Homeಅಂಕಣಗಳುಬಹುಜನ ಭಾರತ; ಬಸ್ತರ್ - ಹುಟ್ಟಿದ ನೆಲದಲ್ಲೇ ತಬ್ಬಲಿಗಳಾಗಿರುವ ಆದಿವಾಸಿಗಳು!

ಬಹುಜನ ಭಾರತ; ಬಸ್ತರ್ – ಹುಟ್ಟಿದ ನೆಲದಲ್ಲೇ ತಬ್ಬಲಿಗಳಾಗಿರುವ ಆದಿವಾಸಿಗಳು!

- Advertisement -
- Advertisement -

ಆದಿವಾಸಿ ನೆಲೆಯ ಅಡವಿ-ಗುಡ್ಡಗಳಡಿಯ ಖನಿಜ ಸಂಪತ್ತಿಗಾಗಿ ಜೊಲ್ಲು ಸುರಿಸುವ ಕಾರ್ಪೊರೇಟುಗಳಿವೆ. ಪ್ರಭುತ್ವಗಳು ಅವುಗಳಿಗೆ ನಡೆಮುಡಿ ಹಾಸುತ್ತಿವೆ.

ಭ್ರಮೆಯಲ್ಲಿ ಬದುಕುವ ಬಹುತೇಕ ಭಾರತವು ಬಸ್ತರ್ ಎಂಬ ಸೀಮೆಯ ಹೆಸರನ್ನು ಕೇಳಿರುವುದು ಅನುಮಾನ. ಮಧ್ಯಭಾರತದ ಕಾಡು ಕಣಿವೆ ಗುಡ್ಡಗಳಲ್ಲಿ ಹಲವು ಆದಿವಾಸಿ ನೆಲೆಗಳು ಹರಡಿ ಹಬ್ಬಿವೆ.

ಈ ಸೀಮೆಗಳ ಹೆಸರಾಂತ ತವರು ಛತ್ತೀಸಗಢದ ಬಸ್ತರ್. ಅಲ್ಲಿನ ಸುಕ್ಮಾ ಜಿಲ್ಲೆಯಲ್ಲಿ ಸಿಲ್ಗೆರ್ ಎಂಬುದೊಂದು ಗ್ರಾಮ. ತಿಂಗಳೊಪ್ಪತ್ತಿನಿಂದ ಅಲ್ಲಿನ ಆದಿವಾಸಿಗಳ ಬದುಕು ಸರ್ಕಾರಿ ದಮನದ ಬೆಂಕಿಯಲ್ಲಿ ಬೇಯತೊಡಗಿದೆ.

ರಾಜ್ಯ ಸರ್ಕಾರ ರಾತ್ರೋರಾತ್ರಿ ತಮ್ಮ ನೆಲದಲ್ಲಿ ಸುರಕ್ಷಾಬಲದ ಶಿಬಿರವೊಂದನ್ನು ಎಬ್ಬಿಸಿರುವ ಬೆಳವಣಿಗೆ ಈ ಬಡಪಾಯಿಗಳ ಬದುಕುಗಳನ್ನು ಬುಡಮೇಲು ಮಾಡಿದೆ. ತಿಂಗಳೊಪ್ಪತ್ತಿನಿಂದ ಸಾವಿರಾರು ಆದಿವಾಸಿಗಳು ಸಂಘರ್ಷಕ್ಕೆ ಇಳಿದಿದ್ದಾರೆ. ಪ್ರತಿಭಟನೆಯಲ್ಲಿ ಹೆಣ್ಣುಮಕ್ಕಳು, ಗಂಡಸರು, ವೃದ್ಧರು, ಬಾಲರೆಲ್ಲ ಸೇರಿದ್ದಾರೆ.

ಕಳೆದ ಮೇ 17ರಂದು ಆಂದೋಲನನಿರತ ಆದಿವಾಸಿಗಳ ಮೇಲೆ ಸುರಕ್ಷಾಬಲ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಅಸುನೀಗಿದ್ದು 18 ಮಂದಿ ಗಾಯಗೊಂಡಿದ್ದಾರೆ. ಗೋಲಿಬಾರಿನಿಂದ ಉಂಟಾದ ನೂಕುನುಗ್ಗಲಿಗೆ ಸಿಕ್ಕಿ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡ ಗರ್ಭಿಣಿ ಪುನೆಮ್ ಸುಕ್ಲಿ ಮೇ 23ರಂದು ಅಸುನೀಗಿದಳು. ಈ ನಾಲ್ವರು ಹುತಾತ್ಮರಿಗೆ ಸಿಲ್ಗೇರ್ ಶಿಬಿರದ ಎದುರಿನಲ್ಲಿ ಸ್ಮಾರಕಗಳನ್ನು ನಿರ್ಮಿಸಿದ್ದಾರೆ ಆದಿವಾಸಿಗಳು.

ಮೇ 17ರಿಂದ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಆದಿವಾಸಿಗಳು ಮುಖಾಮುಖಿಯಾಗಿದ್ದಾರೆ. ಒಂದೆಡೆ ಅತ್ಯಾಧುನಿಕ ಶಸ್ತ್ರಾಸ್ತ್ರ ಹಿಡಿದ ಮೀಸಲು ಪೊಲೀಸರು. ಮತ್ತೊಂದೆಡೆ ಧರಣಿ ಪ್ರದರ್ಶನ ನಡೆಸಿರುವ ಸಾವಿರಾರು ಆದಿವಾಸಿಗಳು.

ಸರ್ಕಾರ ಆದಿವಾಸಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಮೇ 12ರಂದು ರಾತ್ರೋರಾತ್ರಿ ಈ ಶಿಬಿರವನ್ನು ಎಬ್ಬಿಸಿ ನಿಲ್ಲಿಸಿದೆ. ಮರುದಿನ ಮಧ್ಯಾಹ್ನದ ವೇಳೆಗೆ ಈ ಸುದ್ದಿ ಸಿಲ್ಗೇರ್ ಸುತ್ತಮುತ್ತ ಹರಡಿದೆ. ಗ್ರಾಮೀಣರ ಸಮೂಹವೊಂದು ಅಧಿಕಾರಿಗಳೊಂದಿಗೆ ಮಾತುಕತೆಗೆ ಬಂದಿದ್ದಾರೆ. ಕೆಲ ಹೊತ್ತು ಚರ್ಚೆಯ ನಂತರ ಅವರನ್ನು ಗದರಿಸಿ ಓಡಿಸಲಾಗಿದೆ. ಸ್ವಾಭಾವಿಕವಾಗಿ ಆದಿವಾಸಿಗಳು ಸಿಟ್ಟಿಗೆದ್ದಿದ್ದಾರೆ. ಹಿಂದೆ ಸರಿಯಲು ಸಿದ್ಧರಿಲ್ಲ. ಸುತ್ತಮುತ್ತಲ ಹಲವಾರು ಪಂಚಾಯತಿಗಳ ಸಾವಿರಾರು ಮಂದಿ ಘಟನಾ ಸ್ಥಳದ ಬಳಿ ಸೇರಿದ್ದಾರೆ. ಈ ಜಮಾವಣೆಯ ಮುಂಚೂಣಿಯಲ್ಲಿ ನಿಂತಿರುವಾತ ಒಬ್ಬ ವೃದ್ಧ. ಆತನ ಹೆಸರು ಲಖಮಾ.

ಪೊಲೀಸ್ ಶಿಬಿರವನ್ನು ಹಿಂತೆಗೆದುಕೊಳ್ಳುವ ತನಕ ಪ್ರತಿಭಟನೆ ಕರಗುವುದಿಲ್ಲ ಎಂಬುದಾಗಿ ಆತ ಘೋಷಿಸಿದ್ದಾನೆ. ಸುರಕ್ಷಾ ಪಡೆಗಳ ಶಿಬಿರಗಳನ್ನು ಆದಿವಾಸಿಗಳು ವಿರೋಧಿಸಬೇಕಾದರೂ ಯಾಕೆ?

ಲಖಮಾ ನೀಡುವ ಉತ್ತರ ಹೀಗಿದೆ:

ಶಿಬಿರವೊಂದು ಎದ್ದಿತೆಂದರೆ ಪೊಲೀಸರು ಸುತ್ತಮುತ್ತಲ ಅಡವಿಯಲ್ಲಿ ಅಡ್ಡಾಡುವ ಆದಿವಾಸಿಗಳನ್ನು ಹಿಡಿದು ಬಡಿದು ಹಿಂಸಿಸುತ್ತಾರೆ. ಹಿಡಿದೊಯ್ದು ಜೈಲಿಗೆ ನೂಕುತ್ತಾರೆ. ಅಡವಿಯೇ ಆದಿವಾಸಿಗಳ ಅನ್ನ-ಉಸಿರು. ಉರುವಲು, ತೆಂದು ಎಲೆ (ಬೀಡಿ ಕಟ್ಟಲು ಬಳಸುವ ಎಲೆ) ತರಲು ಅಡವಿಗೆ ಹೋಗುತ್ತೇವೆ. ಕೆಲವೊಮ್ಮೆ ಶಿಕಾರಿಗಾಗಿ ಕೈಯಲ್ಲಿ ಬಿಲ್ಲು ಬಾಣ ಹಿಡಿದಿರುತ್ತೇವೆ. ಈ ಕಾರಣಕ್ಕಾಗಿಯೂ ನಮ್ಮನ್ನು ಗುಂಡುಹಾರಿಸಿ ಕೊಲ್ಲಲಾಗುತ್ತದೆ. ಈಗಷ್ಟೇ ಈ ಶಿಬಿರವನ್ನು ಎಬ್ಬಿಸಲಾಗಿದೆ. ವಿರೋಧ ಮಾಡಿದ ಕಾರಣಕ್ಕಾಗಿ ನಮ್ಮನ್ನು ಲಾಠಿಗಳಿಂದ ಬಡಿಯಲಾಗುತ್ತಿದೆ. 17ರಂದು ನಮ್ಮ ಮೇಲೆ ಗಂಡು ಹಾರಿಸಲಾಯಿತು. ನಮ್ಮ ಮೂವರು ಬಂಧುಗಳು ಬಲಿಯಾಗಿದ್ದಾರೆ. ನಮ್ಮ ನಡುವೆ ಮಾವೋವಾದಿಗಳಿದ್ದಾರೆ ಎನ್ನುತ್ತಾರೆ ಪೊಲೀಸರು. ಹಸಿ ಹಸಿ ಸುಳ್ಳು ಮಾತಿದು. ಈ ಆಂದೋಲನದಲ್ಲಿ ಗ್ರಾಮೀಣ ಆದಿವಾಸಿಗಳ ವಿನಾ ಬೇರೆ ಯಾರೊಬ್ಬರೂ ಇಲ್ಲ.

ಆಂದೋಲನಿರತ ಯುವತಿ ಸರಸಿತಾ ಹೇಳುವ ಪ್ರಕಾರ ಗುಂಡು ತಗುಲಿ ಸತ್ತ ಯುವಕರ ಪೈಕಿ ಒಬ್ಬಾತ ತನ್ನ ಗ್ರಾಮ ತಿಮಾಪುರಮ್‌ಗೆ ಸೇರಿದವನು. ಶಿಬಿರಗಳ ಯೋಧರು ಆದಿವಾಸಿ ಹೆಣ್ಣುಮಕ್ಕಳೊಂದಿಗೆ ಅಶ್ಲೀಲವಾಗಿ ವ್ಯವಹರಿಸುತ್ತಾರೆ. ಇಲ್ಲಿ ಶಿಬಿರ ಎದ್ದಿತೆಂದರೆ ಪುನಃ ಅದೇ ಗೋಳು. ಹೀಗಾಗಿ ನಾವು ವಿರೋಧಿಸುತ್ತಿದ್ದೇವೆ ಎನ್ನುವ. ಆದಿವಾಸಿಗಳ ಹಕ್ಕುಗಳ ಹೋರಾಟಗಾರ್ತಿ ಸೋನಿ ಸೋರಿ ಬಸ್ತರ್ ಪೊಲೀಸರ ದೌರ್ಜನ್ಯವನ್ನು ಖಂಡಿಸಿದ್ದಾರೆ. ಪೊಲೀಸರದೇ ತಪ್ಪು. ಈ ಕಾರಣದಿಂದಾಗಿಯೇ ಘಟನಾ ಸ್ಥಳವನ್ನು ತಾವು ಸೇರಿದಂತೆ ಯಾವುದೇ ಹೋರಾಟಗಾರರು ತಲುಪದಂತೆ ನಿರ್ಬಂಧ ಹೇರಲಾಗಿದೆ ಎಂದು ಆರೋಪಿಸಿದ್ದಾರೆ.

ಪಾಲಾಗುಡಾದಿಂದ ಬಂದಿರುವ ಯುವಕ ಐತೂನ ಪ್ರಕಾರ- ನಮಗೆ ರಸ್ತೆ ಬೇಕು, ಆದರೆ ಶಿಬಿರ ಬೇಡ. ನಮ್ಮ ಹಳ್ಳಿಗಳಲ್ಲಿ ವಿಕಾಸ ಬೇಕು, ಆದರೆ ಸರ್ಕಾರ ಹೇರುವ ಮಾದರಿಯ ವಿಕಾಸ ಅಲ್ಲ. ಅಂಗನವಾಡಿ, ಶಾಲೆ, ಆಸ್ಪತ್ರೆ, ನ್ಯಾಯಬೆಲೆ ದಿನಸಿ ಅಂಗಡಿ, ರಸ್ತೆ ಬೇಕು. ಇಷ್ಟು ಭಾರೀ ಅಗಲದ ರಸ್ತೆ ಬೇಕಿಲ್ಲ. ರಸ್ತೆ ಕೆಲಸವನ್ನು ಆದಿವಾಸಿಗಳಿಗೇ ಕೊಡಲಿ. ನಮ್ಮ ಜರೂರತ್ತಿಗೆ ತಕ್ಕಂತೆ ರಸ್ತೆಗಳನ್ನು ನಾವೇ ನಿರ್ಮಿಸಿಕೊಳ್ಳುತ್ತೇವೆ. ರಸ್ತೆಯೂ ಆಗುತ್ತದೆ, ನಮ್ಮ ಯುವಕರಿಗೆ ಉದ್ಯೋಗವೂ ಸಿಗುತ್ತದೆ.

ಬಸ್ತರ್ ಸೀಮೆಯ ನಾನಾ ಭಾಗಗಳಲ್ಲಿ ಪೊಲೀಸ್ ಶಿಬಿರಗಳನ್ನು ಎಬ್ಬಿಸುವ ಕುರಿತು ಆದಿವಾಸಿಗಳ ವಿರೋಧ ಹೊಸದೇನಲ್ಲ. ಪೊಲೀಸರು ಈ ವಿರೋಧಗಳಿಗೆ ನಕ್ಸಲೀಯ ಪ್ರಾಯೋಜಿತ ಎಂಬ ಹಣೆಪಟ್ಟಿ ಹಚ್ಚಿದ್ದಾರೆ. ಸಿಲ್ಗೇರ್‌ನ ಈ ಆಂದೋಲನವನ್ನೂ ಮಾವೋವಾದಿಗಳ ಪ್ರಚಾರ ಎಂಬುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಕರೆದಿದ್ದಾರೆ.

ಸಿಲ್ಗೇರ್ ಬಳಿ ಪೊಲೀಸ್ ಶಿಬಿರ ನೆಲೆಯೂರಿತೆಂದರೆ ತಮ್ಮ ಮೇಲೆ ಅತ್ಯಾಚಾರ ನಿಶ್ಚಿತ ಎಂಬುದು ಆದಿವಾಸಿಗಳ ಅಳಲು. ಅವರು ಈ ಹಿಂದೆ ಅನುಭವಿಸಿರುವ ಕಷ್ಟನಷ್ಟ ಹಿಂಸೆಗಳೇ ಈ ಅಳಲಿಗೆ ಆಧಾರ.

ಮೇ 17ರಂದು ಪೊಲೀಸರ ಗೋಲಿಬಾರಿನಲ್ಲಿ ಅಸುನೀಗಿದ ಮೂವರು ಆದಿವಾಸಿ ಯುವಕರು ಮಾವೋವಾದಿಗಳು ಎಂಬುದು ಪೊಲೀಸರ ಹೇಳಿಕೆ. ಆದರೆ ಆದಿವಾಸಿಗಳು ಮತ್ತು ಮಾನವ ಹಕ್ಕು ಹೋರಾಟಗಾರರ ಪ್ರಕಾರ ಈ ಮೂವರು ಯುವಕರಿಗೂ ಮಾವೋವಾದಿಗಳಿಗೂ ದೂರ ದೂರದ ಸಂಬಂಧವೂ ಇರಲಿಲ್ಲ. ಪೊಲೀಸರಿಂದ ಬಂದೂಕು ಮತ್ತು ವೈರ್‌ಲೆಸ್ ಉಪಕರಣ ಕಿತ್ತುಕೊಳ್ಳುವ ಪ್ರಯತ್ನದ ಆರೋಪದ ಮೇರೆಗೆ ಎಂಟು ಮಂದಿ ಆದಿವಾಸಿಗಳನ್ನು ಬಂಧಿಸಲಾಗಿದೆ.

ನಿರಾಯುಧ ಆಂದೋಲನನಿರತರ ಮೇಲೆ ಗುಂಡು ಹಾರಿಸುವ ಅಗತ್ಯವಾದರೂ ಏನಿತ್ತು? ಆಂದೋಲನ ನಿರತ ಆದಿವಾಸಿಗಳ ನಡುವೆ ಅಡಗಿಕೊಂಡು ಮಾವೋವಾದಿಗಳು ಪೊಲೀಸರತ್ತ ಗುಂಡು ಹಾರಿಸಿದ್ದಾರೆ ಎಂದೂ ಪೊಲೀಸರು ಆರೋಪಿಸಿದ್ದಾರೆ. ಆದರೆ ಈ ಸಂಬಂಧದ ವಿಡಿಯೋ ಹೊರಬಿದ್ದಿದ್ದು, ಪೊಲೀಸರ ಆರೋಪ ನಿರಾಧಾರವೆಂದು ನಿಚ್ಚಳವಾಗಿದೆ. ಒಂದು ವೇಳೆ ಆದಿವಾಸಿಗಳು ಮಾವೋವಾದಿಗಳ ಒತ್ತಡಕ್ಕೆ ಒಳಗಾಗಿ ಆಂದೋಲನ ನಡೆಸುತ್ತಿದ್ದಾರೆಂದು ವಾದಕ್ಕಾಗಿ ಒಪ್ಪಿಕೊಂಡರೂ, ನಿರಾಯುಧ ಆದಿವಾಸಿಗಳನ್ನು ಪೊಲೀಸರು ರಕ್ಷಿಸಬೇಕೇ ವಿನಾ ಗುಂಡು ಹೊಡೆದು ಕೊಲ್ಲುವುದು ಯಾವ ನ್ಯಾಯ ಎಂಬ ಪ್ರಶ್ನೆಗಳೆದ್ದಿವೆ.

ಪ್ರತಿಪಕ್ಷದಲ್ಲಿದ್ದಾಗ ಆದಿವಾಸಿಗಳ ಹಿತದ ಪರವಾಗಿ ಮಾತನಾಡುತ್ತಿದ್ದ ಕಾಂಗ್ರೆಸ್ ಪಕ್ಷ ಈಗ ಆಡಳಿತ ನಡೆಸಿದೆ. ಕಾಂಗ್ರೆಸ್ ಪಕ್ಷದ ಎರಡೆಳೆ ನಾಲಗೆಯ ಕುರಿತು ಆದಿವಾಸಿಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಅವರು ಆಂದೋಲನದಿಂದ ಹಿಂದೆ ಸರಿಯುವ ಸೂಚನೆಗಳಿಲ್ಲ.

ಆದಿವಾಸಿಗಳ ಮೇಲೆ ನಡೆಯುವ ದಾಳಿಗಳ ಹಿಂದೆ ಅವರು ವಾಸಿಸುವ ಅಡವಿಗಳಲ್ಲಿ ಗುಡ್ಡಗಳಲ್ಲಿ ಅಡಗಿರುವ ಖನಿಜ ಸಂಪತ್ತಿಗಾಗಿ ಜೊಲ್ಲು ಸುರಿಸುವ ಕಾರ್ಪೊರೇಟುಗಳಿವೆ. ಅವುಗಳಿಗೆ ನಡೆಮುಡಿ ಹಾಸುವ ಪ್ರಭುತ್ವಗಳಿವೆ.

ತಮ್ಮ ನೆಲದಲ್ಲೇ ತಬ್ಬಲಿಗಳಾಗಿ ಬದುಕಿಯೂ ಸತ್ತಂತಾಗಿರುವ, ಸತ್ತು ಬದುಕುತ್ತಿರುವ ಆದಿವಾಸಿಗಳಿಗಾಗಿ ತಾಯಿ ಭಾರತಿಯ ಕಣ್ಣೀರು ಇಂಗಿ ಹೋಗಿದೆ. ಆದಿವಾಸಿಗಳ ಪಾಲಿಗೆ ಆಕೆ ಕಿವುಡಿಯೂ ಕುರುಡಿಯೂ ಮೂಕಿಯೂ ಆಗಿ ಹೋಗಿರುವುದು ಬಹುದೊಡ್ಡ ದುರಂತ.


ಇದನ್ನೂ ಓದಿ: ಬಹುಜನ ಭಾರತ: ತುಕ್ಕು ತಗುಲಿತೇ ಉಕ್ಕಿನ ರಕ್ಷಾ ಕವಚಕ್ಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...