Homeಮುಖಪುಟಚುನಾವಣಾ ಆಯುಕ್ತರಾಗಿ ನಿವೃತ್ತ IAS ಅಧಿಕಾರಿ ಅನುಪ್‌ ಚಂದ್ರ ಪಾಂಡೆ ನೇಮಕ

ಚುನಾವಣಾ ಆಯುಕ್ತರಾಗಿ ನಿವೃತ್ತ IAS ಅಧಿಕಾರಿ ಅನುಪ್‌ ಚಂದ್ರ ಪಾಂಡೆ ನೇಮಕ

- Advertisement -
- Advertisement -

ಕೇಂದ್ರ ಸರ್ಕಾರ ಮಂಗಳವಾರ, ಜೂನ್‌ 8 ರಂದು  ಉತ್ತರ ಪ್ರದೇಶ ಮೂಲದ ನಿವೃತ್ತ IAS ಅಧಿಕಾರಿ ಅನುಪ್‌ ಚಂದ್ರ ಪಾಂಡೆ ಅವರನ್ನು ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಿದೆ.

ನಿವೃತ್ತ ಮುಕ್ತ ಚುನಾವಣಾ ಆಯುಕ್ತ ಸುನಿಲ್‌ ಅರೋರಾ ಅವರಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಆಯುಕ್ತರಾಗಿದ್ದ ಸುಶೀಲ್ ಚಂದ್ರ‌ ಅವರನ್ನು ನೇಮಕ ಮಾಡಲಾಗಿತ್ತು. ನಂತರ 3 ತಿಂಗಳ ಕಾಲ ಸುಶೀಲ್‌ ಚಂದ್ರ ಅವರಿಂದ ತೆರವಾದ ಚುನಾವಣಾ ಆಯುಕ್ತರ ಸ್ಥಾನಕ್ಕೆ ಯಾರನ್ನು ನೇಮಕ ಮಾಡಿರಲಿಲ್ಲ. ಈಗ ಅನುಪ್‌ ಚಂದ್ರ  ಪಾಂಡೆ ಚುನವಣಾ ಆಯುಕ್ತರಾಗಿ ಆ ಸ್ಥಾನವನ್ನು ತುಂಬಲಿದ್ದಾರೆ.

ಏಪ್ರಿಲ್‌ 12 ರಂದು ಸುನೀಲ್ ಅರೋರಾ ನಿವೃತ್ತಿಯ ನಂತರ 3 ತಿಂಗಳ ಕಾಲ ಚುನಾವಣಾ ಆಯೋಗದ 3 ಜನರ ಉನ್ನತ ಸಮಿತಿ ಅಪೂರ್ಣವಾಗಿತ್ತು.  ಉತ್ತರ ಪ್ರದೇಶ, ಪಂಜಾಬ್‌, ಗೋವಾ, ಮಣಿಪುರ ಮತ್ತು ಉತ್ತರ ಖಂಡ ರಾಜ್ಯಗಳ ವಿಧಾನಸಭೆಗಳಿಗೆ ಮುಂದಿನ ವರ್ಷ ಚುನಾವಣೆಗಳು ನಡೆಯಲಿದ್ದು ಹೊಸ ಚುನಾವಣಾ ಆಯುಕ್ತರ ಮೇಲೆ ಹೆಚ್ಚಿನ ಜವಾಬ್ದಾರಿಯಿದೆ.

ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್‌

1984 ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಅನುಪ್‌ ಚಂದ್ರ ಪಾಂಡೆ ಹಿಂದೆ ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. 2019 ರಲ್ಲಿ ಸೇವೆಯಿಂದ ನಿವೃತ್ತಿಯಾಗಿರುವ ಅವರು ಬಿಟೆಕ್‌(ಮೆಕಾನಿಕಲ್ ಇಂಜಿನಿಯರಿಂಗ್)‌, ಎಂಬಿಎ ಮತ್ತು ಡಾಕ್ಟರೇಟ್‌ ಪದವಿಗಳನ್ನು ಪಡೆದಿದ್ದಾರೆ. ಈ ಹಿಂದೆ ಉತ್ತರ ಪ್ರದೇಶದ ಕೈಗಾರಿಕಾ ಅಭಿವೃದ್ಧಿ ಮಂಡಳಿಯ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದರು.

2024 ರ ವರೆಗೆ ಅಂದರೆ 3 ವರ್ಷಗಳ ಕಾಲ ಅನುಪ್‌ ಚಂದ್ರ ಪಾಂಡೆಯವರ ಸೇವಾವಧಿಯಿದ್ದು, ಈ ಅವಧಿಯಲ್ಲಿ ಹಲವು ಮುಖ್ಯ ಚುನಾವಣೆಗಳು ಭಾರತದಲ್ಲಿ ನಡೆಯಲಿವೆ.


ಇದನ್ನೂ ಓದಿ: ಬಿಜೆಪಿಯಲ್ಲಿ ಪರ್ಯಾಯ ನಾಯಕರಿಲ್ಲ, ನಾಯಕತ್ವ ದಿವಾಳಿಯಾಗಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...

ಬಿಜೆಪಿ ಆಡಳಿತದಲ್ಲಿ 151 ಅಂಬೇಡ್ಕರ್ ಪ್ರತಿಮೆಗಳ ಧ್ವಂಸ: ಅಖಿಲೇಶ್ ಯಾದವ್ ಆರೋಪ

ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ 72 ಜಿಲ್ಲೆಗಳಲ್ಲಿ ಬಾಬಾಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ 151 ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ಆದರೆ ಈವರೆಗೆ ಕೇವಲ 14 ಮಂದಿಯನ್ನು ಮಾತ್ರ ಬಂಧಿಸಲಾಗಿದೆ ಎಂದು ಸಮಾಜವಾದಿ ಪಕ್ಷದ...

ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

"ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)...

ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್ 

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.21) ಆದೇಶಿಸಿದೆ. ಈ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮೂರು ತಿಂಗಳೊಳಗೆ ಅನುಪಾಲನಾ ವರದಿಯನ್ನು (compliance report)...

1,400 ಮುಸ್ಲಿಂ ಕುಟುಂಬಗಳ ಬದುಕು ಕಸಿದುಕೊಂಡ ಭೂಮಿಯಲ್ಲಿ ಅದಾನಿ ವಿದ್ಯುತ್ ಯೋಜನೆಗೆ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಅಡಿಪಾಯ

ಗುವಾಹಟಿ: ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,400 ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ತೆರವುಗೊಳಿಸಿ, ಅವರ ಮನೆಗಳನ್ನು ನೆಲಸಮಗೊಳಿಸಿದ ಪ್ರದೇಶದಲ್ಲೇ ಅದಾನಿ ಪವರ್ ಲಿಮಿಟೆಡ್‌ನ 3,200 ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಯೋಜನೆಗೆ...

ಮಧುಗಿರಿ: ಗಣೇಶೋತ್ಸವದಲ್ಲಿ ಕುಣಿದಿದ್ದಕ್ಕೆ 17 ವರ್ಷದ ದಲಿತ ಬಾಲಕನ ಕೊಲೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ ದಲಿತ ಸಮುದಾಯದ17 ವರ್ಷದ ಬಾಲಕ ಸಿಂಹಾದ್ರಿಯನ್ನು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಘಟನೆಯ...

DELHI SIR : ಕರಡು ಪಟ್ಟಿಯಲ್ಲಿ 2024ರಲ್ಲಿ ನಿಧನರಾದ ಅರ್ಥಶಾಸ್ತ್ರಜ್ಞ ಬಿಬೇಕ್ ದೆಬ್ರಾಯ್ ಹೆಸರು!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಬೆಳಕಿಗೆ ಬರುತ್ತಿವೆ. ಇತ್ತೀಚಿನ ವರದಿಗಳ ಪ್ರಕಾರ, 2024ರಲ್ಲಿ ನಿಧನರಾದ ಪದ್ಮ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಬಿಬೆಕ್ ದೆಬ್ರಾಯ್ ಅವರ...

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...