Homeಮುಖಪುಟಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಪೊಲೀಸರ ಪ್ರತಿಪಾದನೆ ನಿರಾಕರಿಸಿದ ಕುಟುಂಬ

ಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಪೊಲೀಸರ ಪ್ರತಿಪಾದನೆ ನಿರಾಕರಿಸಿದ ಕುಟುಂಬ

ಘಟನೆಯ ಬಗ್ಗೆ ಬರೆದುಕೊಂಡಿದ್ದ ಪತ್ರಕರ್ತರ ಮೇಲೆ ಎಫ್‌ಐಆರ್‌ ದಾಖಲಾದ ಕೆಲವೆ ಗಂಟೆಗಳಲ್ಲಿ ಪ್ರಕರಣ ಮತ್ತೆ ತಿರುವು ಕಂಡಿದೆ

- Advertisement -
- Advertisement -

“ಕೋಮು ಪ್ರಚೋದನೆ” ಮಾಡಲಾಗುತ್ತಿದೆ ಎಂದು ಹೇಳಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲಿನ ಹಲ್ಲೆಗೆ ಸಂಬಂಧಿಸಿದ ಪೋಸ್ಟ್‌ಗಳ ಕುರಿತು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಟ್ವಿಟರ್, ಪತ್ರಕರ್ತರು ಮತ್ತು ಕಾಂಗ್ರೆಸ್ ಮುಖಂಡರು ಸೇರಿದಂತೆ ಎಂಟು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದಾಗಿ ಕೆಲವೇ ಗಂಟೆಗಳ ಅಂತರದಲ್ಲಿ, ಪ್ರಕರಣವು ಮತ್ತೆ ಹೊಸ ತಿರುವು ಕಂಡಿದೆ. ಹಲ್ಲೆಗೊಳಗಾದ ವೃದ್ಧ ಅಬ್ದುಲ್ ಸಮದ್‌ ಅವರು ತಾಯತಗಳನ್ನು ಮಾರಾಟ ಮಾಡುತ್ತಾರೆ ಎಂಬ ಪೊಲೀಸರ ಹೇಳಿಕೆಯನ್ನು ಅವರ ಕುಟುಂಬ ನಿರಾಕರಿಸಿದೆ.

ಸಂತ್ರಸ್ತ ವೃದ್ಧ ಅಬ್ದುಲ್ ಸಮದ್ ಎಂಬವರು ಪ್ರಾರ್ಥನೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆಟೋದಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಕಾಡಿನೊಳಗೆ ಎಳೆದೊಯ್ದು ಚಿತ್ರ ಹಿಂಸೆ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಚಾಕುವಿನಲ್ಲಿ ವೃದ್ದನ ಗಡ್ಡ ಕತ್ತರಿಸಿ, ಕೋಲಿನಿಂದ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಘಟನೆಯ ಕುರಿತು ಟ್ವೀಟ್ ಮಾಡಿದ್ದ ಹಲವಾರು ಪತ್ರಕರ್ತರು ಮತ್ತು ಕಾಂಗ್ರೆಸ್ ನಾಯಕರು ಹಾಗೂ ಟ್ವಿಟರ್‌‌ ಸೇರಿದಂತೆ ಒಟ್ಟು 9 ಹೆಸರುಗಳ ಮೇಲೆ ಗಾಜಿಯಾಬಾದ್ ಪೊಲೀಸರು ಎಫ್‌ಐಆರ್‌‌ ದಾಖಲಿಸಿ ಕೋಮು ಪ್ರಚೋದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಟ್ವಿಟರ್‌‌, ಪತ್ರಕರ್ತರು, ರಾಜಕೀಯ ನಾಯಕರ ವಿರುದ್ದ FIR!

ಘಟನೆಯ ಬಗ್ಗೆ ಸ್ವತಃ ವೃದ್ದನೆ ಅಳುತ್ತಾ ವಿಡಿಯೊದಲ್ಲಿ ಮಾಹಿತಿ ನೀಡಿದ್ದರು. ಅದರಲ್ಲಿ, “ನನ್ನ ಹೆಸರು ಚೌದರಿ ಅಬ್ದುಲ್ ಸಮದ್ ಎಂದಾಗಿದ್ದು, ದೆಹಲಿ ಗಡಿಯ ಗಾಝಿಯಾಬಾದ್‌ನ ಲೋನಿಯಲ್ಲಿ ನನ್ನ ಮೇಲೆ ದಾಳಿ ನಡೆದಿದೆ. ಅಲ್ಲಿ ಇಬ್ಬರು ಆಟೋದವರು ನನ್ನ ಮುಖಕ್ಕೆ ರುಮಾಲನ್ನು ಮುಚ್ಚಿ ಕರೆದುಕೊಂಡು ಹೋದರು. ಬಳಿಕೆ ನನಗೆ ಹೊಡೆಯಲು ಪ್ರಾರಂಭಿಸಿದರು. ಅಲ್ಲಿಂದ ನನ್ನ ಕಾಡಿಗೆ ಕರೆದುಕೊಂಡುಹೋಗಿ ಒಂದು ಕೋಣೆಯಲ್ಲಿಟ್ಟರು. ಅವರು ಜೈಶ್ರೀರಾಮ್‌ ಘೋಷಣೆ ಕೂಗುವಂತೆ ಒತ್ತಾಯಿಸಿದ್ದರು, ನಾನು ಯಾ ಅಲ್ಲಾಹ್ ಎಂದು ಕೂಗಿದರೆ ಹೊಡೆಯುತ್ತಿದ್ದರು. ಪಿಸ್ತೂಲ್ ಹಣೆಗೆ ಇಟ್ಟಿದ್ದು, ನನ್ನ ಮೇಲೆ ಭೀಕರ ಹಲ್ಲೆ ನಡೆಸಿದ್ದು, ನಾವು ಮುಸ್ಲಿಮರಿಗೆ ಹಲ್ಲೆ ನಡೆಸಿದ್ದೇವೆ ಎಂದಿದ್ದಾರೆ… ಅವರು ನನ್ನ ಗಡ್ಡವನ್ನು ಕಿತ್ತರು ಎಂದು” ಎಂದು ಹೇಳುವುದನ್ನು ಕಾಣಬಹುದಾಗಿದೆ.

ಆದರೆ ಘಟನೆಯಲ್ಲಿ ಯಾವುದೇ “ಕೋಮು ಆಯಾಮ” ಇಲ್ಲ ಎಂದು ಪೊಲೀಸರು ಹೇಳಿದ್ದು, “ಅಬ್ದುಲ್ ಸಮದ್ ತಾಯತ ವ್ಯಾಪಾರಿಯಾಗಿದ್ದು, ಅದನ್ನು ಕೊಂಡುಕೊಂಡವರು ಅದು ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ ಹಲ್ಲೆ ನಡೆಸಿದ್ದರು. ಹಲ್ಲೆ ನಡೆಸಿದವರಲ್ಲಿ ಹಿಂದೂ-ಮುಸ್ಲಿಂ ಎರಡೂ ಧರ್ಮಿಯರೂ ಇದ್ದು, ಮೂವರನ್ನು ಬಂಧಿಸಿದ್ದೇವೆ” ಎಂದು ಹೇಳಿದ್ದರು.

ಆದರೆ, ಇದೀಗ ಅಬ್ದುಲ್ ಸಮದ್ ಅವರ ಮಗ ಬಬ್ಲೂ ಸೈಫಿ ಪೊಲೀಸರ ಪ್ರತಿಪಾದನೆಯನ್ನು ನಿರಾಕರಿಸಿದ್ದು, “ನನ್ನ ತಂದೆ ತಾಯತಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಪ್ಪಾಗಿ ಹೇಳಿದ್ದಾರೆ. ನಾವು ಬಡಗಿಗಳಾಗಿದ್ದು, ನಮ್ಮ ಕುಟುಂಬದಲ್ಲಿ ಯಾರೂ ತಾಯತದ ವ್ಯವಹಾರವನ್ನು ಮಾಡುವುದಿಲ್ಲ. ಪೊಲೀಸರು ಸಳ್ಳು ಹೇಳುತ್ತದ್ದಾರೆ. ಅವರು ತನಿಖೆ ನಡೆಸಿ ಅದನ್ನು ಸಾಬೀತುಪಡಿಸಲಿ” ಎಂದು ತಿಳಿಸಿದ್ದಾರೆ.

ಟ್ವಿಟರ್ ಮತ್ತು ಇತರ ಎಂಟು ಜನರ ವಿರುದ್ಧ ಐಪಿಸಿ ಸೆಕ್ಷನ್ 153 (ಗಲಭೆಗೆ ಪ್ರಚೋದನೆ), 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ), 505 (ಕಿಡಿಗೇಡಿತನ), 120 ಬಿ (ಕ್ರಿಮಿನಲ್ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶ) ಮುಂತಾದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯು.ಪಿ.ಯಲ್ಲಿ ಮನುವಾದಿಗಳು ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...