Homeಮುಖಪುಟರಾಮಜನ್ಮಭೂಮಿ ಹಗರಣ ಬಯಲಿಗೆಳೆದ ಸಂಜಯ್ ಸಿಂಗ್‌ ಮನೆ ಮೇಲೆ ದಾಳಿ, ಧ್ವಂಸ ಆರೋಪ

ರಾಮಜನ್ಮಭೂಮಿ ಹಗರಣ ಬಯಲಿಗೆಳೆದ ಸಂಜಯ್ ಸಿಂಗ್‌ ಮನೆ ಮೇಲೆ ದಾಳಿ, ಧ್ವಂಸ ಆರೋಪ

- Advertisement -
- Advertisement -

ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್‌ರವರ ನಾರ್ತ್ ಅವೆನ್ಯೂ ಹೈ-ಸೆಕ್ಯುರಿಟಿ ಪ್ರದೇಶದಲ್ಲಿನ ನಿವಾಸವನ್ನು ಅಪರಿಚಿತ ವ್ಯಕ್ತಿಗಳು ಧ್ವಂಸ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ರಾಮನ ಹೆಸರಲ್ಲಿ ಭೂ ದಂಧೆ ನಡೆಯುತ್ತಿದ್ದು ಇದರಲ್ಲಿ ಲ್ಯಾಂಡ್‍ ಮಾಫಿಯಾ ಭಾಗಿಯಾಗಿದೆ ಎಂಬ ಗಂಭೀರ ಆರೋಪವನ್ನು ಅವರು ಭಾನುವಾರ ಮಾಡಿದ್ದರು. 2 ಕೋಟಿ ರೂ. ಗೆ ಒಂದು ಜಮೀನು ಖರೀದಿಯಾಗುತ್ತದೆ. ಕೇವಲ 5 ನಿಮಿಷಗಳ ನಂತರ ಚಂಪತ್‍ರಾಯ ನೇತೃತ್ವದಲ್ಲಿ ರಾಮಜನ್ಮಭೂಮಿ ಟ್ರಸ್ಟ್‌‌ ಅದೇ ಜಮೀನನ್ನು 18.5 ಕೋಟಿ ರೂ.ಗಳಿಗೆ ಖರೀದಿಸಿದೆ ಎಂದು ಸಂಜಯ್‍ಸಿಂಗ್‍ ದಾಖಲೆಗಳ ಸಮೇತ ಅಪಾದನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿಯೇ ತನ್ನ ಮನೆ ಮೇಲೆ ದಾಳಿಯಾಗಿದೆ ಎಂದು ಅವರು ಹೇಳಿದ್ದಾರೆ.

ರಾಮ ಜನ್ಮಭೂಮಿ ವಿಚಾರಕ್ಕೆ ಸಂಬಂಧಿಸಿದಂತೆ ಭಾನುವಾರ ಸಂಜಯ್ ಸಿಂಗ್ ಪತ್ರಿಕಾಗೋಷ್ಠಿ ನಡೆಸಿ, ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಅಲ್ಲದೇ ಈ ವಿಷಯದಲ್ಲಿ ಸಿಬಿಐ ತನಿಖೆಗೆ ಆಗ್ರಹಿಸಿದ್ದರು.

“ಈ ರೀತಿಯ ದಾಳಿಗಳಿಗೆ ನಾನು ಹೆದರುವುದಿಲ್ಲ ಮತ್ತು ಪ್ರಭು ಶ್ರೀ ರಾಮ್ ಹೆಸರಿನಲ್ಲಿ ನಡೆಯುತ್ತಿರುವ ಈ ಹಗರಣವನ್ನು ಬಹಿರಂಗಪಡಿಸುವುದನ್ನು ಮುಂದುವರಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಸಂಸದರ ಮನೆಯ ನೇಮ್ ಪ್ಲೇಟ್ ಅನ್ನು ಕಿತ್ತುಹಾಕುವ ಪ್ರಯತ್ನ ಮಾಡಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ನವದೆಹಲಿ) ದೀಪಕ್ ಯಾದವ್ ಹೇಳಿದ್ದಾರೆ. ಈ ಸಂಬಂಧ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಯಾರಿಗೂ ದೈಹಿಕ ಗಾಯವಾಗಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ ಎಂದ AAP, SP

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪನ್ನೂನ್‌ ಹತ್ಯೆಗೆ ಸಂಚು: ವಾಷಿಂಗ್‌ ಟನ್‌ ಪೋಸ್ಟ್‌ ವರದಿ ತಿರಸ್ಕರಿಸಿದ ಭಾರತ

0
ಭಾರತದ ಮಾಜಿ ಗುಪ್ತಚರ ಅಧಿಕಾರಿಯೊಬ್ಬರು ಅಮೆರಿಕದ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನೂನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂಬ ವಾಷಿಂಗ್ಟನ್ ಪೋಸ್ಟ್‌ನ ವರದಿಯನ್ನು ಭಾರತ ಇಂದು ಬಲವಾಗಿ ತಿರಸ್ಕರಿಸಿದೆ. ಭಾರತದ ರಿಸರ್ಚ್...