Homeಮುಖಪುಟದೆಹಲಿ: ಲಸಿಕಾ ಕೇಂದ್ರಗಳಾಗಲಿರುವ ಮತದಾನ ಕೇಂದ್ರಗಳು- ಹೊಸ ಯೋಜನೆ ಘೋಷಣೆ

ದೆಹಲಿ: ಲಸಿಕಾ ಕೇಂದ್ರಗಳಾಗಲಿರುವ ಮತದಾನ ಕೇಂದ್ರಗಳು- ಹೊಸ ಯೋಜನೆ ಘೋಷಣೆ

- Advertisement -
- Advertisement -

ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಪಡೆಯುವವರ ಸಂಖ್ಯೆ ಕುಸಿತವಾಗಿರುವ ಹಿನ್ನೆಲೆ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ತಮ್ಮ ಮತದಾನ ಕೇಂದ್ರಗಳಲ್ಲಿಯೇ ಲಸಿಕೆ ಹಾಕಲು ಮನೆ-ಮನೆಗೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.”

’ಜಹಾ ವೋಟ್, ವಹಾ ವ್ಯಾಕ್ಸಿನೇಷನ್’ ಎಂಬ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪ್ರಕಟಿಸಿದ ಕೇಜ್ರಿವಾಲ್, ’ಲಸಿಕೆಗಳ ಕೊರತೆಯಿಲ್ಲದಿದ್ದರೆ, 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ನಾಲ್ಕು ವಾರಗಳಲ್ಲಿ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ. ದೆಹಲಿಯಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟ 57 ಲಕ್ಷ ಜನರಿದ್ದು, 27 ಲಕ್ಷ ಜನರು ತಮ್ಮ ಮೊದಲ ಲಸಿಕೆ ಪಡೆದಿದ್ದಾರೆ.

’ಬೂತ್ ಮಟ್ಟದ ಅಧಿಕಾರಿಗಳು ತಮ್ಮ ವಾರ್ಡ್‌ಗಳಲ್ಲಿ ಪ್ರತಿ ಮನೆಗೆ ಹೋಗಿ ಸಮೀಕ್ಷೆ ನಡೆಸಿ, 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ತೆಗೆದುಕೊಳ್ಳಲು ದಿನಾಂಕ ಮತ್ತು ಸಮಯ ನೀಡಲಿದೆ. ದೆಹಲಿಯಲ್ಲಿ ಸುಮಾರು 280 ವಾರ್ಡ್‌ಗಳಿವೆ. ಪ್ರತಿ ವಾರ 70 ವಾರ್ಡ್‌ಗಳಲ್ಲಿ ವ್ಯಾಕ್ಸಿನೇಷನ್ ನಡೆಯಲಿದೆ. 70 ವಾರ್ಡ್‌ಗಳಲ್ಲಿ ಮಂಗಳವಾರದಿಂದ ಈ ಯೋಜನೆ ಜಾರಿಗೆ ಬರಲಿದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

“45 ವರ್ಷ ಮೇಲ್ಪಟ್ಟ ವಯಸ್ಸಿನವರು ಲಸಿಕೆ ಕೇಂದ್ರಗಳಲ್ಲಿ ಕೆಲವೇ ಜನರು ಹಾಜರಾಗುತ್ತಿದ್ದಾರೆ. ಆದ್ದರಿಂದ ಕೇಂದ್ರಗಳಲ್ಲಿ ಜನರಿಗಾಗಿ ಕಾಯುವ ಬದಲು ನಾವೇ ಅಲ್ಲಿಗೆ ಹೋಗಲು ನಿರ್ಧರಿಸಿದ್ದೇವೆ. ಮತದಾನ ಕೇಂದ್ರಗಳು ಎಲ್ಲಿವೆ ಎಂಬುದು ಎಲ್ಲರಿಗೂ ತಿಳಿದಿದೆ. ತಮ್ಮ ಮನೆಗಳಿಂದ ಹತ್ತಿರದಲ್ಲೇ ಇರುವುದರಿಂದ ಜನರು ಸುಲಭವಾಗಿ ಲಸಿಕೆ ಪಡೆಯಬಹುದು. ಜನರನ್ನು ತಮ್ಮ ಮನೆಗಳಿಂದ ಮತದಾನ ಕೇಂದ್ರಕ್ಕೆ ಕರೆದೊಯ್ಯಲು ಇ-ರಿಕ್ಷಾಗಳನ್ನು ಸಹ ಒದಗಿಸಲಾಗುವುದು” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಯಾರಾದರೂ ಲಸಿಕೆ ತೆಗೆದುಕೊಳ್ಳಲು ನಿರಾಕರಿಸಿದರೆ, ಬೂತ್ ಮಟ್ಟದ ಅಧಿಕಾರಿಗಳು ಮತ್ತು ನಾಗರಿಕ ಸ್ವಯಂಸೇವಕರು ಲಸಿಕೆ ತೆಗೆದುಕೊಳ್ಳಲು ಮನವೊಲಿಸಲು ಪ್ರಯತ್ನಿಸುತ್ತಾರೆ. ಈ ಬಗ್ಗೆ ಅಧಿಕಾರಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಗತ್ಯ ಪ್ರಮಾಣದಲ್ಲಿ ಲಸಿಕೆಗಳು ಲಭ್ಯವಾದಾಗ 18 ರಿಂದ 44 ವರ್ಷ ವಯೋಮಾನದವರಿಗೂ ಕೂಡ ಲಸಿಕೆ ನೀಡಲು ಇದೇ ಯೋಜನೆಯನ್ನು ಅನುಸರಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.


ಇದನ್ನೂ ಓದಿ: ಯಡಿಯೂರಪ್ಪ ಗಟ್ಟಿ ಮನುಷ್ಯ, ಸಿಎಂ ಹೇಳಿಕೆಯನ್ನು 2-3 ರೀತಿಯಲ್ಲಿ ವಿಶ್ಲೇಷಿಸಬಹುದು- ಡಿ.ಕೆ.ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...