Homeಮುಖಪುಟರೈತ ಮಹಿಳೆಯ ಅತ್ಯಾಚಾರ ಪ್ರಕರಣ: ಸಮಗ್ರ ವರದಿಗೆ ಎನ್‌ಎಚ್‌ಆರ್‌ಸಿ ನಿರ್ದೇಶನ

ರೈತ ಮಹಿಳೆಯ ಅತ್ಯಾಚಾರ ಪ್ರಕರಣ: ಸಮಗ್ರ ವರದಿಗೆ ಎನ್‌ಎಚ್‌ಆರ್‌ಸಿ ನಿರ್ದೇಶನ

- Advertisement -
- Advertisement -

ದೆಹಲಿಯ ಟಿಕ್ರಿ ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿದ್ದ ಪಶ್ಚಿಮ ಬಂಗಾಳದ ರೈತ ಮಹಿಳಾ ಕಾರ್ಯಕರ್ತೆಯೊಬ್ಬರ ಅತ್ಯಾಚಾರ ಮತ್ತು ಸಾವಿನ ಬಗ್ಗೆ ವಾಸ್ತವಿಕ ವರದಿ ಸಲ್ಲಿಸುವಂತೆ ಬುಧವಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಹರಿಯಾಣದ ಪೊಲೀಸ್‌ ಅಧೀಕ್ಷಕರಿಗೆ ಆದೇಶಿಸಿದೆ.

ಆಯೋಗವು ಈ ಪ್ರಕರಣಕ್ಕೆ ಸಂಬಂಧಿಸಿದ ದೂರಿನ ಪ್ರತಿ, ಎಫ್‌ಐಆರ್‌, ಕೇಸ್‌ ಡೈರಿಗಳು, ವೈದ್ಯಕೀಯ ಚಿಕಿತ್ಸೆ, ಸಂತ್ರಸ್ಥೆಯ ದಾಖಲೆ ಮತ್ತು  ತನಿಖೆಯ ಪ್ರಸ್ತುತ ಸ್ಥಿತಿ ಸೇರಿದಂತೆ ಎಲ್ಲಾ ದಾಖಲೆಗಳೊಂದಿಗೆ ವರದಿಯನ್ನು ನೀಡುವಂತೆ ಎಸ್‌ಪಿ ಅವರಿಗೆ ಸೂಚಿಸಿದೆ.

ರಾಜ್ಯದ ನೊಂದವರ ಪರಿಹಾರ ನಿಧಿ ಯೋಜನೆಯ ಪ್ರಕಾರ ಮೃತ ಮಹಿಳೆಯ ಕುಟುಂಬದ ಸದಸ್ಯರಿಗೆ ಪಾವತಿಸಿದ ಪರಿಹಾರ ಧನವೆಷ್ಟು ಎಂಬುದನ್ನು ನಾಲ್ಕು ವಾರಗಳೊಳಗೆ ಪುರಾವೆಗಳ ಮೂಲಕ ಸಲ್ಲಿಸುವಂತೆ ಜಜ್ಜಾರ್‌ ಜಿಲ್ಲಾ ನ್ಯಾಯಾಲಯಕ್ಕೆ ಎನ್‌ಎಚ್‌ಆರ್‌ಸಿ ನಿರ್ದೇಶನ ನೀಡಿದೆ.

ಖ್ಯಾತ ಮಾನವ ಹಕ್ಕುಗಳ ಕಾರ್ಯಕರ್ತ ಮತ್ತು ಸುಪ್ರೀಂ ಕೋರ್ಟ್‌ನ ಪರಿಚಿತ ಮಾನವ ಹಕ್ಕುಗಳ ವಕೀಲ ರಾಧಾಕಾಂತ ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯ ಅನುಸಾರ ಎನ್‌ಎಚ್‌ಆರ್‌ಸಿ ತನಿಖಾ ವಿಭಾಗಕ್ಕೆ ಜಜ್ಜಾರ್‌ ಜಿಲ್ಲಾಡಳಿತ ಪ್ರತಿಕ್ರಿಯಿಸಿತು.

ಎನ್‌ಎಚ್‌ಆರ್‌ಸಿ ತನ್ನ ಆದೇಶದಲ್ಲಿ ‘ದೆಹಲಿ-ಹರಿಯಾಣದ ಗಡಿಯಾದ ಟಿಕ್ರಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಲು ಬಂದ ಪಶ್ಚಿಮ ಬಂಗಾಳ ಮೂಲದ ಮಹಿಳಾ ಕಾರ್ಯಕರ್ತೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದ ಬಗ್ಗೆ ಪ್ರಸಿದ್ಧ ಮಾನವ ಹಕ್ಕುಗಳ ಕಾರ್ಯಕರ್ತರಿಂದ ದೂರುಗಳು ಬಂದಿವೆ. ಆರೋಪಿಗಳ ವಿರುದ್ಧ ಆಕೆಯ ತಂದೆ ಎಫ್‌ಐಆರ್‌ ದಾಖಲಿಸಿದ್ದಾರೆ. 2021 ಏಪ್ರಿಲ್‌ 30ರಂದು ಸಂತ್ರಸ್ತೆಗೆ ಕೋವಿಡ್‌ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು ಸಂತ್ರಸ್ತೆ ಆಸ್ಪತ್ರೆಯಲ್ಲಿ ನಿಧನರಾದರು’ ಎಂದು ಹೇಳಲಾಗಿದೆ.

ಹರಿಯಾಣ ಸರ್ಕಾರದ ಪೊಲೀಸ್‌ ಹಾಗೂ ಆರೋಗ್ಯ ಇಲಾಖೆಯ ನಿರ್ಲಕ್ಷ್ಯ, ಆರೋಗ್ಯ ಮತ್ತು ನ್ಯಾಯ ಒದಗಿಸುವಲ್ಲಿನ ನಿಷ್ಕ್ರಿಯತೆ ಮತ್ತು ವೈಫಲ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ತ್ರಿಪಾಠಿ ಆರೋಪಿಸಿದ್ದಾರೆ. ಸಂತ್ರಸ್ತೆಯ ತಂದೆ ನ್ಯಾಯಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದಾರೆಂದು ಹೇಳಲಾಗಿದೆ.

ಮೃತ ಮಹಿಳೆಯ ಕುಟುಂಬದ ಸದಸ್ಯರಿಗೆ ಅಧಿಕ ಮೊತ್ತದ ಪರಿಹಾರ, ನ್ಯಾಯಯುತ, ಸ್ವತಂತ್ರ, ನಿಷ್ಪಕ್ಷಪಾತ ತನಿಖೆ ಹಾಗೂ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ತ್ರಿಪಾಠಿ ಮನವಿ ಮಾಡಿದ್ದಾರೆ.

ಪೊಲೀಸರ ಪ್ರಕಾರ, ಪಶ್ಚಿಮ ಬಂಗಾಳದ ಹೂಗ್ಲಿ ನಿವಾಸಿ ಸಂತ್ರಸ್ತೆಯ ತಂದೆ ಮೇ 9, 2021ರಂದು ತನ್ನ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದಾರೆ ಎಂದು ಎನ್‌ಎಚ್‌ಆರ್‌ಸಿ ತನಿಖಾ ವಿಭಾಗ ತಿಳಿಸಿದೆ.  ಈ ನಿಟ್ಟಿನಲ್ಲಿ ಬಹದ್ದೂರ್‌ಗರ್‌ ಪೊಲೀಸ್ ಠಾಣೆಯಲ್ಲಿ ಅದೇ ದಿನ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 120-ಬಿ, 354, 506 ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣವನ್ನು ಇತ್ಯರ್ಥಗೊಳಿಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ದೂರಿನಲ್ಲಿ ದಾಖಲಾಗಿರುವ ಇಬ್ಬರು ಆರೋಪಿಗಳು ಹಣವುಳ್ಳವರಾಗಿದ್ದು ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಅಪರಾಧ ಸಂಭವಿಸಿದ ಬಗ್ಗೆ ತಿಳಿದಿದೆ ಎಂದು ನಂಬಲಾದ ಏಳು ವ್ಯಕ್ತಿಗಳ ಹೇಳಿಕೆಯನ್ನು ದಾಖಲಿಸಲು ಮತ್ತು ಇತರ ಸಂಗತಿಗಳನ್ನು ಕಂಡುಹಿಡಿಯಲು ಅವರಿಗೂ ನೋಟಿಸ್‌ ಕಳುಹಿಸಲಾಗಿದೆ.

ಕೋವಿಡ್‌ ಕಾರಣದಿಂದಾಗಿ ಏಪ್ರಿಲ್‌ 25 ರಂದು ಬಹದ್ದೂರ್‌ಗರ್‌ನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದ ಮಹಿಳೆ ಏಪ್ರಿಲ್ 30ರಂದು ನಿಧನರಾದರು ಎಂದು ಬಹದ್ದೂರ್‌ಗರ್‌ನ ಉಪ ಪೊಲೀಸ್‌ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ. ಮೃತ ದೇಹವನ್ನು ಅವರ ಕುಟುಂಬದವರ ಸಮ್ಮುಖದಲ್ಲಿಯೇ ಅಂತ್ಯಸಂಸ್ಕಾರ ಮಾಡಲಾಗಿದೆ. ಆದರೆ ಆ ಸಮಯದಲ್ಲಿ ಮಹಿಳೆಯ ತಂದೆ ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ. ಯಾವುದೇ ದೂರು ಇಲ್ಲದಿರುವುದರಿಂದ, ಸಂತ್ರಸ್ತೆಯನ್ನು ಯಾವುದೇ ವಿಚಾರಣೆ ಅಥವಾ ಶವಪರೀಕ್ಷೆ ನಡೆಸಲಾಗಿಲ್ಲ ಎಂದು ತ್ರಿಪಾಠಿ ತಿಳಿಸಿದ್ದಾರೆ.

ಆದರೂ, ಈ ಕುರಿತು ತನಿಖೆ ನಡೆಯುತ್ತಿದ್ದು, ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿಎಸ್‌ಪಿ ತಿಳಿಸಿದ್ದಾರೆ. ಸಂತ್ರಸ್ತೆಯ ತಂದೆ ಮೇ 10 ರಂದು ಪಶ್ಚಿಮ ಬಂಗಾಳಕ್ಕೆ ತೆರಳಿದ್ದು, ಸಂತ್ರಸ್ತ ಪರಿಹಾರ ನಿಧಿ ಯೋಜನೆಯಡಿ ಯಾವುದೇ ಪರಿಹಾರ ಧನ ನೀಡಿಲ್ಲ ಎನ್ನಲಾಗಿದೆ.


ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...