Homeಮುಖಪುಟಪೆಟ್ರೋಲ್-ಡಿಸೇಲ್ GST ವ್ಯಾಪ್ತಿಗೆ ಚರ್ಚೆ: ಬಿಜೆಪಿ-ಕಾಂಗ್ರೆಸ್ ವಿರುದ್ಧ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ

ಪೆಟ್ರೋಲ್-ಡಿಸೇಲ್ GST ವ್ಯಾಪ್ತಿಗೆ ಚರ್ಚೆ: ಬಿಜೆಪಿ-ಕಾಂಗ್ರೆಸ್ ವಿರುದ್ಧ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ

- Advertisement -
- Advertisement -

ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ 100 ರೂ ದಾಟಿ ಮುನ್ನುಗ್ಗುತ್ತಿದೆ. ಇದರಿಂದ ಉಳಿದ ದಿನಬಳಕೆಯ ವಸ್ತುಗಳ ಬೆಲೆಯಲ್ಲಿ ದಿಢೀರ್ ಏರಿಕೆಯಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಇಂಧನ ಬೆಲೆ ಮೇಲಿನ ತೆರಿಗೆ ಇಳಿಸುವ ಮೂಲಕ ಬೆಲೆ ನಿಯಂತ್ರಣ ಮಾಡಲು ಜನಸಾಮಾನ್ಯರು ಒತ್ತಾಯಿಸುತ್ತಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ದೇಶಾದ್ಯಂತ ಹೋರಾಟಕ್ಕಿಳಿದಿದೆ. ಈ ಸಂದರ್ಭದಲ್ಲಿ ಪೆಟ್ರೋಲ್ – ಡೀಸೆಲ್ ಬೆಲೆಗಳನ್ನು GST ವ್ಯಾಪ್ತಿಗೆ ತರಬೇಕೆಂಬ ಬೇಡಿಕೆಯೂ ಕೇಳಿಬಂದಿದ್ದು, ಇದಕ್ಕೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಪೆಟ್ರೋಲ್ 100 ನಾಟ್‌ಔಟ್’ ಘೋಷಣೆ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷವು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ವೀರಪ್ಪ ಮೊಯ್ಲಿ “ಅತಾರ್ಕಿಕವಾಗಿ ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಜವಾಬ್ದಾರಿಯಾಗಿದೆ. ಹಾಗಾಗಿ ಪೆಟ್ರೋಲ್ – ಡೀಸೆಲ್ ಬೆಲೆಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕೆಂದು ಒತ್ತಾಯಿಸುತ್ತೇನೆ” ಎಂದಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಎಚ್.ಡಿ ಕುಮಾರಸ್ವಾಮಿಯವರು, “ಕೇಂದ್ರ ಸರ್ಕಾರ ಪೆಟ್ರೋಲ್‌ ಬೆಲೆ ಏರಿಸುತ್ತಿದೆ. ಇತ್ತ ಕಾಂಗ್ರೆಸ್‌ ದೇಶದಾದ್ಯಂತ ಹೋರಾಡುತ್ತಿದೆ. ಪೆಟ್ರೋಲ್‌ ಬೆಲೆ ಇಳಿಯಬೇಕಿದ್ದರೆ ಅದನ್ನು GSTಗೆ ಸೇರಿಸಬೇಕೆಂದು ಕೇಂದ್ರ ಹೇಳಿದರೆ, ಕಾಂಗ್ರೆಸ್‌ ಕೂಡ ಅದನ್ನೇ ಪ್ರತಿಪಾದಿಸಿದೆ. ಹಾಗಾದರೆ, ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು GSTಗೆ ಸೇರಿಸಲೋ? ಎಂದು ಪ್ರಶ್ನಿಸಿದ್ದಾರೆ.

ಪೆಟ್ರೋಲ್‌ ಬೆಲೆ ಏರಿಕೆ ವಿರುದ್ಧದ ಹೋರಾಟಗಳು ತೆರಿಗೆ, ಸುಂಕ ಇಳಿಕೆಯ ಉದ್ದೇಶದ್ದಾಗಿರಬೇಕೇ ವಿನಾ GSTಗೆ ಸೇರಿಸುವುದಾಗಿರಬಾರದು. ಈಗ ಕಾಂಗ್ರೆಸ್‌ ಪ್ರತಿಭಟಿಸುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲನ್ನು GSTಗೆ ಸೇರಿಸಲೋ ಎಂಬುದು ಸ್ಪಷ್ಟವಾಗಬೇಕು. GSTಗೆ ಸೇರಿಸುವುದೇ ಕಾಂಗ್ರೆಸ್‌ ಉದ್ದೇಶವಾಗಿದ್ದರೆ ಅದು ಶೋಷಣೆ ಪರವಾದ ಹೋರಾಟ. ಕೇಂದ್ರದ ಅಧಿಕಾರದ ಮೇಲೆ ಕಣ್ಣಿಟ್ಟು ಅದರ ಸುತ್ತಲೇ ರಾಜಕಾರಣ ಮಾಡುವುದಷ್ಟೇ ರಾಷ್ಟ್ರೀಯ ಪಕ್ಷಗಳ ಅಜೆಂಡಾ. ಅವುಗಳಿಗೆ ರಾಜ್ಯಗಳ ಹಿತಾಸಕ್ತಿ, ಸ್ಥಳೀಯ ಅಗತ್ಯಗಳು ಲೆಕ್ಕಕ್ಕೇ ಇಲ್ಲ. ಪೆಟ್ರೋಲ್‌ ಅನ್ನು GSTಗೆ ಸೇರಿಸುವುದು ರಾಜ್ಯಗಳನ್ನು ಶೋಷಿಸಿದಂತೆ. ಈಗ ಕಾಂಗ್ರೆಸ್‌–ಬಿಜೆಪಿಗಳೆರಡೂ ಆ ಶೋಷಣೆ ಪರವಾಗಿ ನಿಂತಿವೆ ಎಂಬುದು ಬಹಿರಂಗವಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಪೆಟ್ರೋಲ್‌ ಅನ್ನು GSTಗೆ ತಂದರೆ ಜನರಿಗೆ ತಕ್ಷಣಕ್ಕೆ ಬೆಲೆ ಇಳಿದಂತೆ ಅನ್ನಿಸಬಹುದು. ಆದರೆ, ಪೆಟ್ರೋಲನ್ನು GSTಗೆ ಸೇರಿಸುತ್ತಲೇ ಅದರ ಮೇಲಿನ ತೆರಿಗೆಯಿಂದ ಬರುತ್ತಿದ್ದ ಸಂಪನ್ಮೂಲ ರಾಜ್ಯಗಳ ಕೈತಪ್ಪಿ ಹೋಗುತ್ತದೆ. ಎಲ್ಲ ತೆರಿಗೆಯೂ ಕೇಂದ್ರದ ಪಾಲಾಗಿ ರಾಜ್ಯಗಳು ಸಂಪನ್ಮೂಲ ಬರ ಎದುರಿಸುತ್ತವೆ. ರಾಜ್ಯಗಳ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ.

ತೈಲ ಬೆಲೆ ಇಳಿಸುವ ಉದ್ದೇಶದೊಂದಿಗೆ ಪೆಟ್ರೋಲನ್ನು GSTಗೆ ಸೇರಿಸುವುದು ಪರಿಹಾರವಲ್ಲ. ಅದು ಶೋಷಣೆ. ಬದಲಿಗೆ ಕೇಂದ್ರ ಈಗ ವಿಧಿಸುತ್ತಿರುವ ಮಿತಿಮೀರಿದ ಸುಂಕ ಕಡಿತ ಮಾಡಲಿ. ರಾಜ್ಯ ಸರ್ಕಾರವೂ ತೆರಿಗೆ ಇಳಿಸಲಿ. ಈಗ ತೈಲದ ಮೇಲೆ ಕೇಂದ್ರ, ರಾಜ್ಯಗಳೆರಡೂ ಶೇ. 68ರಷ್ಟು ತೆರಿಗೆ ವಿಧಿಸುತ್ತಿವೆ. ಈ ತೆರಿಗೆ ಪ್ರಮಾಣ ಕಡಿಮೆಯಾಗಬೇಕಾದ್ದು ಅಗತ್ಯ. ಅಂದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈಗ ಒಂದು ಲೀಟರ್‌ ಪೆಟ್ರೋಲ್‌ ಮೇಲೆ ₹60–65 ತೆರಿಗೆ ಹಣ ಸಿಗುತ್ತಿದೆ. ಆದರೆ, ಎರಡೂ ಸರ್ಕಾರಗಳೂ ಲೀಟರ್‌ ಪೆಟ್ರೋಲ್‌ ಮೇಲೆ ಸಂಗ್ರಹಿಸುವ ಹಣ ₹30 ಮೀರಬಾರದು. ಆಗ ಪೆಟ್ರೋಲ್‌ ₹65–70ಗೆ ಬಂದು ನಿಲ್ಲಲಿದೆ. ನಿಜವಾಗಿಯೂ ಆಗಬೇಕಾದ್ದು ಇದು. ಈ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಡಬೇಕಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಪೆಟ್ರೋಲ್‌ ಮೇಲೆ ಕೇಂದ್ರ, ರಾಜ್ಯ ಸರ್ಕಾರಗಳೆರಡು ವಿಧಿಸುತ್ತಿರುವ ಅತ್ಯಧಿಕ ತೆರಿಗೆ ಇಳಿಸುವ ಮೂಲಕ ಬೆಲೆ ಏರಿಕೆ ತಗ್ಗಿಸಬೇಕು ಎಂಬುದು JDS ಒತ್ತಾಯ. ಜತೆಗೆ ಪೆಟ್ರೋಲನ್ನು GSTಗೆ ಸೇರಿಸುವ ರಾಷ್ಟ್ರೀಯ ಪಕ್ಷಗಳ ಹುನ್ನಾರದ ವಿರುದ್ಧ ಹೋರಾಡುವುದೂ ನಮ್ಮ ನಿಲುವು. ಇದರ ಸುತ್ತಲೇ ನಾವು ಹೋರಾಟ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ದಾಖಲೆ ಬರೆದ ಪೆಟ್ರೋಲ್, ಡೀಸೆಲ್ ಬೆಲೆಗಳು: ಮುಂಬೈನಲ್ಲಿ ಸೆಂಚುರಿ ಬಾರಿಸಿದ ಪೆಟ್ರೋಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...