ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ತೆಲಂಗಾಣದಲ್ಲಿ ಮೂವತ್ತೆರಡು ಹೆಚ್ಚುವರಿ ಜಿಲ್ಲಾಧಿಕಾರಿಗಳನ್ನು ನೇಮಿಸಲಾಗಿದ್ದು, ಇವರಿಗೆ ಸರ್ಕಾರದ ವತಿಯಿಂದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ 32 ಐಷಾರಾಮಿ ಕಿಯಾ ಕಾರ್ನಿವಲ್ ಕಾರುಗಳನ್ನು ಖರೀದಿಸಿದ್ದಾರೆ.
ಈ ಪ್ರತಿಯೊಂದು ಕಾರಿಗೆ 25 ರಿಂದ 30 ಲಕ್ಷ ವೆಚ್ಚವಾಗಿದೆ. ಕೋವಿಡ್ ಸಾಂಕ್ರಾಮಿಕ ರೋಗದೊಂದಿಗೆ ಹೋರಾಡಲು ರಾಜ್ಯವು ಸುಮಾರು 40,000 ಕೋಟಿ ಸಾಲಕ್ಕೆ ತುತ್ತಾಗಿದ್ದು, ಈ ಸಮಯದಲ್ಲಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ವಿರುದ್ಧ ಪ್ರತಿಪಕ್ಷ ನಾಯಕರು ಆಕ್ರೋಶ ಹೊರಹಾಕಿದ್ದಾರೆ.
ಹೈದರಾಬಾದ್ನಲ್ಲಿರುವ ಮುಖ್ಯಮಂತ್ರಿಯವರ ನಿವಾಸವಾದ ಪ್ರಗತಿ ಭವನದಲ್ಲಿ, ತೆಲಂಗಾಣ ಸಾರಿಗೆ ಸಚಿವ ಪುವ್ವಾಡ ಅಜಯ್ ಕುಮಾರ್ ಕಾರುಗಳಿಗೆ ಹಸಿರು ನಿಶಾನೆ ನೀಡಿದ್ದಾರೆ. ರಾಜ್ಯ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಕಾರುಗಳನ್ನು ಈ ಹಿಂದೆಯೇ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ವಾಹನಗಳನ್ನು ಪರಿಶೀಲಿಸಿದ್ದರು ಎನ್ನಲಾಗಿದೆ.
ಇದನ್ನೂ ಓದಿ: ರಾಮ ಜನ್ಮಭೂಮಿ ಟ್ರಸ್ಟ್ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ ಎಂದ AAP, SP
ರಾಜ್ಯ ಸರ್ಕಾರದ ಈ ಕ್ರಮವನ್ನು ರಾಜ್ಯದಲ್ಲಿ ಅಧಿಕಾರಶಾಹಿಗಳನ್ನು ಸಮಾಧಾನಪಡಿಸುವ ಮುಖ್ಯಮಂತ್ರಿ ರಾವ್ ಅವರ ಈ ಕ್ರಮ ಮತ್ತು “ಕ್ರಿಮಿನಲ್ ವಂಚನೆ” ಎಂದು ಬಿಜೆಪಿ ಆರೋಪಿಸಿದೆ.
“32 ಅಲ್ಟ್ರಾ ಐಷಾರಾಮಿ ವಾಹನಗಳನ್ನು ಖರೀದಿಸಲು 11 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಖರ್ಚು ಮಾಡುವುದನ್ನು ಮುಖ್ಯಮಂತ್ರಿ ರಾವ್ ಹೇಗೆ ಸಮರ್ಥಿಸಬಹುದು?” ಎಂದು ಬಿಜೆಪಿ ವಕ್ತಾರ ಕೃಷ್ಣ ಸಾಗರ್ ರಾವ್ ಪ್ರಶ್ನಿಸಿದ್ದಾರೆ.
“ಮುಖ್ಯಮಂತ್ರಿಗಳು ಅಪಾಯಕಾರಿ ಸಾಂಕ್ರಾಮಿಕದ ಮಧ್ಯದಲ್ಲಿ ಸಾರ್ವಜನಿಕರ ಹಣವನ್ನು ಅಪಾರವಾಗಿ ವ್ಯರ್ಥ ಮಾಡುತ್ತಿದ್ದಾರೆ. ಇತ್ತ ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾರಣ ಅನೇಕ ಬಡ ಜನರು ಸಾಲದ ಹೊರೆಯಿಂದ ಸಾಯುತ್ತಿದ್ದಾರೆ. ಸರ್ಕಾರದ ಈ ನಿರ್ಧಾರ ಭಯಾನಕ ಮತ್ತು ಯೋಚಿಸಲಾಗದು’ ಎಂದಿರುವ ಬಿಜೆಪಿ ನಾಯಕರು, ಈ ನಿರ್ಧಾರವನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.
ತೆಲಂಗಾಣ ರಾಷ್ಟ್ರ ಸಮಿತಿ ಸರ್ಕಾರವು ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲು ಅಥವಾ ಸಾರ್ವಜನಿಕ ಸಾರಿಗೆಗಾಗಿ ಬಸ್ಸುಗಳನ್ನು ಖರೀದಿಸಲು ಖರ್ಚು ಮಾಡುವ ಬದಲು ಅಧಿಕಾರಶಾಹಿಗಳಿಗೆ ಕಾರುಗಳನ್ನು ಖರೀದಿಸುವ ಮೂಲಕ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ವಕ್ತಾರರು ಆರೋಪಿಸಿದ್ದಾರೆ.
ಇದನ್ನೂ ಓದಿ: ಇಂದು ಚೆಗುವಾರ ಜನ್ಮ ದಿನ: ಸಂಗಾತಿ ‘ಚೆ’ ಎಂಬ ವಿಸ್ಮಯಕ್ಕೆ ಸಾವಿಲ್ಲ..


