Homeಮುಖಪುಟಕೃಷಿ ಕಾನೂನುಗಳನ್ನು ವಾಪಸ್ ಪಡೆದು, ಪ್ರತಿಭಟನೆಯಲ್ಲಿ ಮಡಿದ ರೈತರನ್ನು ಹುತಾತ್ಮರೆಂದು ಘೋಷಿಸಿ- ಸಿದ್ದರಾಮಯ್ಯ

ಕೃಷಿ ಕಾನೂನುಗಳನ್ನು ವಾಪಸ್ ಪಡೆದು, ಪ್ರತಿಭಟನೆಯಲ್ಲಿ ಮಡಿದ ರೈತರನ್ನು ಹುತಾತ್ಮರೆಂದು ಘೋಷಿಸಿ- ಸಿದ್ದರಾಮಯ್ಯ

’ಅದಾನಿ ಮುಂತಾದವರು ಅಕ್ರಮವಾಗಿ ಸಂಗ್ರಹಿಸಿರುವ ಎಲ್ಲ ಕೃಷಿ ಉತ್ಪನ್ನಗಳನ್ನು ವಶಪಡಿಸಿಕೊಂಡು ಮಾರುಕಟ್ಟೆಗೆ ತಂದು ಹಣದುಬ್ಬರವನ್ನು ನಿಯಂತ್ರಿಸಿ, ನ್ಯಾಯಯುತ ಬೆಲೆಗಳಿಗೆ ಮಾರುವಂತೆ ಮಾಡಬೇಕು’

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ರೈತರ ಹೋರಾಟಕ್ಕೆ ಆರು ತಿಂಗಳಾಗಿದ್ದು, ಬೇಡಿಕೆಗಳನ್ನು ಪ್ರಜಾತಾಂತ್ರಿಕವಾಗಿ ಬಗೆಹರಿಸಿ, ಜನವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.

“ಪ್ರತಿಭಟನೆಯ ಸ್ಥಳದಲ್ಲಿ ಸುಮಾರು 340 ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಈ ಸಾವುಗಳಿಗೆ ಕೇಂದ್ರದ ಬಿಜೆಪಿ ಸರ್ಕಾರವೇ ನೇರಹೊಣೆ. ಜಗತ್ತಿನ ಯಾವುದೇ ದೇಶದ ನಾಗರಿಕ ಸರ್ಕಾರವು ಜನರ ಬೃಹತ್ ಚಳುವಳಿಯನ್ನು ಈ ಮಟ್ಟದಲ್ಲಿ ನಿರ್ಲಕ್ಷಿಸಿದ ಇತಿಹಾಸವಿಲ್ಲ” ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

’ದೇಶದ ಶೇ. 80 ರಷ್ಟು ಜನರು ರೈತಾಪಿ ಕುಟುಂಬಗಳೊಂದಿಗೆ ಪ್ರತ್ಯಕ್ಷ ಇಲ್ಲವೇ ಪರೋಕ್ಷ ಸಂಬಂಧವಿರುವವರು. ಇಷ್ಟು ಬೃಹತ್ ಜನ ಸಮುದಾಯದ ಹಕ್ಕೊತ್ತಾಯಗಳಿಗೆ ಮೋದಿಯವರ ಸರ್ಕಾರ ಕುರುಡಾಗಿ, ಕಿವುಡಾಗಿ ನಡೆದುಕೊಳ್ಳುತ್ತಿರುವುದು ದುರಂತ. ದೇಶದ ಎಲ್ಲ ರಂಗಗಳು ವಿಫಲವಾಗಿದ್ದಾಗ ಕೃಷಿಯು ರಾಜ್ಯದಲ್ಲಿ ಶೇ 6.4 ರಷ್ಟು, ದೇಶದಲ್ಲಿ 3.5 ರಷ್ಟು ಪ್ರಗತಿಯಾಗಿದೆಯೆಂದು ಸರ್ಕಾರಗಳೇ ತಮ್ಮ ವರದಿಗಳಲ್ಲಿ ಹೇಳಿಕೊಂಡಿವೆ. ಹಾಗಿದ್ದರೂ ತೊಗರಿ, ಹೆಸರು, ಸೂರ್ಯಕಾಂತಿ, ಕಡಲೆ ಕಾಯಿ ಮುಂತಾದ ಬೆಳೆಗಳಿಗೆ ಒಳ್ಳೆ ಬೆಲೆ ಏಕೆ ಸಿಗಲಿಲ್ಲ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಾಬಾ ರಾಮದೇವ್ ವಿರುದ್ಧ 1,000 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್

 

’ಮಾರುಕಟ್ಟೆಯಲ್ಲಿ ಬೇಳೆ ಕಾಳುಗಳ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 75 ರಷ್ಟು ಹೆಚ್ಚಾಗಿದೆ. ಅಡುಗೆ ಎಣ್ಣೆಯ ಬೆಲೆ ಶೇ. 120 ಹೆಚ್ಚಾಗಿದೆ. ಇವುಗಳಿಗೆ ಸಂಬಂಧಿಸಿದಂತೆ ಹಣದುಬ್ಬರದ ಪ್ರಮಾಣ ಶೇ.16 ಹೆಚ್ಚಾಗಿದೆ. ಹಾಗಿದ್ದರೆ ರೈತರು ಬೆಳೆದದ್ದೆಲ್ಲ ಎಲ್ಲಿ ಹೋಯಿತು..?. ಬೇಳೆ ಕಾಳುಗಳು ಮತ್ತು ಎಣ್ಣೆ ಕಾಳುಗಳ ಪ್ರಮುಖ ವ್ಯಾಪಾರಿ ಅದಾನಿ ಮತ್ತು ಅದಾನಿ ವಿಲ್ಮಾರ್ ಕಂಪೆನಿ. ದೇಶದಲ್ಲಿ ಸುಮಾರು 5 ಮಿಲಿಯನ್ ಟನ್ ತೊಗರಿ ಬೇಳೆ ಬಳಕೆ ಇದೆ. ಒಂದು ಕೆ.ಜಿ. ತೊಗರಿ ಬೇಳೆಯ ಬೆಲೆ 30 ರೂಗಳಷ್ಟು ಹೆಚ್ಚಾದರೆ ಈ ಕಂಪೆನಿಗೆ ಒಂದು ವರ್ಷಕ್ಕೆ ಒಂದೂವರೆ ಲಕ್ಷ ಕೋಟಿಯಷ್ಟು ಹೆಚ್ಚಿನ ಲಾಭ ಸಿಗುತ್ತೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ತೊಗರಿಬೇಳೆಯ ಬೆಲೆ ಕಳೆದ ಕೆಲವು ತಿಂಗಳಿಂದ ಈಚೆಗೆ ಸರಾಸರಿ 100 ರೂಪಾಯಿಗಳಷ್ಟು ಹೆಚ್ಚಾಗಿದೆ. ಅನೇಕ ಕಡೆ ಕೆಜಿಗೆ 180 ರೂ.ವರೆಗೆ ಮಾರಾಟವಾಗುತ್ತಿದೆ. ಕಳೆದ ವರ್ಷ ಇದು 80-90 ರೂ. ಮಾತ್ರ ಇತ್ತು. ಪರಿಸ್ಥಿತಿ ಹೀಗೆ ಇದ್ದರೆ ರೈತರ ಉದ್ಧಾರ ಹೇಗೆ ಸಾಧ್ಯ..? ವಿದೇಶಿ ಆಮದನ್ನು ನಿಲ್ಲಿಸಿ, ಅದಾನಿ ಮುಂತಾದವರು ಅಕ್ರಮವಾಗಿ ಸಂಗ್ರಹಿಸಿರುವ ಎಲ್ಲ ಕೃಷಿ ಉತ್ಪನ್ನಗಳನ್ನು ವಶಪಡಿಸಿಕೊಂಡು ಮಾರುಕಟ್ಟೆಗೆ ತಂದು ಹಣದುಬ್ಬರವನ್ನು ನಿಯಂತ್ರಿಸಿ, ನ್ಯಾಯಯುತ ಬೆಲೆಗಳಿಗೆ ಮಾರುವಂತೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ತಾವು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದಿದ್ದ ಪತ್ರ ಬಗ್ಗೆಯೂ ಸಿದ್ದರಾಮಯ್ಯ ನೆನಪಿಸಿದ್ದಾರೆ. ’ಹಿಂದೆ ಬರೆದ ಪತ್ರದಲ್ಲಿ ಉಲ್ಲೇಖಿಸಿದಂತೆ, “ ರೈತರು ನಡೆಸುತ್ತಿರುವ ಹೋರಾಟ ತಮಗಾಗಿ ಮಾತ್ರವಲ್ಲ. ರೈತರ ಉತ್ಪನ್ನಗಳನ್ನು ಕೊಂಡುಕೊಳ್ಳುತ್ತಿರುವ ಗ್ರಾಹಕರ ಪರವಾಗಿ ನಡೆಸುತ್ತಿರುವ ಹೋರಾಟವು ಆಗಿದೆ”.  ಇದು ದೇಶ ಉಳಿಸುವ ಹೋರಾಟವು ಹೌದು’ ಎಂದಿದ್ದಾರೆ.

 

ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಮರಣ ಹೊಂದಿದ ಎಲ್ಲ ರೈತರನ್ನು ಹುತಾತ್ಮರೆಂದು ಘೋಷಿಸಿ ಅವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆಗ್ರಹಿಸಿದ್ದಾರೆ.

’ರೈತರು ಬೆಳೆದ ಬೆಳೆಗಳಿಗೆ ಬೆಲೆ ಖಾತ್ರಿ ಕಾಯಿದೆಯನ್ನು, ಗ್ರಾಹಕರಿಗೆ ನ್ಯಾಯಯುತ ಬೆಲೆಗಳ ಖಾತ್ರಿಯ ಕಾಯಿದೆಯನ್ನು ಜಾರಿಗೊಳಿಸಬೇಕು. ಇದನ್ನು ನಿಭಾಯಿಸಲು ಸರ್ವಪಕ್ಷಗಳ, ತಜ್ಞರ, ರೈತ ಮುಖಂಡರ, ಗ್ರಾಹಕ ಪ್ರತಿನಿಧಿಗಳ ಶಾಶ್ವತ ಸಮಿತಿಯನ್ನು ರಚಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ‘ದೊರೆಸ್ವಾಮಿ ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ’- ಸಿದ್ದರಾಮಯ್ಯ ಅವರಿಂದ ಶ್ರದ್ದಾಂಜಲಿ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...