Homeಚಳವಳಿಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ನಾಳೆ ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

ಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ನಾಳೆ ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

ಕುಸಿಯುತ್ತಿರುವ ಲಕ್ಷಾಂತರ ಕುಟುಂಬಗಳ ಜೀವನೋಪಾಯವನ್ನು ರಕ್ಷಿಸಿಕೊಳ್ಳಲು ಇಂದು ಬೀದಿಗಿಳಿಯುವುದು ಅನಿವಾರ್ಯ ಎಂದು ಮಾವಳ್ಳಿ ಶಂಕರ್, ಬಿ.ಟಿ. ಲಲಿತಾ ನಾಯ್ಕ್ ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆ ಲಕ್ಷಾಂತರ ಜನರನ್ನು ಬಲಿ ತೆಗೆದುಕೊಂಡರೆ, ಕೊರೊನಾ ಕಾರಣಕ್ಕಾಗಿ ಹೇರಲಾದ ಲಾಕ್‌ಡೌನ್‌ನಿಂದಾಗಿ ಕೋಟ್ಯಾಂತರ ಜನ ಸಂಕಷ್ಟಕ್ಕೊಳಗಾಗಿದ್ದಾರೆ. ಈ ಸಂಕಷ್ಟವನ್ನು ಕಡಿಮೆ ಮಾಡಲು ಹಲವು ರಾಜ್ಯಗಳು ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದ್ದರೂ ಸಹ ಅದು ಬಡಜನರನ್ನು ತಲುಪಿಲ್ಲ ಎಂಬ ಆರೋಪ ಸಾಮಾನ್ಯವಾಗಿದೆ. ಕೇರಳ ಮತ್ತು ತಮಿಳುನಾಡು ರಾಜ್ಯಗಳು ಇರುವುದರಲ್ಲಿ ಉತ್ತಮ ಪ್ಯಾಕೇಜ್ ಘೋಷಿಸಿದ್ದರೆ ಕರ್ನಾಟಕ ಸರ್ಕಾರದ ಪ್ಯಾಕೇಜ್ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ರೀತಿ ಇದೆ ಎಂದು ಹಲವರು ಟೀಕಿಸಿದ್ದಾರೆ. ಇನ್ನು ಹಲವಾರು ಜನರಿಗೆ ಪ್ಯಾಕೇಜ್ ತಲುಪಿಲ್ಲ ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ ಸಂಪೂರ್ಣ ಪ್ಯಾಕೇಜ್‌ಗೆ ಆಗ್ರಹಿಸಿ ಜನಾಗ್ರಹ ಆಂದೋಲನದ ವತಿಯಿಂದ ಜೂನ್ 15 ರಂದು ಮುಖ್ಯಮಂತ್ರಿಗಳ ಮನೆಗೆ ಪಾದಯಾತ್ರೆ ಹೋರಾಟ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕದಲ್ಲಿ ಕೋವಿಡ್‌ಗೆ 35,000 ಜನರು ಬಲಿಯಾಗಿದ್ದಾರೆ. 30 ಲಕ್ಷ ಜನ ಕೋವಿಡ್‌ಗೆ ತುತ್ತಾಗಿ, ಸಂಕಟ ಅನುಭವಿಸಿ, ಸಾಲಸೋಲ ಮಾಡಿಕೊಂಡು ಚೇತರಿಸಿಕೊಳ್ಳಲು ಪ್ರಯಾಸಪಡುತ್ತಿದ್ದಾರೆ. ಮೂರು ತಿಂಗಳಿಂದ ಲಕ್ಷಾಂತರ ದುಡಿಯುವ ಕೈಗಳಿಗೆ ಕೆಲಸವಿಲ್ಲ. ವ್ಯಾಪಾರ ವಹಿವಾಟು ನೆಲಕಚ್ಚಿದೆ. ಸಾಲದೆಂಬಂತೆ ಮೂರನೇ ಅಲೆಯ ಕತ್ತಿ ನೆತ್ತಿಯ ಮೇಲೆ ತೂಗಾಡುತ್ತಿದೆ. ಈ ಅವನತಿಯಿಂದ ರಾಜ್ಯವನ್ನು ಹಾಗೂ ಜನರನ್ನು ಮೇಲೆತ್ತಬೇಕಾದರೆ ಸರ್ಕಾರ ದಿಟ್ಟ ಕ್ರಮಗಳಿಗೆ ಮುಂದಾಗಲೇಬೇಕು. ಆದರೆ ಅದು ಸಂವೇದನಾಹೀನವಾಗಿ ನಡೆದುಕೊಳ್ಳುತ್ತಿದೆ, ನೊಂದ ಜನರಿಗೆ ಎಷ್ಟು ಮಾತ್ರಕ್ಕೂ ನೆರವಾಗದ ಬರೀ ತೋರಿಕೆಯ ಕ್ರಮಗಳನ್ನಷ್ಟೇ ತೆಗೆದುಕೊಳ್ಳುತ್ತಿದೆ. ಈ ಕಾರಣದಿಂದಾಗಿಯೇ ಸಾವು ನೋವುಗಳು ಹೆಚ್ಚಾಗಿವೆ ಎಂದು ಜನಾಗ್ರಹ ಆಂದೋಲನ ಆರೋಪಿಸಿದೆ.

ಜನಾಗ್ರಹ, ಜನರಪರ ಸಂಘಟನೆಗಳು ಹಾಗೂ ಮಾಧ್ಯಮಗಳ ಒತ್ತಡದಿಂದಾಗಿ ಸರ್ಕಾರ ಎರಡು ಅರೆಮನಸ್ಸಿನ ಪ್ಯಾಕೇಜುಗಳನ್ನು ಘೋಷಿಸಿದೆ. ಆದರೆ ಅವು ಏತಕ್ಕೂ ಸಾಲದ ಪ್ಯಾಕೇಜುಗಳು. ಕೆಲಸವಿಲ್ಲದೆ ದುಡಿಯುವ ಜನರ ಜೇಬು ಮತ್ತು ಮನೆ ಪಾತ್ರೆ ಎರಡೂ ಖಾಲಿಯಾಗಿವೆ. ಹಸಿವಿನ ಹಾಗೂ ಹಣ ಅಭಾವದ ಹಾಹಾಕಾರ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಅಪಾಯದಲ್ಲಿರುವ ಜನಸಾಮಾನ್ಯರೆಲ್ಲರ ಜೀವ ಉಳಿಸಿಕೊಳ್ಳಲು, ಕುಸಿಯುತ್ತಿರುವ ಲಕ್ಷಾಂತರ ಕುಟುಂಬಗಳ ಜೀವನೋಪಾಯವನ್ನು ರಕ್ಷಿಸಿಕೊಳ್ಳಲು ಇಂದು ಬೀದಿಗಿಳಿಯುವುದು ಅನಿವಾರ್ಯ ಅಗತ್ಯವಾಗಿದೆ ಎಂದು ಜನಾಗ್ರಹದ ಪರವಾಗಿ ಮಾವಳ್ಳಿ ಶಂಕರ್
ಬಿ.ಟಿ. ಲಲಿತಾ ನಾಯ್ಕ್ ತಿಳಿಸಿದ್ದಾರೆ.

ಜೂನ್ 15ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮೌರ್ಯ ಸರ್ಕಲ್ಲಿನಿಂದ ಮುಖ್ಯಮಂತ್ರಿ ಮನೆಗೆ ಜನಾಗ್ರಹ ನಡಿಗೆಯನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿಯವರನ್ನು ಕಂಡು ಜನರ ಒಕ್ಕೊರಲಿನ ಮನದಾಳದ ಆಗ್ರಹಗಳನ್ನು ಮುಂದಿಡುವುದು ನಾಳೆಯ ನಡಿಗೆಯ ಉದ್ದೇಶವಾಗಿದೆ. ನಾಳೆಯ ನಡಿಗೆಯಲ್ಲಿ ಶಸಿಕಾಂತ್ ಸೆಂದಿಲ್, ಮಾವಳ್ಳಿ ಶಂಕರ್, ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ, ಬಿ.ಟಿ. ಲಲಿತಾ ನಾಯ್ಕ್, ಸಿರಿಮನೆ ನಾಗರಾಜ್, ಯೂಸೂಫ್ ಕನ್ನಿ, ವಿ. ನಾಗರಾಜ್, ಹಬೀಬುಲ್ಲಾ, ಅಫ್ಸರ್ ಕೊಡ್ಲಿಪೇಟೆ, ಕುಮಾರ್ ಸಮತಳ ಮುಂತಾದ ಮುಖಂಡರುಗಳು ಹಾಗೂ ಅನೇಕ ಸಮಾಜಿಕ ಕಾರ್ಯಕರ್ತರು ಸಂಪೂರ್ಣ ರೀತಿಯಲ್ಲಿ ಕೋವಿಡ್ ಮುನ್ನೆಚ್ಚರಿಕೆಗಳನ್ನು ಪಾಲಿಸುತ್ತಾ ಭಾಗವಹಿಸಲಿದ್ದಾರೆ.

ಹಕ್ಕೊತ್ತಾಯಗಳು

1. ಕೋವಿಡ್ ಚಿಕಿತ್ಸೆಯನ್ನು ಉಚಿತಗೊಳಿಸಬೇಕು, ವ್ಯವಸ್ಥಿತಗೊಳಿಸಬೇಕು, ಗ್ರಾಮಗಳಿಗೂ ವಿಸ್ತರಿಸಬೇಕು.
2. ಎಲ್ಲರಿಗೂ ಸರ್ಕಾರದಿಂದಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆಯನ್ನು ಕೂಡಲೇ ಮಾಡಬೇಕು. ಸೆಪ್ಟೆಂಬರ್ ಒಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು.
3. ರಾಜ್ಯದಲ್ಲಿ ಬಡತನ ರೇಖಗಿಂತ ಕೆಳಗಿರುವ ಎಲ್ಲಾ 70 ಲಕ್ಷ ಕುಟುಂಬಗಳಿಗೆ ಸಮಗ್ರ ಪಡಿತರ ನೀಡಬೇಕು ಮತ್ತು 10 ಸಾವಿರ ನೆರವು ಧನ ನೀಡಬೇಕು.
4. ದುಡಿವವರನ್ನು ಕಳೆದುಕೊಂಡ ಅನಾಥಗೊಂಡಿರುವ ಕುಟುಂಬಗಳಿಗೆ 5 ಲಕ್ಷ ಪರಿಹಾರ ಧನ ನೀಡಬೇಕು.
5. ರೈತರ ಬಿತ್ತನೆ ಬೀಜ – ಗೊಬ್ಬರಕ್ಕೆ ವಿಶೇಷ ಸಬ್ಸಿಡಿ ಘೋಷಿಸಬೇಕು.


ಇದನ್ನೂ ಓದಿ: ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಬಿಎಸ್‌ವೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...