Homeಕರೋನಾ ತಲ್ಲಣಕೊರೊನಾ: ವಯಸ್ಕರಿಗೆ ಬಳಸುವ ಔಷಧ ಮಕ್ಕಳಿಗೆ ಬಳಸುವಂತಿಲ್ಲ- ಒಕ್ಕೂಟ ಸರ್ಕಾರ

ಕೊರೊನಾ: ವಯಸ್ಕರಿಗೆ ಬಳಸುವ ಔಷಧ ಮಕ್ಕಳಿಗೆ ಬಳಸುವಂತಿಲ್ಲ- ಒಕ್ಕೂಟ ಸರ್ಕಾರ

- Advertisement -
- Advertisement -

ಮಕ್ಕಳಿಗೆ ಕೊರೊನಾ ಚಿಕಿತ್ಸೆ ನೀಡಲು ಒಕ್ಕೂಟ ಸರ್ಕಾರ ಬುಧವಾರ ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ವಯಸ್ಕರಿಗೆ ಬಳಸುವ ಹೆಚ್ಚಿನ ಔಷಧಿಗಳನ್ನು ಮಕ್ಕಳಿಗೆ ಶಿಫಾರಸು ಮಾಡುವುದಿಲ್ಲ ಎಂದು ಒತ್ತಿ ಹೇಳಿದೆ. ವಯಸ್ಕ ರೋಗಿಗಳಿಗೆ ಸೂಚಿಸಲಾದ ಐವರ್ಮೆಕ್ಟಿನ್, ಹೈಡ್ರಾಕ್ಸಿಕ್ಲೋರೋಕ್ವಿನ್, ಫೆವಿಪಿರವಿರ್, ಡಾಕ್ಸಿಸೈಕ್ಲಿನ್ ಮತ್ತು ಅಜಿಥ್ರೊಮೈಸಿನ್ ಮುಂತಾದ ಔಷಧಿಗಳನ್ನು ಮಕ್ಕಳ ಮೇಲೆ ಪರೀಕ್ಷಿಸಲಾಗಿಲ್ಲ ಎಂದು ಅದು ಹೇಳಿದೆ.

ಆದಾಗ್ಯೂ, ಒಕ್ಕೂಟ ಸರ್ಕಾರ ರೆಮ್‌ಡೆಸಿವಿರ್‌ನ ನಿರ್ಬಂಧಿತ ಬಳಕೆಗೆ ಅನುಮತಿಸಿದೆ. ಮಕ್ಕಳಿಗೆ ಲಸಿಕೆಗಳನ್ನು ಅನುಮೋದಿಸಿದ ನಂತರ, ಸಹ-ಅಸ್ವಸ್ಥತೆ ಹೊಂದಿರುವವರು ಮತ್ತು ತೀವ್ರ ರೋಗಲಕ್ಷಣಗಳನ್ನು ಹೊಂದಿರುವವರಿಗೆ ಲಸಿಕೆಯನ್ನು ಆದ್ಯತೆ ಮೇರೆಗೆ ನೀಡಲಾಗುವುದು ಎಂದು ಮಾರ್ಗಸೂಚಿ ತಿಳಿಸಿವೆ.

ಇದನ್ನೂ ಓದಿ: ಕೇರಳ ಬಿಜೆಪಿ ರಾಜ್ಯಾಧ್ಯಕ್ಷನ ಮೇಲೆ ಲಂಚ ಪ್ರಕರಣ ದಾಖಲಿಸಲು ಕೋರ್ಟ್‌ ಆದೇಶ

ಮಕ್ಕಳಿಗೆ ಚಿಕಿತ್ಸೆ ನೀಡುವ ಸೌಲಭ್ಯಗಳನ್ನು ಹೆಚ್ಚಿಸಲು ಸಾರ್ವಜನಿಕ ಮತ್ತು ಖಾಸಗಿ ವಲಯಗಳಿಂದ ಒಟ್ಟಾಗಿ ಪ್ರಯತ್ನಿಸಬೇಕು ಎಂದು ಸರ್ಕಾರ ಕರೆ ನೀಡಿದೆ. “ಮುಂದಿನ ಮೂರು ನಾಲ್ಕು ತಿಂಗಳುಗಳಲ್ಲಿ ಲಾಕ್‌ಡೌನ್ ಅನ್ನು ಹಿಂತೆಗೆದುಕೊಂಡ ನಂತರ ಭವಿಷ್ಯದಲ್ಲಿ ಉಂಟಾಗುವು ಸೋಂಕಿನ ಯಾವುದೇ ಉಲ್ಬಣವನ್ನು ನಿರ್ವಹಿಸಲು ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಯೋಜಿತ ಪ್ರಯತ್ನದ ಅಗತ್ಯವಿದೆ” ಎಂದು ಹೇಳಿದೆ,

ರೆಮ್‌ಡೆಸಿವಿರ್ ಅನ್ನು ಈ ಹಿಂದೆ ಮಕ್ಕಳಿಗೆ ಶಿಫಾರಸು ಮಾಡಿರಲಿಲ್ಲ

ಈ ಹಿಂದೆ ಆಂಟಿವೈರಲ್ ಔಷಧಿ ರೆಮ್ಡೆಸಿವಿರ್ ಅನ್ನು ಮಕ್ಕಳಿಗೆ ಶಿಫಾರಸು ಮಾಡಿಲ್ಲ ಎಂದು ಕೇಂದ್ರ ಹೇಳಿದೆ. ಆಸ್ಪತ್ರೆಗಳಲ್ಲಿ ಮಧ್ಯಮ ತೀವ್ರ ಮತ್ತು ಗಂಭೀರ ಅನಾರೋಗ್ಯ ಪೀಡಿತ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲು ಸ್ಟೀರಾಯ್ಡ್‌ಗಳನ್ನು ಬಳಸಬೇಕು ಎಂದು ಅದು ಹೇಳಿತ್ತು.

ಇದನ್ನೂ ಓದಿ: ಲಸಿಕೆಯಿಂದ ದೇಹದಲ್ಲಿ ಅಯಸ್ಕಾಂತೀಯ ಗುಣ ಸಾಬೀತುಪಡಿಸಿದರೆ 1 ಲಕ್ಷ ಬಹುಮಾನ: ಪ್ರೊ.ನರೇಂದ್ರ ನಾಯಕ್ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...