Homeಮುಖಪುಟಹಣದುಬ್ಬರ ಹತೋಟಿಗೆ ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿ: ಆರ್‌ಬಿಐ ಸಲಹೆ

ಹಣದುಬ್ಬರ ಹತೋಟಿಗೆ ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿ: ಆರ್‌ಬಿಐ ಸಲಹೆ

- Advertisement -
- Advertisement -

ಹಣದುಬ್ಬರದ ಹತೋಟಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್‌ ಮೇಲೆ ವಿಧಿಸಿರುವ ತೆರಿಗೆ ಮತ್ತು ಸುಂಕವನ್ನು ಕಡಿತಗೊಳಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹಣಕಾಸು ನೀತಿ ಸಮಿತಿ (ಎಂಪಿಸಿ) ಶುಕ್ರವಾರ ಕರೆ ನೀಡಿದೆ.

ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳ ಏರಿಕೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸಿರುವ ಹೆಚ್ಚಿನ ತೆರಿಗೆಯಿಂದಾಗಿ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂ.ಗಳನ್ನು ದಾಟಿರುವ ಸಮಯದಲ್ಲಿ ಈ ಹೇಳಿಕೆ ಬಂದಿದೆ. ತೆರಿಗೆಗಳು ಪ್ರಸ್ತುತ ಪೆಟ್ರೋಲ್‌ನ ಚಿಲ್ಲರೆ ಮಾರಾಟದ ಬೆಲೆಯಲ್ಲಿ ಶೇ. 58 ಮತ್ತು ಡಿಸೇಲ್‌ನ ಚಿಲ್ಲರೆ ಮಾರಾಟದ ಬೆಲೆಯ ಶೇ. 52 ರಷ್ಟಿವೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಿಂದ ಹೊರಹೊಮ್ಮುವ ಇನ್ಪುಟ್ ವೆಚ್ಚದ ಒತ್ತಡಗಳನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯಗಳು ವಿಧಿಸಿರುವ ಅಬಕಾರಿ ಸುಂಕ, ಸೆಸ್ ಮತ್ತು ತೆರಿಗೆಗಳನ್ನು ಸಂಘಟಿತ ರೀತಿಯಲ್ಲಿ ಹೊಂದಿಸಬೇಕಾಗಿದೆ ಎಂದು ಎಂಪಿಸಿ ಹೇಳಿದೆ.

ಮೋದಿ ಸರ್ಕಾರವು ಅಬಕಾರಿ ಸುಂಕ ಮತ್ತು ಇಂಧನದ ಮೇಲೆ ಸೆಸ್ ವಿಧಿಸಿದರೆ, ರಾಜ್ಯಗಳು ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ವಿಧಿಸುತ್ತವೆ. ಈ ತೆರಿಗೆಗಳು ಆದಾಯದ ಪ್ರಮುಖ ಮೂಲವಾಗಿರುವುದರಿಂದ ಹೆಚ್ಚುತ್ತಿರುವ ಅಂತರರಾಷ್ಟ್ರೀಯ ಬೆಲೆಗಳ ನಡುವೆಯೂ ದರಗಳನ್ನು ಕಡಿತಗೊಳಿಸಲು ಎರಡೂ ಕಡೆಯವರು ಹಿಂದೇಟು ಹಾಕುತ್ತಿದ್ದಾರೆ.

ಪ್ರಮುಖ ನೀತಿ ದರಗಳನ್ನು ಬದಲಾಗದೆ ಇಟ್ಟುಕೊಂಡರೆ, ಪೂರ್ಣ ವರ್ಷದ ಹಣದುಬ್ಬರವು ಶೇಕಡಾ 5.1 ರಷ್ಟಾಗುತ್ತದೆ ಎಂದು ಎಂಪಿಸಿ ಮುನ್ಸೂಚನೆ ನೀಡಿದೆ.

ಇಂಧನ ಬೆಲೆಗಳು ಮತ್ತು ಅವುಗಳ ಹಣದುಬ್ಬರ ಪರಿಣಾಮದ ಕುರಿತ ಪ್ರಶ್ನೆಗೆ ಉತ್ತರಿಸಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್, ಸಂಘಟಿತ ಕ್ರಮ ಕೈಗೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದರು. “ಕೇಂದ್ರ ಮತ್ತು ರಾಜ್ಯಗಳು ನಿರ್ಧಾರ ತೆಗೆದುಕೊಳ್ಳಬೇಕು. ತಮ್ಮ ಹಣಕಾಸಿನ ಕೊರತೆಯ ವಿಷಯದಲ್ಲಿ ಅವರು ತಮ್ಮದೇ ಆದ ನಿರ್ಬಂಧಗಳನ್ನು ಹೊಂದಿದ್ದಾರೆ. ಹಣದುಬ್ಬರ ಸನ್ನಿವೇಶದ ಬಗ್ಗೆ ಸರ್ಕಾರವು ನಿಗಾ ವಹಿಸುತ್ತಿದೆ ಮತ್ತು ಗಮನಿಸುತ್ತಿದೆ ಎಂದು ನನಗೆ ಖಾತ್ರಿಯಿದೆ” ಎಂದು ಅವರು ಹೇಳಿದರು.

ಗ್ರಾಮೀಣ ಕೋವಿಡ್ ಪ್ರಕರಣಗಳಲ್ಲಿನ ಏರಿಕೆ ಅಪಾಯಗಳನ್ನು ಹೆಚ್ಚಿಸುತ್ತದೆ, ಬೆಳವಣಿಗೆಯ ಮುನ್ಸೂಚನೆಯನ್ನು 9.5% ಕ್ಕೆ ಇಳಿಸಲಾಗಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ವೇಗವಾಗಿ ಹರಡುವುದು ಬೆಳವಣಿಗೆಗೆ ಅಪಾಯವ ಉಂಟು ಮಾಡುತ್ತದೆ ಎಂದು ದಾಸ್ ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಎರಡು ತಿಂಗಳುಗಳಲ್ಲಿ ನಗರ ಮತ್ತು ಗ್ರಾಮೀಣ ಬೇಡಿಕೆ ಕಡಿಮೆಯಾಗಿದ್ದರೂ, ಇದರ ಪರಿಣಾಮ ಸೀಮಿತವಾಗಿದೆ ಎಂದು ಅವರು ಹೇಳಿದರು.

ಆದರೂ, ಎಂಪಿಸಿ 2021-22ರ ಭಾರತದ ಬೆಳವಣಿಗೆಯ ಮುನ್ಸೂಚನೆಯನ್ನು ಒಂದು ಶೇಕಡಾವಾರು ಬಿಂದುವಿನಿಂದ ಶೇಕಡಾ 10.5 ರಿಂದ 9.5 ಕ್ಕೆ ಇಳಿಸಿತು.

ವಿಮಾನಯಾನ, ಪ್ರವಾಸೋದ್ಯಮ ಮತ್ತು ಇತರ ಕ್ಷೇತ್ರಗಳಿಗೆ ಹೊಸ ಸಾಲ ನೀಡುವ ಬೆಂಬಲವನ್ನು ಪ್ರಕಟಿಸಿದೆ.


ಇದನ್ನೂ ಓದಿ; 4 ದಶಕಗಳಲ್ಲಿ ಕರಾಳ ಆರ್ಥಿಕ ವರ್ಷ: ಜಿಡಿಪಿ ಕುಸಿತಕ್ಕೆ ಚಿದಂಬರಂ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....