Homeಮುಖಪುಟರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ ಎಂದ AAP, SP

ರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ ಎಂದ AAP, SP

- Advertisement -
- Advertisement -

ರಾಮ ಜನ್ಮಭೂಮಿ ಟ್ರಸ್ಟ್‌‌‌ನಲ್ಲಿ ಭಾರಿ ಹಗರಣಗಳು ಬೆಳಕಿಗೆ ಬಂದಿವೆ. ರಾಮನ ಹೆಸರಲ್ಲಿ ಭೂ ದಂಧೆ ನಡೆಯುತ್ತಿದ್ದು ಇದರಲ್ಲಿ ಲ್ಯಾಂಡ್‍ ಮಾಫಿಯಾ ಭಾಗಿಯಾಗಿದೆ ಎಂಬ ಗಂಭೀರ ಆರೋಪವನ್ನು ಆಮ್‍ ಆದ್ಮಿ(AAP) ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್‍ ಮತ್ತು ಸಮಾಜವಾದಿ ಪಕ್ಷ(SP)ದ ಮಾಜಿ ಶಾಸಕ ಪವನ್‍ ಪಾಂಡೆ ಪ್ರತ್ಯೇಕ ಪತ್ರಿಕಾಗೋಷ್ಠಿಗಳಲ್ಲಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಟ್ವೀಟ್‍ ಮಾಡಿರುವ ಸಂಜಯಸಿಂಗ್‍ ಅವರು, ಟ್ರಸ್ಟ್‌ನ ಮುಖ್ಯಸ್ಥ ಚಂಪತ್ ರಾಯ್ ಭೂ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

2 ಕೋಟಿ ರೂ. ಗೆ ಒಂದು ಜಮೀನು ಖರೀದಿಯಾಗುತ್ತದೆ. ಕೇವಲ 5 ನಿಮಿಷಗಳ ನಂತರ ಚಂಪತ್‍ರಾಯ ನೇತೃತ್ವದಲ್ಲಿ ರಾಮಜನ್ಮಭೂಮಿ ಟ್ರಸ್ಟ್‌‌ ಅದೇ ಜಮೀನನ್ನು 18.5 ಕೋಟಿ ರೂ.ಗಳಿಗೆ ಖರೀದಿಸಿದೆ ಎಂದು ಸಂಜಯ್‍ಸಿಂಗ್‍ ದಾಖಲೆಗಳ ಸಮೇತ ಅಪಾದನೆ ಮಾಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ಇದು ದೇಶದ ಕೋಟ್ಯಂತರ ಜನರ ನಂಬಿಕೆಗೆ ನೀಡಿದ ಪೆಟ್ಟಾಗಿದೆ. ರೈತರು, ಕಾರ್ಮಿಕರು ಮತ್ತು ಬೀದಿ ಬದಿ ವ್ಯಾಪಾರಿಗಳಿಂದ ಮಂದಿರ ನಿರ್ಮಾಣಕ್ಕೆ ಚಂದಾ ಸಂಗ್ರಹಿಸಿ ಅದನ್ನು ರಾಮನ ಹೆಸರಲ್ಲಿ ಲೂಟಿ ಮಾಡಲಾಗುತ್ತಿದೆ ಎಂದಿರುವ ಅವರು, ಮೋದಿಯವರೇ ಇ.ಡಿ, ಸಿಬಿಐ ತನಿಖೆ ನಡೆಸಿ ಹಗರಣದಲ್ಲಿ ಭಾಗಿಯಾದವರನ್ನು ಜೈಲಿಗೆ ಹಾಕಿ ಎಂದು ಆಗ್ರಹಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರಕ್ಕೆ ಭೂಮಿ ಖರೀದಿಸುವಾಗ ಕೋಟ್ಯಂತರ ಮೊತ್ತದ ಆರ್ಥಿಕ ಅಕ್ರಮಗಳು ನಡೆದಿವೆ ಎಂದು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್ ಪಾಂಡೆ ಕೂಡ ಭಾನುವಾರ ಆರೋಪಿಸಿದ್ದಾರೆ.
ಏಕಕಾಲದಲ್ಲಿ ನಡೆದ ಪತ್ರಿಕಾಗೋಷ್ಠಿಗಳಲ್ಲಿ, (ಲಕ್ನೋದಲ್ಲಿ ಸಂಜಯ ಸಿಂಗ್ ಮತ್ತು ಅಯೋಧ್ಯೆಯಲ್ಲಿ ಪವನ್‍ ಪಾಂಡೆ) ಎರಡು ಭೂ ಖರೀದಿ ಒಪ್ಪಂದಗಳ ಪ್ರತಿಗಳನ್ನು ಮಾಧ್ಯಮಗಳಿಗೆ ನೀಡಲಾಗಿದೆ.

ಮೊದಲ ಒಪ್ಪಂದ

ಅಯೋಧ್ಯೆಯ ಕುಸುಮ್ ಪಾಠಕ್‌ ಮತ್ತು ಹರೀಶ್‍ ಪಾಠಕ್‍ ಎನ್ನುವವರಿಂದ ರವಿ ಮೋಹನ್‍ ತಿವಾರಿ ಮತ್ತು ಸುಲ್ತಾನ್ ಅನ್ಸಾರಿ ಎಂಬಿಬ್ಬರು 1.20 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಆಸ್ತಿಯನ್ನು ಖರೀದಿ ಮಾಡುತ್ತಾರೆ. ಈ ಆಸ್ತಿಯ ಮೌಲ್ಯವನ್ನು ಸರ್ಕಾರ ನಿಗದಿಪಡಿಸಿದ ಪ್ರತಿ ಯೂನಿಟ್ ಪ್ರದೇಶದ ದರಕ್ಕೆ ಅನುಗುಣವಾಗಿ 5.79 ಕೋಟಿ ರೂ ಎಂದು ಪಟ್ಟಿ ಮಾಡಲಾಗಿದೆ. ಆದರೆ ಅಂತಿಮವಾಗಿ ಆಸ್ತಿಯ ಮಾರಾಟದ ಬೆಲೆ ಕೇವಲ 2 ಕೋಟಿ ರೂ. ಈ ಮಾರಾಟಕ್ಕಾಗಿ ಪಾವತಿಸಿದ ಸ್ಟಾಂಪ್ ಡ್ಯೂಟಿ ಇದನ್ನು ಪುಷ್ಟೀಕರಿಸುತ್ತದೆ. ಈ ಖರೀದಿಯ ಸಮಯವನ್ನು ಮಾರ್ಚ್‌ 18, 2021 ರ ಸಂಜೆ 5 ಗಂಟೆ 10 ನಿಮಿಷ ಎಂದು ಅಧಿಕೃತವಾಗಿ ದಾಖಲಿಸಲಾಗಿದೆ.

ಇದನ್ನೂ ಓದಿ: ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ

ಎರಡನೇ ಒಪ್ಪಂದ

ಅಂದೇ ಮಾರ್ಚ್‌ 18ರಂದು, ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಇದೇ ಆಸ್ತಿಯನ್ನು ಸುಲ್ತಾನ್ ಅನ್ಸಾರಿ ಮತ್ತು ರವಿಮೋಹನ್‍ ತಿವಾರಿಯಿಂದ ಖರೀದಿಸಿದೆ. ಸುಲ್ತಾನ್ ಅನ್ಸಾರಿ ಮತ್ತು ರವಿಮೋಹನ್‍ ತಿವಾರಿಗೆ ಮಾರಾಟವಾದ ಐದೇ ನಿಮಿಷದಲ್ಲಿ ಈ ಖರೀದಿ ನಡೆದಿದೆ. ಖರೀದಿಗೆ ಪಾವತಿಸಿದ ಸ್ಟಾಂಪ್ ಡ್ಯೂಟಿ 1.29 ಕೋಟಿ ರೂ. ಭೂಮಿಯನ್ನು 18.50 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ. ಈ ವಹಿವಾಟಿನ ಸಮಯ ಅದೇ ದಿನ ಸಂಜೆ 5.11 ಎಂದು ದಾಖಲಾಗಿದೆ.

ಐದೇ ನಿಮಿಷದಲ್ಲಿ 9 ಪಟ್ಟು ಏರಿದ ಆಸ್ತಿ ಮೌಲ್ಯ!

“ಒಂದು ಆಸ್ತಿಯ ಮೌಲ್ಯವನ್ನು ಐದು ನಿಮಿಷಗಳಲ್ಲಿ 2 ಕೋಟಿಯಿಂದ 18 ಕೋಟಿ ರೂ.ಗೆ ಏರಿದ್ದನ್ನು ಹಗರಣ ಎನ್ನದೇ ಇರಲಾಗುತ್ತಾ? ಪ್ರತಿ ಸೆಕೆಂಡ್‍ಗೆ 5 ಲಕ್ಷ ರೂ ದರದಲ್ಲಿ ಆಸ್ಯಿಯ ಮೌಲ್ಯ ಹೆಚ್ಚಾಗಿದ್ದು ಭಾರತದ ಇತಿಹಾಸದಲ್ಲೇ ಮೊದಲು. ಜಾರಿ ನಿರ್ದೇಶನಾಲಯ ಮತ್ತು ಕೇಂದ್ರ ತನಿಖಾ ದಳ ಇದನ್ನು ಪರಿಶೀಲಿಸಬೇಕು. ಟ್ರಸ್ಟ್ ಹಿಂದೂ ಭಕ್ತರ ಹಣವನ್ನು ತಿಂದು ಹಾಕುತ್ತಿದೆ” ಎಂದು ಸಂಜಯ್‍ಸಿಂಗ್‍‌ ಆರೋಪಿಸಿದ್ದಾರೆ.

ಟ್ರಸ್ಟ್‌ನ ಸದಸ್ಯ ಅನಿಲ್ ಕುಮಾರ್ ಮಿಶ್ರಾ ಮತ್ತು ಅಯೋಧ್ಯೆಯ ಮೇಯರ್ ರಿಷಿಕೇಶ್ ಉಪಾಧ್ಯಾಯ ಕೂಡ ಎರಡೂ ಒಪ್ಪಂದಗಳಲ್ಲಿ ಸಾಮಾನ್ಯ ಸಾಕ್ಷಿಯಾಗಿದ್ದಾರೆ.

ಮಾಜಿ ಶಾಸಕ ಪವನ್‍ ಪಾಂಡೆ, “ಟ್ರಸ್ಟ್ ಮತ್ತು ಮೇಯರ್ ಈ ವಂಚನೆಯ ಬಗ್ಗೆ ಸಂಪೂರ್ಣವಾಗಿ ತಿಳಿದಿದ್ದರು. ಕೋಟ್ಯಂತರ ಹಿಂದೂಗಳು ಮಂದಿರಕ್ಕಾಗಿ ಬೆವರಿನ ಶ್ರಮದ ದುಡ್ಡು ನೀಡಿದ್ದಾರೆ. ಆದರೆ ಬಿಜೆಪಿ ಬೆಂಬಲಿತ ಕೆಲವು ವ್ಯಕ್ತಿಗಳು ಮತ್ತು ಟ್ಟಸ್ಟ್‌‌ ಸದಸ್ಯರು ಲೂಟಿ ನಡೆಸುತ್ತಿದ್ದಾರೆ” ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್‌ ದರ ಹೆಚ್ಚಳಕ್ಕೆ ಕಾರಣ ತಿಳಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...