Homeಮುಖಪುಟಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ಬಿಜೆಪಿಯು ಅವರ ವಿರುದ್ದ ದೇಶದ್ರೋಹದ ಪ್ರಕರಣವನ್ನು ದಾಖಲಿಸಿತ್ತು

- Advertisement -
- Advertisement -

ದೇಶದ್ರೋಹ ಪ್ರಕರಣದಲ್ಲಿ ಸಿಲುಕಿದ್ದ ಲಕ್ಷದ್ವೀಪದ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ ಅವರಿಗೆ ಕೇರಳ ಹೈಕೋರ್ಟ್ ಒಂದು ವಾರ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ. ಮಲಯಾಳಂ ಟಿವಿ ಚಾನೆಲ್‌ ಒಂದರಲ್ಲಿ ಕಾಣಿಸಿಕೊಂಡಿದ್ದ ಆಯಿಷಾ ಸುಲ್ತಾನ, ಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ಒಕ್ಕೂಟ ಸರ್ಕಾರವು ‘ಜೈವಿಕ ಅಸ್ತ್ರ’ ರೂಪದಲ್ಲಿ ಪ್ರಯೋಗಿಸಿದೆ ಎಂದು ಹೇಳಿದ್ದರು. ಇದರ ವಿರುದ್ದ ಲಕ್ಷದ್ವೀಪ ಬಿಜೆಪಿ ಅಧ್ಯಕ್ಷ ಸಿ. ಅಬ್ದುಲ್ ಖಾದರ್ ಹಾಜಿ ನೀಡಿದ ದೂರಿನ ಮೇರೆಗೆ ಜೂನ್ 10 ರಂದು ದ್ವೀಪದ ಪೊಲೀಸರು ಆಯಿಷಾ ಸುಲ್ತಾನ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಆಯಿಷಾ ಸುಲ್ತಾನ ಅವರು ಟಿವಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ಶೂನ್ಯ ಕೊರೊನಾವಿದ್ದ ಪ್ರದೇಶದಲ್ಲಿ ದಿನಕ್ಕೆ ನೂರು ಪ್ರಕರಣಗಳು ವರದಿಯಾಗುತ್ತಿವೆ. ಒಕ್ಕೂಟ ಸರ್ಕಾರ ಹೊಸದಾಗಿ ನೇಮಕಮಾಡಿದ್ದ ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರನ್ನು ಪ್ರಯೋಗಿಸಿದ್ದು ‘ಜೈವಿಕ ಅಸ್ತ್ರ’ ರೀತಿಯಲ್ಲಾಗಿದೆ. ನನಗೆ ಸ್ಪಷ್ಟವಾಗಿ ಹೇಳಲು ಸಾಧ್ಯ, ಒಕ್ಕೂಟ ಸರ್ಕಾರವು ಕೊರೊನಾವನ್ನು ಜೈವಿಕ ಅಸ್ತ್ರವಾಗಿ ಪ್ರಯೋಗಿಸಿದೆ” ಎಂದು ಹೇಳಿದ್ದರು. ಇದನ್ನು ಬಿಜೆಪಿ ವಿವಾದವನ್ನಾಗಿ ಮಾಡಿತ್ತು.

ಇದನ್ನೂ ಓದಿ:  ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನ್ಯಾಯಮೂರ್ತಿ ಅಶೋಕ್ ಮೆನನ್ ಅವರ ಏಕ-ನ್ಯಾಯಾಧೀಶರ ಪೀಠವು ತನಿಖೆಗೆ ಸಹಕರಿಸುವಂತೆ ಸುಲ್ತಾನಾಗೆ ನಿರ್ದೇಶನ ನೀಡಿದ್ದು, ಕೋಡ್ ಆಫ್ ಕ್ರಿಮಿನಲ್ ಪ್ರೊಸೀಜರ್ (ಸಿಆರ್ಪಿಸಿ) ಯ ಸೆಕ್ಷನ್ 41 ಎ ಅಡಿಯಲ್ಲಿ ಲಕ್ಷದ್ವೀಪದಲ್ಲಿರುವ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವುದು ಅಗತ್ಯವಾಗಿದೆ ಎಂದು ಹೇಳಿದೆ. ನಿರೀಕ್ಷಣಾ ಜಾಮೀನು ಕೋರಿ ಆಯಿಷಾ ಸುಲ್ತಾನಾ ಸಲ್ಲಿಸಿದ್ದ ಮನವಿಯ ತೀರ್ಪನ್ನು ನ್ಯಾಯಾಲಯವು ಕಾಯ್ದಿರಿಸಿದೆ.

ವಿಚಾರಣೆಯ ಸಮಯದಲ್ಲಿ ಆಯಿಷಾ ಸುಲ್ತಾನ ಅವರ ಜಾಮೀನು ಅರ್ಜಿಯನ್ನು ಲಕ್ಷದ್ವೀಪ ಆಡಳಿತ ವಿರೋಧಿಸಿತ್ತು.

ಟಿವಿ ಕಾರ್ಯಕ್ರಮದಲ್ಲಿ ನೀಡಿದ್ದ ಹೇಳಿಕೆಯನ್ನು ಬಿಜೆಪಿ ವಿವಾದ ಮಾಡುತ್ತಿದ್ದಂತೆ ಆಯಿಷಾ ಸ್ಪಷ್ಟೀಕರಣವನ್ನು ಕೂಡಾ ನೀಡಿದ್ದರು. ಅವರು ತನ್ನ ಪೇಸ್‌ಬುಕ್‌ ಪೋಸ್ಟ್‌‌ನಲ್ಲಿ, “ನಾನು ಪಟೇಲ್ ಅವರ ಕೆಲವು ನಿರ್ಧಾರಗಳನ್ನು ಉಲ್ಲೇಖಿಸಿ ಟೀಕಿಸಿದ್ದೆನೆಯೆ ಹೊರತು ದೇಶದ ವಿರುದ್ದ ಅಲ್ಲ. ಅವರ ನಡೆಯ ಕಾರಣದಿಂದಾಗಿ ಶೂನ್ಯವಿದ್ದ ಲಕ್ಷದ್ವೀಪದಲ್ಲಿ ಕೊರೊನಾ ತೀವ್ರವಾಗಿ ಹರಡುತ್ತಿದೆ. ಆದ್ದರಿಂದಲೆ ಅವರನ್ನು ನಾನು ಜೈವಿಕ ಅಸ್ತ್ರ ಎಂದು ಕರೆದಿದ್ದೇನೆ” ಎಂದು ತಿಳಿಸಿದ್ದರು.

ಆಯಿಷಾ ಸುಲ್ತಾನ ಅವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸುತ್ತಿದ್ದಂತೆ ಅನೇಕ ಸ್ಥಳೀಯ ಬಿಜೆಪಿ ನಾಯಕರು ಪಕ್ಷವನ್ನು ತೊರೆದು ಪ್ರತಿಭಟಿಸಿದ್ದಾರೆ.

ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರು ಪರಿಚಯಿಸಿದ ಹೊಸ ನಿಯಮಗಳ ವಿರುದ್ದ, ಒಂದು ತಿಂಗಳಿಗಿಂತಲೂ ಹೆಚ್ಚು ಕಾಲದಿಂದ ದ್ವೀಪವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಹೊಸ ನೀತಿಗಳು ದ್ವೀಪವಾಸಿಗಳ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ದೇಶದ್ರೋಹ ಆರೋಪದ ವಿರುದ್ದ ಕೇರಳ ಹೈಕೋರ್ಟ್‌ ಮಟ್ಟಿಲೇರಿದ ನಿರ್ಮಾಪಕಿ ಆಯಿಷಾ ಸುಲ್ತಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...