Homeಪರಿಸರಅರಣ್ಯ ಅತಿಕ್ರಮಣದಾರರ ಜೊತೆ ಯಾವುದೇ ರಾಜಿ ಇಲ್ಲ: 10,000 ಕಟ್ಟಡಗಳ ತೆರವಿಗೆ ಆದೇಶಿಸಿದ ಸುಪ್ರೀಂ ಕೋರ್ಟ್‌

ಅರಣ್ಯ ಅತಿಕ್ರಮಣದಾರರ ಜೊತೆ ಯಾವುದೇ ರಾಜಿ ಇಲ್ಲ: 10,000 ಕಟ್ಟಡಗಳ ತೆರವಿಗೆ ಆದೇಶಿಸಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಸುಪ್ರೀಂ ಕೋರ್ಟ್‌ ಹರ್ಯಾಣದ ಅರಾವಳಿ ಭಾಗದಲ್ಲಿ ಅರಣ್ಯ ಭೂಮಿಯನ್ನು ಅತಿಕ್ರಮಿಸಿ ಕಟ್ಟಿದ 10,000 ಕಟ್ಟಡಗಳ ತೆರವಿಗೆ ಆದೇಶಿಸಿದೆ. ಸೋಮವಾರ ಜೂನ್‌ 7 ರಂದು ಪ್ರಕರಣದ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ ಅರಣ್ಯ ಅತಿಕ್ರಮಣದ ವಿಷಯದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ ಎಂದು ಹೇಳಿದೆ.

ಹರ್ಯಾಣದ ಲಕ್ಕದ್‌ಪುರ್‌-ಖೋರಿ ಗ್ರಾಮ ವ್ಯಾಪ್ತಿಯಲ್ಲಿ ಅರಾವಳಿ ಅರಣ್ಯ ಭಾಗವನ್ನು ಅತಿಕ್ರಮಿಸಿ ಸುಮಾರು 10,000 ನಿವಾಸದ ಕಟ್ಟಡಗಳನ್ನು ಅನೇಕರು ಕಟ್ಟಿಕೊಂಡಿದ್ದರು. ಅರಣ್ಯ ಅತಿಕ್ರಮಣದ ವಿಷಯದಿಂದ ಕೆಂಡಾಮಂಡಲವಾದ ಸುಪ್ರೀಂ ಕೋರ್ಟ್ ಸ್ಥಳೀಯ ಆಡಳಿತವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

2020 ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್‌ ಅರಣ್ಯ ಒತ್ತುವರಿಯನ್ನು ತೆರವುಗೊಳಿಸುವಂತೆ ಮಧ್ಯಂತರ ಆದೇಶ ನೀಡಿದೆ. ಆದರೆ ನಮ್ಮ ಆದೇಶಕ್ಕೆ ನೀವು ಕನಿಷ್ಠ ಮರ್ಯಾದೆಯನ್ನು ನೀಡಿಲ್ಲ. ಕಳೆದ ಒಂದೂವರೆ ವರ್ಷದಿಂದ ಸ್ಥಳೀಯ ಆಡಳಿತ ಏನು ಮಾಡುತ್ತಿದೆ ಎಂದು ಫರೀದಾ ಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌‌  ನಡೆಯನ್ನು ಸುಪ್ರೀಂ ಕೋರ್ಟ್‌ ತೀವ್ರವಾಗಿ ಖಂಡಿಸಿದೆ. ಜಸ್ಟಿಸ್ ಎ.ಎಮ್‌. ಖಾನ್ವಿಲ್‌ಕರ್‌ ಮತ್ತು ಜಸ್ಟಿಸ್ ದಿನೇಶ್‌ ಮಹೇಶ್ವರಿ ಅವರಿದ್ದ ಸುಪ್ರೀಂ ಕೋರ್ಟ್‌ ಪೀಠ ಕೂಡಲೆ ಒತ್ತುವರಿಯಾಗಿರುವ ಅರಣ್ಯವನ್ನು ತೆರವುಗೊಳಿಸಿ ಕೋರ್ಟ್‌ಗೆ ಮಾಹಿತಿ ನೀಡುವಂತೆ ಆದೇಶಿಸಿತು.

ಇದನ್ನೂ ಓದಿ : ಪರಿಸರ ಪೂರ್ವಾನುಮತಿ ಇಲ್ಲದೆ ಕೈಗಾರಿಕೆ ನಡೆಸುವಂತಿಲ್ಲ: ಹಸಿರು ನ್ಯಾಯಪೀಠ

ಕಟ್ಟಡಗಳ ತೆರವಿಗೆ ತಡೆ ಕೋರಿ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ ಕೋಲಿನ್‌ ಗೊನ್ಸಾಲ್ವೇಸ್‌ ಮನೆಗಳನ್ನು ಕಟ್ಟಿಕೊಂಡಿರುವವರು ಅತ್ಯಂತ ಬಡವರಿದ್ದಾರೆ. ಕೊರೋನಾ ಸಂದರ್ಭದಲ್ಲಿ ನ್ಯಾಯಾಲಯ ಬಡವರನ್ನು ಇನ್ನಷ್ಟು ಕಷ್ಟಕ್ಕೆ ದೂಡಬಾರದು. ಮನೆಗಳನ್ನು ಖಾಲಿ ಮಾಡಲು ನಿರ್ದಿಷ್ಟ ದಿನಾಂಕವನ್ನಾದರೂ ನೀಡಿ. ಜೊತೆಗೆ ಮನೆ ತೆರವು ಮಾಡಿದ ಕುಟುಂಬಗಳಿಗೆ  ಪುನರ್ವಸತಿ ಕಲ್ಪಿಸುವಂತೆ  ಹರ್ಯಾಣದ  ರಾಜ್ಯ ಸರ್ಕಾರಕ್ಕೆ ಆದೇಶವನ್ನು ನೀಡಿ ಎಂದು ಮನವಿ ಮಾಡಿದರು.

ಗೊನ್ಸಾಲ್ವೇಸ್‌ ಮನವಿಯನ್ನು ಮನ್ನಿಸದ ಸುಪ್ರೀಂ ಕೋರ್ಟ್‌ ಅರಣ್ಯ ಅತಿಕ್ರಮಣದ ವಿಚಾರದಲ್ಲಿ ಯಾವುದೇ ರಾಜಿ ಸಾದ್ಯವಿಲ್ಲ. ಪುನರ್ವಸತಿ ಕಲ್ಪಿಸುವುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ.  ನಾವು ಆದೇಶ ನೀಡಲು ಸಾಧ್ಯವಿಲ್ಲ. ಬಡವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವುದಕ್ಕೆ ನಾವು ಕೇವಲ ಕ್ಷಮೆಯನ್ನು ಮಾತ್ರ ಕೇಳಲು ಸಾಧ್ಯ ಎಂದು ಗೊನ್ಸಾಲ್ವೇಸ್‌ ಮನವಿಗೆ ಪ್ರತಿಕ್ರಿಯಿಸಿತು.

ಹಾಗೇ ಸುಪ್ರೀಂ ಕೋರ್ಟ್‌ ಯಾವುದೇ ಸಂಘರ್ಷವಿಲ್ಲದೇ ಶಾಂತಿಯುತವಾಗಿ ಅತಿಕ್ರಮಣದಾರರು ಅರಣ್ಯ ಭೂಮಿಯನ್ನು ತೆರವುಗೊಳಿಸಿದರೆ ಎಲ್ಲರಿಗೂ ಒಳ್ಳೆಯದು. ಸ್ಥಳೀಯ ಕಾರ್ಪೊರೇಶನ್‌ ಮೂಲಕ ಬಲವಂತವಾಗಿ ಮನೆ ತೆರವು ಮಾಡುವಂತ ಸನ್ನಿವೇಶ ಸೃಷ್ಟಿಸಬೇಡಿ ಎಂದು ಅರ್ಜಿದಾರರ ಪರ ವಕೀಲ ಗೊನ್ಸಾಲ್ವೇಸ್‌  ಅವರಿಗೆ ಸುಪ್ರೀಂ ಕೋರ್ಟ್‌ ಸೂಚಿಸಿತು.

6 ವಾರದೊಳಗೆ ಅತಿಕ್ರಮ ಕಟ್ಟಡಗಳನ್ನು ತೆರವುಗೊಳಿಸಿದ ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸುವಂತೆ ಹರ್ಯಾಣ ರಾಜ್ಯ ಅರಣ್ಯ ಇಲಾಖೆಯ ಕಾರ್ಯದರ್ಶಿಗೆ ಸೂಚಿಸಿದ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಜುಲೈ 27 ಕ್ಕೆ ಮುಂದೂಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒತ್ತು ವರದಿಯಾದ ನೆಲ,ಕಾಡು,ಗೋಮಾಳ ಮುಂತಾದವುಗಳನ್ನು ಹಲವು ಮಗ್ಗುಲಲ್ಲಿ ಒರೆಹಚ್ಚಿ ನೋಡಬೇಕಾಗಿದೆ.
    ಪಬ್ಲಿಕ್ ಸೊತ್ತಿನ ಒತ್ತುವರಿಯ ಒಂದೊಂದು ಕೇಸಿನ ಉದ್ದ ಅಗಲವನ್ನು ಆಳವನ್ನು ಸದರಿ ಸೊತ್ತಿನಲ್ಲಿ ಇಳೆಹುಟ್ಟಿನ ಸರಕನ್ನು ಬಳಸಿ ಸೊತ್ತಿನ ಬೆಲೆ ಏರಿಕೆಯಾಗಿರುವುದನ್ನು ಕಡೆಗಣಿಸಬಾರದು.
    ಆಳ್ವಿಕೆಗೆ ಸದರಿ ಒತ್ತುವರಿಯಾದ ಜಾಗದ ಬೆಲೆಯನ್ನು ಪಡೆಯಲು ತೆರವುಮಾಡುವುದನ್ನು ಬದಿಗಿಟ್ಟು ಇತರೆ ದಾರಿಯತ್ತ ನೋಡಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...