Homeಮುಖಪುಟದೇಶದ್ರೋಹ ಪ್ರಕರಣ: 2 ತೆಲುಗು ಸುದ್ದಿ ವಾಹಿನಿಗಳ ವಿರುದ್ಧದ ಕ್ರಮಕ್ಕೆ ಸುಪ್ರೀಂ ತಡೆ

ದೇಶದ್ರೋಹ ಪ್ರಕರಣ: 2 ತೆಲುಗು ಸುದ್ದಿ ವಾಹಿನಿಗಳ ವಿರುದ್ಧದ ಕ್ರಮಕ್ಕೆ ಸುಪ್ರೀಂ ತಡೆ

- Advertisement -
- Advertisement -

ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ತೆಲುಗು ಸುದ್ದಿ ವಾಹಿನಿಗಳ ವಿರುದ್ಧ ಆಂಧ್ರಪ್ರದೇಶ ಪೊಲೀಸರು ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸುಪ್ರೀಂ ಕೋರ್ಟ್ ಸೋಮವಾರ ತಡೆಹಿಡಿದಿದೆ. ಜೊತೆಗೆ “ದೇಶದ್ರೋಹದ ಮಿತಿಗಳನ್ನು ನಾವು ವ್ಯಾಖ್ಯಾನಿಸುವ ಸಮಯ ಇದು” ಎಂದು ಹೇಳಿದೆ.

ತೆಲುಗು ಸುದ್ದಿ ವಾಹಿನಿಗಳಾದ ಟಿವಿ 5 ಮತ್ತು ಎಬಿಎನ್ ಆಂಧ್ರ ಜ್ಯೋತಿ ವಿರುದ್ಧ ಆಂಧ್ರಪ್ರದೇಶ ಸರ್ಕಾರ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಆಂಧ್ರಪ್ರದೇಶದ ಆಡಳಿತಾರೂ ವೈಎಸ್ಆರ್ ಕಾಂಗ್ರೆಸ್‌ ನ ಬಂಡಾಯ ಸಂಸದ ಕೆ. ರಘುರಾಮ ಕೃಷ್ಣ ರಾಜು ಅವರ ಟೀಕೆಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ದೇಶದ್ರೋಹದ ಆರೋಪದ ಮೇಲೆ ಆಂಧ್ರಪ್ರದೇಶ ಪೊಲೀಸರು ಎರಡು ಚಾನೆಲ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಸಂಸದ ರಾಜು, ತಮ್ಮದೇ ಸರ್ಕಾರ ಕೋವಿಡ್ ನಿರ್ವಹಿಸುತ್ತಿರುವ ಬಗೆಯ ಕುರಿತು ಬಹಳ ಟೀಕಿಸಿದ್ದರು.

ಇದನ್ನೂ ಓದಿ: “ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ವಿಶೇಷ ನ್ಯಾಯಪೀಠವು ದೇಶದ್ರೋಹದ ಕಠಿಣ ದಂಡದ ಅಪರಾಧ ಸೇರಿದಂತೆ ವಿವಿಧ ಅಪರಾಧಗಳಿಗೆ ಆರೋಪಿಸಲಾಗಿರುವ ಚಾನೆಲ್‌ಗಳ ಮನವಿಗೆ ಸಂಬಂಧಿಸಿದಂತೆ ನಾಲ್ಕು ವಾರಗಳಲ್ಲಿ ರಾಜ್ಯ ಸರ್ಕಾರದ ಪ್ರತಿಕ್ರಿಯೆಯನ್ನು ಕೋರಿತು. “ನ್ಯಾಯಾಲಯವು ದೇಶದ್ರೋಹವನ್ನು ವ್ಯಾಖ್ಯಾನಿಸುವ ಸಮಯ ಇದು” ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದರು.

ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಎಸ್.ರವೀಂದ್ರ ಭಟ್ ಅವರನ್ನೂ ಒಳಗೊಂಡ ನ್ಯಾಯಪೀಠ, ಅದೇ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನೌಕರರು ಅಥವಾ ಸುದ್ದಿ ವಾಹಿನಿಗಳ ಸಿಬ್ಬಂದಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸ್ಪಷ್ಟಪಡಿಸಿದೆ.

ಕೋವಿಡ್ ಸಂಬಂಧಿತ ಕುಂದುಕೊರತೆಗಳನ್ನು ತೋರಿಸಿದ್ದಕ್ಕಾಗಿ ಸರ್ಕಾರಗಳು ನಾಗರಿಕರಿಗೆ ಶಿಕ್ಷೆ ನೀಡುವುದನ್ನು ತಡೆಯುವ ಇತ್ತೀಚಿನ ನ್ಯಾಯಾಲಯದ ಆದೇಶವನ್ನು ಆಂಧ್ರ ಸರ್ಕಾರ ಉಲ್ಲಂಘಿಸಿದೆ ಎಂದು ಎರಡು ಸುದ್ದಿ ವಾಹಿನಿಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು.

ಅಸಮಾನ ಆಸ್ತಿ ಪ್ರಕರಣದಲ್ಲಿ ತಮ್ಮ ಪಕ್ಷದ ಸಂಸ್ಥಾಪಕ, ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರಿಗೆ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಕೆಲವೇ ವಾರಗಳ ನಂತರ ಸಂಸದ ರಾಜು ಅವರನ್ನು ಬಂಧಿಸಲಾಗಿತ್ತು. ಮೇ 21 ರಂದು ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿತ್ತು.


ಇದನ್ನೂ ಓದಿ: ಬಿಜೆಪಿ ವ್ಯಾಕ್ಸಿನ್ ಬ್ಲಾಕಿಂಗ್ ದಂಧೆ ನಡೆಸುತ್ತಿದೆ: ಕಾಂಗ್ರೆಸ್ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...