Homeಕರ್ನಾಟಕಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

- Advertisement -
- Advertisement -

ಕೃಷಿ ಚಟುವಟಿಕೆ ಕಡಿಮೆ ಆಗಿರುವುದು ಹಾಗೂ ಕೊರೋನಾ ಲಾಕ್‌ಡೌನ್‌ ತಂದಿಟ್ಟಿರುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಚಾಮರಾಜನಗರ ಜಿಲ್ಲೆಯ ಎಚ್. ಮೂಕನಹಳ್ಳಿಯಲ್ಲಿ ನಡೆದಿದೆ.

ಮಹದೇವಪ್ಪ (47), ಮಂಗಳಮ್ಮ (40), ಜ್ಯೋತಿ (14) ಹಾಗೂ ಶ್ರುತಿ (12) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೃತರ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸರ್ಕಾರದ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿವೆ.

ಮೂಕನಹಳ್ಳಿಯಲ್ಲಿ ಒಂದೂವರೆ ಎಕರೆ ಮಳೆ ಆಶ್ರಿತ ಜಮೀನನ್ನು ಹೊಂದಿದ್ದ ಮಹದೇವಪ್ಪ ಅವರು ಕೃಷಿ ಕೂಲಿ ಕಾರ್ಮಿಕರಾಗಿ ಜೀವನ ನಡೆಸುತ್ತಿದ್ದರು. ಇತ್ತೀಚೆಗಷ್ಟೆ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದ ಅವರು ಆರ್ಥಿಕ ಸಂಕಷ್ಟವನ್ನು ಎದುರಿಸಲಾರದೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಗ್ರಾಮಸ್ಥರಾದ ನಾಗರಾಜು, ‘ಕಳೆದ 20 ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಮಹದೇವಪ್ಪ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಅವರು ಗುಣಮುಖರಾದ ನಂತರವು ಅವರ ಸುತ್ತಮುತ್ತಲ ಜನರು ಅವರೊಟ್ಟಿಗೆ ಮಾತನಾಡಲು ಅಂಜುತ್ತಿದ್ದರು. ಈ ಕಾರಣದಿಂದ ಡೈರಿಗೆ ಹಾಲು ಕೂಡ ಹಾಕಿರಲಿಲ್ಲ. ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದ ಅವರು ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.

ನೆನ್ನೆ ರಾತ್ರಿ 9 ಗಂಟೆ ಸಮಯದಲ್ಲಿ ಗ್ರಾಮದ ಕುಮಾರ್ ಎಂಬುವವರ ಜೊತೆ ಫೋನಿನಲ್ಲಿ ಮಾತನಾಡಿರುವ ಮಹದೇವಪ್ಪ ಅವರು ಯಾವುದೇ ಸಮಸ್ಯೆಯ ಬಗ್ಗೆ ತಿಳಿಸಿಲ್ಲ. ಕೋವಿಡ್ ಸಮಯದಲ್ಲಿ ನಾನೆ ಅವರ ಚಿಕಿತ್ಸೆಗೆ ಸಹಾಯ ಮಾಡಿದ್ದೆ ಎಂದು ನಾಗರಾಜ್ ತಿಳಿಸಿದ್ದಾರೆ.

`ಕೋವಿಡ್ ಲಾಕ್‌ಡೌನ್‌ನಿಂದಾಗಿ ಕೃಷಿ ಚಟುವಟಿಕೆಗಳಿಲ್ಲದೇ ಆರ್ಥಿಕ ಸಂಕಷ್ಟವನ್ನು ಮಹದೇವಪ್ಪ ಕುಟುಂಬ ಎದುರಿಸುತ್ತಿತ್ತು. ಕೋವಿಡ್ ಸೋಂಕಿಗೆ ಒಳಗಾದ ನಂತರ ಹಣಕಾಸಿನ ಸಮಸ್ಯೆಯಿಂದ ಬಳಲಿದ್ದರು’ ಎಂದು ಗ್ರಾಮಸ್ಥರೊಬ್ಬರು ಬೇಸರ ವ್ಯಕ್ತಪಡಿಸಿದರು.

ಕೃಷಿ ಹಾಗೂ ಕೃಷಿ ಪೂರಕ ಕೆಲಸಗಳನ್ನೇ ನಂಬಿ ಬದುಕುತ್ತಿರುವ ಕುಟುಂಬಗಳಿಗೆ ಕೋವಿಡ್ ಮೊದಲ ಅಲೆಯೇ ಆರ್ಥಿಕ ಸಂಕಷ್ಟ ತಂದೊಡ್ಡಿತ್ತು. ಪ್ರಸ್ತುತ ಎರಡನೇ ಅಲೆಯಿಂದ ಕೃಷಿ ಹಾಗೂ ಪೂರಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ಥಬ್ಧಗೊಂಡಿರುವುದರಿಂದ ರೈತರು ಹಾಗೂ ಕೃಷಿ ಕೂಲಿಕಾರರು ಮೇಲೇಳಲಾರದ ಸ್ಥಿತಿ ತಲುಪಿದ್ದಾರೆ. ಸರ್ಕಾರ ಈಗಲಾದರೂ ರೈತ ಕೂಲಿಕಾರರ ಸಂಕಷ್ಟಕ್ಕೆ ಸ್ಫಂದಿಸಬೇಕು ಎಂದು ಗ್ರಾಮಸ್ಥರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ವಿಷಯ ತಿಳಿಯುತ್ತಲೇ ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಎಲ್ಲರಿಗೂ ಉಚಿತ ಲಸಿಕೆ ಕೊಡಲಾಗದ ಈ ಸರ್ಕಾರ ಲಾಕ್‌ಡೌನ್‌ ಹೆಸರಲ್ಲಿ ಬಡವರು, ಕೂಲಿಕಾರರನ್ನು ಹಿಂಸಿಸುತ್ತಿದೆ ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಉಚಿತ ಸಾರ್ವತ್ರಿಕ ವ್ಯಾಕ್ಸಿನೇಷನ್‌ಗೆ ಕೇಂದ್ರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೋವಿಡ್ ನಿಯಂತ್ರಿಸಲು ಲಾಕ್ ಡೌನ್ ಒಂದೇ ಪರಿಹಾರವಲ್ಲ. ಸ್ವಾಭಿಮಾನಿ ಬಡವರು ಲಾಕ್ ಡೌನ್ ನಿಂದ ಕಂಗಾಲಾಗಿದ್ದಾರೆ. ಆದ್ದರಿಂದ ಸರ್ಕಾರ ಲಾಕ್ ಡೌನ್ ಅನ್ನು ಈ ಕೂಡಲೇ ಕೊನೆಗೊಳಿಸಬೇಕು.

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...