Homeಕರೋನಾ ತಲ್ಲಣದೆಹಲಿ: ಕೋವಿಡ್‌ನಿಂದ ಗುಣಮುಖರಾದವರಲ್ಲಿ ಇತರ ಗಂಭೀರ ಸಮಸ್ಯೆಗಳು

ದೆಹಲಿ: ಕೋವಿಡ್‌ನಿಂದ ಗುಣಮುಖರಾದವರಲ್ಲಿ ಇತರ ಗಂಭೀರ ಸಮಸ್ಯೆಗಳು

- Advertisement -
- Advertisement -

ದೆಹಲಿಯಲ್ಲಿ ಕೋವಿಡ್ ನಿಯಂತ್ರಣ ಒಂದು ಹಂತಕ್ಕೆ ಬರುತ್ತಿದೆ. ಆದರೆ ಕೋವಿಡ್‌ನಿಂದ ಗುಣಮುಖರಾದ ಹಲವರಲ್ಲಿ ಬೇರೆ ಬಗೆಯ ಅನಾರೋಗ್ಯ ಕಾಣಿಸಿಕೊಳ್ಳುತ್ತಿದೆ ಎಂದು ವೈದ್ಯರನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ವೈದ್ಯರ ಪ್ರಕಾರ, ದೆಹಲಿ ಆಸ್ಪತ್ರೆಗಳ ಹೊರರೋಗಿ ವಿಭಾಗಗಳಲ್ಲಿ (ಒಪಿಡಿ) ಕೋವಿಡ್‌ನಿಂದ ಗುಣಮುಖರಾಗಿ ಈಗ ಹಲವು ತೊಡಕುಗಳನ್ನು ಅನುಭವಿಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ.
ಒಪಿಡಿಗಳಲ್ಲಿ ಕೋವಿಡ್ ನಂತರದ ತೊಡಕುಗಳನ್ನು ಹೊಂದಿರುವ 25-30 ರೋಗಿಗಳಿಗೆ ವೈದ್ಯರು ಪ್ರತಿದಿನ ಈಗ ಚಿಕಿತ್ಸೆ ನೀಡುತ್ತಿದ್ದಾರೆ. ಮೊದಲ ಅಲೆಯಲ್ಲಿ ವರದಿಯಾದ ರೋಗಲಕ್ಷಣಗಳಿಗಿಂತ ಈಗಿನ ರೋಗಲಕ್ಷಣಗಳು ಹೆಚ್ಚು ಗಂಭೀರವಾಗಿವೆ. ಸೋಂಕಿನಿಂದ ಚೇತರಿಸಿಕೊಂಡ ನಂತರ ಹಲವಾರು ವಾರಗಳವರೆಗೆ ರೋಗಿಗಳಿಗೆ ಆಮ್ಲಜನಕದ ಬೆಂಬಲ ಬೇಕಾಗುತ್ತಿದೆ. ಕಳೆದ ವರ್ಷ, ಕೋವಿಡ್‌ನಿಂದ ಚೇತರಿಸಿಕೊಂಡವರಲ್ಲಿ ಆಯಾಸ ಸಾಮಾನ್ಯ ಲಕ್ಷಣವಾಗಿತ್ತು.

ಮ್ಯಾಕ್ಸ್ ಆಸ್ಪತ್ರೆಯ ಉಸಿರಾಟ ವಿಭಾಗದ ಮುಖ್ಯಸ್ಥ ಡಾ.ವಿವೇಕ್ ನಂಗಿಯಾ, ‘ನಮ್ಮ ಒಪಿಡಿಗಳು 70-80% ರಷ್ಟು ಕೋವಿಡ್ ನಂತರದ ರೋಗಿಗಳಿಂದ ತುಂಬಿಹೋಗಿವೆ. ಸಾಮಾನ್ಯವಾಗಿ, 65 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳಲ್ಲಿ ಶ್ವಾಸಕೋಶದ ಫೈಬ್ರೋಸಿಸ್ ಅನ್ನು ನಾವು ನೋಡುತ್ತೇವೆ. ಆದರೆ ಈ ಸಮಯದಲ್ಲಿ, ಮಧ್ಯ ವಯಸ್ಕ ಜನರು, ಕಿರಿಯ ರೋಗಿಗಳು ಮತ್ತು ಮಕ್ಕಳನ್ನು ಸಹ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಿಸಲಾಗಿದೆ. ಕೋವಿಡ್‌ನಿಂದ ಗುಣಮುಖರಾದ ನಂತರವೂ ಆಮ್ಲಜನಕದ ಬೆಂಬಲದಲ್ಲಿರುವ ರೋಗಿಗಳಿದ್ದಾರೆ ಎಂದಿದ್ದಾರೆ.
ಕೋವಿಡ್‌ನಿಂದ ಚೇತರಿಸಿಕೊಂಡ ರೋಗಿಗಳು ನಂತರ ಹೆಚ್ಚಿನ ಪ್ರಮಾಣದ ಜ್ವರದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯ ಹಿರಿಯ ವೈದ್ಯ ಡಾ.ಸುರಂಜಿತ್ ಚಟರ್ಜಿ, “3 ಮತ್ತು 4 ನೇ ವಾರದ ಚೇತರಿಕೆಯ ನಂತರ ಸಹ ನಾವು ತೀವ್ರ ಜ್ವರದಿಂದ ಬಳಲುತ್ತಿರುವ ಬಹಳಷ್ಟು ರೋಗಿಗಳನ್ನು ನೋಡುತ್ತಿದ್ದೇವೆ. ಮೊದಲ ಅಲೆಯಲ್ಲಿಯೂ ಜ್ವರ ಇತ್ತು. ಆದರೆ ಈ ಸಮಯದಲ್ಲಿ ಸ್ಟೀರಾಯ್ಡ್‌ಗಳನ್ನು ಸಹ ಬಳಸಲಾಗಿದೆ, ಆದ್ದರಿಂದ ಇದು ಕೇವಲ ಉರಿಯೂತವೋ ಅಥವಾ ದ್ವಿತೀಯ ಸೋಂಕಿನ ಕಾರಣವೋ ಎಂದು ನಾವು ಗೊಂದಲಕ್ಕೊಳಗಾಗಿದ್ದೇವೆ. ಕಪ್ಪು ಶಿಲೀಂದ್ರ ಅಥವಾ ಶ್ವಾಸಕೋಶದ ಇತರ ಸೋಂಕುಗಳೂ ಕಾಣಿಸಿಕೊಳ್ಳುತ್ತಿವೆ” ಎಂದಿದ್ದಾರೆ.

ಕೆಲವು ರೋಗಿಗಳಿಗೆ, ಕೋವಿಡ್ ನಂತರದ ಲಕ್ಷಣಗಳು ತೀವ್ರವಾಗಿದ್ದರಿಂದ ಅವರನ್ನು ಮತ್ತೆ ತೀವ್ರ ನಿಗಾ ಚಿಕಿತ್ಸೆಗೆ ಸೇರಿಸಲಾಗುತ್ತಿದೆ.

ಫೋರ್ಟಿಸ್ ಎಸ್ಕೋರ್ಟ್ಸ್ ಹಾರ್ಟ್ ಇನ್ಸ್ಟಿಟ್ಯೂಟ್‌ನ ತೀವ್ರ ನಿಗಾ ಘಟಕದ ಹೆಚ್ಚುವರಿ ನಿರ್ದೇಶಕ ಡಾ.ರಜತ್ ಅಗರ್ವಾಲ್, ‘ಪ್ರತಿದಿನ 3-4 ರೋಗಿಗಳು ವಿವಿಧ ಸಮಸ್ಯೆಗಳೊಂದಿಗೆ ನಮ್ಮ ತೀವ್ರ ನಿಗಾ ಘಟಕಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಬಹುಪಾಲು ಜನರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಮತ್ತು ಅವರಿಗೆ ಹೆಚ್ಚಿನ ಆಮ್ಲಜನಕದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಈಗ ದೈನಂದಿನ ಪ್ರಕರಣಗಳು ಸುಮಾರು 500ಕ್ಕೆ ಇಳಿದಿದೆ. ಆದರೆ ಕೋವಿಡ್‌ನಿಂದ ಗುಣಮುಖರಾದ ಹಲವರಲ್ಲಿ ಇತರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ.


ಇದನ್ನೂ ಓದಿ; ರೋಗನಿರೋಧಕತೆ ಮತ್ತು ಲಸಿಕೆ; ಸಂಶೋಧನೆಯ ಇತಿಹಾಸ ಮತ್ತು ವಿಜ್ಞಾನ: ಭಾಗ-1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...