Homeಮುಖಪುಟಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

ಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

- Advertisement -
- Advertisement -

ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೊಳಿಸಿದ CAA ಕಾನೂನಿನ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಲಕ್ಷಾಂತರ ಜನರು CAA ವಿರುದ್ಧದ ಹೋರಾಟದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಸುಪ್ರೀಂ ಕೋರ್ಟ್ ಸೇರಿದಂತೆ ದೇಶದ ನ್ಯಾಯಾಲಯಗಳಲ್ಲಿ ಹೊಸ ಸಿಟಿಜೆನ್‌ಶಿಪ್ ಕಾಯ್ದೆ ವಿರುದ್ಧ ಅರ್ಜಿಗಳು ದಾಖಲಾಗಿದ್ದವು. ಇವೆಲ್ಲದರ ನಡುವೆಯೂ ಸುಪ್ರೀಂ ಕೋರ್ಟ್‌ ಸಿಟಿಜೆನ್‌ಶಿಪ್‌ ಕಾಯ್ದೆಗೆ ತಡೆ ನೀಡಲು ನಿರಾಕರಿಸಿತ್ತು. ನಂತರ ಕೋವಿಡ್‌ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸದ್ದಿಲ್ಲದೇ ಸಿಎಎ ಕಾನೂನನ್ನು ಜಾರಿಗೊಳಿಸಲು ಮುಂದಾಗಿದೆ. ಅದರ ಮೊದಲ ಭಾಗವಾಗಿ ಗುಜರಾಥ್, ರಾಜಸ್ಥಾನ್, ಹರಿಯಾಣ, ಪಂಜಾಬ್, ಛತ್ತಿಸ್‌ಗಡ್‌ನಲ್ಲಿರುವ ಅಪಘಾನ್ ಬಾಂಗ್ಲಾದೇಶ್, ಪಾಕಿಸ್ತಾನ ಮೂಲದ ಮುಸ್ಲೀಮೇತರರಿಗೆ ದೇಶದ ಪೌರತ್ವಕ್ಕೆ ಅರ್ಜಿ ಸಲ್ಲಿಸುವಂತೆ ಆಹ್ವಾನಿಸಿದೆ. ಆ ಸಂಬಂಧ ಸದ್ಯ ಕೇಂದ್ರ ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿದೆ.

ಕೇಂದ್ರದ ಅಧಿಸೂಚನೆಯನ್ನು ಪ್ರಶ್ನಿಸಿ ಅನೇಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇಂದು ಸಿಟಿಜನ್‌ ಶಿಫ್‌ಗೆ ಸಂಬಂಧಿಸಿ ಇಂಡಿಯನ್ ಯುನಿಯನ್ ಮುಸ್ಲೀಂ ಲೀಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿತು. ಅರ್ಜಿದಾರರ ಪರವಾಗಿ ಕಪಿಲ್ ಸಿಬಾಲ್ ನ್ಯಾಯಾಲಯದಲ್ಲಿ ಹಾಜರಿದ್ದರು. ಕೇಂದ್ರ ಸರ್ಕಾರ ಈ ಅಧಿಸೂಚನೆ CAA ಗೆ  ಸಂಬಂಧಿಸಿದ್ದಲ್ಲ. ಕೇಂದ್ರ ಸರ್ಕಾರದ ಅಂತರ್ಗತ ಅಧಿಕಾರವನ್ನು ಬಳಸಿ ಈ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಸಿಎಎ ಮತ್ತು ಅಧಿಸೂಚನೆಗೆ ಸಂಬಂಧ ಕಲ್ಪಿಸಿ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ಸಲ್ಲಿಸಿರುವ ಅರ್ಜಿ ದೋಷಪೂರಿತವಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ನಿನ್ನೆ ಸೋಮವಾರ ಅಫಿಡೆವಿಟ್ ಸಲ್ಲಿಸಿತ್ತು. ಇದಕ್ಕೆ ಪ್ರತಿಯಾಗಿ ಅರ್ಜಿದಾರರ ಪರ ವಕೀಲ ಕಪಿಲ್ ಸಿಬಾಲ್ ತಮಗೆ ಉತ್ತರಿಸಲು 2 ವಾರದ ಕಾಲಾವಕಾಶವನ್ನು ಕೇಳಿದ್ದಾರೆ. ಅರ್ಜಿದಾರರ ಮನವಿಗೆ ಸ್ಪಂದಿಸಿದ ಕೋರ್ಟ್ ಪ್ರಕರಣದ ವಿಚಾರಣೆಯನ್ನು 2 ವಾರಗಳ ನಂತರ ಆರಂಭಿಸುವುದಾಗಿ ಹೇಳಿದೆ.

ನ್ಯಾಯಮೂರ್ತಿಗಳಾದ ಜಸ್ಟಿಸ್ ಹೇಮಂತ್ ಗುಪ್ತಾ ಮತ್ತು ಜಸ್ಟಿಸ್ ವಿ. ರಾಮಸುಬ್ರಮಣ್ಯನ್ ಅವರ ಪೀಠವು 2 ವಾರಗಳ ನಂತರ ಕೇಂದ್ರ ಸರ್ಕಾರದ ಪೌರತ್ವ ನೊಂದಣಿ ಅಧಿಸೂಚನೆಯ ವಿರುದ್ಧದ ಅರ್ಜಿಗಳ ವಿಚಾರಣೆಯನ್ನು ಆರಂಭಿಸಲಿದೆ.

ಇದನ್ನೂ ಓದಿ : ಸಂಚಾರಿ ವಿಜಯ್‌ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕಾ!

ಇದಕ್ಕು ಮೊದಲು ಕೇಂದ್ರ ಸರ್ಕಾರವು 2004, 2005, 2006, 2016, 2018 ರಲ್ಲಿ ಇಂತಹುದೇ ಅಧಿಸೂಚನೆಯನ್ನು ದೇಶದಲ್ಲಿ ಸರ್ಕಾರವು ಹೊರಡಿಸಿದೆ. 1955 ರ ಸಿಟಿಜನ್‌ಶಿಪ್ ಕಾಯ್ದೆಯ ನಿಯಮಗಳಡಿಯಲ್ಲಿಯೇ ಈ ಅಧಿಸೂಚನೆಗಳನ್ನು ಹೊರಡಿಸಲಾಗಿದೆ. ಪೌರತ್ವದ ಅರ್ಹತೆಯ ಮಾನದಂಡಗಳನ್ನು ಸಡಿಸಲಾಗಿಲ್ಲ. ಹೊಸ ನಿಯಮಗಳನ್ನು ಇನ್ನೂ ಜಾರಿಗೆ ತಂದಿಲ್ಲ ಎಂದು ಹೇಳಿದೆ.

ಕೇಂದ್ರ ಸರ್ಕಾರವು ಹಿಂದೆ ಸುಪ್ರೀಂ ಕೋರ್ಟ್‌ನಲ್ಲಿ ಸಿಎಎ ವಿರುದ್ಧದ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ಸಿಎಎ ನಿಯಮಾವಳಿಗಳು ಇದುವರೆಗೆ ರೂಪಿಸಲಾಗಿಲ್ಲ. ಹಾಗಾಗಿ ಸಿಎಎ ಜಾರಿ ಸದ್ಯಕ್ಕಿಲ್ಲವೆಂದು ಹೇಳಿದೆ. ಆದರೆ ಸದ್ದಿಲ್ಲದೇ ಸರ್ಕಾರ ಪೌರತ್ವ ನೀಡಲು ಅರ್ಜಿ ಕರೆದಿದೆ ಎಂದು ಸರ್ಕಾರದ ಅಧಿಸೂಚನೆಯನ್ನು ಪ್ರಶ್ನಿಸಿ ಇಂಡಿಯನ್ ಯೂನಿಯನ್ ಆಫ್ ಮುಸ್ಲೀಂ ಲೀಗ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಸದ್ಯ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು 2 ವಾರಗಳ ನಂತರ ಆರಂಭಿಸಲಿದೆ.

ಕೇಂದ್ರ ಸರ್ಕಾರ ಬಹು ನಿರೀಕ್ಷಿತ ಸಿಎಎ, ಎನ್‌ಆರ್‌ಸಿ ಯೋಜನೆಗಳ ಜಾರಿ ಇದುವರೆಗೆ ಆರಂಭವಾಗಿಲ್ಲ ಎಂದು ಹೇಳಿಕೊಂಡು ಬರುತ್ತಿದೆ. ಆದರೆ ಸರ್ಕಾರ ಹಿಂಬಾಗಿಲ ಮೂಲಕ ಸದ್ದಿಲ್ಲದೇ  CAA ಕಾನೂನನ್ನು ಜಾರಿಗೊಳಿಸಲು ಮುಂದಾಗಿದೆ ಎಂದು ದೇಶದ ಅನೇಕ ಸಂಘಟನೆಗಳು ಮತ್ತು ಹೋರಾಟಗಾರರು ದೂರುತ್ತಿದ್ದಾರೆ. ಕೇಂದ್ರ ಸರ್ಕಾರ ಸಿಎಎ ಜಾರಿಗೊಳಿಸುತ್ತಿದೆಯೋ ಅಥವಾ ಇಲ್ಲವೋ ಎಂಬುದು ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಆರಂಭವಾದಾಗಲೇ ತಿಳಿದು ಬರಲಿದೆ.


ಇದನ್ನೂ ಓದಿ :ಓರಿಸ್ಸಾದಲ್ಲಿ ಮೊಸಳೆ ದಾಳಿಗೆ ವ್ಯಕ್ತಿ ಬಲಿ: ಸ್ಥಳೀಯರಲ್ಲಿ ಹೆಚ್ಚಿದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...