Homeಕರ್ನಾಟಕರಜೆ ಮೇಲೆ ತೆರಳಿದ ಲೈಂಗಿಕ ಹಗರಣ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಮುಖ್ಯಸ್ಥ, ತನಿಖೆ ಸ್ಥಗಿತ: ಸಿದ್ದರಾಮಯ್ಯ

ರಜೆ ಮೇಲೆ ತೆರಳಿದ ಲೈಂಗಿಕ ಹಗರಣ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಮುಖ್ಯಸ್ಥ, ತನಿಖೆ ಸ್ಥಗಿತ: ಸಿದ್ದರಾಮಯ್ಯ

ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ

- Advertisement -
- Advertisement -

ರಮೇಶ್ ಜಾರಕಿಹೊಳಿ ಲೈಂಗಿಕ ಹಗರಣದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಮುಖ್ಯಸ್ಥರು ರಜೆ ಮೇಲೆ ತೆರಳಿ, ತನಿಖೆ ಸ್ಥಗಿತಗೊಂಡಿರುವುದರಿಂದ, ಹೈಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆಯನ್ನು ಮುಂದುವರೆಸಬೇಕು ಹಾಗೂ ಆರೋಪಿ ರಮೇಶ್ ಜಾರಕಿಹೊಳಿಯನ್ನು ಕೂಡಲೇ ಬಂಧಿಸಬೇಕು ಎಂದು ರಾಜ್ಯ ಸರ್ಕಾರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ಒತ್ತಾಯಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಅತ್ಯಾಚಾರ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿಯನ್ನು ಭೇಟಿಯಾಗಿ, ಚರ್ಚೆ ನಡೆಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಮ್ಮ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದ್ದು, ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗಿರವಿ ಇರಿಸಿದ ಮೆದುಳುಗಳು ಮತ್ತು ಕಾಣೆಯಾದ ಹಸುಗೂಸು!: ಡಿ.ಉಮಾಪತಿ

“ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ರಮೇಶ್ ಜಾರಕಿಹೊಳಿ ಅವರಿಗೆ ಯಾರೆಲ್ಲಾ ಮಂತ್ರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ರಕ್ಷಣೆ ನೀಡುತ್ತಿದ್ದಾರೆ ಅವರೆಲ್ಲರ ಹೆಸರುಗಳನ್ನು ತನಿಖೆಯ ಮೂಲಕ ಬಹಿರಂಗಪಡಿಸಬೇಕು ಮತ್ತು ಅಂಥವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

“ಅತ್ಯಾಚಾರ ಪ್ರಕರಣ ದಾಖಲಾಗಿ, ಸಂತ್ರಸ್ತ ಯುವತಿ ವಿಶೇಷ ತನಿಖಾ ತಂಡದ ಎದುರು ರಮೇಶ್ ಜಾರಕಿಹೊಳಿ ತನ್ನನ್ನು ದೈಹಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಹೇಳಿಕೆ ನೀಡಿದ ಮೇಲೆಯೂ ಜಾರಕಿಹೊಳಿಯನ್ನು ಪೊಲೀಸರು ಏಕೆ ಬಂಧಿಸಿಲ್ಲ? ಅತ್ಯಾಚಾರ ಆರೋಪಿಯೊಬ್ಬ ಸ್ವಚ್ಛಂದವಾಗಿ ಓಡಾಡಿಕೊಂಡಿರಲು ರಾಜ್ಯ ಸರ್ಕಾರದ ಕೃಪಾಕಟಾಕ್ಷ ಕಾರಣವಲ್ಲದೆ ಇನ್ನೇನು?” ಎಂದು ಅವರು ಪ್ರಶ್ನಿಸಿದ್ದಾರೆ.

“ಅತ್ಯಾಚಾರ ಆರೋಪಿಯಾದ ರಮೇಶ್ ಜಾರಕಿಹೊಳಿ ಕಳೆದ ಶನಿವಾರ ರಾಜ್ಯದ ಗೃಹ ಸಚಿವರನ್ನು ಭೇಟಿಮಾಡಿ, ಎರಡು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದ್ದಾರೆ. ಅತ್ಯಾಚಾರ ಆರೋಪಿಯೊಬ್ಬ ಗೃಹ ಸಚಿವರನ್ನು ಭೇಟಿಮಾಡಿ, ಮಾತುಕತೆ ನಡೆಸಿರುವುದು ರಾಜ್ಯದ ಇತಿಹಾಸದಲ್ಲೇ ಇದೇ ಮೊದಲು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

“ಸಿ.ಆರ್.ಪಿ.ಸಿ ಸೆಕ್ಷನ್ 53(A) ಪ್ರಕಾರ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆ ಒಳಪಡಿಸಬೇಕು ಎಂದಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿ ಇಷ್ಟು ದಿನ ಕಳೆದರೂ ಈ ವರೆಗೆ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸದಿರಲು ಕಾರಣವೇನು?” ಎಂದು ಕೇಳಿದ್ದಾರೆ.

“ತನ್ನ ರಾಸಲೀಲೆ ಸಿಡಿ ಹೊರಬಂದಾಗ ಸಿಡಿಯಲ್ಲಿರುವುದು ನಾನಲ್ಲ, ನನಗೂ ವೀಡಿಯೋಗೂ ಸಂಬಂಧವೇ ಇಲ್ಲ ಎಂದಿದ್ದ ರಮೇಶ್ ಜಾರಕಿಹೊಳಿ, ನಿನ್ನೆ ಸಿಡಿ ಯಲ್ಲಿರುವುದು ನಾನೇ ಎಂದು ಎಸ್.ಐ.ಟಿ ಮುಂದೆ ಒಪ್ಪಿಕೊಂಡಿದ್ದಾರೆಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಅಂದರೆ ಇದು ಅತ್ಯಾಚಾರವನ್ನು ಒಪ್ಪಿಕೊಂಡಂತೆ ಅಲ್ಲವೇ?” ಎಂದು ಕೇಳಿದ್ದಾರೆ.

“ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಳ್ಳುವ ಮೊದಲೇ ವಿಶೇಷ ತನಿಖಾ ತಂಡದ ಮುಖ್ಯಸ್ಥರಾದ ಸೌಮೇಂಧು ಮುಖರ್ಜಿ ಅವರನ್ನು ಸರ್ಕಾರ ರಜೆಯ ಮೇಲೆ ಕಳುಹಿಸಿದೆ.
ಇದು ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ತನಿಖೆಯನ್ನು ವಿಳಂಬ ಮಾಡುತ್ತಿದೆ ಎಂಬುದನ್ನು ತೋರಿಸುತ್ತದೆ.
ಸಿ.ಆರ್.ಪಿ.ಸಿ ಸೆಕ್ಷನ್ 173 (1)(A) ಪ್ರಕಾರ ಅತ್ಯಾಚಾರ ಪ್ರಕರಣದ ತನಿಖೆ ಎರಡು ತಿಂಗಳುಗಳೊಳಗೆ ಕಡ್ಡಾಯವಾಗಿ ಮುಗಿಯಬೇಕು ಎಂದಿದೆ. ಆದರೆ ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಸಂವಿಧಾನದ ಈ ಯಾವ ನಿಯಮಗಳನ್ನು ಪೊಲೀಸ್ ಇಲಾಖೆ ಪಾಲಿಸುತ್ತಿಲ್ಲ. ತಮಗೆ ಬೇಕಾದಂತೆ ಸಂವಿಧಾನದ ನಿಯಮಗಳನ್ನು ತಿರುಚಿಕೊಂಡಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್ 2 ನೆ ಅಲೆಯಲ್ಲಿ ಅನಾಥರಾದ ಸಾವಿರಾರು ಮಕ್ಕಳು: ಸದ್ಯ ಲೆಕ್ಕಕ್ಕೆ ಸಿಕ್ಕಿದ್ದು 577!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...