Homeಅಂತರಾಷ್ಟ್ರೀಯಜನಸಂಖ್ಯಾ ನೀತಿಯಲ್ಲಿ ಮತ್ತೆ ಬದಲಾವಣೆ ತಂದ ಚೀನಾ ಕಮ್ಯುನಿಸ್ಟ್‌‌ ಪಕ್ಷ!

ಜನಸಂಖ್ಯಾ ನೀತಿಯಲ್ಲಿ ಮತ್ತೆ ಬದಲಾವಣೆ ತಂದ ಚೀನಾ ಕಮ್ಯುನಿಸ್ಟ್‌‌ ಪಕ್ಷ!

- Advertisement -
- Advertisement -

ಚೀನಾ ಸರ್ಕಾರವು ತನ್ನ ಮಹತ್ವದ ನೀತಿ ಬದಲಾವಣೆಯೊಂದರಲ್ಲಿ, ತನ್ನ ದೀರ್ಘಾವಧಿಯ ಎರಡು ಮಕ್ಕಳ ನೀತಿಯಲ್ಲಿ ಬದಲಾವಣೆ ಮಾಡಿದೆ. ಇದರೊಂದಿಗೆ ಚೀನಾದ ದಂಪತಿಗಳಿಗೆ ಮೂರು ಮಕ್ಕಳನ್ನು ಹೊಂದಲು ಅವಕಾಶ ಮಾಡಿಕೊಟ್ಟಿದೆ. ಕ್ಸಿ ಜಿನ್‌ಪಿಂಗ್ ನೇತೃತ್ವದ ಚೀನಾ ಕಮ್ಯುನಿಸ್ಟ್ ಪಕ್ಷದ ಪೊಲಿಟ್‌ಬ್ಯುರೊ ಈ ನಿರ್ಧಾರ ಕೈಗೊಂಡಿದೆ.

“ದಂಪತಿಗಳು ಮೂರು ಮಕ್ಕಳನ್ನು ಹೊಂದಬಹುದು” ಎಂದು ರಾಜ್ಯ ಮಾಧ್ಯಮ ಕ್ಸಿನ್ಹುವಾ ಸೋಮವಾರ ವರದಿ ಮಾಡಿದೆ.

ಜನನ ಪ್ರಮಾಣದಲ್ಲಿ ಆತಂಕಕಾರಿ ಕುಸಿತ ಮತ್ತು ಐವತ್ತಕ್ಕಿಂತ ಹೆಚ್ಚಿನ ವಯಸ್ಸಿನ ಜನಸಂಖ್ಯೆಯ ಹೆಚ್ಚಳದಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚೀನಾದ ಫಲವತ್ತತೆ ದರವು ಪ್ರಸ್ತುತ 1.3 ರಷ್ಟಿದೆ. ಮುದುಕರ ಜನಸಂಖ್ಯೆ ಹೆಚ್ಚುತ್ತಿರುವ ಕಾರಣಕ್ಕೆ 2015 ರಲ್ಲಿ ಚೀನಾ ಸರ್ಕಾರವು ತನ್ನ ಜನಸಂಖ್ಯಾ ನೀತಿಯನ್ನು ಒಂದು ಮಗುವಿನಿಂದ ಎರಡು ಮಗುವಾಗಿ ಬದಲಾಯಿಸಿತ್ತು.

ಇದನ್ನೂ ಓದಿ: ಕಪ್ಪು ಫಂಗಸ್‌‌ ಬಗ್ಗೆ ಕೇಂದ್ರಕ್ಕೆ 3 ಪ್ರಶ್ನೆಗಳನ್ನು ಕೇಳಿದ ರಾಹುಲ್ ಗಾಂಧಿ

“ಈ ನೀತಿ ಹಳೆಯದಾಗಿದೆ. ಚೀನಾಕ್ಕೆ ಬೇಕಾಗಿರುವುದು ಮತ್ತೊಂದು ರಾಜ್ಯ ನೀತಿಯಲ್ಲ, ಬದಲಿಗೆ ಉತ್ತಮವಾದ ಸಮಾಜವಾಗಿದೆ” ಎಂದು ಕ್ಯಾಲಿಫೋರ್ನಿಯಾ ಇರ್ವಿನ್ ವಿಶ್ವವಿದ್ಯಾಲಯದ ಪ್ರೊಫೆಸರ್ ವಾಂಗ್ ಫೆಂಗ್ ಹೇಳಿದ್ದಾರೆ.

ಚೀನಾದ ಈ ಹೊಸ ನೀತಿಯ ಬಗ್ಗೆ ಕೆಲವರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. “ಈ ನೀತಿಯಿಂದ ಅಧಿಕಾರಿಗಳು ನಿರೀಕ್ಷಿಸಿದಷ್ಟು ಸಾಧನೆ ಇರದೆ ಇರಬಹುದು. ಈ ದಿನಗಳಲ್ಲಿ ಮಗುವನ್ನು ಬೆಳೆಸುವುದು ತುಂಬಾ ದುಬಾರಿಯಾಗಿದ್ದು, ಚೀನಾದಲ್ಲಿ ವಸತಿ ಅಗ್ಗವಾಗಿಲ್ಲ” ಎಂದು ಗುವಾಂಗ್‌‌ಸೂದಲ್ಲಿನ ಸ್ವತಂತ್ರ ಜನಸಂಖ್ಯಾಶಾಸ್ತ್ರಜ್ಞ ಹಿ ಯಾಫು ಹೇಳಿದ್ದಾರೆ.

ಆದಾಗ್ಯೂ, ಹಾಂಗ್ ಕಾಂಗ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಪ್ರೊಫೆಸರ್ ಸ್ಟುವರ್ಟ್ ಗೀಟೆಲ್-ಬ್ಯಾಟನ್ ಈ ಕ್ರಮವನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಯೋಗಿ ಸರ್ಕಾರದ ವಿರುದ್ಧ ಜನಾಕ್ರೋಶ: ಕೋವಿಡ್ ಬಿಕ್ಕಟ್ಟಿನಲ್ಲಿ ಮುಂದಿನ ಚುನಾವಣೆಯ ಚರ್ಚೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...