Homeಕರೋನಾ ತಲ್ಲಣಮೂರನೇ ದೇಶಿ ನಿರ್ಮಿತ ಬಯೋಲಾಜಿಕಲ್ E ಕಂಪನಿಯ ಲಸಿಕೆ ಸದ್ಯದಲ್ಲೇ ಮಾರುಕಟ್ಟೆಗೆ

ಮೂರನೇ ದೇಶಿ ನಿರ್ಮಿತ ಬಯೋಲಾಜಿಕಲ್ E ಕಂಪನಿಯ ಲಸಿಕೆ ಸದ್ಯದಲ್ಲೇ ಮಾರುಕಟ್ಟೆಗೆ

- Advertisement -
- Advertisement -

ಕೋವಿಶೀಲ್ಡ್, ಕೋವಾಕ್ಸೀನ್ ನಂತರ ಭಾರತದಲ್ಲಿ ಮೂರನೇ ದೇಶಿ ನಿರ್ಮಿತ ‘ಕೋವಿಡ್ 19’ ಹೆಸರಿನ ಹೊಸ ಕೊರೋನಾ ವ್ಯಾಕ್ಸೀನ್ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ. ಹೈದರಾಬಾದ್ ಮೂಲದ ಬಯೋಲಾಜಿಕಲ್ E ಸಂಸ್ಥೆಯೊಂದಿಗೆ ಕೇಂದ್ರ ಸರ್ಕಾರ 30 ಕೋಟಿ ವ್ಯಾಕ್ಸೀನ್ ಗಳ ಪೂರೈಕೆಗೆ ಒಪ್ಪಂದ ಮಾಡಿಕೊಂಡ ಬೆನ್ನಲ್ಲೇ ಈ ಮಾಹಿತಿ ಹೊರಬಿದ್ದಿದೆ. ಕೇಂದ್ರ ಸರ್ಕಾರದಿಂದ ತುರ್ತಿ ಪರಿಸ್ಥಿತಿಯ ಬಳಕೆಗೆ ಅನುಮತಿಯನ್ನು ನಿರೀಕ್ಷಿಸುತ್ತಿರುವ ಬಯೊಲಾಜಿಕಲ್ ಈ ಸಂಸ್ಥೆ ಸದ್ಯದಲ್ಲೇ ತನ್ನ ವ್ಯಾಕ್ಸೀನ್ ಅನ್ನು ದೇಶದಲ್ಲಿ ಬಿಡುಗಡೆಮಾಡಲು ಸಜ್ಜಾಗಿದೆ.

ದೇಶದ ಅತ್ಯಂತ ಹಳೆಯ ವ್ಯಾಕ್ಸೀನ್ ತಯಾರಿಕಾ ಕಂಪನಿಯಾದ ಬಯೋಲಾಜಿಕಲ್ E ತನ್ನ ಹೊಸ ವ್ಯಾಕ್ಸೀನ್ ನ ಪ್ರತಿ ಡೋಸ್ ಗೆ 500 ರೂಪಾಯಿಯಂತೆ ಮುಕ್ತ ಮಾರುಕಟ್ಟೆಯಲ್ಲಿ ಮಾರಲು ಸಿದ್ಧತೆ ನಡೆಸಿದೆ ಎಂದು ಕಂಪನಿಯ ಮೂಲಗಳಿಂದ ತಿಳಿದು ಬಂದಿದೆ.

ಎರಡು ಡೋಸ್‌ಗಳಲ್ಲಿ ಜನರಿಗೆ ಬಯೊಲಾಜಿಕಲ್ ಈ ಸಂಸ್ಥೆ ಕೊರೋನಾ ವ್ಯಾಕ್ಸೀನ್ ಅನ್ನು  ನೀಡಲು ಮುಂದಾಗಿದೆ. ಭಾರತದ ಜೊತೆಗೆ ವಿಶ್ವದ ಅತ್ಯಂತ ಕಡಿಮೆ ಬೆಲೆಯ ವ್ಯಾಕ್ಸೀನ್ ಇದಾಗಿರಲಿದೆ ಎಂದು ಕಂಪನಿಯ ಮೂಲಗಳು ಹೇಳಿವೆ.

ಈಗಾಗಲೇ ಫೇಸ್ 1 ಮತ್ತು ಫೇಸ್ 2 ಹಂತದ ಕ್ಲಿನಿಕಲ್ ಟ್ರಯಲ್ ನಲ್ಲಿ ಕಂಪನಿಯ ವ್ಯಾಕ್ಸೀನ್ ಉತ್ತಮ ಫಲಿತಾಂಶವನ್ನು ನೀಡಿದ್ದು ಸದ್ಯ ಸರ್ಕಾರದ ಅನುಮತಿಗಾಗಿ ಕಂಪನಿ ಕಾಯುತ್ತಿದೆ.

ಬಯೊಲಾಜಿಕಲ್ ಈ ಸಂಸ್ಥೆಯ ಹೊಸ ವ್ಯಾಕ್ಸೀನ್ ಭಾರತ, ಆಫ್ರಿಕ, ದಕ್ಷಿಣ ಅಮೆರಿಕಾ ಮತ್ತು ಏಷ್ಯಾದ ದೇಶಗಳಲ್ಲಿನ ವ್ಯಾಕ್ಸೀನ್ ಕೊರತೆಯನ್ನು ನೀಗಿಸಲಿದೆ ಎಂದು‌ ಬಯೊಲಾಜಿಕಲ್ ಈ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮಹಿಮಾ ಡಾಲ್ಟಾ ತಿಳಿಸಿದ್ದಾರೆ

ಬಯೊಲಾಜಿಕಲ್ E ಸಂಸ್ಥೆ ಅಮೆರಿಕಾದ ಟೆಕ್ಸಾಸ್ ನ ಚಿಲ್ಡ್ರನ್ ಹಾಸ್ಪಿಟಲ್ ಸೆಂಟರ್ ಫಾರ್ ವ್ಯಾಕ್ಸೀನ್ ಡೆವಲಪ್‌ಮೆಂಟ್ ಎಂಬ ಔಷಧ ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ಹೊಸ ವ್ಯಾಕ್ಸೀನ್ ಅನ್ನು ಅಭಿವೃದ್ಧಿಪಡಿಸಿದೆ. “ಭಾರತದಲ್ಲಿ ಕೋವಿಡ್ ವಿರುದ್ಧ ಹೋರಾಟದಲ್ಲಿ ನಾವು ಬಯೋಲಾಜಿಕಲ್ E ಸಂಸ್ಥೆಯ ಜೊತೆ ಕೈಜೋಡಿಸಲು ಅತ್ಯಂತ ಹೆಮ್ಮೆಯಾಗುತ್ತದೆ. ಜಗತ್ತು ಒಗ್ಗಟ್ಟಾಗಿ ಕೊರೋನಾ ವಿರುದ್ಧ ಹೋರಾಡುತ್ತಿದೆ” ಎಂದು ಟೆಕ್ಸಾಸ್ ಚಿಲ್ಡ್ರನ್ ಹಾಸ್ಪಿಟಲ್ ಸೆಂಟರ್ ನ ಪ್ರೊಫೆಸರ್ ಪೀಟರ್ ಹೊಟೇಝ್ ತಿಳಿಸಿದ್ದಾರೆ.

ಕಳೆದ ವರ್ಷ ಬಯೋಲಾಜಿಕಲ್ E ಔಷದೋತ್ಪಾದನಾ ಕಂಪನಿ ಅಮೆರಿಕಾದ ಜಾನ್ಸನ್ ಆ್ಯಂಡ್ ಜಾನ್ಸನ್ ನ ಭಾಗವಾಗಿರುವ ಜಾನ್ಸೆನ್ ಫಾರ್ಮಾಸುಟಿಕಲ್ NV ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದ ಪ್ರಕಾರ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ Ad26.COV2.S. ಕೋವಿಡ್ 19 ಲಸಿಕೆಯ ಉತ್ಪಾದನೆಯ ಹಕ್ಕುಗಳನ್ನು ಬಯೋಲಾಜಿಕಲ್ E ಸಂಸ್ಥೆ ಪಡೆದುಕೊಂಡಿದೆ.

ದೇಶದ ಅತ್ಯಂತ ಹಳೆಯ ಔಷಧ ಉತ್ಪಾದನಾ ಕಂಪನಿ ಬಯೋಲಾಜಿಕಲ್ E 1953 ರಲ್ಲಿ ಕೆವಿಕೆ ರಾಜು ಅವರು ಕಂಪನಿಯನ್ನು ಆರಂಭಿಸಿದ್ದರು. ಆ ಸಂದರ್ಭದಲ್ಲಿ ದೇಶದ ಮೊಟ್ಟಮೊದಲ ಖಾಸಗಿ ಔಷಧ ತಯಾರಿಕ ಕಂಪಿನಿಯಾಗಿ ಬಯೋಲಾಜಿಕಲ್ E ಸಂಸ್ಥೆ ಗುರುತಿಸಿಕೊಂಡಿತ್ತು. ಇದುವರೆಗೆ ಜಗತ್ತಿನ 100 ದೇಶಗಳಿಗೆ ವಿವಿಧ ವ್ಯಾಕ್ಸೀನ್ ಪೂರೈಸುತ್ತಿರುವ ಬಯೋಲಾಜಿಕಲ್ E ಕಂಪನಿ ಇತರ ವೈದ್ಯಕೀಯ ಔಷಧಿಗಳನ್ನು ಭಾರತ ಮತ್ತು ಅಮೆರಿಕಾದ ಮಾರುಕಟ್ಟೆಗೆ ಪೂರೈಕೆ ಮಾಡುತ್ತಿದೆ.

ಭಾರತ ಸರ್ಕಾರದ ಅನುಮತಿಯ ನಂತರ ಕಂಪನಿಯು ದೊಡ್ಡ ಮಟ್ಟದಲ್ಲಿ COVID-19 ಹೆಸರಿನ ವ್ಯಾಕ್ಸೀನ್ ಅನ್ನು ಉತ್ಪಾದನೆಗೆ ತೊಡಗಲಿದೆ. ಭಾರತದಲ್ಲಿ ಜನರ ಕೈಗೆಟುಕ ದರದಲ್ಲಿ ಔಷಧೋತ್ಪನ್ನಗಳನ್ನು ವ್ಯಾಕ್ಸೀನ್ ಗಳನ್ನು ಪೂರೈಸುವುದು ಸಂಸ್ಥೆಯ ಉದ್ಧೇಶ ಬಯೋಲಾಜಿಕಲ್ E ಸಂಸ್ಥೆ ಮುಖ್ಯಸ್ಥರು ತಿಳಿಸಿದ್ದಾರೆ.


ಇದನ್ನೂ ಓದಿ; ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...