Homeಮುಖಪುಟಪಕ್ಷಿಗಳಿಗಾಗಿ ಗೂಡು, ಆಹಾರೋದ್ಯಾನ ನಿರ್ಮಿಸುತ್ತಿರುವ ಬೆಂಗಳೂರಿನ ಸ್ವಯಂ ಸೇವಕರ ತಂಡ

ಪಕ್ಷಿಗಳಿಗಾಗಿ ಗೂಡು, ಆಹಾರೋದ್ಯಾನ ನಿರ್ಮಿಸುತ್ತಿರುವ ಬೆಂಗಳೂರಿನ ಸ್ವಯಂ ಸೇವಕರ ತಂಡ

ಗೀವ್ ತಂಡಕ್ಕೆ ಯಾರು ಬೇಕಾದರೂ ಹಣ್ಣಿನ ಸಸಿಗಳನ್ನು ದೇಣಿಗೆ ನೀಡಬಹುದು. ಆ ಸಸಿಗಳನ್ನು ಜೋಪಾನವಾಗಿ ಬೆಳೆಸುವ ಜವಬ್ದಾರಿ ತಂಡದ್ದು.

- Advertisement -
- Advertisement -

ಲಾಕ್‌ಡೌನ್‌ ಕಾರಣದಿಂದ ಬೆಂಗಳೂರಿನಲ್ಲಿ ಪಕ್ಷಿ ಮತ್ತು ಪ್ರಾಣಿಗಳಿಗೆ ಸರಿಯಾಗಿ ಕಾಳು ಮತ್ತಿತರ ಆಹಾರ ಸಿಗುತ್ತಿಲ್ಲ. ಲಾಕ್‌ಡೌನ್‌ನ ನಡುವೆಯೂ ಇಲ್ಲೊಂದು ಪರಿಸರ ಪ್ರೇಮಿಗಳ ತಂಡ ಹಕ್ಕಿಗಳಿಗೆ ಕಾಳೂಣಿಸುವ ಕೆಲಸವನ್ನು ಸದ್ದಿಲ್ಲದೇ ಮಾಡುತ್ತಾ, ಪ್ರಾಣಿ- ಪಕ್ಷಿಗಳಿಗೆ ಆಹಾರ ಒದಗಿಸಲು ಶ್ರಮಪಡುತ್ತಿದೆ.

ರೆಸಿಡೆಂಟ್ಸ್‌ ವೆಲ್ಫೇರ್ ಅಸೋಸಿಯೇಶನ್‌ ಸಂಸ್ಥೆಯ ನೆರವಿನೊಂದಿಗೆ ಬೆಂಗಳೂರಿನ ಗ್ರೀನ್‌ ಇಂಡಸ್‌ ವಾಲಂಟೀಯರ್ಸ್‌ ಫಾರ್‌ ಎನ್ವಿರಾನ್ಮೆಂಟ್‌ (GIVE) ತಂಡದ ಸದಸ್ಯರು ಬೆಂಗಳೂರು ನಗರದ ಖಾಲಿ ಇರುವ ಪ್ರದೇಶಗಳಲ್ಲಿ ಹಣ್ಣು ಬಿಡುವ ಗಿಡಗಳನ್ನು ಹಾಗೂ ಕಾಳಿನ ಗಿಡಗಳನ್ನು ನೆಡುತ್ತಿದ್ದಾರೆ. ಆ ಮೂಲಕ ಹಕ್ಕಿ ಪಕ್ಷಿಗಳಿಗೆ ಹಸಿರೊದಗಿಸುವ ಮತ್ತು ಹಸಿವು ನೀಗಿಸುವ ಅಪರೂಪದ ಕೆಲಸವನ್ನು ಈ ಸ್ವಯಂ ಸೇವಕರ ತಂಡ ಮಾಡುತ್ತಿದೆ. ಗ್ರೀನ್‌ ಇಂಡಸ್‌ ತಂಡದ ಪರಿಸರ ಕಾಳಜಿಗೆ ಮತ್ತು ಪಕ್ಷಿಪ್ರಾಣಿಗಳ ಮೇಲಿನ ಪ್ರೇಮ ಕಂಡು ಬೆಂಗಳೂರಿನ ಅನೇಕ ನಾಗರೀಕರು ಈ ತಂಡಕ್ಕೆ ಸಹಾಯ ನೀಡುತ್ತಿದ್ದಾರೆ.

ಹಕ್ಕಿಗಳಿಗಾಗಿ ನೈಸರ್ಗಿಕ ಆಹಾರೋದ್ಯಾನಗಳನ್ನು ನಿರ್ಮಿಸುವ ಗ್ರೀನ್ ಇಂಡಸ್ ತಂಡದ ಯೋಜನೆಯ ಮೊದಲ ಹಂತ ಈಗಾಗಲೇ ಆರಂಭವಾಗಿದೆ. ಯೋಜನೆಯ ಮೊದಲ ಭಾಗವಾಗಿ ಬೆಂಗಳೂರಿನ ಮುತನಲ್ಲೂರು ಕೆರೆ ಸುತ್ತ ಮುತ್ತ ನೂರಾರು ಹಣ್ಣಿನ ಗಿಡಗಳನ್ನು ನೆಡಲಾಗಿದೆ. ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸಂಸ್ಥೆಯ ಸದಸ್ಯರೂ ಕೂಡ GIVE ತಂಡದ ಈ ಪ್ರಯತ್ನಕ್ಕೆ ಜೊತೆ ನೀಡಿದ್ದಾರೆ.

ಈಗಾಗಲೇ ಬೆಂಗಳೂರಿನಲ್ಲಿ ನೂರಾರು ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ. ಹತ್ತಾರು ಕೆರೆಗಳನ್ನು ಅತಿಕ್ರಮವಾಗಿ ಕಬಳಿಸಿರುವ ಘಟನೆಗಳು ನಡೆದಿವೆ. ಕೆರೆ ಸುತ್ತಮುತ್ತದ ಅಕ್ರಮ ಒತ್ತುವರಿ ಪ್ರದೇಶವನ್ನು ಗುರುತಿಸಿ ಅಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಕೆಲಸ ನಮ್ಮ ತಂಡ ಮಾಡುತ್ತಿದೆ. 30% ಅಕ್ರಮ ಒತ್ತುವರಿಯಾಗಿರುವ ಸರ್ಕಾರಿ ಭೂಮಿ ಮತ್ತು ಕೆರೆಗಳನ್ನು ರಕ್ಷಿಸಲು ಸರ್ಕಾರದ ಜೊತೆ ಕೈಜೋಡಿಸಿದ್ದೇವೆ ಎಂದು ಗೀವ್ ಇಂಡಿಯಾದ ಸ್ವಯಂ ಸೇವಕರು ಹೇಳುತ್ತಾರೆ.

GIVE ತಂಡದ ಸದಸ್ಯರು ಹೆಚ್ಚಾಗಿ ಚಿಕ್ಕು, ಜಾಂಬಳೆ, ನೇರಳೆ, ಮಾವು, ಹಲಸು ಮುಂತಾದ ಗಿಡಗಳನ್ನು ರೈತರಿಂದ ಪಡೆದು ಅದನ್ನು‌ ನೆಟ್ಟು ಪೋಷಿಸುವ ಆಸಕ್ತ ನಾಗರಿಕರಿಗೆ ನೀಡುತ್ತಿದ್ದೇವೆ. ಹೆಚ್ಚಿನ ಕಡೆ ತಂಡದ ಸದಸ್ಯರು ಸಸಿಗಳನ್ನು ನೆಟ್ಟು ಸಂರಕ್ಷಿಸುತ್ತಿದ್ದಾರೆ ಎಂದು ತಂಡದ ಸದಸ್ಯರು ತಿಳಿಸಿದ್ದಾರೆ.

ಗೀವ್ ತಂಡಕ್ಕೆ ಯಾರು ಬೇಕಾದರೂ ಹಣ್ಣಿನ ಸಸಿಗಳನ್ನು ದೇಣಿಗೆ ನೀಡಬಹುದು. ಆ ಸಸಿಗಳನ್ನು ಜೋಪಾನವಾಗಿ ಬೆಳೆಸುವ ಜವಬ್ದಾರಿ ತಂಡದ್ದು. ಇದರ ಹೊರತಾಗಿ GIVE ತಂಡ ಯಾವುದೇ ಆರ್ಥಿಕ ಸಹಾಯವನ್ನು ಸ್ವೀಕರಿಸುವುದಿಲ್ಲ‌ ಎಂದು ತಂಡದ ಸ್ವಯಂಸೇವಕರಾದ ಸಂತೋಷ್ ಹೇಳುತ್ತಾರೆ.

ಸದ್ಯ GIVE ತಂಡದ ಸದಸ್ಯರು ಬೆಂಗಳೂರು ನಗರದ ಆನೇಕಲ್ ಮತ್ತು ಎಲೆಕ್ಟ್ರಾನಿಕ್ ಸಿಟಿ ಭಾಗದ ಅಪಾರ್ಟ್ ಮೆಂಟ್ ಗಳಲ್ಲಿ ಮತ್ತು ಅಪಾರ್ಟ್ ಮೆಂಟ್ ಸುತ್ತಮುತ್ತ ಹಣ್ಣಿನ ಗಿಡಗಳು ಮತ್ತು ಕಾಳಿನ ಗಿಡಗಳನ್ನು ಬೆಳೆಸುವಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಯಾರೇ ನಾಗರಿಕರು ಗಿಡ ಮರಗಳನ್ನು ಬೆಳೆಸಿ ಪಕ್ಷಿಗಳಿಗೆ ನೈಸರ್ಗಿಕ ಆಹಾರ ಒದಗಿಸಲು ಮುಂದಾದರೆ ಅವರಿಗೆ ಸಹಾಯ ಮಾಡಲು GIVE ತಂಡ ಸಿದ್ಧವಿದೆ ಎಂದು ಸದಸ್ಯರು ಹೇಳುತ್ತಾರೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...