Homeಮುಖಪುಟರಾಜ್ಯದ ಪ್ರತಿ ಹಳ್ಳಿ, ವಾರ್ಡ್‌ಗಳಿಗೂ ಕೆಸಿವಿಟಿ ಕೊರೊನಾ ವಾಲಂಟಿಯರ್‌ ತಂಡ, ನೀವು ಕೈಜೋಡಿಸಬಹುದು

ರಾಜ್ಯದ ಪ್ರತಿ ಹಳ್ಳಿ, ವಾರ್ಡ್‌ಗಳಿಗೂ ಕೆಸಿವಿಟಿ ಕೊರೊನಾ ವಾಲಂಟಿಯರ್‌ ತಂಡ, ನೀವು ಕೈಜೋಡಿಸಬಹುದು

- Advertisement -
- Advertisement -

ಕೊರೊನಾ ಸೋಂಕಿನಿಂದ ಆಗುತ್ತಿರುವ ಅನಾಹುತಗಳಿಂತ ಹೆಚ್ಚಾಗಿ ಕೊರೊನಾತಂಕ ಮತ್ತು ಉಲ್ಬಣವನ್ನು ತಡೆಯುವುದು ಮುಖ್ಯ. ಬೆಡ್‌, ಐಸಿಯು, ವೆಂಟಿಲೇಟರ್ ಬೇಕಾಗುವಂತ ಪರಿಸ್ಥಿತಿ ಬರುವ ಮೊದಲೇ ಅವರನ್ನು ಗುಣಪಡಿಸುವುದನ್ನು ಗುರಿಯಾಗಿಸಿಕೊಂಡು ಕೆಸಿವಿಟಿ (ಕರ್ನಾಟಕ ಕೋವಿಡ್ ವಾಲಂಟಿಯರ್ಸ್ ಟೀಮ್‌) ರಚನೆಯಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಲೆಂಟಿಯರ್ಸ್ ಜೊತೆಗೆ ಕಾರ್ಯನಿರತವಾಗಿರುವ ಈ ತಂಡ ಮತ್ತೊಂದು ಹೆಜ್ಜೆ ಮುಂದಿಡುತ್ತಿದೆ. ಹಳ್ಳಿಗಳಲ್ಲಿ ಕೊರೊನಾ ಹಬ್ಬುತ್ತಿರುವುದು ಮತ್ತು ಜನರು ಟೆಸ್ಟ್‌ ಮಾಡಿಸಿಕೊಳ್ಳದೇ ಇರುವುದು, ಮಾಡಿಸಿಕೊಳ್ಳಲು ಬಯಸಿದರೂ ಟೆಸ್ಟ್‌ ಕಿಟ್‌ ಇಲ್ಲದಿರುವುದು ಇಂತಹ ತೊಂದರೆಯಿರುವ ಜನರ ಬಳಿಗೆ ಹೋಗುತ್ತಿದೆ.

ಪ್ರತಿ ಹಳ್ಳಿ, ಪಟ್ಟಣಗಳ ವಾರ್ಡ್‌‌ಗಳಲ್ಲಿಯೂ ಒಂದೊಂದು ಕೊರೊನಾ ವಾಲೆಂಟಿಯರ್‌ ಟೀಮ್ ತಯಾರಾಗುತ್ತಿದೆ. ರಾಜ್ಯದಲ್ಲಿ ಸಾವುಗಳ ಸಂಖ್ಯೆ ಹೆಚ್ಚಾಗಿರುವುದು ಇರುವುದರಿಂದ ಇದರ ಅಗತ್ಯತೆ ಹೆಚ್ಚಾಗಿದೆ ಎಂದು ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ ಹೇಳಿದೆ.

ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ಈಗಾಗಲೇ ಈ ತಂಡ ರಾಜ್ಯದ 250ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕೋವಿಡ್‌ ವಾಲಂಟಿಯರ್‌ಗಳು ಕೆಲಸವನ್ನು ಮಾಡುತ್ತಿದ್ದಾರೆ. ಇದನ್ನು ಆದಷ್ಟು ಬೇಗ 5,000 ಹಳ್ಳಿಗಳಿಗೆ ವಿಸ್ತರಿಸುವ ಆಲೋಚನೆ ಹೊಂದಿದೆ. ತಮ್ಮ ಊರುಗಳಲ್ಲಿ ಕೊರೊನಾ ಬರದಂತೆ, ಕೊರೊನಾ ಬಂದ ನಂತರದ ಪರಿಸ್ಥಿತಿಯಿಂದ ರಕ್ಷಿಸಿಕೊಳ್ಳಲು ಸಮಯ ನೀಡುವ ವಾಲಂಟಿಯರ್‌ಗಳನ್ನು ಆಹ್ವಾನಿಸುತ್ತಿದೆ.

ವಾಲಂಟಿಯರ್‌ಗಳು ನೋಂದಣಿ ಆದ ನಂತರ, ಅವರಿಗೆ ಆನ್‌ಲೈನ್‌ ತರಬೇತಿ ನೀಡಲಾಗುತ್ತದೆ. ಈ ವಾಲಂಟಿಯರ್‌ಗಳು ಮನೆ ಮನೆಗೆ ಹೋಗಿ ಕೊರೊನಾ ರೋಗ ಲಕ್ಷಣಗಳನ್ನು ಗುರುತಿಸುತ್ತಾರೆ. ಸೋಂಕಿತರಿಗೆ ನೇರವಾಗಿ ವೈದ್ಯರ ಜೊತೆ ಫೋನಿನಲ್ಲಿ ಕನ್ಸಲ್ಟೇಷನ್‌ ಏರ್ಪಡಿಸುತ್ತಾರೆ. ಜೊತೆಗೆ ತಮ್ಮಲ್ಲಿ ಲಭ್ಯವಿರುವ ಮಾತ್ರೆಗಳನ್ನೂ ಕೊಡುತ್ತಾರೆ. ಈ ತಂಡದಲ್ಲಿ 105ಕ್ಕೂ ಹೆಚ್ಚು ವೈದ್ಯರಿದ್ದಾರೆ.

ಇನ್ನು ಸೋಂಕಿತರಿಗೆ ಅಗತ್ಯವಿದ್ದರೆ ಸ್ಥಳೀಯ ಕೋವಿಡ್‌ ಕೇರ್‌ ಸೆಂಟರ್‌ಗಳು ಅಥವಾ ಆಕ್ಸಿಜನ್‌ ಇರುವ ಆಸ್ಪತ್ರೆಗೆ ರವಾನಿಸುತ್ತಾರೆ. ಈ ರೀತಿ ಹೋದಾಗ, ಕೆಲವು ಕಡು ಬಡತನದಲ್ಲಿರುವ ಕುಟುಂಬಗಳಿಗೆ ದಿನಸಿ ಕಿಟ್‌ಗಳನ್ನು ತಲುಪಿಸಲೇಬೇಕಾದ ಪರಿಸ್ಥಿತಿಯೂ ಎದುರಾಗುತ್ತದೆ ಎಂದು ಹೇಳಿರುವ ತಂಡ ಅದಕ್ಕೆ ಬೇಕಾದ ಸಂಪನ್ಮೂಲವನ್ನು ಸಂಗ್ರಹಿಸುತ್ತಿದೆ.

ಬೆಂಗಳೂರು ವೈದ್ಯಕೀಯ ಕಾಲೇಜಿನ 1992 ಬ್ಯಾಚ್‌ನ (ಬಿಎಂಸಿ- 92)ನ ಹಲವಾರು ವೈದ್ಯರು ಈಗ ಪ್ರಪಂಚದ ವಿವಿದೆಡೆ ಕೆಲಸ ಮಾಡುತ್ತಿದ್ದಾರೆ. ಆದರೆ ಕೋವಿಡ್‌ ಎರಡನೇ ಅಲೆ ಅವರನ್ನು ಮತ್ತೆ ಒಗ್ಗೂಡುವಂತೆ ಮಾಡಿದೆ. ಈ ಮಾನವೀಯ ಬಿಕ್ಕಟ್ಟಿನ ಸಂದರ್ಭದಲ್ಲಿ “ವಿಜ್ಞಾನ ಮೊದಲು” ಎಂಬ ಘೋಷವಾಕ್ಯದೊಂದಿಗೆ ಈ ತಂಡದೊಂದಿಗೆ ಕೈ ಜೋಡಿಸಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಸಾಥ್ ನೀಡಿದೆ.


ಇದನ್ನೂ ಓದಿ: ಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...