ಶನಿವಾರದಂದು ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೀಡಾಗಿ ನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರಿಗೆ 38 ವರ್ಷ ವಯಸ್ಸಾಗಿತ್ತು.
ಶನಿವಾರ ರಾತ್ರಿ ತಮ್ಮ ಸ್ನೇಹಿತನ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂಚಾರಿ ವಿಜಯ್ ಅವರ ಬೈಕ್ ಅಪಘಾತಕ್ಕೀಡಾಗಿ, ತಲೆ ಮತ್ತು ಕಾಲಿಗೆ ಗಂಭೀರ ಗಾಯವಾಗಿತ್ತು. ಆಸ್ಪತ್ರೆಗೆ ದಾಖಲಾದಾಗಲೇ ಅವರ ಸ್ಥಿತಿ ಗಂಭೀರವಾಗಿತ್ತು. ಮೆದುಳಿನಲ್ಲಿ ರಕ್ತಸ್ರಾವವಾಗಿದ್ದರಿಂದ ಕೋಮ ಸ್ಥಿತಿಯಲ್ಲಿದ್ದರು. ಐಸಿಯುನಲ್ಲಿ ವೈದ್ಯರು ನಿರಂತರ ಚಿಕಿತ್ಸೆ ನೀಡಿದರೂ ಕೂಡ, ಚಿಕಿತ್ಸೆಗೆ ಸ್ಪಂದಿಸದ ಅವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಜೀವ ಬೆದರಿಕೆಯಿದೆ ಎಂದು ಪೊಲೀಸರಿಗೆ ತಿಳಿಸಿದ್ದ ಪತ್ರಕರ್ತ ಸಾವು: ಅಪಘಾತ ಎಂದ ಪೊಲೀಸರು!
ಚಿಕ್ಕಮಗಳೂರು ಜಿಲ್ಲೆಯ, ಕಡೂರು ತಾಲ್ಲೂಕಿನ ರಂಗಾಪುರ ಗ್ರಾಮದ ವಿಜಯ್ ಅವರು ಬಾಲ್ಯದಿಂದಲೇ ರಂಗಭೂಮಿ ಹಾಗೂ ಚಿತ್ರಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ರಂಗಭೂಮಿ ಕಲಾವಿದರಾಗಿ ಸಿನೆಮಾ ಕ್ಷೇತ್ರಕ್ಕೆ ಕಾಲಿಟ್ಟ ಇವರು, ಕನ್ನಡ ಚಿತ್ರರಂಗ ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿ ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಇವರು ನಟಿಸಿದ್ದ ನಾನು ಅವನಲ್ಲ…ಅವಳು ಕನ್ನಡ ಸಿನಿಮಾ ಚಿತ್ರಕ್ಕೆ 62ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ವಿಜಯ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದರು. ಈ ಚಿತ್ರದಲ್ಲಿ ಅವರು ತೃತೀಯ ಲಿಂಗಿಯ ಪಾತ್ರ ನಿರ್ವಹಿಸಿದ್ದಾರೆ.
ನಾತಿಚರಾಮಿ, ದಾಸವಾಳ, ಪಾದರಸ, ವರ್ತಮಾನ, ಒಗ್ಗರಣೆ, ರಂಗಪ್ಪ ಹೋಗ್ಬಿಟ್ನ, ಉಲವಚಾರು ಬಿರಿಯಾನಿ ಮುಂತಾದ ಸಿನಿಮಾಗಳಲ್ಲಿ ಸಂಚಾರಿ ವಿಜಯ್ ನಟಿಸಿದ್ದಾರೆ.
ಪ್ರತಿಭಾವಂತ ನಟನ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಜಕೀಯ ನಾಯಕರು ಹಾಗೂ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ “ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಸಂತಾಪ ಸೂಚಿಸಿದ್ದಾರೆ.
ಭಗವಂತನು ಮೃತರ ಆತ್ಮಕ್ಕೆ ಶಾಂತಿಯನ್ನು ನೀಡಲಿ, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. (2/2)
— CM of Karnataka (@CMofKarnataka) June 14, 2021
ಸಚಿವ ಶಿವರಾಮ್ ಹೆಬ್ಬಾರ್, “ರಾಷ್ಟ್ರಪ್ರಶಸ್ತಿ ಪುರಸ್ಕೃತ ಯುವ ನಟ ಸಂಚಾರಿ ವಿಜಯ್ ಅವರು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ. ಸಂಚಾರಿ ವಿಜಯ್ ಅವರ ನಿಧನದಿಂದಾಗಿ ಕನ್ನಡ ಚಿತ್ರರಂಗವು ತನ್ನ ಅತ್ಯಮೂಲ್ಯ ರತ್ನವೊಂದನ್ನು ಕಳೆದುಕೊಂಡಿದೆ” ಎಂದು ಹೇಳಿದ್ದಾರೆ.
ರಾಷ್ಟ್ರಪ್ರಶಸ್ತಿ ಪುರಸ್ಕೃತ ಯುವ ನಟ ಸಂಚಾರಿ ವಿಜಯ್ ಅವರು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ.
ಸಂಚಾರಿ ವಿಜಯ್ ಅವರ ನಿಧನದಿಂದಾಗಿ ಕನ್ನಡ ಚಿತ್ರರಂಗವು ತನ್ನ ಅತ್ಯಮೂಲ್ಯ ರತ್ನವೊಂದನ್ನು ಕಳೆದುಕೊಂಡಿದೆ.
ಭಗವಂತ ಅವರ ಆತ್ಮಕ್ಕೆ ಸದ್ಗತಿ ಕುರುಣಿಸಲಿ ಎಂದು ಪ್ರಾರ್ಥಿಸುತ್ತೆನೆ.#SanchariVijay pic.twitter.com/Sn2PctZ9sD
— Shivaram Hebbar (@ShivaramHebbar) June 14, 2021
ನಟ ಸುದೀಪ್ ಅವರು, “ಸಂಚಾರಿ ವಿಜಯ್ ಕೊನೆಯುಸಿರೆಳೆದರು ಎಂದು ಒಪ್ಪಿಕೊಳ್ಳಲಾಗುತ್ತಿಲ್ಲ” ಎಂದು ಹೇಳಿದ್ದಾರೆ.
Very very disheartening to accept that Sanchari Vijay breathed his last.
Met him couple of times just bfr this lockdown,,,, all excited about his nxt film,, tats due for release.
Very sad.
Deepest Condolences to his family and friends.
RIP ??— Kichcha Sudeepa (@KicchaSudeep) June 14, 2021
ಮತ್ತೆ ಹುಟ್ಟಿ ಬಾ ಗೆಳೆಯ ? #RIP #SanchariVijay pic.twitter.com/3QXQcpbqh4
— Rishab Shetty (@shetty_rishab) June 14, 2021
Gone too soon Sanchari Vijay, RIP.
— Puneeth Rajkumar (@PuneethRajkumar) June 14, 2021
Gone too soon ?
RIP @SanchariVijay ?
I'm still in a shock, He had called @BhuvannPonannaa 2 days back to arrange ration kits for few underprivileged families and today this news ?
I wish this is not true ?#Ripsancharivijay pic.twitter.com/pPk3BdEXXb— Harshika Poonacha (@actressharshika) June 14, 2021
ಅದ್ಭುತ ಕಲಾವಿದ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ರವರು ಬೈಕ್ ಅಪಘಾತದಿಂದ ಅಸುನೀಗಿದ್ದಾರೆ ಎಂಬ ಆಘಾತಕಾರಿ ಸುದ್ದಿಯು ಇಡೀ ಚಿತ್ರರಂಗವನ್ನೇ ಶೋಕದಲ್ಲಿ ಮುಳುಗಿಸಿದೆ. ಅವರ ಕುಟುಂಬದವರಿಗೆ ಈ ನೋವನ್ನು ಬರಿಸುವ ಶಕ್ತಿಯನ್ನು ಭಗವಂತ ನೀಡಲಿ.. ಓಂ ಶಾಂತಿ ?? pic.twitter.com/otfuc9Xr15
— Upendra (@nimmaupendra) June 14, 2021
ಇದನ್ನೂ ಓದಿ: ನಟ ಸಂಚಾರಿ ವಿಜಯ್ ಬೈಕ್ ಅಪಘಾತ; ಗಂಭೀರ ಗಾಯ


