Homeಕರೋನಾ ತಲ್ಲಣಕೊವ್ಯಾಕ್ಸಿನ್‍ ಲಸಿಕೆಗೆ ನವಜಾತ ಕರುವಿನ ರಕ್ತದ್ರವ ಬಳಕೆ?: ಕಾಂಗ್ರೆಸ್ ಆರೋಪಕ್ಕೆ ಕೇಂದ್ರದ ಸ್ಪಷ್ಟೀಕರಣ

ಕೊವ್ಯಾಕ್ಸಿನ್‍ ಲಸಿಕೆಗೆ ನವಜಾತ ಕರುವಿನ ರಕ್ತದ್ರವ ಬಳಕೆ?: ಕಾಂಗ್ರೆಸ್ ಆರೋಪಕ್ಕೆ ಕೇಂದ್ರದ ಸ್ಪಷ್ಟೀಕರಣ

- Advertisement -
- Advertisement -

ಭಾರತ್ ಬಯೋಟೆಕ್ ಅಭಿವೃದ್ದಿಪಡಿಸುವ ಕೋವ್ಯಾಕ್ಸಿನ್ ಕೊರೊನಾ ಲಸಿಕೆಯ ತಯಾರಿಕೆಯಲ್ಲಿ ನವಜಾತ ಕರುವಿನ ರಕ್ತದ್ರವ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಗೌರವ್ ಪಾಂಡಿ ಆರೋಪಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಅವರು ಟ್ವಿಟರ್‌ನಲ್ಲಿ  ಆರ್‌ಟಿಐ ಮಾಹಿತಿ ಆಧರಿಸಿದ ಪೋಸ್ಟ್ ಒಂದನ್ನು ಹಾಕಿದ್ದು, ಅದರಲ್ಲಿ ಕೊವಾಕ್ಸಿನ್‍ ತಯಾರಿಸಲು ಗೋವಿನ ರಕ್ತವನ್ನು ಬಳಸುತ್ತಾರೆ. ಇದು ಗೋವಧೆ ಎಂದು ಹೇಳಿದ ನಂತರ ಕೇಂದ್ರ ಸರ್ಕಾರ ಮತ್ತು ಭಾರತ್‍ ಬಯೋಟೆಕ್‍ ಕೋವ್ಯಾಕ್ಸಿನ್ ಬಗ್ಗೆ ಸ್ಪಷ್ಟೀಕರಣವನ್ನು ನೀಡಿವೆ.

“ಕೋವ್ಯಾಕ್ಸಿನ್ ಲಸಿಕೆಯ ಸಂಯೋಜನೆಗೆ ಸಂಬಂಧಿಸಿದಂತೆ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಬಂದಿವೆ, ಅಲ್ಲಿ ಕೋವ್ಯಾಕ್ಸಿನ್ ಲಸಿಕೆಗೆ ನವಜಾತ ಕರುವಿನ ರಕ್ತದ್ರವವನ್ನು (ಸೀರಮ್) ಬಳಸಲಾಗಿರುತ್ತದೆ ಎಂದು ಸೂಚಿಸಲಾಗಿದೆ. ಈ ಪೋಸ್ಟ್‌ಗಳಲ್ಲಿ ಸತ್ಯಗಳನ್ನು ತಿರುಚಲಾಗಿದೆ ಮತ್ತು ತಪ್ಪಾಗಿ ನಿರೂಪಿಸಲಾಗಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

ಕಾಂಗ್ರೆಸ್ ವಕ್ತಾರ ಗೌರವ್ ಪಾಂಡಿ ಬುಧವಾರ ತಮ್ಮ ಟ್ವೀಟ್‍ನಲ್ಲಿ, “ಆರ್‌ಟಿಐ ಪ್ರತಿಕ್ರಿಯೆಯಲ್ಲಿ, ಕೋವ್ಯಾಕ್ಸಿನ್ ನವಜಾತ ಕರುವಿನ ರಕ್ತದ್ರವ (ಸೀರಮ್) ಅನ್ನು ಒಳಗೊಂಡಿದೆ ಎಂದು ಮೋದಿ ಸರ್ಕಾರ ಒಪ್ಪಿಕೊಂಡಿದೆ… ಇದು 20 ದಿನಗಳಿಗಿಂತ ಕಡಿಮೆ ವಯಸ್ಸಿನ ನವಜಾತ ಹಸು-ಕರುಗಳ ವಧೆಯ ಮೂಲಕ ಪಡೆದ ಹೆಪ್ಪುಗಟ್ಟಿದ ರಕ್ತದ ಒಂದು ಭಾಗವಾಗಿದೆ. ಇದು ಭೀಕರವಾಗಿದೆ! ಈ ಮಾಹಿತಿಯನ್ನು ಈ ಮೊದಲೇ ಸಾರ್ವಜನಿಕವಾಗಿ ಪ್ರಕಟಿಸಬೇಕಾಗಿತ್ತು” ಎಂದು ಟೀಕಿಸಿದ್ದರು.

“ನವಜಾತ ಕರುವಿನ ಸೀರಮ್ ಅನ್ನು ವೆರೋ ಕೋಶಗಳ ತಯಾರಿಕೆ/ಬೆಳವಣಿಗೆಗೆ ಮಾತ್ರ ಬಳಸಲಾಗುತ್ತದೆ. ವಿವಿಧ ರೀತಿಯ ಗೋವಿನ ಮತ್ತು ಇತರ ಪ್ರಾಣಿ ಸೀರಮ್‍ಗಳನ್ನು ವೆರೋ ಕೋಶಗಳ ಬೆಳವಣಿಗೆಗೆ ಬಳಸಲಾಗುತ್ತದೆ. ಇದು ಜಾಗತಿಕವಾಗಿ ಪ್ರಮಾಣಿತ ವೈಜ್ಞಾನಿಕ ಅಂಶವಾಗಿದೆ. ಲಸಿಕೆಗಳ ಉತ್ಪಾದನೆಗೆ ಸಹಾಯ ಮಾಡುವ ಜೀವಕೋಶದ ಬೆಳವಣಿಗೆಯನ್ನು ಸ್ಥಾಪಿಸಲು ವೆರೋ ಕೋಶಗಳನ್ನು ಬಳಸಲಾಗುತ್ತದೆ. ಪೋಲಿಯೊ, ರೇಬೀಸ್ ಮತ್ತು ಇತರ ಹಲವು ಲಸಿಕೆಗಳಲ್ಲಿ ಈ ತಂತ್ರವನ್ನು ದಶಕಗಳಿಂದ ಬಳಸಲಾಗುತ್ತಿದೆ’ ಎಂದು ಕೇಂದ್ರವು ಪ್ರತಿಕ್ರಿಯೆ ನೀಡಿದೆ.

ಬೆಳವಣಿಗೆಯ ನಂತರ ಈ ವೆರೋ ಕೋಶಗಳನ್ನು ನೀರು ಅಥವಾ ರಾಸಾಯನಿಕಗಳಿಂದ ತೊಳೆಯಲಾಗುತ್ತದೆ. ನವಜಾತ ಕರುವಿನ ಸೀರಮ್‌ನಿಂದ ಮುಕ್ತವಾಗಿಸಲು ಈ ವಿಧಾನ ಅನುಸರಿಸಲಾಗುತ್ತದೆ. ಆ ನಂತರ ಈ ವೆರೋ ಕೋಶಗಳು ಕೊರೋನಾ ವೈರಸ್ ಸೋಂಕಿಗೆ ಒಳಗಾಗುತ್ತವೆ. ವೈರಸ್ ಬೆಳವಣಿಗೆಯ ಪ್ರಕ್ರಿಯೆಯಲ್ಲಿ ವೆರೋ ಕೋಶಗಳು ಸಂಪೂರ್ಣವಾಗಿ ನಾಶವಾಗುತ್ತವೆ. ಅದರ ನಂತರ ಈ ಬೆಳೆದ ವೈರಸ್ ಅನ್ನು ಸಹ ಕೊಲ್ಲಲಾಗುತ್ತದೆ (ನಿಷ್ಕ್ರಿಯಗೊಳಿಸಲಾಗುತ್ತದೆ) ಮತ್ತು ಶುದ್ಧೀಕರಿಸಲಾಗುತ್ತದೆ. ಈ ಕೊಲ್ಲಲ್ಪಟ್ಟ ವೈರಸ್ ಅನ್ನು ಅಂತಿಮ ಲಸಿಕೆ ತಯಾರಿಸಲು ಬಳಸಲಾಗುತ್ತದೆ. ಅಂತಿಮ ಲಸಿಕೆ ಸೂತ್ರೀಕರಣದಲ್ಲಿ ಯಾವುದೇ ಕರುವಿನ ಸೀರಮ್ ಅನ್ನು ಬಳಸಲಾಗುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಭಾರತ್ ಬಯೋಟೆಕ್ ಸಹ ಹೇಳಿಕೆ ನೀಡಿ, “ಹೊಸದಾಗಿ ಹುಟ್ಟಿದ ಕರುವಿನ ಸೀರಮ್ ಅನ್ನು ವೈರಲ್ ಲಸಿಕೆಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಇದನ್ನು ಕೋಶಗಳ ಬೆಳವಣಿಗೆಗೆ ಬಳಸಲಾಗುತ್ತದೆ, ಆದರೆ ವೈರಸ್‍ನ ಬೆಳವಣಿಗೆಯಲ್ಲಿ ಅಥವಾ ಅಂತಿಮ ಸೂತ್ರೀಕರಣದಲ್ಲಿ ಬಳಸಲಾಗುವುದಿಲ್ಲ. ಎಲ್ಲಾ ಇತರ ಕಲ್ಮಶಗಳನ್ನು ತೆಗೆದುಹಾಕುವ ಮೂಲಕ ನಿಷ್ಕ್ರಿಯಗೊಂಡ ವೈರಸ್ ಘಟಕಗಳನ್ನು ಮಾತ್ರ ಒಳಗೊಂಡಿರುವಂತೆ ಕೊವಾಕ್ಸಿನ್‍ ಅನ್ನು ಶುದ್ಧೀಕರಿಸಲಾಗಿದೆ” ಎಂದು ವಿವರಣೆ ನೀಡಿದೆ.

“ಹಲವಾರು ದಶಕಗಳಿಂದ ಜಾಗತಿಕವಾಗಿ ಲಸಿಕೆಗಳ ತಯಾರಿಕೆಯಲ್ಲಿ ಪ್ರಾಣಿಗಳ ಸೀರಮ್ ಅನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಹೊಸದಾಗಿ ಹುಟ್ಟಿದ ಕರುವಿನ ಸೀರಮ್ ಬಳಕೆಯನ್ನು ಕಳೆದ 9 ತಿಂಗಳುಗಳಿಂದ ಪಾರದರ್ಶಕವಾಗಿ ದಾಖಲಿಸಲಾಗಿದೆ’  ಎಂದು ಅದು ಸ್ಪಷ್ಟಪಡಿಸಿದೆ.


ಇದನ್ನೂ ಓದಿ: ಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...