Homeಮುಖಪುಟಸರ್ಕಾರದ ಹೊಸ ಐಟಿ ಮಾರ್ಗಸೂಚಿ: ಬಳಕೆದಾರರ ಖಾಸಗಿತನ ರಕ್ಷಿಸಲು ದೆಹಲಿ ಹೈಕೋರ್ಟ್‌ಗೆ ವಾಟ್ಸಾಪ್ ಮೊರೆ

ಸರ್ಕಾರದ ಹೊಸ ಐಟಿ ಮಾರ್ಗಸೂಚಿ: ಬಳಕೆದಾರರ ಖಾಸಗಿತನ ರಕ್ಷಿಸಲು ದೆಹಲಿ ಹೈಕೋರ್ಟ್‌ಗೆ ವಾಟ್ಸಾಪ್ ಮೊರೆ

’ಜನರ ಖಾಸಗೀ ಜೀವನವನ್ನು ಜಗತ್ತಿನ ಮುಂದೆ ತೆರೆದಿಡುವುದು ಗಂಭೀರವಾದ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ’- ವಾಟ್ಸಾಪ್ ಸಂಸ್ಥೆ

- Advertisement -
- Advertisement -

ಬಳಕೆದಾರರ ಖಾಸಗಿತನದ ನಿಯಮವಾಳಿಗೆ ಧಕ್ಕೆ ತರುವ ಸರ್ಕಾರದ ಹೊಸ ಮಾರ್ಗಸೂಚಿಗಳನ್ನು ಪ್ರಶ್ನಿಸಿ ವಾಟ್ಸಾಪ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ವಾಟ್ಸಾಪ್ ಬಳಕೆದಾರರ ಖಾಸಗಿತನಕ್ಕೆ ಸಂಬಂಧಿಸಿದಂತೆ ಬ್ರೆಜಿಲ್ ದೇಶದ ಸುಪ್ರೀಂ ಕೋರ್ಟ್‌ನಲ್ಲೂ ವಿಚಾರಣೆಗಳು ನಡೆಯುತ್ತಿವೆ.

ಇದೇ ಹೊತ್ತಿನಲ್ಲಿ ಕೇಂದ್ರ ಸರ್ಕಾರ ಪೆಭ್ರುವರಿ 2021 ರಲ್ಲಿ ಜಾರಿಗೆ ತಂದ ಹೊಸ ಐಟಿ ನಿಯಮಾವಳಿಗಳನ್ನು ಪ್ರಶ್ನಿಸಿ ವಾಟ್ಸಾಪ್ ಸೇರಿದಂತೆ ಹಲವು ಮಾಹಿತಿ ತಂತ್ರಜ್ಞಾನ ಸಂಸ್ಥೆಗಳು ಆಕ್ಷೇಪ ವ್ಯಕ್ತಪಡಿಸಿದ್ದು ಕಾನೂನು ಸಮರಕ್ಕೆ ಸಜ್ಜಾಗಿವೆ. ಮೇ 25 (ಮಂಗಳವಾರ) ವಾಟ್ಸಾಪ್ ಸಂಸ್ಥೆ ದೆಹಲಿ ಹೈಕೋರ್ಟ್‌ನಲ್ಲಿ ಹೊಸ ಐಟಿ ನಿಯಮಾವಳಿಗಳನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದೆ.

ವಾಟ್ಸಾಪ್ ಸಂದೇಶಗಳ ಮೂಲ ಪತ್ತೆ ಹಚ್ಚಲು ಅವಕಾಶ ನೀಡುವ ಸರ್ಕಾರದ ನಿಯಮಾವಳಿಗಳು ಭಾರತ ಸಂವಿಧಾನ ನೀಡುವ ಅಭಿವ್ಯಕ್ತಿ ಸ್ವಾತಂತ್ರ‍್ಯದ ಮೂಲಭೂತ ಹಕ್ಕಿನ ಸ್ಪಷ್ಟವಾದ ಉಲ್ಲಂಘನೆಯಾಗಿದೆ. ಇದು ವಾಟ್ಸಾಪ್ ಸಂಸ್ಥೆಯ ಮೂಲ ನಿಯಮವಾದ ಎಂಡ್ ಟು ಎಂಡ್ ಎನ್ಕ್ರಿಪ್ಶನ್ ಗೆ ವಿರುದ್ಧವಾಗಿದೆ ಎಂದು ದೆಹಲಿ ಹೈಕೋರ್ಟ್ ಮುಂದೆ ವಾಟ್ಸಾಪ್ ಪರ ವಕೀಲರು ಹೇಳಿದ್ದಾರೆ.  ತನ್ನ ಬಳಕೆದಾರರ ಗೌಪ್ಯತೆಗೆ ವಾಟ್ಸಾಪ್ ಯಾವಾಗಲೂ ಬದ್ಧವಾಗಿದೆ. ತನ್ನ ಬಳಕೆದಾರರ ಖಾಸಿಗಿತನದೊಂದಿಗೆ ರಾಜಿಯಾಗಲು ಸಾಧ್ಯವಿಲ್ಲವೆಂದು ಇದೇ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ತಿಳಿಸಿದೆ.

ಇದನ್ನೂ ಓದಿ: ‘ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು’ – ಗಾಂಧಿವಾದಿ ನಿಧನಕ್ಕೆ ಗಣ್ಯರ ಕಂಬನಿ

ಸಂದೇಶಗಳ ಜಾಡನ್ನು, ಮೂಲವನ್ನು ಬಿಟ್ಟುಕೊಡುವುದು ಹೊಸ ಹೊಸ ಸಮಸ್ಯೆಗೆ ದಾರಿಯಾಗಲಿದೆ. ಯಾರದೋ ಸಂದೇಶವನ್ನು ಬೇರೆಯವ ಹೆಸರಿನಲ್ಲಿ ಬಿಂಬಿಸುವ, ತಪ್ಪು ವ್ಯಕ್ತಿಗಳನ್ನು ಸಂದೇಶಗಳ ಮೂಲವೆಂದು ಚಿತ್ರಿಸಲು ಹೊಸ ನಿಯಮಗಳು ಅನವುಮಾಡಿಕೊಡುತ್ತದೆ. ಹಾಗಾಗಿ ಸರ್ಕಾರದ ಹೊಸ ನಿಯಮಗಳಿಗೆ ತಡೆ ಕೋರಿ ವಾಟ್ಸಾಪ್ ನ್ಯಾಯಾಲಯದ ಮೊರೆ ಹೋಗಿದೆ.

ಮೇ 26, 2021 ಸರ್ಕಾರದ ಹೊಸ ಡಿಜಿಟಲ್ ನಿಯಮಾವಳಿಗಳನ್ನು ಅಳವಡಿಸಿಕೊಳ್ಳಲು ಡಿಜಿಟಲ್ ಮೀಡಿಯಾ ಕಂಪನಿಗಳಿಗೆ ಕಡೆಯ ದಿನವಾಗಿದ್ದು, ಒಂದು ವೇಳೆ ಸರ್ಕಾರದ ನಿಯಮಾವಳಿಗಳನ್ನು ಪಾಲಿಸಲು ವಿಫಲವಾದರೆ ವಾಟ್ಸಾಪ್, ಫೇಸ್ ಬುಕ್‌ನಂತಹ ಜಾಗತಿಕ ಕಂಪನಿಗಳನ್ನು ತಾತ್ಕಾಲಿಕವಾಗಿ ನಿಷೇಧಿಸುವುದಾಗಿ ಸರ್ಕಾರ ಹೇಳಿತ್ತು. ನಿಷೇಧದ ಭೀತಿಯ ನಡುವೆಯೇ ವಾಟ್ಸಾಪ್ ಕೇಂದ್ರ ಸರ್ಕಾರದೊಂದಿಗೆ ಸಂಘರ್ಷಕ್ಕಿಳಿದಿದೆ.

ವಾಟ್ಸಾಪ್‌ನ ಮಾತೃ ಸಂಸ್ಥೆ ಫೇಸ್‌ಬುಕ್ ತನಗೆ ನಿಯಮಾವಳಿಗಳನ್ನು ಅಳವಡಿಸಿಕೊಳ್ಳಲು ಇನ್ನಷ್ಟು ಸಮಯಬೇಕು. ಸರ್ಕಾರದೊಂದಿಗೆ ಕೆಲವು ವಿಷಯಗಳನ್ನು ಸ್ಪಷ್ಟಪಡಿಸಿಕೊಳ್ಳಬೇಕಿದೆ ಎಂದು ನಿನ್ನೆ ಹೇಳಿದೆ.

ಐಟಿ ಕಾಯ್ದೆಯಡಿ ಫೆಭ್ರವರಿ 25 ರಂದು ಕೇಂದ್ರ ಸರ್ಕಾರ ಹೊಸ ಡಿಜಿಟಲ್ ಮೀಡಿಯಾ ನೀತಿಗಳನ್ನು ಜಾರಿಗೊಳಿಸಿತ್ತು. ಈ ನಿಯಮದಡಿಯಲ್ಲಿ ಡಿಜಿಟಲ್ ಮಾಧ್ಯಮ ಸಂಸ್ಥೆಗಳು ದೂರು ಮತ್ತು ಇತರ ವಿಷಯಗಳಿಗಾಗಿ ಸರ್ಕಾರಕ್ಕೆ ಸಂಬಂಧಿಸಿದ ವ್ಯಕ್ತಿಯನ್ನು ನೇಮಿಸಿಕೊಳ್ಳಬೇಕು. ಸರ್ಕಾರಕ್ಕೆ ಸಂಬಂಧಿಸಿದ ವ್ಯಕ್ತಿಯು ವಾಟ್ಸಾಪ್ ಚಟುವಟಿಕೆಗಳ ಮೇಲೆ ನಿಗಾ ಇಡುವುದಲ್ಲದೇ ಸಂದೇಶಗಳ ಮೂಲ ಪತ್ತೆ ಹಚ್ಚಲು ಸರ್ಕಾರಕ್ಕೆ ನೆರವಾಗುತ್ತಾರೆ. ಸರ್ಕಾರ ಮತ್ತು ಇತರ ತನಿಖಾ ಇಲಾಖೆಗಳ ದೂರಿನ ಆಧಾರದಲ್ಲಿ ಸರ್ಕಾರಿ ಅಧಿಕಾರಿಯು ವಾಟ್ಸಾಪ್ ಖಾತೆಗಳನ್ನು ನಿಷ್ಕ್ರೀಯಗೊಳಿಸುವ, ಸಂದೇಶಗಳನ್ನು ಸೃಷ್ಟಿಸಿದ ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ಮಾಡುತ್ತಾರೆ. ಆದರೆ ಸರ್ಕಾರದ ಹೊಸ ನಿಯಮಾವಳಿಗಳು ಸರಿ ಬಂದಿಲ್ಲ ಎಂದು ವಾಟ್ಸಾಪ್ ತಿಳಿಸಿದೆ.

ಬಳಕೆದಾರರ ಸಂದೇಶಗಳ ಮಾಹಿತಿಯನ್ನು, ಖಾಸಗಿತನವನ್ನು ಸಂರಕ್ಷಿಸಲು ತಾನು ಮಾಡಬೇಕಾದ ಎಲ್ಲಾ ಪ್ರಯತ್ನವನ್ನು ಕಂಪನಿ ಮಾಡುತ್ತಿದೆ. ಅದೇ ಪ್ರಯತ್ನವಾಗಿ ವಾಟ್ಸಾಪ್‌ ಸಂದೇಶಗಳ ಮೂಲದ ಜಾಡನ್ನು ಪತ್ತೆಹಚ್ಚುವುದನ್ನು ಕಂಪನಿ ವಿರೋಧಿಸುತ್ತಿದೆ ಎಂದು ವಾಟ್ಸಾಪ್‌ ಸಂಸ್ಥೆಯ ವಕ್ತಾರರು ಹೇಳಿದ್ದಾರೆ. ಬಳಕೆದಾರರ ಮಾಹಿತಿಯನ್ನು ಬಿಟ್ಟುಕೊಡುವುದೆಂದರೆ ಅವರ ಬೆರಳಚ್ಚನ್ನು ಸಂಗ್ರಹಿಸಿ ಬಳಸಿಕೊಂಡಂತೆಯೇ ಸರಿ. ವಾಟ್ಸಾಪ್‌ನ ‘ಎಂಡ್‌ ಟು ಎಂಡ್‌ ಎನ್ಕ್ರಿಪ್ಷನ್’ ವ್ಯವಸ್ಥೆಯನ್ನು ತಡೆಯುವುದೆಂದರೆ  ಭಾರತ ಸಂವಿಧಾನದ ಅನುಚ್ಛೇದ 21 ರ ಅಡಿಯ ಖಾಸಗಿತನದ ಹಕ್ಕನ್ನು ಕಿತ್ತುಕೊಳ್ಳುವುದು ಎಂದೇ ಅರ್ಥ.

ಇದನ್ನೂ ಓದಿ: ನಾಲ್ವರು ಮಹಿಳೆಯರ ಮೇಲೆ ಅತ್ಯಾಚಾರ ಆರೋಪ: ಸ್ವಯಂಘೋಷಿತ ದೇವಮಾನವನ ಬಂಧನ

ಜಗತ್ತಿನಾದ್ಯಂತ ಜನರ ಖಾಸಗಿ ಬದುಕನ್ನು ನಿಗಾ ಇರಿಸಲು ಮುಂದಾಗುತ್ತಿರುವ ಸರ್ಕಾರಗಳ ವಿರುದ್ಧ ನಾಗರಿಕರು ಮತ್ತು ತಂತ್ರಜ್ಞರು ಹೋರಾಡುತ್ತಿದ್ದಾರೆ. ವಾಟ್ಸಾಪ್‌ ಸತತವಾಗಿ ಅವರ ಬೆಂಬಲಕ್ಕೆ ನಿಂತಿದೆ ಎಂದು ವಾಟ್ಸಾಪ್‌ ಹೇಳಿದೆ. ಸುಳ್ಳು ಸುದ್ದಿಗಳ ಹರಡುವಿಕೆಯನ್ನು ತಡೆಗಟ್ಟುವ ಮತ್ತು ಜನರ ಸುರಕ್ಷತೆಗಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರ ವಾಟ್ಸಾಪ್‌ ಸಹಕಾರವನ್ನು ನೀಡುತ್ತ ಬಂದಿದೆ.  ವಾಟ್ಸಾಪ್‌ ಮೂಲಕ ನಡೆಯುವ ಆರ್ಥಿಕ ವಂಚನೆ, ಅಪರಾಧಿಕ ಕೃತ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರಕ್ಕೆ ಕಾನೂನಾತ್ಮಕವಾಗಿ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದ್ದೇವೆ ಎಂದು ವಾಟ್ಸಾಪ್‌ ಸ್ಪಷ್ಟಪಡಿಸಿದೆ.

ಅನೇಕ ಸರ್ಕಾರಗಳು ಜನರ ಖಾಸಗಿ ಸಂದೇಶಗಳನ್ನು ಬಹಿರಂಗಗೊಳಿಸುವಂತೆ ಡಿಜಿಟಲ್‌ ತಂತ್ರಜ್ಞಾನ ಸಂಸ್ಥೆಗಳ ಮೇಲೆ ಒತ್ತಡ ಹೇರುತ್ತಿವೆ. ಪ್ರತಿಯೊಬ್ಬರ ಖಾಸಗಿ ಸಂದೇಶಗಳನ್ನು ಬಹಿರಂಗಗೊಳಿಸುವುದರಿಂದ ವಾಟ್ಸಾಪ್‌ನ ನೂರು ಕೋಟಿ ಬಳಕೆದಾರರ ಖಾಸಗಿ ಬದುಕಿಗೆ ತೊಂದರೆಯಾಗುತ್ತದೆ. ಪ್ರತಿನಿತ್ಯ ಕೋಟ್ಯಾಂತರ ಜನರು ವಾಟ್ಸಾಪ್‌ ಮೂಲಕ ತಮ್ಮ ಖುಷಿ, ದು:ಖ, ಖಾಸಗಿ ಬದುಕಿನ ಕ್ಷಣಗಳನ್ನು, ಘಟನೆಗಳನ್ನು ಪರಸ್ಪರ ಹಂಚಿಕೊಳ್ಳುತ್ತಾರೆ. ಜನರ ಖಾಸಗೀ ಜೀವನವನ್ನು ಜಗತ್ತಿನ ಮುಂದೆ ತೆರೆದಿಡುವುದು ಗಂಭೀರವಾದ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ನಾಗರಿಕರ ಖಾಸಗಿ ಬದುಕನ್ನು ನಿಗಾವಹಿಸುವುದು ಜನರಲ್ಲಿ ಅಭದ್ರತೆಯ ಭಾವವನ್ನು ಇನ್ನಷ್ಟು ಹೆಚ್ಚಿಸುತ್ತದೆ.

ಸಾವಿರಾರು ಅಮಾಯಕರು ಭಾರತ ಸರ್ಕಾರದ ಹೊಸ ನಿಯಾಮವಳಿಯಿಂದ ತಮ್ಮ ಖಾಸಗಿತನದ ಹಕ್ಕನ್ನು ಕಳೆದುಕೊಳ್ಳುತ್ತಾರೆ.  ಸಾಮಾಜಿಕ ಮಾಧ್ಯಮಗಳ ಮೂಲಕ ನಡೆಯುವ ಅಪರಾಧ ಕೃತ್ಯಗಳನ್ನು ತಡಯಲು ಸರ್ಕಾರ ಮತ್ತು ಡಿಜಿಟಲ್‌ ಮಾಧ್ಯಮ ಸಂಸ್ಥೆಗಳು ಸೇರಿ ಸಮಗ್ರವಾದ ಯೋಜನೆಯನ್ನು ರೂಪಿಸಬೇಕಿದೆ. ಜನರ ಖಾಸಗಿ ತನದ ಬೆಲೆಯಲ್ಲಿ ಇದನ್ನು ರೂಪಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರ ಮೂಲಭೂತ ಹಕ್ಕನ್ನು ರಕ್ಷಿಸಲು ಸರ್ಕಾರಗಳು ಬದ್ಧವಾಗಬೇಕು. ವಾಟ್ಸಾಪ್‌ ಬಳಕೆದಾರರ ಖಾಸಗಿತವನ್ನು ಸಂರಕ್ಷಿಸುವಲ್ಲಿ ತನ್ನ ಬದ್ಧತೆಯನ್ನು ಪ್ರದರ್ಶಿಸುತ್ತಲೇ ಬಂದಿದೆ ಎಂದು ಅಂತರ್ಜಾಲ ಬ್ಲಾಗ್‌ವೊಂದರಲ್ಲಿ ವಾಟ್ಸಾಪ್‌ ಸ್ಪಷ್ಟನೆಯನ್ನು ನೀಡಿದೆ.

ಮಾಹಿತಿ ತಂತ್ರಜ್ಞಾನ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, “ಸರ್ಕಾರ ನೀಡಿದ ಗಡವಿನ ಒಳಗೆ ಡಿಜಿಟಲ್‌ ಮಾಧ್ಯಮ ಸಂಸ್ಥೆಗಳು ಹೊಸ ನಿಯಮಗಳನ್ನು ಜಾರಿಗೆ ತರಬೇಕು. ಇಲ್ಲವಾದರೆ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಲಿದೆ. ಕಂಪನಿಗಳೊಂದಿಗೆ ಯಾವುದೇ ಚರ್ಚೆ ಈ ಹಂತದಲ್ಲಿ ಸಾಧ್ಯವಿಲ್ಲ. ಯಾವುದೇ ಕಂಪನಿಗಳು ಇದುವರೆಗೆ ಹೊಸ ನಿಯಮಾವಳಿಗಳಂತೆ  ತಮ್ಮ ವೆಬ್‌ ಸೈಟ್‌ನಲ್ಲಿ ಅಧಿಕಾರಿಗಳನ್ನು ನೇಮಿಸಿದ ಮಾಹಿತಿಯಿಲ್ಲ. ಇಲಾಖೆಯೊಂದಿಗೆ ಈ ಸಂಬಂಧ ಯಾವುದೇ ಡಿಜಿಟಲ್‌ ಮಾಧ್ಯಮ ಕಂಪನಿಯೂ ಮಾಹಿತಿಯನ್ನು ಹಂಚಿಕೊಂಡಿಲ್ಲ” ಎಂದು ಹೆಸರು ಹೇಳಲು ಇಚ್ಛಿಸದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಹೊಸ ಮಾಹಿತಿ ತಂತ್ರಜ್ಞಾನ ನೀತಿಯು ಅಂತರ್ಜಾಲ ಆಧರಿತ ಸುದ್ದಿ ಸಂಸ್ಥೆಗಳಿಗೆ ಕಡಿವಾಣ ಹಾಕಲಿದೆ.  ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ 69(A) ಅಡಿಯಲ್ಲಿ ಅಂತರ್ಜಾಲದ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಸಂಸ್ಥೆಗಳನ್ನು ನಿಷೇಧಿಸುವ, ಸುದ್ದಿ ಪ್ರಸಾರವನ್ನು ತಡೆಹಿಡಿಯುವ ಕಾನೂನುಗಳನ್ನು ಹೊಸ  ಮಾಹಿತಿ ತಂತ್ರಜ್ಞಾನ ನೀತಿಯಲ್ಲಿ ಕೇಂದ್ರಸರ್ಕಾರ ಸೇರಿಸಿದೆ.  ಸಾರ್ವಜನಿಕರ ಸುರಕ್ಷತೆ ಮತ್ತು ಕಾನೂನು ಸುವ್ಯಸ್ಥೆಗೆ ಧಕ್ಕಯುಂಟುಮಾಡುತ್ತದೆ ಎಂಬ ಕಾರಣಗಳಡಿಯಲ್ಲಿ ಸರ್ಕಾರವು ಯಾವುದೇ ಸುದ್ದಿ ಮತ್ತು ಸುದ್ದಿ ಸಂಸ್ಥೆಗಳ ಪ್ರಸಾರವನ್ನು ತಡೆಯಬಹುದಾಗಿದೆ.

ಹೊಸ ಐಟಿ ನೀತಿಯ ವಿರುದ್ಧ ದೇಶದಲ್ಲಿ ಈಗಾಗಲೇ ಟ್ವಿಟ್ಟರ್‌ ಸೇರಿದಂತೆ ಅನೇಕ ಡಿಜಿಟಲ್‌ ಮಾಧ್ಯಮದ ದೈತ್ಯ ಸಂಸ್ಥೆಗಳು ಧ್ವನಿಯೆತ್ತಿವೆ. ದೇಶದಲ್ಲಿ ಪತ್ರಿಕಾ ಸ್ವಾತಂತ್ರ‍್ಯವನ್ನು ದಮನಗೊಳಿಸುವ ಸರ್ಕಾರದ ಪ್ರಯತ್ನದ ವಿರುದ್ಧ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳು ಇದುವರೆಗೆ ಯಾವುದೇ ಅಸಮಧಾನವನ್ನು ವ್ಯಕ್ತಪಡಿಸದಿರುವುದು ಆಶ್ಚರ್ಯ. ಸುದ್ಧಿ ಸಂಸ್ಥೆಗಳ ಹೊರತಾಗಿ ನೂರಾರು ಸ್ವತಂತ್ರ ಪತ್ರಕರ್ತರು, ಸಂವಿಧಾನ ಹಕ್ಕುಗಳ ಹೋರಾಟಗಾರರು, ನ್ಯಾಯಾಧೀಶರು, ನ್ಯಾಯವಾದಿಗಳು, ಪ್ರಿ ಪ್ರೆಸ್‌ ಮತ್ತು ಪ್ರೆಸ್‌ ಫ್ರೀಡಮ್‌ ಗಾಗಿ ಹೋರಾಡುತ್ತಿರುವ ಸಂಘಟನೆಗಳು ಕಾನೂನು ಹೋರಾಟ ಮತ್ತು ಡಿಜಿಟಲ್‌ ಅಭಿಯಾನವನ್ನು ಆರಂಭಿಸಿದ್ದಾರೆ.

ಡಿಜಿಟಲ್‌ ಸುದ್ದಿ ಮಾಧ್ಯಮ ಸಂಸ್ಥೆಗಳು ಮತ್ತು ನೆಟ್‌ಫ್ಲಿಕ್ಸ್‌, ಅಮೇಜಾನ್‌ ಪ್ರೈಮ್‌, ಹಾಟ್ ಸ್ಟಾರ್ ನಂತಹ ಡಿಜಿಟಲ್‌ ಮನರಂಜನಾ ತಾಣಗಳು ಕೂಡ ಮಾಹಿತಿ ತಂತ್ರಜ್ಞಾನ ಇಲಾಖೆಯ ಹೊಸ ನಿಯಮಗಳಡಿ ಬರುತ್ತವೆ. ಮೇ 26, 2021ರ ನಂತರ ಹೊಸ ನಿಯಮಗಳ ಪ್ರಕಾರ ‘ತರ್ಡ್ ಪಾರ್ಟಿ ಇನ್ಪಾರ್ಮೇಷನ್’  ಎಂದು ಕರೆಯಲಾಗುವ ಡಿಜಟಲ್‌ ಮಾಧ್ಯಮ ಸಂಸ್ಥೆಗಳ ವೆಬ್‌ಸೈಟ್‌ ನಲ್ಲಿ ಪ್ರಕಟವಾಗುವ ಮೂರನೇಯ ವ್ಯಕ್ತಿಯ ಮಾಹಿತಿಗಳಿಗೆ ಸಂಸ್ಥೆಗಳನ್ನೇ ಹೊಣೆಗಾರರನ್ನು ಮಾಡಲಾಗುತ್ತದೆ. ಈ ಸಂಬಂಧ ಡಿಜಿಟಲ್‌ ಮನರಂಜನಾ ತಾಣಗಳು ಸರ್ಕಾರಿ ಅಧಿಕಾರಿಯನ್ನು ತಮ್ಮ ಸಂಸ್ಥೆಯಲ್ಲಿ ನಿಯುಕ್ತಿಗೊಳಿಸಬೇಕಿದೆ. ಆ  ಅಧಿಕಾರಿಯು  ಡಿಜಿಟಲ್‌ ಮಾಧ್ಯಮದಲ್ಲಿ ತನಗೆ ಆಕ್ಷೇಪಾರ್ಹವಾಗಿ  ಕಂಡುಬಂದ ನಿರ್ದಿಷ್ಟ ವಿಷಯಗಳನ್ನು, ಮಾಹಿತಿಯನ್ನು ತಕ್ಷಣವೇ ತೆಗೆದುಹಾಕುವಂತೆ ಡಿಜಿಟಲ್‌ ಮಾಧ್ಯಮಗಳಿಗೆ ಆದೇಶಿಸಬಹುದಾಗಿದೆ. ಸರ‍್ಕಾರ ಮತ್ತು ನಾಗರಿಕರಿಂದ ಬಂದ ದೂರುಗಳ ಆಧಾರದಲ್ಲೂ ಆನಲೈನ್‌ ಮಾಧ್ಯಮಗಳ ನಿರ್ದಿಷ್ಟ ಕಂಟೆಂಟ್‌ ಗಳನ್ನು ನಿಷೇಧಿಸುವ ಅಧಿಕಾರವನ್ನು ಸರ್ಕಾರದ ಈ ವ್ಯಕ್ತಿ ಹೊಂದಿರುತ್ತಾನೆ.

ಸಾಮಾಜಿಕ ಮಾಧ್ಯಮ, ಡಿಜಿಟಲ್‌ ಮನರಂಜನಾ ಮಾಧ್ಯಮವನ್ನು ಸೆನ್ಸಾರ್‌ ಮುಕ್ತಗೊಳಿಸಲು ಜಗತ್ತಿನಾದ್ಯಂತ ಹೋರಾಟ, ಅಭಿಯಾನ, ಆಂದೋಲನಗಳು ನಡೆಯುತ್ತಿರುವ ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರವು ಜನರ ಅಂತರ್ಜಾಲ ಬಳಕೆಯ ಮೇಲೆ ಅಂಕುಶ ಹಾಕಲು ಮುಂದಾಗಿದೆ. ಪತ್ರಿಕಾ ಸ್ವಾತಂತ್ರ‍್ಯವನ್ನು ಹತ್ತಿಕ್ಕುವ ಮೂಲಕ ಸರ್ಕಾರದ ವಿರುದ್ಧದ ಮಾಧ್ಯಮದ ಧ್ವನಿಯನ್ನು ಅಡಗಿಸಲು ಮುಂದಾಗಿದೆ. ಅಂತರ್ಜಾಲ ಸಂಪರ್ಕವನ್ನು ಕಡಿತಗೊಳಿಸುವ, ಮಾಧ್ಯಮಗಳ ಪ್ರಸಾರಕ್ಕೆ ತಡೆ ಹಿಡಿಯುವ, ಜನರ ಖಾಸಗಿತನವನ್ನು ಕೊನೆಗೊಳಿಸುವ ಕೇಂದ್ರದ ಹೊಸ ನಿಯಮಾವಳಿಗಳು ಭಾರತದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರುತ್ತಿರುವ ಸ್ಪಷ್ಟ ಸೂಚನೆಯಂತಿದೆ.

ಮೂಲ : ಹಿಂದುಸ್ತಾನ್ ಟೈಮ್ಸ್


ಇದನ್ನೂ ಓದಿ: ಕೊರೊನಾ ವೈಫಲ್ಯ: ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರ ತಲೆದಂಡ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...