ ತಮ್ಮ ಕಕ್ಷಿದಾರ ಕಾಣೆಯಾಗಿದ್ದಾರೆ ಮತ್ತು ಅವರ ಕುಟುಂಬವು ಅವರನ್ನು ಹುಡುಕುತ್ತಿದೆ ಎಂದು ದೃಢಪಡಿಸಿದ್ದಾರೆ. ಆಂಟಿಗುವಾ ಪೊಲೀಸರು ಪತ್ತೆ ಕಾರ್ಯ ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ವಿರುದ್ಧ ಹಮಾಸ್ ದಾಳಿಗೆ ವಿರೋಧ: ಪ್ಯಾಲೆಸ್ಟೈನ್ ಬೆಂಬಲಿಸಿದ ಭಾರತ ಸರ್ಕಾರ

ಸ್ಥಳೀಯ ಮಾಧ್ಯಮ ಆಂಟಿಗುವಾ ನ್ಯೂಸ್‌ರೂಮ್, ಪೊಲೀಸ್ ಆಯುಕ್ತ ಅಟ್ಲೀ ರೊಡ್ನಿ ಅವರನ್ನು ಉಲ್ಲೇಖಿಸಿ, ಅಧಿಕಾರಿಗಳು ಭಾರತೀಯ ಉದ್ಯಮಿ ಮೆಹುಲ್ ಚೋಕ್ಸಿ ಇರುವ ಸ್ಥಳವನ್ನು ಅನುಸರಿಸುತ್ತಿದ್ದಾರೆ ಎಂದು ತಿಳಿಸಿದೆ.

ಚೋಕ್ಸಿ ಕಾಣೆಯಾಗಿದ್ದಾರೆ ಎಂದು ಅಧಿಕೃತವಾಗಿ ತಿಳಿಸಲಾಗಿಲ್ಲ ಎಂದು ಸಿಬಿಐನ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ. ದೃಢೀಕರಣ ಮತ್ತು ಹೆಚ್ಚಿನ ಮಾಹಿತಿಗಾಗಿ ಭಾರತದ ಆಂಟಿಗುವಾನ್ ರಾಯಭಾರ ಕಚೇರಿಗೆ ಸಿಬಿಐ ಪತ್ರ ಬರೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

2018 ರಲ್ಲಿ ಜಾಗತಿಕ ಪೊಲೀಸ್ ಸಂಸ್ಥೆ ಇಂಟರ್‌ಪೋಲ್ ಚೋಕ್ಸಿ ವಿರುದ್ಧ ರೆಡ್ ನೋಟಿಸ್ ಹೊರಡಿಸಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಅಂದರೆ ಅವರು ಜಗತ್ತಿನ ಎಲ್ಲಿಯಾದರೂ ಯಾವುದೇ ದೇಶವನ್ನು ಪ್ರವೇಶಿಸಿದರೆ ಸಿಬಿಐಗೆ ಇಂಟರ್‌ಪೋಲ್ ಸೂಚನೆ ನೀಡಲಿದೆ.

ಆಂಟಿಗುವಾದಲ್ಲಿನ ಸ್ಥಳೀಯ ಮಾಧ್ಯಮವನ್ನು ಉಲ್ಲೇಖಿಸಿ ಗುಪ್ತಚರ ಮೂಲಗಳು, ಚೋಕ್ಸಿ ಅವರು ಕ್ಯೂಬಾದಲ್ಲಿ ನೆಲೆಸಿದ್ದಾರೆ ಎಂದು ಹೇಳುತ್ತಿವೆ. “ನಾವು ಅಂತಹ ವರದಿಗಳನ್ನು ಪಡೆದುಕೊಂಡಿದ್ದೇವೆ. ನಾವು ಅದನ್ನು ಪತ್ತೆ ಮಾಡುತ್ತಿದ್ದೇವೆ” ಎಂದು ಹಿರಿಯ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಆಂಟಿಗುವಾದಂತೆ, ಕ್ಯೂಬಾ ಜೊತೆಗೂ ಭಾರತದ ಹಸ್ತಾಂತರ ಒಪ್ಪಂದವಿಲ್ಲ.

ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಚೋಕ್ಸಿ ಸೋಮವಾರ ಸಂಜೆ ದ್ವೀಪದ ದಕ್ಷಿಣ ಭಾಗದಲ್ಲಿರುವ ರೆಸ್ಟೋರೆಂಟ್‌ನಲ್ಲಿ ಊಟಕ್ಕೆ ಹೋಗಲು ತಮ್ಮ ಮನೆಯಿಂದ ಹೊರಟರು. ಆಮೇಲೆ ಅವರು ಕಾಣಿಸಿಕೊಂಡಿಲ್ಲ. ಅವರ ವಾಹನವು ನಂತರ ಪತ್ತೆಯಾಗಿದೆ. ಆದರೆ ಅವರ ಯಾವುದೇ ಸುಳಿವು ಇಲ್ಲ ಎಂದು ಸ್ಥಳೀಯ ಸುದ್ದಿ ವಾಹಿನಿಗಳು ವರದಿ ಮಾಡಿವೆ.

ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯಲು ಮೆಹುಲ್ ಚೋಕ್ಸಿ ದೀರ್ಘಕಾಲದ ಕಾನೂನು ಹೋರಾಟದಲ್ಲಿ ತೊಡಗಿದ್ದಾರೆ.

ಅವರು ಪ್ರಸ್ತುತ ಆಂಟಿಗುವಾನ್ ಪೌರತ್ವವನ್ನು ಹೊಂದಿದ್ದಾರೆ. ಕಳೆದ ವರ್ಷ ಆಂಟಿಗುವಾ ಪ್ರಧಾನಿ ಗ್ಯಾಸ್ಟನ್ ಬ್ರೌನ್, ಚೋಸ್ಕಿ ಅವರ ಎಲ್ಲಾ ಕಾನೂನು ಆಯ್ಕೆಗಳು ಮುಗಿದ ನಂತರ ಪೌರತ್ವವನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದರು.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

“ಕೆರಿಬಿಯನ್‌ನ ಅನೇಕ ದೇಶಗಳಂತೆ ತಮ್ಮ ದೇಶವು ಅಪರಾಧಿಗಳಿಗೆ, ಆರ್ಥಿಕ ಅಪರಾಧಗಳಲ್ಲಿ ಭಾಗಿಯಾಗಿರುವವರಿಗೆ ಸುರಕ್ಷಿತ ತಾಣ ಒದಗಿಸುವುದಿಲ್ಲ” ಎಂದು ಬ್ರೌನ್ ಸ್ಪಷ್ಟಪಡಿಸುತ್ತ ಬಂದಿದ್ದಾರೆ.

“ಪೌರತ್ವದ ಪ್ರಕ್ರಿಯೆ ನಡೆದ ಬಳಿಕ ಚೋಸ್ಕಿ ಪ್ರವೇಶಿಸಿದ್ದಾರೆ. ನಮಗೆ ಬೇರೆ ಪ್ರಕ್ರಿಯೆ ಕೂಡ ಇವೆ. ವಾಸ್ತವವೆಂದರೆ ಅವರ ಪೌರತ್ವವನ್ನು ಹಿಂತೆಗೆದುಕೊಳ್ಳಲಾಗುವುದು ಮತ್ತು ಅವರನ್ನು ಭಾರತಕ್ಕೆ ಗಡೀಪಾರು ಮಾಡಲಾಗುವುದು” ಎಂದು ಬ್ರೌನ್ ಹೇಳಿದ್ದಾರೆ ಎಂದು ಆಂಟಿಗುವಾ ಅಬ್ಸರ್ವರ್ ವರದಿ ಮಾಡಿದೆ.

ಆಂಟಿಗುವಾನ್ ಸಿವಿಲ್ ನ್ಯಾಯಾಲಯವು ಪೌರತ್ವವನ್ನು ರದ್ದುಪಡಿಸಿದೆ ಎಂಬ ಮಾಧ್ಯಮ ವರದಿಗಳು ಸುಳ್ಳು ಎಂದು ಮಾರ್ಚ್‌ನಲ್ಲಿ ಚೋಕ್ಸಿ ಅವರ ವಕೀಲರು ಹೇಳಿದ್ದರು. ಮೆಹುಲ್ ಚೋಕ್ಸಿ ಆಂಟಿಗುವಾನ್ ಪ್ರಜೆಯಾಗಿ ಉಳಿದಿದ್ದಾರೆ ಎಂದು ವಕೀಲ ಅಗರವಾಲ್ ಹೇಳಿದ್ದರು. ಎಎನ್‌ಐ ಜೊತೆಗಿನ ತಮ್ಮ ಹಿಂದಿನ ಸಂದರ್ಶನದಲ್ಲಿ ಚೋಕ್ಸಿ, ತಮ್ಮ ವಿರುದ್ಧದ ಆರೋಪಗಳು ಸುಳ್ಳು, ಆಧಾರರಹಿತ ಮತ್ತು ರಾಜಕೀಯ ಪ್ರೇರಿತವಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಪಿಎನ್‌ಬಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚೋಕ್ಸಿಯ ಸಂಬಂಧಿಕ (ಸೋದರಳಿಯ), ಬಿಲಿಯನೇರ್ ಆಭರಣ ವ್ಯಾಪಾರಿ ನೀರವ್ ಮೋದಿ (50) ಕೂಡ ವಾಂಟೆಡ್ ಲಿಸ್ಟ್‌ನಲ್ಲಿದ್ದಾರೆ. ಚೋಕ್ಸಿ ಅವರಂತೆಯೇ ಮೋದಿ ಕೂಡ 2018 ರಲ್ಲಿ ಭಾರತದಿಂದ ಪಲಾಯನ ಮಾಡಿ, ಪ್ರಸ್ತುತ ಬ್ರಿಟನ್ ದೇಶದಲ್ಲಿದ್ದಾರೆ.

ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸುವುದಕ್ಕೆ ಕಳೆದ ತಿಂಗಳು ಬ್ರಿಟಿಷ್‌ ಸರ್ಕಾರ ಅನುಮತಿಸಿತ್ತು. ಆದರೆ ನೀರವ್ ಮೋದಿ ಬ್ರಿಟಿಷ್ ಹಸ್ತಾಂತರದ ಆದೇಶವನ್ನು ಯುಕೆ ಹೈಕೋರ್ಟ್ ಮುಂದೆ ಪ್ರಶ್ನಿಸಬಹುದು.

2019 ರ ಫೆಬ್ರವರಿಯಲ್ಲಿ ಸಹಿ ಮಾಡಿದ ಹಸ್ತಾಂತರ ಆದೇಶದ ವಿರುದ್ಧ ನ್ಯಾಯಾಲಯಕ್ಕೆ ಹೋದ ಮದ್ಯದ ದೊರೆ ವಿಜಯ್ ಮಲ್ಯ ಅವರ ಪ್ರಕರಣದಲ್ಲಿ ಕಂಡುಬರುವಂತೆ, ಈ ಪ್ರಕ್ರಿಯೆಯು ತಿಂಗಳುಗಳು ಅಥವಾ ವರ್ಷಗಳನ್ನು ತೆಗೆದುಕೊಳ್ಳಬಹುದು ಎನ್ನಲಾಗಿದೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...