Homeಮುಖಪುಟ"ನನ್ನನ್ನು ಈ ರೀತಿ ಅವಮಾನಿಸಬೇಡಿ": ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

“ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

- Advertisement -
- Advertisement -

ಯಾಸ್ ಚಂಡಮಾರುತದಿಂದ ಉಂಟಾದ ಹಾನಿಯನ್ನು ಪರಿಶೀಲಿಸುವ ಸಭೆಯೊಂದರ ಕುರಿತಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ “ನನ್ನನ್ನು ಈ ರೀತಿ ಅವಮಾನಿಸಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಅವರ ಕಚೇರಿ “ನಕಲಿ, ಏಕಪಕ್ಷೀಯ, ಪಕ್ಷಪಾತದ ಸುದ್ದಿ”ಯನ್ನು ಮಾಧ್ಯಮಗಳಿಗೆ ಒದಗಿಸಿದೆ ಎಂದು ಅವರು ಅಪಾದಿಸಿದ್ದಾರೆ.

“ನನ್ನನ್ನು ಈ ರೀತಿ ಅವಮಾನಿಸಬೇಡಿ. ನಮಗೆ ಭರ್ಜರಿ ಗೆಲುವು ಸಿಕ್ಕಿದೆ, ಅದಕ್ಕಾಗಿಯೇ ನೀವು ಈ ರೀತಿ ವರ್ತಿಸುತ್ತಿದ್ದೀರಾ? ನೀವು ಎಲ್ಲವನ್ನೂ ಪ್ರಯತ್ನಿಸಿದ್ದೀರಿ ಮತ್ತು ಸೋತಿದ್ದೀರಿ. ಪ್ರತಿದಿನ ನಮ್ಮೊಂದಿಗೆ ಯಾಕೆ ಜಗಳವಾಡುತ್ತಿದ್ದೀರಿ?” ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ ಅವರು, ವಿಷಯ, ಇಶ್ಯೂಗಳ ಕುರಿತು ನೇರವಾಗಿ ಸಂವಹನ ಮಾಡಿ ಎಂದು ಸಲಹೆ ನೀಡಿದರು.

ಕೇಂದ್ರವು ತನ್ನ ಉನ್ನತ ಅಧಿಕಾರಿಯನ್ನು ದೆಹಲಿಗೆ ಮರಳುವಂತೆ ಆದೇಶಿಸಿದ್ದು ಮಮತಾ ಅವರ ಆಕ್ರೋಶಕ್ಕೆ ಕಾರಣವಾಗಿದೆ. ಮಮತಾ ಅವರು ಪ್ರಧಾನಿ ನೇತೃತ್ವದ ಸಭೆಗೆ ಗೈರು ಹಾಜರಾಗಿದ್ದಾರೆ ಮತ್ತು ಅವರ ಖಾಲಿ ಸ್ಥಾನವನ್ನು ತೋರಿಸುವ ಫೋಟೋಗಳನ್ನು ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಪ್ಲಾಂಟ್ ಮಾಡಿದೆ ಎಂದು ಕೆಲವು ಮೂಲಗಳು ತಿಳಿಸಿವೆ.

ಮಮತಾ ಪ್ರಧಾನಿ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ 15 ನಿಮಿಷಗಳ ತ್ವರಿತ ಸಂವಾದ ನಡೆಸಿದರು ಮತ್ತು ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಮೊದಲೇ ಘೋಷಿಸಿದ್ದಂತೆ ಚಂಡಮಾರುತ ಪೀಡಿತ ಕರಾವಳಿಯ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮದ ಕಾರಣಕ್ಕಾಗಿ ಮುಖ್ಯಮಂತ್ರಿ ಅವರು ಹೊರಡುವ ಮೊದಲು ಪ್ರಧಾನಮಂತ್ರಿಯ ಅನುಮತಿಯನ್ನು ಕೇಳಿದರು ಎಂದು ಬಂಗಾಳ ಸರ್ಕಾರದ ಮೂಲಗಳು ತಿಳಿಸಿವೆ.

“ನಾನು ಚಂಡಮಾರುತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಯೋಜನೆಗಳನ್ನು ರೂಪಿಸಿದ್ದೆ. ಯಾಸ್ ಚಂಡಮಾರುತದಿಂದ ಉಂಟಾದ ಹಾನಿಯನ್ನು ನೋಡಲು ನಾನು ಸಾಗರ್ ಮತ್ತು ದಿಘಾಕ್ಕೆ ಪ್ರಯಾಣಿಸಬೇಕಾಗಿತ್ತು. ನನ್ನ ಎಲ್ಲಾ ಯೋಜನೆಗಳನ್ನು ಸಿದ್ಧಪಡಿಸಲಾಗಿತ್ತು. ನಂತರ ಇದ್ದಕ್ಕಿದ್ದಂತೆ ಚಂಡಮಾರುತದ ನಂತರದ ಪರಿಸ್ಥಿತಿಯನ್ನು ನಿರ್ಣಯಿಸಲು ಬಂಗಾಳಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ ಎಂಬ ಕರೆ ಬಂದಿತು’ ಎಂದು ಮಮತಾ ಬ್ಯಾನರ್ಜಿ ಹೇಳಿದರು.

‘ರಾಜಕೀಯ ವೈರತ್ವ ಸಾಧಿಸಲು ಮಾತ್ರ ಪ್ರಧಾನಮಂತ್ರಿ ಸಭೆ ಕರೆದಿದ್ದಾರೆ. ಅವರ ಬಿಜೆಪಿಯನ್ನು ಒಳಗೊಂಡಿರುವ ಪ್ರತಿಪಕ್ಷಗಳನ್ನು ಆಹ್ವಾನಿಸಿದ್ದಾರೆ ಮತ್ತು ಗವರ್ನರ್ ಜಗದೀಪ್ ಧಂಕರ್ ಅವರನ್ನೂ ಕರೆದಿದ್ದಾರೆ. ಇತ್ತೀಚೆಗೆ ಅವರು ಗುಜರಾತ್ ಮತ್ತು ಒಡಿಶಾದಲ್ಲಿ ನಡೆಸಿದ ಚಂಡಮಾರುತ ಪರಿಶೀಲನಾ ಸಭೆಗಳಲ್ಲಿ ಹೀಗೆ ವರ್ತಿಸಿರಲಿಲ್ಲ’ ಎಂದು ಮಮತಾ ದೂರಿದ್ದಾರೆ.

ಪ್ರಧಾನಿ ಮತ್ತು ರಾಜ್ಯಪಾಲರನ್ನು 30 ನಿಮಿಷಗಳ ಕಾಲ ಕಾಯುವಂತೆ ಮಾಡಿದೆ ಎಂಬ ಕೇಂದ್ರ ಸರ್ಕಾರದ ಹೇಳಿಕೆಯನ್ನು ಅಲ್ಲಗಳೆದಿರುವ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ತಾನೇ 20 ನಿಮಿಷಗಳ ಕಾಲ ಕಾಯಬೇಕಾಗಿತು ಎಂದಿದ್ದಾರೆ.

“ಪಿಎಂ-ಸಿಎಂ ಸಭೆ ನಡೆಯಬೇಕಿದ್ದ ಸ್ಥಳವನ್ನು ತಲುಪುವ ಹೊತ್ತಿಗೆ, ಸ್ವಲ್ಪ ಸಮಯದ ಹಿಂದೆ ಪ್ರಧಾನಿ ಅಲ್ಲಿಗೆ ಆಗಮಿಸಿದ್ದರು ಮತ್ತು ಸಭೆ ನಡೆಯುತ್ತಿದೆ ಎಂದು ಅಧಿಕಾರಿಗಳು ನಮಗೆ ಹೇಳಿದರು.. ಹೊರಗೆ ಕಾಯಲು ನಮ್ಮನ್ನು ಕೇಳಲಾಯಿತು, ಸಭೆ ನಡೆಯುತ್ತಿರುವುದರಿಂದ ಈ ಸಮಯದಲ್ಲಿ ಯಾವುದೇ ಪ್ರವೇಶವಿಲ್ಲ ಎಂದರು. ನಾವು ಸ್ವಲ್ಪ ಸಮಯ ತಾಳ್ಮೆಯಿಂದ ಕಾಯುತ್ತಿದ್ದೆವು. ನಂತರ, ನಾವು ಮತ್ತೆ ಕೇಳಿದಾಗ, ಮುಂದಿನ ಒಂದು ಗಂಟೆಯವರೆಗೆ ಯಾರೂ ಪ್ರವೇಶಿಸಲು ಸಾಧ್ಯವಿಲ್ಲ ಎಂದು ನಮಗೆ ತಿಳಿಸಲಾಯಿತು” ಎಂದು ಅವರು ಹೇಳಿದರು.
“ಆಗ ಸಭೆ ಕಾನ್ಫರೆನ್ಸ್ ಹಾಲ್‌ಗೆ ಸ್ಥಳಾಂತರಗೊಂಡಿದೆ ಎಂದು ಯಾರೋ ಹೇಳಿದರು, ಆದ್ದರಿಂದ ಮುಖ್ಯ ಕಾರ್ಯದರ್ಶಿ ಮತ್ತು ನಾನು ಅಲ್ಲಿಗೆ ಹೋಗಲು ನಿರ್ಧರಿಸಿದೆವು. ನಾವು ಅಲ್ಲಿಗೆ ತಲುಪಿದಾಗ, ಪ್ರಧಾನಿ ಗೌರವಾನ್ವಿತ ರಾಜ್ಯಪಾಲರು, ಕೇಂದ್ರ ಮುಖಂಡರು ಮತ್ತು ಕೆಲವು ವಿಪಕ್ಷ ಶಾಸಕರೊಂದಿಗೆ ಸಭೆ ನಡೆಸುತ್ತಿದ್ದರು’ ಎಂದು ಮಮತಾ ದೂರಿದ್ದಾರೆ.

“ಇದು ಸಭೆಯ ಉದ್ದೇಶಕ್ಕೆ ವಿರುದ್ಧವಾಗಿತ್ತು. ಇದು ಕೇವಲ ಪ್ರಧಾನಿ-ಸಿಎಂ ಸಭೆ ಮಾತ್ರ ಎಂದು ಭಾವಿಸಲಾಗಿತ್ತು. ಆದ್ದರಿಂದ, ನಾವು ನಮ್ಮ ವರದಿಯನ್ನು ಪ್ರಧಾನಮಂತ್ರಿಗೆ ಸಲ್ಲಿಸಲು ನಿರ್ಧರಿಸಿದೆವು ಮತ್ತು ನಂತರ ಪ್ರಧಾನ ಮಂತ್ರಿಯ ಅನುಮತಿಯೊಂದಿಗೆ ನಾವು ದಿಘಾಗೆ ಹೋದೆವು. ನಾನು ಮೂರು ಬಾರಿ ಪ್ರಧಾನಮಂತ್ರಿಯ ಅನುಮತಿಯನ್ನು ಕೋರಿದೆ” ಎಂದು ಅವರು ಹೇಳಿದರು.

“ಪ್ರಧಾನಮಂತ್ರಿ ತಮ್ಮ ಅಹಂಕಾರವನ್ನು ಶಮನಗೊಳಿಸಿದರೆ ಅವರ ಪಾದಗಳನ್ನು ಮುಟ್ಟಲು ಸಿದ್ಧ’ ಎಂದು ಮಮತಾ ಹೇಳಿದರು. ಏಕೆಂದರೆ ಬಂಗಾಳದ ಜನರಿಗೆ ಉತ್ತಮವಾದದ್ದನ್ನು ನೀಡಲು ಬಯಸಿದ್ದೇನೆ ಎಂದ ಅವರು, ಮುಖ್ಯ ಕಾರ್ಯದರ್ಶಿ ವರ್ಗಾವಣೆ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ವಿನಂತಿಸಿದರು ಮತ್ತು ಇದನ್ನು ದೇಶಾದ್ಯಂತದ ಅಧಿಕಾರಿಗಳಿಗೆ ಮಾಡಿದ ಅವಮಾನ ಎಂದು ಕರೆದರು.

ಏಪ್ರಿಲ್-ಮೇ ವಿಧಾನಸಭಾ ಚುನಾವಣೆಯ ನಂತರ ಶುಕ್ರವಾರ ನಡೆದ ಪ್ರಧಾನ ಮಂತ್ರಿ ಮೋದಿ ಮತ್ತು ಮಮತಾ ಬ್ಯಾನರ್ಜಿ ನಡುವೆ ನಡೆದ ಮೊದಲ ಮುಖಾಮುಖಿಯಾಗಿದೆ.


ಇದನ್ನೂ ಓದಿ: ಎನ್‌ಟಿಆರ್‌ 98 ನೇ ಜನ್ಮದಿನ ಮತ್ತು ಕಮರುತ್ತಿರುವ ತೆಲಗು ದೇಶಂ ಪಕ್ಷದ ಮರುಸಂಘಟನೆಯ ಕನಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...