Homeಮುಖಪುಟರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, ಬಿಜೆಪಿಯಲ್ಲಿ ಭಿನ್ನಮತವಿಲ್ಲ; ಅರುಣ್ ಸಿಂಗ್

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, ಬಿಜೆಪಿಯಲ್ಲಿ ಭಿನ್ನಮತವಿಲ್ಲ; ಅರುಣ್ ಸಿಂಗ್

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಹೆಚ್ಚುತ್ತಿರುವ ದೂರುಗಳ ಬಗ್ಗೆಯೂ ಅರುಣ್ ಸಿಂಗ್ ಬಿಜೆಪಿ ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದಾರೆ.

- Advertisement -
- Advertisement -

ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿಗಳ ಬದಲಾವಣೆ, ರಾಜೀನಾಮೆ ವಿಚಾರಕ್ಕೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಡಿಯೂರಪ್ಪ ಅವರ ಮೇಲೆ ಹೈಕಮಾಂಡ್​ಗೆ ವಿಶ್ವಾಸ ಇದೆ. ಬಿಜೆಪಿಯಲ್ಲಿ ಭಿನ್ನಮತವಿಲ್ಲ. ಮುಂದಿನ ದಿನಗಳಲ್ಲೂ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆ ಸುತ್ತ ಸೃಷ್ಟಿಯಾಗಿರುವ ಬಿಕ್ಕಟ್ಟು ಬಗೆಹರಿಸಲು ಮೂರು ದಿನಗಳ ಕಾಲ ರಾಜ್ಯ ಪ್ರವಾಸಕ್ಕೆ ಅರುಣ್ ಸಿಂಗ್​ ಅವರನ್ನು ಕಳಿಸಲಾಗಿದೆ. ರಾಜ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ದೊಡ್ಡ ಚರ್ಚೆ ಶುರುವಾಗಿತ್ತು. ಆದರೆ, ಎಲ್ಲಾ ಶಾಸಕರು ಮತ್ತು ಸಚಿವರುಗಳನ್ನು ಭೇಟಿ ಮಾಡಿ ಖುದ್ದು ಮಾತನಾಡಿರುವ ಅರುಣ್ ಸಿಂಗ್, ಸಿಎಂ ಬದಲಾವಣೆ ಇಲ್ಲ ಎಂದಿದ್ದಾರೆ.

“ಸರ್ಕಾರ, ಶಾಸಕರು, ಸಚಿವರು ಮತ್ತು ಸಿಎಂ ಯಡಿಯೂರಪ್ಪ ಹಗಲು ರಾತ್ರಿ ದುಡಿದಿದ್ದಾರೆ. ನಮಗೆ ಎಲ್ಲಾ ಶಾಸಕರು, ಸಂಸದರು ಒಂದೇ. ನಾಯಕತ್ವ ಬದಲಾವಣೆ ಬಗ್ಗೆ ಅವರು ಮಾತನಾಡುವುದು ಸಹಜ. ಆದರೆ, ಹೈಕಮಾಂಡ್ ಪ್ರತಿ ಬಾರಿಯೂ ಹೇಳಿದೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

ಇನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಹೆಚ್ಚುತ್ತಿರುವ ದೂರುಗಳ ಬಗ್ಗೆಯೂ ಅರುಣ್ ಸಿಂಗ್ ಬಿಜೆಪಿ ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಯಡಿಯೂರಪ್ಪ ಅವರು ತಮ್ಮದೇ ಪಕ್ಷದ ಸಹೋದ್ಯೋಗಿಗಳಿಂದ ಟೀಕೆ ಮತ್ತು ದೂರುಗಳನ್ನು ಎದುರಿಸುತ್ತಿರುವ ಸಮಯದಲ್ಲಿ ರಾಜ್ಯದಲ್ಲಿಯೂ ಉತ್ತರ ಪ್ರದೇಶದ ಮಾದರಿಯ “ವಿಮರ್ಶೆ ಸಭೆಗಳನ್ನು” ನಡೆಸಲಾಗುತ್ತಿದೆ ಎನ್ನಲಾಗಿದೆ.

ಒಂದು ಕಾಲದಲ್ಲಿ ಸಿಎಂ ಯಡಿಯೂರಪ್ಪ ಅವರ ಆಪ್ತರಾಗಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕೂಡ ಮುಖ್ಯಮಂತ್ರಿಗಳ ವಿರುದ್ಧ ದೂರು ನೀಡಿದ್ದಾರೆ. ತಮ್ಮ ಖಾತೆಯಲ್ಲಿ ಸಿಎಂ ಹಸ್ತಕ್ಷೇಪ ಮಾಡಿದ್ದಾರೆಂದು ಆರೋಪಿಸಿ ರಾಜ್ಯಪಾಲ ವಾಜುಭಾಯ್ ವಾಲಾ ಅವರಿಗೆ ಪತ್ರ ಬರೆದಿದ್ದರು. ಐದು ಪುಟಗಳ ಪತ್ರದಲ್ಲಿ ಯಡಿಯೂರಪ್ಪ ಅವರ ಸರ್ವಾಧಿಕಾರದ ಬಗ್ಗೆ ಗಂಭೀರ ಆರೋಪ ಮಾಡಿದ್ದರು.

“ಅರುಣ್ ಸಿಂಗ್ ಅವರು ಒಬ್ಬ ರಾಷ್ಟ್ರೀಯ ನಾಯಕ. ಅವರು ಎಲ್ಲರ ಮಾತುಗಳನ್ನು ಕೇಳಿಸಿಕೊಂಡು ನಿರ್ಧಾರ ತೆಗೆದುಕೊಳ್ಳುತ್ತಾರೆ. ರಾಷ್ಟ್ರೀಯ ನಾಯರುಕ ಯಾವುದೇ ನಿರ್ಧಾರ ತೆಗೆದುಕೊಂಡರೂ ಪಕ್ಷದ ಕಾರ್ಯಕರ್ತರು ಶಿಸ್ತಿನ ಸಿಪಾಯಿಗಳಂತೆ ಕೇಳುತ್ತಾರೆ” ಎಂದು ಈಶ್ವರಪ್ಪ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ರಾಜ್ಯ ಬಿಜೆಪಿಯಲ್ಲಿಯೇ ಅನೇಕರು ಮುಂದಾಗಿದ್ದು, ಹಲವು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹೈಕಮಾಂಡ್ ಹೇಳಿದರೇ ರಾಜೀನಾಮೆ ನಿಡುವುದಾಗಿ ತಿಳಿಸಿದ್ದ ಸಿಎಂ, ನಂತರ ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿ ಎಂದಿದ್ದಾರೆ. ಸದ್ಯ ರಾಜ್ಯ ಉಸ್ತುವಾರಿ ಅರುಣ್ ಸಿಂಗ್‌ ರಾಜೀನಾಮೆ, ಸಿಎಂ ಬದಲಾವಣೆ ವಿಚಾರಕ್ಕೆ ತೆರೆ ಎಳೆದಿದ್ದಾರೆ.


ಇದನ್ನೂ ಓದಿ: ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿ ಎಂದ ಬಿ.ಎಸ್.ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...