Homeಕರ್ನಾಟಕಜೂನ್ 21 ರಿಂದ ಬಿಎಂಟಿಸಿ ಸಂಚಾರ ಆರಂಭ: ಷರತ್ತುಗಳು ಅನ್ವಯ

ಜೂನ್ 21 ರಿಂದ ಬಿಎಂಟಿಸಿ ಸಂಚಾರ ಆರಂಭ: ಷರತ್ತುಗಳು ಅನ್ವಯ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದು ಸಾರ್ವಜನಿಕ ಸಾರಿಗೆಯನ್ನು ಆರಂಭಿಸಬೇಕೆಂದು ಸಾರ್ವಜನಿಕರಿಂದ ತೀವ್ರ ಒತ್ತಡ, ಮನವಿ ಕೇಳಿಬಂದ ಹಿನ್ನಲೆಯಲ್ಲಿ ಬಿಬಿಎಂಪಿ ಸೋಮವಾರ ಜೂ.21ರಿಂದ ಬಿಎಂಟಿಸಿ ಸಂಚಾರ ಆರಂಭಿಸಲು ಒಪ್ಪಿಗೆ ನೀಡಿದೆ.

ಜೂನ್ 21ರಿಂದ 2ನೇ ಹಂತದ ಅನ್​ಲಾಕ್​ ಪ್ರಕ್ರಿಯೆ ಆರಂಭವಾಗಲಿದ್ದು, ಲಾಕ್​ಡೌನ್​ ಕಾರಣದಿಂದ ಸಂಚಾರ ಸ್ಥಗಿತಗೊಳಿಸಿದ್ದ ಬಿಎಂಟಿಸಿಗೆ ಕೆಲವು ಷರತ್ತುಗಳೊಂದಿಗೆ ಬಸ್‌ಗಳನ್ನು ರಸ್ತೆಗಿಳಿಸಲು ಬಿಬಿಎಂಪಿ ಒಪ್ಪಿಗೆ ಸೂಚಿಸಿದೆ.

ಗುರುವಾರ ಬಿಬಿಎಂಪಿ ಕಚೇರಿಯಲ್ಲಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು, ನಗರ ಪೊಲೀಸ್​ ಕಮಿಷನರ್​ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್ ಮತ್ತಷ್ಟು ಸಡಿಲಿಸುವ ಮುನ್ಸೂಚನೆ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ನಗರದಲ್ಲಿ ಬಿಎಂಟಿಸಿ ಬಸ್​ಗಳನ್ನ ರಸ್ತೆಗಿಳಿಸಲು ಜನಪ್ರತಿನಿಧಿಗಳು, ಸಾರ್ವಜನಿಕರಿಂದ ಒತ್ತಡ ಕೇಳಿ ಬಂದಿತ್ತು. ಬಿಬಿಎಂಪಿ ವ್ಯಾಪ್ತಿಯಲ್ಲಿ ಬಸ್​ ಸಂಚಾರಕ್ಕೆ ಅವಕಾಶ ನೀಡುವಂತೆ ಬಿಬಿಎಂಪಿ ಮೇಲೆ ಒತ್ತಡ ಇತ್ತು. ಹೀಗಾಗಿ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡಲಾಗಿದೆ.

1. ಶೇಕಡಾ 50 ರಷ್ಟು ಬಸ್ಸುಗಳನ್ನ ಮಾತ್ರ ರಸ್ತೆಗಿಳಿಸಬೇಕು.
2. ಮಾಸ್ಕ್,‌ ಸಾಮಾಜಿಕ ಅಂತರ ಕಡ್ಡಾಯವಾಗಿರಬೇಕು

3.ಬಸ್‌ಗಳಲ್ಲಿ ಶೇಕಡಾ 50 ರಷ್ಟು ಪ್ರಯಾಣಿಕರಿಗೆ ಮಾತ್ರ ಅನುಮತಿ.
4. ಬಸ್‌ಗಳಲ್ಲಿ ಒಂದು ಸೀಟ್ ಬಿಟ್ಟು ಒಂದು ಸೀಟ್‌ನಲ್ಲಿ ಕುಳಿತು ಪ್ರಯಾಣಿಸಲು ಅವಕಾಶ.
5. ನಿಂತುಕೊಂಡು ಪ್ರಯಾಣಿಸೋದಕ್ಕೆ ಅವಕಾಶವಿಲ್ಲ.
6. ಬಸ್​​ ನಿಲ್ದಾಣಗಳಲ್ಲಿ ಜನಸಂದಣಿ ಆಗದಂತೆ ನೋಡಿಕೊಳ್ಳುವುದು ಪೊಲೀಸ್​ ಇಲಾಖೆ ಮತ್ತು ಬಿಎಂಟಿಸಿ ಅಧಿಕಾರಿಗಳ ಜವಾಬ್ದಾರಿ.
7. ನೈಟ್ ಕರ್ಫ್ಯೂ ಆರಂಭವಾಗುವ 7 ಗಂಟೆ ಒಳಗೆ ಬಸ್​ ಸಂಚಾರ ನಿಲ್ಲಿಸಬೇಕು.

8. ಮೆಜೆಸ್ಟಿಕ್, ಟರ್ಮಿನಲ್ಸ್ ಮತ್ತು ಪ್ರಮುಖ ಬಸ್​ ನಿಲ್ದಾಣಗಳಲ್ಲಿ ಕೊರೊನಾ ಪರೀಕ್ಷೆ ಕಡ್ಡಾಯ ಮಾಡಲಾಗಿದೆ.

ಅನ್‌ಲಾಕ್ ಮೊದಲ ಹಂತದಲ್ಲೇ ಶೇಕಡಾ 50 ರಷ್ಟು ಬಿಎಂಟಿಇ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರಕ್ಕೆ ಅನುಮತಿ ನಿಡಲಾಗುತ್ತದೆ ಎನ್ನಲಾಗಿತ್ತು. ಆದರೆ, ಸೋಂಕಿನ ಪ್ರಮಾಣ ಹೆಚ್ಚಳವಾಗುವ ಕಾರಣದಿಂದ ಬಿಬಿಎಂಪಿ ಬಸ್ ಸಂಚಾರಕ್ಕೆ ಅನುಮತಿ ಬೇಡ ಎಂದು ತಿಳಿಸಿತ್ತು.


ಇದನ್ನೂ ಓದಿ: ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಬಿಎಸ್‌ವೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...