ವಿವಾದಿತ ಕೃಷಿ ಕಾನೂನುಗಳ ವಿರುದ್ಧ ತಮ್ಮ ಹೋರಾಟ ಮುಂದುವರೆಸಿರುವ ರೈತರು ಇಂದು ಕರಾಳ ದಿನ ಆಚರಣೆಗೆ ಕರೆ ನೀಡಿದ್ದು, ಭಾರಿ ಬೆಂಬಲ ವ್ಯಕ್ತವಾಗಿದೆ. ಪಂಜಾಬ್, ಹರಿಯಾಣ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಪ್ಪು ಬಾವುಟಗಳು ಹಾರಾಡುತ್ತಿವೆ.
ದೆಹಲಿಯ ಪ್ರತಿಭಟನಾ ಸ್ಥಳಗಳಲ್ಲಿನ ಗಡಿಗಳಿಗೆ ಈಗಾಗಲೇ ಸಾವಿರಾರು ರೈತರು ಸೇರಿಕೊಂಡಿದ್ದಾರೆ. ದೇಶದಲ್ಲಿ ಕೊರೊನಾ ಪರಿಸ್ಥಿತಿಯಿಂದ ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ. ಇದರ ನಡುವೆಯೇ ರೈತರು ಕರಾಳ ದಿನ ಆಚರಣೆಗೆ ಕರೆ ನೀಡಿದ್ದಾರೆ. ರೈತರ ಕರೆಗೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಕೊರೊನಾ ಘಜಿಯಾಬಾದ್‌ನ ಗಾಝಿಪುರ್ ಗಡಿಯಲ್ಲಿನ ರೈತರು ಕರಾಳ ದಿನ ಆಚರಿಸಿ ಪ್ರತಿಭಟನೆ ನಡೆಸಿದ್ದಾರೆ.
“ನಾವು ಕಪ್ಪು ಧ್ವಜದ ಜೊತೆಗೆ ತ್ರಿವರ್ಣವನ್ನು ಸಹ ಹಾರಿಸುತ್ತಿದ್ದೇವೆ. ಪ್ರತಿಭಟನೆಗೆ 6 ತಿಂಗಳು ತುಂಬುತ್ತಿವೆ. ಆದರೆ ಸರ್ಕಾರ ನಮ್ಮ ಬೇಡಿಕೆಯನ್ನು ಕೇಳುತ್ತಿಲ್ಲ. ಆದ್ದರಿಂದ ರೈತರು ಕಪ್ಪು ಧ್ವಜಗಳನ್ನು ಹಾರಿಸುತ್ತಿದ್ದಾರೆ. ಪ್ರತಿಭಟನೆ ಶಾಂತಿಯುತವಾಗಿ ನಡೆಸಲಾಗುತ್ತಿದೆ. ನಾವು ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಿದ್ದೇವೆ. ಜನರು ಎಲ್ಲಿದ್ದಾರೋ ಅಲ್ಲಿಂದಲೇ ಧ್ವಜಗಳನ್ನು ಹಾರಿಸುತ್ತಾ ಪ್ರತಿಭಟನೆಗೆ ಬೆಂಬಲ ನೀಡುತ್ತಿದ್ದಾರೆ” ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಇದನ್ನೂ ಓದಿ: ’ಮಾಸ್ಟರ್‌ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ’ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!
ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬ್‌ನ ರೈತರು ಇಂದು ‘ಕಪ್ಪು ದಿನ’ ಆಚರಿಸಿ, ತಮ್ಮ ಮನೆಗಳ ಮೇಲೆ ಮತ್ತು ತಮ್ಮ ಟ್ರಾಕ್ಟರುಗಳಲ್ಲಿ ಕಪ್ಪು ಧ್ವಜಗಳನ್ನು ಹಾರಿಸಿದ್ದಾರೆ.

ಟ್ವಿಟರ್‌ನಲ್ಲಿ ರೈತರಿಗೆ ಕರಾಳದಿನ (#Black_Day_Of_Farmers) ಮತ್ತು ರಾಷ್ಟ್ರೀಯ ಕರಾಳ ದಿನ ( #NationalBlackDay) ಹ್ಯಾಷ್‌ಟ್ಯಾಗ್ ಟ್ರೆಂಡಿಂಗ್ ಆಗಿದದೆ. ಲಕ್ಷಾಂತರ ಮಂದಿ ಟ್ವೀಟ್ ಮಾಡಿ, ವಿವಾದಿತ ಕೃಷಿ ಕಾನೂನುಗಳನ್ನು ರದ್ದು ಮಾಡಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
?Images being sent by farmers from Punjab, Haryana & other parts of India
?They are hoisting black flags at their homes
?Farmers are today observing #NationalBlackDay & #Black_Day_Of_Farmers
?Today marks 6 months of #FarmersProtest & 7 years of Modi as PM ? pic.twitter.com/CpLF1yXPXi
— Saahil Murli Menghani (@saahilmenghani) May 26, 2021
’ಕಾನೂನನ್ನು ಪಾಲನೆ ಮಾಡದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾನೂನುಬಾಹಿರ ಚಟುವಟಿಕ ಅವಕಾಶವಿಲ್ಲ’ ಎಂದು ದೆಹಲಿ ಪೊಲೀಸ್ ಪಿಆರ್‌ಒ ಚಿನ್ಮಯ್ ಬಿಸ್ವಾಲ್ ಹೇಳಿದ್ದಾರೆ. ಸಿಂಘು, ಟಿಕ್ರಿ ಮತ್ತು ಗಾಜಿಪುರದ ಪ್ರತಿಭಟನಾ ಸ್ಥಳಗಳು ಸೇರಿದಂತೆ ಎಲ್ಲಾ ಗಡಿ ಕೇಂದ್ರಗಳಲ್ಲಿ ಪೊಲೀಸ್ ಪಡೆಗಳನ್ನು ಈಗಾಗಲೇ ನಿಯೋಜಿಸಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ: ಸೆಂಟ್ರಲ್ ವಿಸ್ತಾ ಯೋಜನೆ ಮತ್ತು ದೆಹಲಿಯ ಮೂಲಕ ಭಾರತವನ್ನು ವಶಪಡಿಸಿಕೊಳ್ಳುವ ಬಿಜೆಪಿ ಸರ್ಕಾರದ ಆಕ್ರಮಣಕಾರಿ ತಂತ್ರ


