Homeಮುಖಪುಟನಿಯಂತ್ರಿಸಲು ಸಾಧ್ಯವಾಗದ ಎಲ್ಲವನ್ನೂ ಮೋದಿ ಸರ್ಕಾರ ಧ್ವಂಸ ಮಾಡುತ್ತಿದೆ: ಮಮತಾ ಬ್ಯಾನರ್ಜಿ

ನಿಯಂತ್ರಿಸಲು ಸಾಧ್ಯವಾಗದ ಎಲ್ಲವನ್ನೂ ಮೋದಿ ಸರ್ಕಾರ ಧ್ವಂಸ ಮಾಡುತ್ತಿದೆ: ಮಮತಾ ಬ್ಯಾನರ್ಜಿ

- Advertisement -
- Advertisement -

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಟ್ವಿಟ್ಟರ್ ಅನ್ನು ನಿಯಂತ್ರಿಸುತ್ತಿರುವ ಪ್ರಯತ್ನಗಳ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ. ಒಕ್ಕೂಟ ಸರ್ಕಾರವು ಟ್ವಿಟರ್‌‌ ಮೇಲೆ ಪ್ರಭಾವ ಬೀರಲು ವಿಫಲವಾಗಿದೆ ಆದ್ದರಿಂದ ಇದೀಗ ಅವನ್ನು ಧ್ವಂಸ ಮಾಡಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಒಕ್ಕೂಟ ಸರ್ಕಾರ ತನ್ನ ಸರ್ಕಾರವನ್ನು ಕೂಡಾ ಇದೇ ರೀತಿ ನಡೆಸಿಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿ ಅವರು, “ಒಕ್ಕೂಟ ಸರ್ಕಾರಕ್ಕೆ ಟ್ವಿಟರ್‌ ಅನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ, ಆದ್ದರಿಂದ ಅದನ್ನು ಧ್ವಂಸ ಮಾಡಲು ಪ್ರಯತ್ನಿಸುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ. ಒಕ್ಕೂಟಕ್ಕೆ ನಿರ್ವಹಿಸಲು ಸಾಧ್ಯವಾಗದ ಎಲ್ಲರೊಂದಿಗೆ ಹಾಗೆ ಮಾಡಲು ಪ್ರಯತ್ನಿಸುತ್ತಿದೆ. ಅವರಿಗೆ ನನ್ನನ್ನು ನಿಯಂತ್ರಿಸಲು ಸಾಧ್ಯಗಿಲ್ಲ, ಅದಕ್ಕಾಗಿಯೇ ಅವರು ನನ್ನ ಸರ್ಕಾರವನ್ನು ಧ್ವಂಸ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾವು ಪ್ರಮಾಣಪತ್ರ ಹೊಂದಿದ ಗೂಂಡಾಗಳು: ಶಿವಸೇನೆಯ ಸಂಜಯ್ ರಾವತ್

ಐಟಿ ನಿಯಮಗಳನ್ನು ಪಾಲಿಸದಿರುವುದು ಮತ್ತು ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕಡ್ಡಾಯವಾಗಿರುವ ಪ್ರಮುಖ ಸಿಬ್ಬಂದಿಯನ್ನು ನೇಮಿಸುವಲ್ಲಿ ವಿಫಲವಾದ ಕಾರಣ ಟ್ವಿಟರ್‌ ಭಾರತದಲ್ಲಿ ಕಾನೂನು ರಕ್ಷಣೆಯನ್ನು ಕಳೆದುಕೊಂಡಿದೆ. ಆದ್ದರಿಂದ ಈಗ ಟ್ವಿಟರ್‌‌ನಲ್ಲಿ ವ್ಯಕ್ತಿಯೊಬ್ಬರು ಯಾವುದೆ ಆಕ್ಷೇಪಾರ್ಹ ವಿಷಯಗಳನ್ನು ಹಾಕಿದರೆ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಟ್ವಿಟರ್‌ ಮೇಲೆ ಕೂಡಾ ಕ್ರಮ ಕೈಗೊಳ್ಳಬಹುದಾಗಿದೆ.

ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ ಮುಂದುವರೆಸಿದೆ ಎಂಬ ಬಿಜೆಪಿಯ ಆರೋಪಗಳ ಕುರಿತು ಬೆಳಕು ಚೆಲ್ಲಿದ ಮುಖ್ಯಮಂತ್ರಿ, “ಇದು ಬಿಜೆಪಿಯ ಗಿಮಿಕ್ ಆಗಿದ್ದು, ಮಾಡಲ್ಪಟ್ಟ ಎಲ್ಲಾ ಆರೋಪಗಳು ಸಂಪೂರ್ಣವಾಗಿ ಆಧಾರರಹಿತ” ಎಂದು ಹೇಳಿದ್ದಾರೆ.

“ರಾಜ್ಯದಲ್ಲಿ ಈಗ ಯಾವುದೇ ರಾಜಕೀಯ ಹಿಂಸಾಚಾರಗಳು ನಡೆಯುತ್ತಿಲ್ಲ. ಒಂದು ಅಥವಾ ಎರಡು ವಿರಳ ಘಟನೆಗಳು ನಡೆದಿರಬಹುದು, ಆದರೆ ಅವುಗಳನ್ನು ರಾಜಕೀಯ ಹಿಂಸಾಚಾರದ ಘಟನೆಗಳೆಂದು ಹಣೆಪಟ್ಟಿ ಕಟ್ಟಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...