Homeಕರ್ನಾಟಕಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

- Advertisement -
- Advertisement -

ಗೂಗಲ್‌ನಲ್ಲಿ ಭಾರತದ ಕೊಳಕು ಭಾಷೆ ಎಂದು ಹುಡುಕಿದರೆ ಮೊದಲು ಸಿಗುತ್ತಿದ್ದದ್ದು ಕನ್ನಡ ಎಂದು. ಹೌದು, ಇಂದು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು ವ್ಯಕ್ತಪಡಿಸುತ್ತಿರುವ ಆಕ್ರೋಶಕ್ಕೆ ಕಾರಣ ಇದು. 2 ಸಾವಿರ ವರ್ಷಗಳ ಇತಿಹಾಸ ಇರುವ ಸುಂದರ, ಪ್ರಾಚೀನ ಕನ್ನಡ ಭಾಷೆಗೆ ವೆಬ್‌ಸೈಟ್‌ ಒಂದು ಅವಮಾನ ಮಾಡಿದೆ.

ಕನ್ನಡ ಭಾಷೆಗೆ ಮತ್ತು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಘಟನೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಕನ್ನಡವನ್ನು ಕೊಳಕು ಭಾಷೆ ಎಂದು ತೋರಿದ ವೆಬ್‌ಸೈಟ್‌ ಬಗ್ಗೆ ಗೂಗಲ್‌ಗೆ ರಿಪೋರ್ಟ್ ಮಾಡಿದ್ದರು. ಇದಕ್ಕೆ ಎಚ್ಚೆತ್ತಿರುವ ಗೂಗಲ್ ವೆಬ್‌ಸೈಟ್‌ ಅನ್ನು ನಿರ್ಬಂಧಿಸಿದೆ. ಭಾರತದಲ್ಲಿ ಕೊಳಕು ಭಾಷೆ ಎಂಬುದಿಲ್ಲ. ಎಲ್ಲಾ ಭಾಷೆಗಳಿಗೆ ಗೌರವಿದೆ. ಕನ್ನಡ ಭಾಷೆ ಕರ್ನಾಟಕದ ಹೆಮ್ಮೆ ಎಂದು ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ‘ಕೆಎಸ್‌ಆರ್‌‌ಟಿಸಿ’ ಬ್ರಾಂಡ್‌ ನೇಮ್‌ ಕಳೆದುಕೊಂಡ ಕರ್ನಾಟಕ! ಸಾರಿಗೆ ಸಚಿವ ಹೇಳಿದ್ದೇನು?

Petition · This website says the Ugliest language in India is Kannada. Remove this by signing. · Change.org
ಗೂಗಲ್‌ನಲ್ಲಿ ಈ ಮೊದಲು ಕಾಣಿಸುತ್ತಿದ್ದ ಫಲಿತಾಂಶ

ಗೂಗಲ್‌ನಲ್ಲಿ ಬೆಳಗ್ಗೆವರೆಗೆ ಭಾರತದ ಅತ್ಯಂತ ಕೊಳಕು ಭಾಷೆ ಎಂದು ಟೈಪ್ ಮಾಡಿದರೆ,ಆರೂವರೆ ಕೋಟಿ ಕನ್ನಡಿಗರು ಮಾತನಾಡುವ ಭಾಷೆ ಕನ್ನಡ ಎಂದು ಬರುತ್ತಿತ್ತು. ಇದಕ್ಕೆ ಕಾರಣ ಸರ್ಚ್ ಮಾಡಿದಾಗ debtconsolidationsquad.com ಎಂಬ ಜಾಲತಾಣದಲ್ಲಿ ಕಂಡು ಬಂದಿದ್ದ ಲೇಖನ, ಸದ್ಯ ಈ ವೆಬ್‌ಸೈಟ್‌ನನ್ನೆ ಗೂಗಲ್ ತೆಗೆದುಹಾಕಿದೆ.

ಕನ್ನಡಕ್ಕೆ ಅವಮಾನ ಮಾಡಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತ ಪಡಿಸಿದ್ದ ಜನ, ಈ ವೆಬ್‌ಸೈಟ್ ಬಗ್ಗೆ ರಿಪೋರ್ಟ್ ಮಾಡಿದ್ದರು. ಕನ್ನಡದ ಶ್ರೇಷ್ಠತೆ ಬಗ್ಗೆ ದನಿ ಎತ್ತಿದ್ದರು.

ನಂತರದ ಸರ್ಚ್ ರಿಸಲ್ಟ್

ಆದರೆ, ಗೂಗಲ್​ನಂತಹ ತಂತ್ರಜ್ಞಾನದ ದೈತ್ಯ ಸಂಸ್ಥೆ ಒಂದು ಭಾಷೆ ಬಗ್ಗೆ ತಿಳಿಸು ಇಂತಹ ವಿಚಾರಗಳತ್ತ ಸೂಕ್ಷ್ಮವಾಗಿ ಗಮನ ನೀಡಬೇಕು. ಯಾವುದೇ ಒಂದು ಭಾಷೆಯನ್ನು ಈ ರೀತಿ ಹೇಳಿದರೇ ಒಂದು ಸಮುದಾಯ, ಸಂಸ್ಕೃತಿ ಮತ್ತು ಸೌಹಾರ್ದತೆಗೆ ಭಂಗ ತರುವ ವಿಷಯಗಳು ಪ್ರಕಟಗೊಳ್ಳಲು ಆಸ್ಪದ ನೀಡಬಾರದು.

ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಸದ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅವರಿಗೆ ಈ ಸಂಬಂಧ ಕಾನೂನು ಇಲಾಖೆಯ ಜೊತೆಗೂಡಿ ಚರ್ಚಿಸಿ ಕೂಡಲೇ ಗೂಗಲ್‌ಗೆ ನೋಟಿಸ್ ನೀಡಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಗೂಗಲ್‌ನಲ್ಲಿ ಈ ರೀತಿಯಾಗಲು ಕಾರಣವೇನು….?

ಗೂಗಲ್, ಕೀ ವರ್ಡ್‌ಗಳ ಆಧಾರದಲ್ಲಿ ಮೇಲೆ ಹುಡುಕಾಟ ನಡೆಸಿದಾಗ ಫಲಿತಾಂಶ ತೋರಿಸುತ್ತದೆ. ವೆಬ್ ಸೈಟ್‌ಗಳನ್ನು ರೂಪಿಸಿದಾಗ, ಪ್ರತಿ ಪುಟದಲ್ಲೂ ಹುಡುಕಲು ಸಹಕಾರಿಯಾಗುವಂತೆ ಒಂದಿಷ್ಟು ಕೀ ವರ್ಡ್‌ಗಳನ್ನು ಹಾಕಲಾಗುತ್ತೆ. ಈ ಪದಗಳ ಮೂಲಕ ಗೂಗಲ್ ಸರ್ಚ್ ಇಂಜಿನ್‌ನ ಕ್ರಮಗಳ ಆಧಾರದಲ್ಲಿ ಜನರು ಹುಡುಕುವ ಪದವನ್ನು ಹೊಂದಿಸಿ ಫಲಿತಾಂಶ ತೋರಿಸುತ್ತವೆ.

ಈ ಬಗ್ಗೆ ಅರುಣ್ ಜಾವಗಲ್ ಫೇಸ್‌ಬುಕ್‌ನಲ್ಲಿ ವಿವರವಾಗಿ ಬರೆದಿದ್ದಾರೆ.


ಇದನ್ನೂ ಓದಿ: ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವ ಬಾಶೆಯೂ ಕೊಳಕಲ್ಲ. ಕನ್ನಡವನ್ನು ಕೊಳಕು ಬಾಶೆ ಎಂದು ಹೇಳಿದವರಿಗೆ ಸೂಕ್ತ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....