Homeಮುಖಪುಟಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

ಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

- Advertisement -
- Advertisement -

ದೆಹಲಿ ಸರ್ಕಾರದ ಮನೆ ಬಾಗಿಲಿಗೆ ಪಡಿತರ ನೀಡುವ ಯೋಜನೆಗೆ ಕೇಂದ್ರ ಸರ್ಕಾರ ತಡೆ ನೀಡಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕೇಂದ್ರ ಸರ್ಕಾರ ಪಡಿತರ ಮಾಫಿಯಾದ ಪ್ರಭಾವದ ಅಡಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

“ದೆಹಲಿಯಲ್ಲಿ ‘ಡೋರ್‌ಸ್ಟೆಪ್ ಡೆಲಿವರಿ ಆಫ್ ರೇಷನ್’ ಯೋಜನೆ ಜಾರಿಗೆ ಬರುವ ಎರಡು ದಿನಗಳ ಮೊದಲೇ ಕೇಂದ್ರ ಸರ್ಕಾರ ಅದನ್ನು ನಿಲ್ಲಿಸಿದೆ. ಪಿಜ್ಜಾ, ಬರ್ಗರ್‌ಗಳು, ಸ್ಮಾರ್ಟ್‌ಫೋನ್‌ಗಳು ಮತ್ತು ಬಟ್ಟೆಗಳನ್ನು ಮನೆಗಳಿಗೆ ತಲುಪಿಸಬಹುದಾದರೆ, ಪಡಿತರವನ್ನು ಯಾಕೆ ಜನರ ಮನೆ ಬಾಗಿಲಿಗೆ ತಲುಪಿಸಲು ಆಗುವುದಿಲ್ಲ?” ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

“ಮೊದಲ ಬಾರಿಗೆ, ಪಡಿತರ ಮಾಫಿಯಾವನ್ನು ಪರೀಕ್ಷಿಸಲು ಸರ್ಕಾರ ಒಂದು ಹೆಜ್ಜೆ ಇಟ್ಟಿದೆ. ಪಡಿತರ ಮಾಫಿಯಾದವರು ಎಷ್ಟು ಪ್ರಬಲರಾಗಿದ್ದಾರೆಂದರೆ, ಈ ಯೋಜನೆ ಜಾರಿಗೆ ಬರುವ ಒಂದು ವಾರದ ಮುಂಚೆಯೇ ಅವರು ಯೋಜನೆಯನ್ನು ರದ್ದುಗೊಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಮನೆ ಬಾಗಿಲಿನ ಪಡಿತರ ವಿತರಣಾ ಯೋಜನೆಯಿಂದ ರಾಷ್ಟ್ರದ ರಾಜಧಾನಿಯ 72 ಲಕ್ಷ ಪಡಿತರ ಕಾರ್ಡುದಾರರಿಗೆ ಲಾಭವಾಗಬಹುದೆಂದು ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿ ಸರ್ಕಾರ ಈ ಯೋಜನೆಯನ್ನು ಮಾರ್ಚ್‌ನಲ್ಲಿ ರೂಪಿಸಿತ್ತು.

ಇದನ್ನೂ ಓದಿ: ಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

ಡಿಜಿಟಲ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಈ ಯೋಜನೆಯ ಅನುಷ್ಠಾನಕ್ಕೆ ದೆಹಲಿ ಸರ್ಕಾರ ಅನುಮತಿ ಪಡೆದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿರುವ ಹೇಳಿಕೆಯನ್ನು ತಿಳಿಸಿದ್ದಾರೆ. “ಯೋಜನೆ ಅನುಷ್ಠಾನಕ್ಕೆ ದೆಹಲಿ ಸರ್ಕಾರಕ್ಕೆ ಕೇಂದ್ರದ ಅನುಮೋದನೆ ಅಗತ್ಯವಿರಲಿಲ್ಲ, ಆದರೂ ಯಾವುದೇ ವಿವಾದ ಬರದಂತೆ ತಪ್ಪಿಸಲು ಐದು ಬಾರಿ ಅನುಮತಿ ಕೋರಿದ್ದೇವು” ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರವು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ, ದೆಹಲಿ ಮತ್ತು ಜಾರ್ಖಂಡ್ ಸರ್ಕಾರಗಳು, ರೈತರು ಮತ್ತು ಲಕ್ಷದ್ವೀಪದ ಜನರು ಸೇರಿದಂತೆ ಎಲ್ಲರೊಂದಿಗೆ ಯುದ್ಧಕ್ಕೆ ನಿಂತಿದೆ ಎಂದು  ಆರೋಪಿಸಿದ್ದಾರೆ.

“ಕೇಂದ್ರ ಸರ್ಕಾರ ಎಲ್ಲರ ವಿರುದ್ಧ ಹೋರಾಡುತ್ತಿದೆ ಎಂದು ಜನರು ಬೇಸರಗೊಂಡಿದ್ದಾರೆ. ನಾವು ಈ ರೀತಿ ಬಡಿದಾಡುತ್ತಿದ್ದರೆ, ಕೊರೊನಾ ಸೋಂಕನ್ನು ಹೇಗೆ ನಿಭಾಯಿಸುತ್ತೇವೆ..? ಪಡಿತರವು ಎಎಪಿ ಅಥವಾ ಬಿಜೆಪಿಗೆ ಸೇರಿಲ್ಲ. ಯೋಜನೆಯನ್ನು ಕಾರ್ಯಗತಗೊಳಿಸಲಿ, ಇದರ ಸಂಪೂರ್ಣ ಕ್ರೇಡಿಟ್ ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡುತ್ತೇನೆ. ದೆಹಲಿಯ 70 ಲಕ್ಷ ಬಡ ಜನರ ಪರವಾಗಿ ನಾನು ಕೈ ಮುಗಿದು ಈ ಯೋಜನೆಯನ್ನು ಜಾರಿಗೆ ತರಲು ವಿನಂತಿಸುತ್ತೇನೆ “ಎಂದು ಕೇಜ್ರಿವಾಲ್ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷವು ನೀಡಿದ ಪ್ರಮುಖ ಭರವಸೆಗಳಲ್ಲಿ ಒಂದಾದ ಈ ಯೋಜನೆಯನ್ನು ಜಾರಿಗೆ ತರಲು ದೆಹಲಿ ಸರ್ಕಾರವು, ಕಳೆದ ವರ್ಷ ಜುಲೈನಲ್ಲಿ ದೆಹಲಿಯ ಎಲ್ಲಾ ಕಾರ್ಡುದಾರರಿಗೆ ಪಡಿತರವನ್ನು ಮನೆಗೆ ತಲುಪಿಸಲು ಅನುಮತಿ ನೀಡಿತ್ತು.


ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತನ್ನ ವಿರೋಧಿಗಳು ಒಳ್ಳೆಯ ಕೆಲಸ ಮಾಡಿ ಜನಪ್ರಿಯರಾದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂಬುದನ್ನು ಮನಗಂಡಿರುವ ನಮ್ಮ ಪ್ರದಾನಿಯವರು; ತಮ್ಮ ರಾಜಕೀಯ ವಿರೋಧಿಗಳ ಜನಪ್ರಿಯ ಕಾರ್ಯಕ್ರಮಗಳನ್ನು ಈ ರೀತಿಯಲ್ಲಿ, ಸಂವಿಧಾನ ಬಾಹಿರವಾಗಿ ಹತ್ತಿಕ್ಕುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...