Homeಮುಖಪುಟಟಿಎಂಸಿ ಮುಖಂಡರ ಭೇಟಿ - ಬಂಗಾಳದ ಬಿಜೆಪಿ ನಾಯಕ ರಾಜೀಬ್‌ ಬ್ಯಾನರ್ಜಿ ಮತ್ತೆ ಟಿಎಂಸಿಗೆ?

ಟಿಎಂಸಿ ಮುಖಂಡರ ಭೇಟಿ – ಬಂಗಾಳದ ಬಿಜೆಪಿ ನಾಯಕ ರಾಜೀಬ್‌ ಬ್ಯಾನರ್ಜಿ ಮತ್ತೆ ಟಿಎಂಸಿಗೆ?

ದಿನದ ಹಿಂದೆಯಷ್ಟೇ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಟಿಎಂಸಿ ಸೇರಿದ್ದರು

- Advertisement -
- Advertisement -

2017 ರಲ್ಲಿ ತೃಣಮೂಲ ಪಕ್ಷ ತೊರೆದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್‌ ರಾಯ್ ಮತ್ತೆ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಇದಾಗಿ ಒಂದು ದಿನದ ನಂತರ ಪಶ್ಚಿಮ ಬಂಗಾಳ ಬಿಜೆಪಿ ಮತ್ತೆ ಚಿಂತಿತವಾಗಿದೆ. ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಬಿಜೆಪಿಗೆ ಸೇರಿದ್ದ ಪಶ್ಚಿಮ ಬಂಗಾಳದ ಮಾಜಿ ಸಚಿವ ರಾಜೀಬ್ ಬ್ಯಾನರ್ಜಿ, ಟಿಎಂಸಿ ನಾಯಕ ಕುನಾಲ್ ಘೋಷ್ ಅವರನ್ನು ಶನಿವಾರ ಭೇಟಿಯಾಗಿದ್ದಾರೆ. ಈ ಭೇಟಿಯ ಮೂಲಕ ತಮ್ಮ ಹಳೆಯ ಪಕ್ಷಕ್ಕೆ ಮರಳುವ ಊಹಾಪೋಹಗಳಿಗೆ ಅವರು ಮತ್ತಷ್ಟು ಪುಷ್ಠಿ ನೀಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜೀಬ್ ಬ್ಯಾನರ್ಜಿ ಅವರು ಡೊಮ್ಜೂರ್‌ನಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದರು. ಶನಿವಾರ ರಾಜ್ಯ ಟಿಎಂಸಿ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಅವರ ನಿವಾಸಕ್ಕೆ ತೆರಳಿದ ರಾಜೀಬ್‌, ಅಲ್ಲಿ ಸುದೀರ್ಘ ಮಾತುಕರೆ ನಡೆಸಿದ್ದಾರೆ. ಈ ಮಾತುಕತೆಯನ್ನು ಇಬ್ಬರೂ ನಾಯಕರೂ “ಸೌಜನ್ಯ ಮಾತು” ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ: ಮುಕುಲ್ ರಾಯ್ ನಿರ್ಗಮನ: ಬಂಗಾಳ ಬಿಜೆಪಿಯಲ್ಲಿ ಆಂತರೀಕ ಕಲಹ ಆರಂಭ

“ದಯವಿಟ್ಟು ಈ ಭೇಟಿಯನ್ನು ಬೇರೆ ಯಾವುದೆ ದೃಷ್ಠಿಯಿಂದ ನೋಡಬೇಡಿ. ಕುನಾಲ್‌ ಅವರ ಮನೆಯ ಪಕ್ಕದಲ್ಲಿನ ನನ್ನ ಸಂಬಂಧಿಕರೊಬ್ಬರನ್ನು ನೋಡಲು ನಾನು ಬಂದಿದ್ದೆ. ಇದು ಸೌಜನ್ಯದ ಭೇಟಿಯೆ ಹೊರತು ಬೇರೇನೂ ಅಲ್ಲ. ನಮ್ಮ ನಡುವೆ ಯಾವುದೇ ರಾಜಕೀಯ ಮಾತುಕತೆ ನಡೆದಿಲ್ಲ” ಎಂದು ಕುನಾಲ್ ಘೋಷ್ ಮನೆಯಿಂದ ಹೊರಬರುತ್ತಿರುವಾಗ ರಾಜೀಬ್‌ ಬ್ಯಾನರ್ಜಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕುನಾಲ್‌ ಘೋಷ್ ಕೂಡ ಇದೇ ರೀತಿಯ ಅಭಿಪ್ರಾಯಗಳನ್ನು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಗೆ ಕಾಲಿಟ್ಟ ಅನೇಕ ಟಿಎಂಸಿ ನಾಯಕರು ಮಾತೃ ಪಕ್ಷಕ್ಕೆ ಮರಳುವ ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂಬ ಊಹಾಪೋಹಗಳು ಈಗಾಗಲೆ ಹರಿದಾಡುತ್ತಿವೆ.

ಮುಕುಲ್‌ ರಾಯ್ ಟಿಎಂಸಿಗೆ ಮರಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ಮುಕುಲ್ ಅವರೊಂದಿಗೆ ಟಿಎಂಸಿ ತೊರೆದವರನ್ನು ನಾವು ಪರಿಗಣಿಸುತ್ತೇವೆ. ಅವರು ಮತ್ತೆ ಪಕ್ಷಕ್ಕೆ ಮರಳಲಿ ಎಂದು ಬಯಸುತ್ತೇವೆ. ಆದರೆ, ಏಪ್ರಿಲ್-ಮೇ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿಗೆ ಸೇರಲು ತೆರಳಿದ್ದ ಟಿಎಂಸಿ ರಾಜಕಾರಣಿಗಳು ಮತ್ತು ಕಾರ್ಯಕರ್ತರನ್ನು ಪಕ್ಷಕ್ಕೆ ತೆಗೆದುಕೊಳ್ಳಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ: ಕೋವಿಡ್ ನಿರ್ವಹಣೆ ಕುರಿತು ಮೋದಿ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಗಾಂಧಿ

“ಪಕ್ಷದ ತತ್ವಗಳ (ಬಿಜೆಪಿ) ಬಗ್ಗೆ ನನಗೆ ಖಂಡಿತವಾಗಿಯೂ ತಕರಾರು ಇದೆ. ಇದನ್ನು ನನ್ನ ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ. ಆದರೆ ಕುನಾಲ್‌ ಅವರೊಂದಿಗಿನ ಇಂದಿನ ಸಭೆಗೆ ಅದಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ರಾಜೀಬ್‌ ಹೇಳಿದ್ದಾರೆ.

ಈ ವಾರದ ಆರಂಭದಲ್ಲಿ ರಾಜೀಬ್ ಬ್ಯಾನರ್ಜಿ ಸಾಮಾಜಿಕ ಜಾಲತಾಣದಲ್ಲಿ, “ಭಾರಿ ಜನಾದೇಶದೊಂದಿಗೆ ಚುನಾಯಿತವಾದ ಸರ್ಕಾರದ ವಿರುದ್ಧ ರಾಷ್ಟ್ರಪತಿ ಆಡಳಿತ ಹೇರುವ ಬೆದರಿಕೆಗಳನ್ನು ಹಾಕಬಾರದು” ಎಂದು ಬಿಜೆಪಿಯ ಸದಸ್ಯರಿಗೆ ಎಚ್ಚರಿಕೆ ನೀಡಿದ್ದರು.

ಕುನಾಲ್‌‌ ಘೋಷ್ ಅವರ ನಿವಾಸಕ್ಕೆ ರಾಜೀಬ್‌ ಬ್ಯಾನರ್ಜಿ‌ ಪ್ರಯಾಣಿಸಿದ ವಾಹನದಲ್ಲಿ ಟಿಎಂಸಿಯ ಹಲವಾರು ಸ್ಟಿಕ್ಕರ್‌ಗಳು ಮತ್ತು ಶಾಲು ಇದ್ದವು ಎಂದು ವರದಿಯಾಗಿದೆ.

ರಾಜೀಬ್‌ ಬ್ಯಾನರ್ಜಿ 2011 ಮತ್ತು 2016 ರಲ್ಲಿ ಟಿಎಂಸಿ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಡಿಪೆಂಡು ಬಿಸ್ವಾಸ್ ಮತ್ತು ಸೋನಾಲಿ ಗುಹಾ ಸೇರಿದಂತೆ ಹಲವಾರು ಟಿಎಂಸಿಯ ಮಾಜಿ ಶಾಸಕರು ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದ ನಿರ್ಧಾರಕ್ಕೆ ವಿಷಾದಿಸುತ್ತಾ ಪತ್ರಗಳನ್ನು ಕಳುಹಿಸಿದ್ದು, ಮತ್ತೆ ಟಿಎಂಸಿಗೆ ಸೇರಲು ಪ್ರಯತ್ನಿಸಿದ್ದಾರೆ.

ಒಂದು ಕಾಲದಲ್ಲಿ ಮಮತಾ ಬ್ಯಾನರ್ಜಿಗೆ ಆಪ್ತರಾಗಿದ್ದ ಸೋನಾಲಿ ಗುಹಾ, ಕ್ಯಾಮರಾ ಮುಂದೆ ಮುಖ್ಯಮಂತ್ರಿಯ ಕ್ಷಮೆ ಕೋರಿ ಮನವೊಲಿಸಿದ್ದಾರೆ.

ದಕ್ಷಿಣ 24 ಪರಗಣ ಜಿಲ್ಲೆಯ ಸತ್ಗಾಚಿಯಾದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸೋನಾಲಿ ಗುಹಾ ಅವರು “ಮೀನುಗಳು ನೀರಿನಿಂದ ಹೊರಗುಳಿಯಲು ಹೇಗೆ ಸಾಧ್ಯವಿಲ್ಲವೋ, ಹಾಗೆಯೆ ನೀವು ಇಲ್ಲದೆ ನಾನು ಬದುಕಲು ಸಾಧ್ಯವಿಲ್ಲ, ದೀದಿ” ಎಂದು ಪತ್ರದಲ್ಲಿ ಬರೆದಿದ್ದರು.

ಇದನ್ನೂ ಓದಿ: ‘ಬಡತನದ ಸ್ಮಾರಕ’ ಎಂದು ಮೋದಿ ಟೀಕಿಸಿದ್ದ ನರೇಗಾ ಯೋಜನೆಯನ್ನು, ‘ಜೀವಸೆಳೆ’ ಎಂದ ಗುಜರಾತ್‌ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...