Homeಅಂತರಾಷ್ಟ್ರೀಯಹಣ ವಂಚನೆ ಆರೋಪಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ

ಹಣ ವಂಚನೆ ಆರೋಪಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ

- Advertisement -
- Advertisement -

ಆಂಟಿಗುವಾದಿಂದ ನಾಪತ್ತೆಯಾಗಿ, ಡೊಮಿನಿಕಾದಲ್ಲಿ ಬಂಧನಕ್ಕೆ ಒಳಗಾಗಿದ್ದ ಪಿಎನ್‌ಬಿ ಸಾಲದ ವಂಚಕ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಿಂದಲೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಅಲ್ಲಿನ ಕೋರ್ಟ್ ತಡೆ ನೀಡಿದೆ.

“ಈ ಆದೇಶವನ್ನು ಪ್ರತಿವಾದಿಗಳಿಗೆ ಇಮೇಲ್, ಫ್ಯಾಕ್ಸ್ ಮೂಲಕ ವೈಯಕ್ತಿಕವಾಗಿ ತಕ್ಷಣವೇ ನೀಡಬೇಕು ಮತ್ತು ಡೌಗ್ಲಾಸ್ ಚಾರ್ಲ್ಸ್ ವಿಮಾನ ನಿಲ್ದಾಣದಲ್ಲಿನ ವಲಸೆ ಮುಖ್ಯಸ್ಥರಿಗೂ ಇಮೇಲ್ ಮತ್ತು ಫ್ಯಾಕ್ಸ್ ಮೂಲಕ ಸಲ್ಲಿಸಬೇಕು” ಎಂದು ನ್ಯಾಯಾಲಯವು ಆದೇಶ ಮಾಡಿದೆ.

ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮೇ 28 ರಂದು ಸ್ಥಳೀಯ ಕಾಲಮಾನ ಬೆಳಿಗ್ಗೆ 9 ಗಂಟೆಗೆ ನಡೆಸಲಿದೆ. ಡೊಮಿನಿಕಾದ ಚೋಕ್ಸಿಯ ವಕೀಲ ವೇಯ್ನ್ ಮಾರ್ಷ್ ಈ ಹಿಂದೆ ತಮ್ಮ ಕಕ್ಷಿದಾರ ಚೋಕ್ಸಿಗೆ ಕಾನೂನು ಸಲಹೆ ಪಡೆಯುವ ಅವಕಾಶವನ್ನು ನಿರಾಕರಿಸಲಾಗಿದೆ. ಮೇ 27 ರಂದು ಮಾತ್ರ ಚೋಕ್ಸಿಯೊಂದಿಗೆ ಮಾತನಾಡಲು ಅವಕಾಶ ನೀಡಲಾಯಿತು ಎಂದು ಆರೋಪಿಸಿದ್ದರು.

ಇದನ್ನೂ ಓದಿ: ವಿಶ್ವದಲ್ಲೆ ಅತಿಹೆಚ್ಚು ಲಸಿಕೆ ತಯಾರಿಸುವ ಭಾರತ ಯಾಕೆ ಕೊರತೆ ಎದುರಿಸುತ್ತಿದೆ: ಪ್ರಿಯಾಂಕ ಗಾಂಧಿ

“ಅವರಿಗೆ ತೀವ್ರವಾಗಿ ಹಲ್ಲೆ ನಡೆಸಲಾಗಿದ್ದು, ಕಣ್ಣುಗಳು ಊದಿಕೊಂಡಿದ್ದವು. ದೇಹದ ಮೇಲೆ ಹಲವಾರು ಸುಟ್ಟ ಗುರುತುಗಳಿರುವುದನ್ನು ನಾನು ಗಮನಿಸಿದ್ದೇನೆ. ಆಂಟಿಗುವಾದ ಜಾಲಿ ಹಾರ್ಬರ್‌ನಲ್ಲಿ ಅವನನ್ನು ಅಪಹರಿಸಿ ಡೊಮಿನಿಕಾಗೆ ಕರೆತರಲಾಗಿತ್ತು ಎಂದು ಅವರು ನನಗೆ ಹೇಳಿದ್ದಾರೆ. ಅವರು ಭಾರತೀಯ ಮೂಲದ ಆಂಟಿಗುವಾನ್ ಪೊಲೀಸ್ ಎಂದು ನಂಬಿದ್ದ ವ್ಯಕ್ತಿಗಳು ಅವರನ್ನು ಕರೆತಂದಿದ್ದರು” ಎಂದು ಮಾರ್ಷ್ ಎಎನ್‌ಐಗೆ ತಿಳಿಸಿದ್ದಾರೆ.

ಇದು “ನ್ಯಾಯದ ಅವಹೇಳನ” ಎಂದು ಹೇಳಿರುವ ವಕೀಲ ಮಾರ್ಷ್, ಇಡೀ ರಾಷ್ಟ್ರವು ಧ್ವನಿ ಎತ್ತಬೇಕಾದ ಅಗತ್ಯವಿದೆ. ಒಬ್ಬ ವಕೀಲನಾಗಿ ಚೋಕ್ಸಿಯನ್ನು ಶೋಷಣೆ ಮಾಡುವುದನ್ನು ತಡೆಯಲು ಏನು ಬೇಕಾದರೂ ಮಾಡುತ್ತೇನೆ ಎಂದು ಹೇಳಿದ್ದಾರೆ.

ಪಂಜಾಬ್‌ ನ್ಯಾಷನಲ್‌‌ ಬ್ಯಾಂಕ್‌‌ನಿಂದ ಕೋಟ್ಯಾಂತರ ರೂ.ಗಳ ಹಣ ವಂಚನೆ ಪ್ರಕರಣದಲ್ಲಿ ಸಿಲುಕಿದ್ದ ಮೆಹುಲ್ ಚೋಕ್ಸಿ 2018 ರಲ್ಲಿ ಭಾರತದಿಂದ ಆಂಟಿಗುವಾಕ್ಕೆ ಪರಾರಿಯಾಗಿದ್ದರು. ಅವರು 2017 ರಲ್ಲಿ ಆಂಟಿಗುವಾ ಮತ್ತು ಬಾರ್ಬುಡಾದ ಪೌರತ್ವ ಪಡೆದ್ದರು. ಆಂಟಿಗುವಾದಿಂದ ಅವರು ಇತ್ತಿಚೆಗೆ ನಾಪತ್ತೆಯಾಗಿದ್ದರು. ಅದಕ್ಕಾಗಿ ಇಂಟರ್‌ಫೂಲ್‌ ಅವರ ಪತ್ತೆಗೆ ಯಲ್ಲೋ ನೋಟಿಸ್‌ ಜಾರಿ ಮಾಡಿತ್ತು. ಇದಾಗಿ ಅವರನ್ನು ಡೊಮಿನಿಕಾದಲ್ಲಿ ಸೆರೆಹಿಡಿಯಲಾಗಿದೆ.

ಇದನ್ನೂ ಓದಿ: ’ಯಾರಿಂದಲೂ ನನ್ನ ಅರೆಸ್ಟ್ ಮಾಡಲು ಸಾಧ್ಯವಿಲ್ಲ’- ಬಾಬಾ ರಾಮ್‌ದೇವ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...