Homeಮುಖಪುಟಜೈಲಿಗೆ ಹೋಗಲು ಸಿದ್ದವಿದ್ದೇವೆ ಆದರೆ ದೆಹಲಿಯಿಂದ ತೆರಳಲ್ಲ: ಟಿಕಾಯತ್‌‌

ಜೈಲಿಗೆ ಹೋಗಲು ಸಿದ್ದವಿದ್ದೇವೆ ಆದರೆ ದೆಹಲಿಯಿಂದ ತೆರಳಲ್ಲ: ಟಿಕಾಯತ್‌‌

ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಹರಿಯಾಣದ ಜಿಂದ್‌ಗೆ ಸ್ಥಳಾಂತರಿಸಲು ಕೇಂದ್ರ ಸರ್ಕಾರದ ಹುನ್ನಾರ ನಡೆಸಿದೆ ಎಂದು ಅವರು ತಿಳಿಸಿದ್ದಾರೆ

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ದ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಹರಿಯಾಣದ ಜಿಂದ್‌ಗೆ ಸ್ಥಳಾಂತರಿಸಲು ಸರ್ಕಾರ ಹುನ್ನಾರ ನಡೆಸಿದೆ ಎಂದು ಭಾರತೀಯ ಕಿಸಾನ್‌ ಯೂನಿಯನ್‌ ಮುಖಂಡ ರಾಕೇಶ್‌ ಟಿಕಾಯತ್‌ ಆರೋಪಿಸಿದ್ದಾರೆ. ಶಾಂತಿಯುತವಾಗಿ ನಡೆಯುತ್ತಿರುವ ರೈತ ಹೋರಾಟಕ್ಕೆ ಧಕ್ಕೆ ತರಲು ಸರ್ಕಾರ ಯತ್ನಿಸಿದರೆ ಭಾರೀ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಆರು ತಿಂಗಳಿಂದ ರೈತರು ದೆಹಲಿಯ ಗಡಿ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಯಾವುದೇ ಕಾರಣಕ್ಕೂ ಇಲ್ಲಿಂದ ಕದಲುವುದಿಲ್ಲ ಎಂದು ಅವರು ಹೇಳಿದ್ದಾರೆ.

ರೈತರ ಸಭೆಯನ್ನುದ್ದೇಶಿಸಿ ಮಾತನಾಡಿದ ಟಿಕಾಯತ್‌, “ರೈತರ ಹೋರಾಟವು ದೆಹಲಿ ಗಡಿಗಳಿಂದ ಹರಿಯಾಣದ ಜಿಂದ್‌ಗೆ ಬದಲಾಗಬೇಕೆಂದು ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಬಯಸಿದೆ. ಆದರೆ ಅವರ ಕುತಂತ್ರವು ಯಶಸ್ವಿಯಾಗಲು ನಾವು ಅವಕಾಶ ಕೊಡುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ರಾಜ್ಯ ಸಾರಿಗೆಗೆ ಬಾಬಾಸಾಹೇಬ್ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಲು ಸಂಸದೆ ಸುಮಲತಾ ಮನವಿ

“ಹೋರಾಟದ ಕೇಂದ್ರ ಬಿಂದುವನ್ನು ದೆಹಲಿ ಗಡಿಯಿಂದ ಹರಿಯಾಣಕ್ಕೆ ಸ್ಥಳಾಂತರಿಸಬೇಕೆಂದು ಅವರು ಬಯಸುತ್ತಾರೆ. ಆದರೆ ನಾವು ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ” ಎಂದಿದ್ದಾರೆ.

“ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹರಿಯಾಣದ ಟೋಲ್‌ ಪ್ಲಾಜಾಗಳು ಸೇರಿದಂತೆ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ಮೊದಲಿನಂತೆ ಮುಂದುವರೆಯುತ್ತದೆ. ರೈತರ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೂ ಆಂದೋಲನ ಮುಂದುವರೆಯಲಿದೆ” ಎಂದು ಟಿಕಾಯತ್ ತಿಳಿಸಿದ್ದಾರೆ.

ರೈತ ಆಂದೋಲನ ನಡೆಯುತ್ತಿರುವ ಇಂದಿನ ಸಮಯದಲ್ಲಿ ರೈತರ ವಿರುದ್ಧ ಹಲವಾರು ಪೊಲೀಸ್‌ ಪ್ರಕರಣಗಳು ದಾಖಲಾಗಿವೆ ಎಂದಿರುವ ಟಿಕಾಯತ್‌, “ಈ ರೀತಿಯಲ್ಲಿ ಯಾವುದೇ ಆಂದೋಲನ ನಡೆಯುತ್ತಿರುವ ಸಮಯದಲ್ಲಿ ಒಬ್ಬರು ಜೈಲಿಗೆ ಹೋಗಲು ಹೆದರದೇ ಸಿದ್ಧರಾಗಿರಬೇಕು” ಎಂದು ತಿಳಿಸಿದರು.

ಪ್ರಸ್ತುತ ನಡೆಯುತ್ತಿರುವ ರೈತರ ಆಂದೋಲನಕ್ಕೆ ಭದ್ರ ಬುನಾದಿಯಾಗಿರುವ ಸಂಯುಕ್ತ ಕಿಸಾನ್‌ ಮೋರ್ಚಾ, ಕೃಷಿ ಕಾನೂನುಗಳ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ಮುಂದುವರೆಸಲಿದೆ ಎಂದರು.

ಇದನ್ನೂ ಓದಿ: 2,250 ಕೋಟಿ ರೂ ಖರ್ಚು ಮಾಡಿ ಮೋದಿ ಸರ್ಕಾರ ಖರೀದಿಸಿದ ವೆಂಟಿಲೇಟರ್‌ಗಳು ಕೆಲಸ ಮಾಡುತ್ತಿಲ್ಲವೇಕೆ?

ಕೇಂದ್ರ ಸರ್ಕಾರ ಮಾತುಕತೆ ಪುನರಾರಂಭಿಸಲು ನಿರ್ಧರಿಸಿದಾಗಲೆಲ್ಲಾ ಮಾತುಕತೆ ನಡೆಸಲು ರೈತ ಸಂಘಟನೆಗಳು ಸಿದ್ದವಾಗಿದ್ದವು ಎಂದಿರುವ ಟಿಕಾಯತ್‌, “ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಚರ್ಚೆ ನಡೆಯಬೇಕಿದೆ” ಎಂಬುದನ್ನು ಪುನರುಚ್ಚರಿಸಿದರು.

ಸರ್ಕಾರ ಮಾತನಾಡಲು ಬಯಸಿದಾಗ, ಸಂಯುಕ್ತ ಕಿಸಾನ್‌ ಮೋರ್ಚಾದ ಸಂಘಟಕರು ಮಾತನಾಡಲಿದ್ದಾರೆ ಎಂದು ಅವರು ತಿಳಿಸಿದರು.

ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ವಿವಾದಾತ್ಮಕ ಮೂರು ಕೃಷಿ ಕಾನೂನುಗಳು ರದ್ದಾಗಬೇಕು, ಕನಿಷ್ಠ ಬೆಂಬಲ ಬೆಲೆ ಕಾನೂನು ಖಾತರಿಗೊಳಿಸಬೇಕು ಎಂದು ಒತ್ತಾಯಿಸಿ ಕಳೆದ ನವೆಂಬರ್‌ನಿಂದ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ರೈತರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದರೂ, ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂಬು ರೈತರ ಹಕ್ಕೊತ್ತಾಯವನ್ನು ಪರಿಗಣಿಸದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: 2,250 ಕೋಟಿ ರೂ ಖರ್ಚು ಮಾಡಿ ಮೋದಿ ಸರ್ಕಾರ ಖರೀದಿಸಿದ ವೆಂಟಿಲೇಟರ್‌ಗಳು ಕೆಲಸ ಮಾಡುತ್ತಿಲ್ಲವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...

ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ; ವೀಡಿಯೊ ವೈರಲ್ ಬಳಿಕ ಆರೋಪಿ ಬಂಧನ

ಏಳು ತಿಂಗಳ ಹಿಂದಿನ ಘಟನೆಯ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ 20 ವರ್ಷದ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮತ್ತು ಅವಮಾನ ಮಾಡಿದ ಆರೋಪದ...

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...