Homeಕರೋನಾ ತಲ್ಲಣಕೊರೊನಾದಿಂದ ಮೃತಪಟ್ಟವರಿಗೆ 4 ಲಕ್ಷ ರೂ.ಪರಿಹಾರ ನೀಡಲಾಗದು: ಒಕ್ಕೂಟ ಸರ್ಕಾರ

ಕೊರೊನಾದಿಂದ ಮೃತಪಟ್ಟವರಿಗೆ 4 ಲಕ್ಷ ರೂ.ಪರಿಹಾರ ನೀಡಲಾಗದು: ಒಕ್ಕೂಟ ಸರ್ಕಾರ

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದಿಂದ ಮೃತಪಟ್ಟ ಎಲ್ಲರಿಗೂ 4 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗದು ಎಂದು ಒಕ್ಕೂಟ ಸರ್ಕಾರ ಸುಪ್ರೀಂ ಕೋರ್ಟ್​ಗೆ ಭಾನುವಾರ ಅಫಿಡವಿಟ್​ ಸಲ್ಲಿಸಿದೆ. ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ತೆರಿಗೆ ಆದಾಯ ಕಡಿಮೆಯಾಗಿದೆ. ಜೊತೆಗೆ ಆರೋಗ್ಯ ವೆಚ್ಚಗಳ ಹೆಚ್ಚಳದಿಂದಾಗಿ ರಾಜ್ಯಗಳು ಮತ್ತು ಕೇಂದ್ರದ ಹಣಕಾಸು ಪರಿಸ್ಥಿತಿ ತೀವ್ರ ಒತ್ತಡದಲ್ಲಿದೆ ಎಂದು ಮಾಹಿತಿ ನೀಡಿದೆ.

“ಎಲ್ಲರಿಗೂ ಪರಿಹಾರ ನೀಡಿದರೆ, ವಿಪತ್ತು ಪರಿಹಾರ ನಿಧಿಗಳನ್ನು ಖಾಲಿ ಮಾಡಿದಂತಾಗುತ್ತದೆ ಮತ್ತು ಕೊರೊನಾ ಭವಿಷ್ಯದ ಅಲೆಗಳನ್ನು ಎದುರಿಸಲು ಕೇಂದ್ರ ಮತ್ತು ರಾಜ್ಯಗಳ ಸಿದ್ಧತೆಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಒಕ್ಕೂಟ ಸರ್ಕಾರ ಸುಪ್ರೀಂ ಕೋರ್ಟ್​ಗೆ ಭಾನುವಾರ ಅಫಿಡವಿಟ್​ ಸಲ್ಲಿಸಿದೆ.

ವಕೀಲರಾದ ಗೌರವ್ ಕುಮಾರ್ ಬನ್ಸಾಲ್ ಮತ್ತು ರೀಪಕ್ ಕನ್ಸಾಲ್, “ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 12 ಅನ್ನು ಉಲ್ಲೇಖಿಸಿ ಇದರ ಅಡಿಯಲ್ಲಿ  ವಿಪತ್ತು ಪೀಡಿತ ವ್ಯಕ್ತಿಗಳಿಗೆ ಕನಿಷ್ಟ ಪರಿಹಾರ ನೀಡಬೇಕು” ಎಂದು ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಉತ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ ನೀಡಿತ್ತು. ಅದರಂತೆ ಒಕ್ಕೂಟ ಸರ್ಕಾರ ಹರಿಹಾರ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ: ಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

“ಕೊರೋನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ರಾಜ್ಯ ಹಾಗೂ ಕೇಂದ್ರದ ತೆರಿಗೆ ಆದಾಯ ಕಡಿಮೆಯಾಗಿದೆ. ಇದೇ ಸಂದರ್ಭದಲ್ಲಿ ಆರೋಗ್ಯ ವೆಚ್ಚಗಳು ಅಧಿಕವಾಗಿದೆ. ಹೀಗಾಗಿ ರಾಜ್ಯಗಳು ಮತ್ತು ಕೇಂದ್ರದ ಹಣಕಾಸು ಪರಿಸ್ಥಿತಿ ತೀವ್ರ ಒತ್ತಡದಲ್ಲಿದೆ. ಈಗಾಗಲೇ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ 12 ಅಧಿಸೂಚನೆಗಳಿಗೆ ಮಾಜಿ ಗ್ರೇಟಿಯಾ ಪರಿಹಾರವನ್ನು ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (ಎಸ್‌ಡಿಆರ್‌ಎಫ್) ಮೂಲಕ ರಾಜ್ಯ ಸರ್ಕಾರಗಳಿಗೆ ಒದಗಿಸಲಾಗಿದೆ. 2021-22ರ ವಾರ್ಷಿಕ ಹಂಚಿಕೆ ಎಸ್‌ಡಿಆರ್‌ಎಫ್, ಎಲ್ಲಾ ರಾಜ್ಯಗಳಿಗೆ ಸೇರಿ 22,184 ಕೋಟಿ ರೂ ನೀಡಲಾಗಿದೆ” ಎಂದಿದೆ.

“ಇಂತಹ ಸಂದರ್ಭದಲ್ಲಿ ಕೊರೊನಾ ಮುಂದಿನ ಅಲೆಗಳು ಉಂಟು ಮಾಡಬಹುದಾದ ಅನಾಹುತಗಳನ್ನು ಎದುರಿಸುವುದು ಕಷ್ಟವಾಗಲಿದೆ. ಸರ್ಕಾರಗಳ ಖಜಾನೆ ಖಾಲಿಯಾದರೆ ಆರ್ಥಿಕತೆಯೂ ಮತ್ತಷ್ಟು ಕುಸಿಯಲಿದೆ. ಸರ್ಕಾರಗಳ ಸಂಪನ್ಮೂಲಗಳಿಗೆ ಮಿತಿಗಳಿವೆ ಮತ್ತು ಎಕ್ಸ್-ಗ್ರೇಟಿಯಾ ಮೂಲಕ ಯಾವುದೇ ಹೆಚ್ಚುವರಿ ಹೊರೆ ಇತರ ಆರೋಗ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಲಭ್ಯವಿರುವ ಹಣವನ್ನು ಕಡಿಮೆ ಮಾಡುತ್ತದೆ” ಎಂದು ಅಫಿಡವಿಟ್​ನಲ್ಲಿ ತಿಳಿಸಿದೆ.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಪ್ರವಾಹ, ಭೂಕಂಪ, ಚಂಡಮಾರುತ ಇತ್ಯಾದಿಗಳಿಗಿಂತ ಭಿನ್ನವಾಗಿ, ತಡೆಗಟ್ಟುವಿಕೆ, ಪರೀಕ್ಷೆ, ಚಿಕಿತ್ಸೆ, ಸಂಪರ್ಕತಡೆ, ಆಸ್ಪತ್ರೆಗೆ ಸೇರಿಸುವುದು, ಔಷಧಿಗಳು ಮತ್ತು ವ್ಯಾಕ್ಸಿನೇಷನ್ ಇತ್ಯಾದಿಗಳಿಗಾಗಿ ಕೇಂದ್ರ ಮತ್ತು ರಾಜ್ಯಗಳು ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿವೆ. ಅದು ಇನ್ನೂ ಮುಂದುವರೆದಿದೆ. ಅಲ್ಲದೆ ಇನ್ನೂ ಎಷ್ಟು ಹಣ ಬೇಕು ಎಂದು ತಿಳಿದಿಲ್ಲ. ಹೀಗಾಗಿ, ಕೊರೊನಾ ಭವಿಷ್ಯದ ಅಲೆಗಳನ್ನು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ” ಎಂದು ಸುಪ್ರೀಂ ಕೋರ್ಟ್​ಗೆ ತಿಳಿಸಲಾಗಿದೆ.


ಇದನ್ನೂ ಓದಿ: ಕೊರೊನಾ ನಿಯಮಗಳ ಉಲ್ಲಂಘನೆ, 3ನೇ ಅಲೆಗೆ ಕಾರಣವಾಗಬಹುದು: ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...