Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ 8,000 ಮಕ್ಕಳಿಗೆ ತಗುಲಿದ ಕೊರೋನಾ: ಕೋವಿಡ್‌ 3 ನೇ ಅಲೆಯ ಮುನ್ಸೂಚನೆ?

ಮಹಾರಾಷ್ಟ್ರದಲ್ಲಿ 8,000 ಮಕ್ಕಳಿಗೆ ತಗುಲಿದ ಕೊರೋನಾ: ಕೋವಿಡ್‌ 3 ನೇ ಅಲೆಯ ಮುನ್ಸೂಚನೆ?

- Advertisement -
- Advertisement -

ಮಹಾರಾಷ್ಟ್ರದ ಅಹಮದನಗರ ಜಿಲ್ಲೆಯಲ್ಲಿ 2021ರ ಮೇ ತಿಂಗಳೊಂದರಲ್ಲಿಯೇ 8,000 ಮಕ್ಕಳಿಗೆ ಕೊರೋನಾ ಸೋಂಕು ತಗುಲಿದೆ. ಅಹಮದ್‌ ನಗರದಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಕೋವಿಡ್‌ ಸೋಂಕು ಕೊರೋನಾ ಮೂರನೆಯ ಅಲೆ ನಿಧಾನಕ್ಕೆ ಆರಂಭವಾಗುತ್ತಿರುವ ಲಕ್ಷಣವನ್ನು ತೋರಿಸುತ್ತಿದೆ. ಮಹಾರಾಷ್ಟ್ರ ಸರ್ಕಾರವು ಈ ಬಗ್ಗೆ ಗಮನ ಹರಿಸಿದ್ದು ಕೊರೋನಾ ಮೂರನೇ ಅಲೆಯನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಕರ್ನಾಟಕದಲ್ಲೂ ದಿನೇ ದಿನೇ 18 ವರ್ಷದೊಳಗಿನ ಮಕ್ಕಳಲ್ಲಿ ಕೊರೋನಾ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಲಿದ್ದು, ರಾಜ್ಯ ಸರ್ಕಾರ ಸಂಭಾವ್ಯ ಕೋವಿಡ್‌ ಅಲೆಯನ್ನು ನಿಯಂತ್ರಿಸಿಲು ಅಗತ್ಯ ಕ್ರಮಕ್ಕೆ ಮುಂದಾಗಬೇಕು.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಈಗಾಗಲೇ ಮಕ್ಕಳಿಗಾಗಿ ವಿಶೇಷ ಕೋವಿಡ್‌ ವಾರ್ಡ್‌ ಅನ್ನು ಸ್ಥಾಪಿಸಿದ್ದು ಸದ್ಯ ಐದು ಕೋವಿಡ್‌ ಸೋಂಕಿತ ಮಕ್ಕಳಿಗೆ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾವು ಮಕ್ಕಳಿಗಾಗಿ ವಿಶೇಷ ಕೋವಿಡ್‌ ವಾರ್ಡ್‌ ಅನ್ನು ಆರಂಭಿಸಿದ್ದೇವೆ. ಕೋವಿಡ್‌ ಮೂರನೇ ಅಲೆ ಈಗಾಗಲೇ ಆರಂಭವಾಗಿದೆಯೇ ಅಥವಾ ಯಾವಾಗ ಅರಂಭವಾಗಬಹುದು ಎಂಬುದು ಇನ್ನೂ ತಿಳಿದಿಲ್ಲ. ಆದರೆ ನಾವು ಎಲ್ಲದಕ್ಕೂ ಸಿದ್ಧರಾಗಿದ್ದೇವೆ. ಮಕ್ಕಳ ವಿಶೇಷ ಕೋವಿಡ್‌ ವಾರ್ಡ್‌ಗಳು ಆಸ್ಪತ್ರೆಗಳ ರೀತಿಯಲ್ಲಿ ಇಲ್ಲ. ಬದಲಾಗಿ ಮಕ್ಕಳು ತಮ್ಮ ಸ್ಕೂಲ್‌ ಅಥವಾ ನರ್ಸರಿಯಲ್ಲಿ ಪಡೆಯುವ ಸೌಲಭ್ಯಗಳನ್ನು ವಿಶೇಷ ವಾರ್ಡ್‌ಗಳಲ್ಲಿ ಕಲ್ಪಿಸಲಾಗಿದೆ ಎಂದು ಸಾಂಗ್ಲಿ ನಗರ ಕಾರ್ಪೊರೇಟರ್‌ ಅಭಿಜಿತ್‌ ಬೋಂಸ್ಲೆ ತಿಳಿಸಿದ್ದಾರೆ.

ಅಹಮದನಗರ ಜಿಲ್ಲೆಯಲ್ಲಿ 8000 ಕ್ಕಿಂತ ಹೆಚ್ಚು ಮಕ್ಕಳು ಕೋವಿಡ್‌ ಸುಂಕಿಗೆ ತುತ್ತಾಗಿರುವುದು ಸರ್ಕಾರಕ್ಕೆ ಕೋವಿಡ್‌ ಮೂರನೇ ಅಲೆಯ ಎಚ್ಚರಿಕೆಗಂಟೆಯಾಗಿದೆ. ಜಿಲ್ಲಾಡಳಿತ ಈಗಾಗಲೇ ಸಂಬಂಧ ಪಟ್ಟ ಇಲಾಖೆಗಳಿಗೆ ಮಾಹಿತಿಯನ್ನು ನೀಡಿದ್ದು ಎಚ್ಚರಿಕೆಯನ್ನು ನೀಡಿದೆ. ಜಿಲ್ಲೆಯಲ್ಲಿ ಮೇ ತಿಂಗಳಿನಲ್ಲಿ ಕೊರೋನಾ ಸೋಂಕಿಗೆ ತುತ್ತಾದವರಲ್ಲಿ 10% ದಷ್ಟು ಜನರು 18 ವರ್ಷದ ಮಕ್ಕಳಾಗಿರುವುದು ಕಳವಳಕಾರಿ ಸಂಗತಿಯಾಗಿದೆ.

ಜಿಲ್ಲಾಡಳಿತವು ಮಕ್ಕಳ ತಜ್ಞರೊಂದಿಗೆ ಈ ಸಬಂಧ ಚರ್ಚೆಯನ್ನು ನಡೆಸಿದೆ. ಅಗತ್ಯ ಸಿದ್ಧತೆಗಳನ್ನೂ ಮಾಡಿಕೊಳ್ಳುವಂತೆ ಸಂಬಂಧಿಸಿದ ಆಸ್ಪತ್ರೆಗೆ ತಿಳಿಸಲಾಗಿದೆ. 2021 ರ ಮೇ ತಿಂಗಳೊಂದರಲ್ಲೇ ಜಿಲ್ಲೆಯ 8000 ಮಕ್ಕಳಲ್ಲಿ ಕೊರೋನಾ ಸೋಂಕು ಧೃಢಪಟ್ಟಿರುವುದು ಮುಂದೆ ಬರಲಿರುವ ವಿಪತ್ತಿನ ಮುನ್ಸೂಚನೆಯಂತಿದೆ ಎಂದು ಅಹ್ಮದ್‌ನಗರ ಜಿಲ್ಲಾಧಿಕಾರಿ ರಾಜೇಂದ್ರ ಬೋಸ್ಲೆ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಕೋವಿಡ್‌ ಎರಡನೇಯ ಅಲೆಯ ಸಂದರ್ಭದಲ್ಲಿ ಮಹರಾಷ್ಟ್ರದಲ್ಲಿ ಆಸ್ಪತ್ರೆಗಳ ಬೆಡ್‌ಗಳ ಕೊರತೆ ಮತ್ತು ಆಕ್ಸಿಜನ್‌ ಕೊರತೆ ವ್ಯಾಪಕವಾಗಿ ತಲೆದೋರಿತು. ಮೂರನೇ ಅಲೆಯ ಸಂದರ್ಭದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಹಿಂದೆ ಸಂಭವಿಸಿದ ದುರಂತ ಮರುಕಳಿಸದಂತೆ ನೋಡಿಕೊಳ್ಳಬೇಕಿದೆ ಎಂದು ಶಾಸಕ ಸಂಗ್ರಾಮ್‌ ಜಗದೀಪ್‌ ತಿಳಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಈ ಸಂದರ್ಭದಲ್ಲಿ ಯಾವುದೇ ರಿಸ್ಕ್‌ ತೆಗೆದುಕೊಳ್ಳಲು ಸಿದ್ಧವಿಲ್ಲ. ಜುಲೈ ಕೊನೇ ವಾರ ಅಥವಾ ಆಗಸ್ಟ್‌ ಮೊದಲ ವಾರದಲ್ಲಿ ಮಹರಾಷ್ಟ್ರದಲ್ಲಿ ಕೋವಿಡ್‌ ಮೂರನೇ ಅಲೆಯು ಕಾಣಸಿಕೊಳ್ಳುವ ಲಕ್ಷಣವಿದ್ದು ಎರಡು ತಿಂಗಳ ಅವಧಿಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸರ್ಕಾರ ಅಧಿಕಾರಿಗಳಿಗೆ ತಿಳಿಸಿದೆ.

ಭಾರತದಲ್ಲಿ ಕೊರೋನಾ ಎರಡನೆ ಅಲೆಯು ಆರಂಭವಾದ ಮೊದಲ ರಾಜ್ಯ ಮಹಾರಾಷ್ಟ್ರ. ಫೆಭ್ರವರಿ ಕೊನೆಯಲ್ಲಿ ಆರಂಭವಾದ ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಬೆಡ್‌ ಸಿಗದೇ ಸಾವಿರಾರು ಸೋಂಕಿತರು ತೊಂದರೆಗೆ ಒಳಗಾಗಿದ್ದರು. ಆಕ್ಸಿಜನ್‌, ಅಗತ್ಯ ಔಷಧಿಗಳ ಕೊರತೆ ಮಹರಾಷ್ಟ್ರದಲ್ಲಿ ಕೊರೋನಾ ಎರಡನೇ ಅಲೆಯ ದುರಂತಕ್ಕೆ ಕಾರಣವಾಗಿತ್ತು.

ಕೇಂದ್ರಸರ್ಕಾರದ ವೈಜ್ಞಾನಿಕ ಸಲಹೆಗಾರ ಡಾ. ಕೆ ವಿಜಯರಾಘವನ್‌ ಅವರು ಜೂನ್‌ ತಿಂಗಳಿನ ಆರಂಭ ಅಥವಾ ಮಧ್ಯದ ವೇಳೆಗೆ ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭವಾಗುವ ಲಕ್ಷಣಗಳಿವೆ ಎಂದು ಸರ್ಕಾರಕ್ಕೆ ಮತ್ತು ದೇಶಕ್ಕೆ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ.


ಇದನ್ನೂ ಓದಿ: ಗ್ರಾಮೀಣ ಭಾಗದ ಆಸ್ಪತ್ರೆಗಳ ಅವ್ಯಸ್ಥೆಯನ್ನು ತೆರೆದಿಟ್ಟ ಕೊರೋನಾ ಸಾಂಕ್ರಾಮಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...