Homeಮುಖಪುಟ99.94 ರೂ ತಲುಪಿದ ಪೆಟ್ರೋಲ್ ದರ: ಬ್ಯಾಟಿಂಗ್ ದೈತ್ಯ ಡಾನ್ ಬ್ರಾಡಮನ್‌ಗೆ ಮುಂಬೈ ಶ್ರದ್ದಾಂಜಲಿ!

99.94 ರೂ ತಲುಪಿದ ಪೆಟ್ರೋಲ್ ದರ: ಬ್ಯಾಟಿಂಗ್ ದೈತ್ಯ ಡಾನ್ ಬ್ರಾಡಮನ್‌ಗೆ ಮುಂಬೈ ಶ್ರದ್ದಾಂಜಲಿ!

- Advertisement -
- Advertisement -

ಪೆಟ್ರೋಲ್ ರೇಟು ಏರಿಕೆಯಾಗುವುದೇ ನಡೆದೇ ಇದೆ. ಆದರೆ ಇವತ್ತು ಮುಂಬೈನಲ್ಲಿ ತಲುಪಿದ ಪೆಟ್ರೋಲ್‌ನ ಗರಿಷ್ಠ ಮಟ್ಟ ಕುರಿತಂತೆ ಅಸಹಾಯಕ ಮುಂಬೈಗರು ಟ್ವೀಟ್‌ಗಳನ್ನು ಮಾಡುತ್ತ, ಡಾನ್ ಬ್ರಾಡ್‌ಮನ್ ಎಂಬ ಕ್ರಿಕೆಟ್ ದಂತವ್ಯಕ್ತಿಗೆ ಶ್ರದ್ದಾಂಜಲಿ ಸಲ್ಲಿಸಿದ್ದಾರೆ!

ಏಕೆಂದರೆ ಇವತ್ತು ಮುಂಬೈನ ಪೆಟ್ರೋಲ್ ರೇಟು ಮತ್ತು ಡಾನ್ ಬ್ರಾಡ್‌ಮನ್ ಎಂಬ ಅಪ್ರತಿಮ ಬ್ಯಾಟ್ಸ್ಮನ್‌ನ ಟೆಸ್ಟ್ ಸರಾಸರಿ ಬ್ಯಾಟಿಂಗ್ ಒಂದೇ ಆಗಿವೆ. ಅಂದರೆ ಇಂದು ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 99.94 ರೂ ತಲುಪಿದೆ. ಬ್ರಾಡ್‌ಮನ್ ಅವರ ವೃತ್ತಿಜೀವನದ ಟೆಸ್ಟ್ ಬ್ಯಾಟಿಂಗ್ ಸರಾಸರಿ ಸಹ 99.94 ಆಗಿದೆ.

ಸಚಿನ್ ತೆಂಡೂಲ್ಕರ್ ನೆಲೆಸಿರುವ, ಮುಂಬೈ ಇಂಡಿಯನ್ಸ್ ಐಪಿಎಲ್ ತಂಡವನ್ನು ಮುನ್ನಡೆಸುತ್ತಿರುವ ಅಂಬಾನಿ ಕುಟುಂಬ ವಾಸಿಸುವ ಮುಂಬೈನಲ್ಲಿ ಈಗ ಪೆಟ್ರೋಲ್ ದರ ಸೆಂಚುರಿ ಸಮೀಪ ಬಂದು ನಿಂತಿದೆ.

ತೆಂಡೂಲ್ಕರ್, ರಿಕಿ ಪಾಂಟಿಂಗ್ ಅವರಿಗೆ ಸಾಧ್ಯವಾಗದೇ ಹೋಗಿದ್ದನ್ನು ಈಗ ಮೋದಿ ಸಾಧಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಲಾಗುತ್ತಿದೆ.
ಕ್ರಿಕೆಟ್ ಮತ್ತು ಮೋದಿ ಎರಡರ ಆರಾಧಕರೂ ಆದ ಭಕ್ತರಿಗೆ ಇದು ಮುಜುಗರ ಉಂಟು ಮಾಡುತ್ತಿದೆ.

ಸರ್ ಡೊನಾಲ್ಡ್ ಜಾರ್ಜ್ ಬ್ರಾಡ್‌ಮನ್ ಆಸ್ಟ್ರೇಲಿಯಾದ ಮಾಜಿ ಅಂತರರಾಷ್ಟ್ರೀಯ ಕ್ರಿಕೆಟಿಗ. ಈತನನ್ನು ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್ಮನ್ ಎಂದು ವ್ಯಾಪಕವಾಗಿ ಅಂಗೀಕರಿಸಲಾಗಿದೆ. ಬ್ರಾಡ್‌ಮನ್ ಅವರ ವೃತ್ತಿಜೀವನದ ಟೆಸ್ಟ್ ಬ್ಯಾಟಿಂಗ್ ಸರಾಸರಿ 99.94 ಅನ್ನು ಕ್ರೀಡಾಪಟು ಒಬ್ಬರು ಪಡೆದ ದೊಡ್ಡ ಸಾಧನೆ ಎಂದು ಉಲ್ಲೇಖಿಸಲಾಗಿದೆ.

ಹಿಂದೆಲ್ಲಾ ಪೆಟ್ರೋಲ್ ಡಿಸೇಲ್ ದರ ಪೈಸೆಗಳಲ್ಲಿ ಹೆಚ್ಚಾದರೂ ಭಾರೀ ಪ್ರತಿಭಟನೆಗಳು ದಾಖಲಾಗುತ್ತಿದ್ದವು. ಈಗ ಕೋವಿಡ್ ಕಾಲದಲ್ಲಿ ಪ್ರತಿಭಟನೆ ನಿಷಿದ್ದ. ಹಾಗಾಗಿ ನೆಟ್ಟಿಗರು ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಅಂತಹ ಕೆಲವು ಟ್ವೀಟ್‌ಗಳು ಇಲ್ಲಿವೆ.


ಇದನ್ನೂ ಓದಿ: ಯಾರು ಈ ಬಾಬಾ ರಾಮದೇವ್? ಏನು ಈ ಪತಂಜಲಿ?: ಆಧ್ಯಾತ್ಮಿಕ ಬಂಡವಾಳಶಾಹಿಯ ಸಂಪೂರ್ಣ ಡಿಟೇಲ್ಸ್….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...