Homeಮುಖಪುಟಪಂಜಾಬ್ ಕಾಂಗ್ರೆಸ್‌ನಲ್ಲಿ ಬಗೆಹರಿಯದ ಭಿನ್ನಮತ - ಹೈಕಮಾಂಡ್ ಅಂಗಳಕ್ಕೆ ಸಮಸ್ಯೆ

ಪಂಜಾಬ್ ಕಾಂಗ್ರೆಸ್‌ನಲ್ಲಿ ಬಗೆಹರಿಯದ ಭಿನ್ನಮತ – ಹೈಕಮಾಂಡ್ ಅಂಗಳಕ್ಕೆ ಸಮಸ್ಯೆ

- Advertisement -
- Advertisement -

ಪಂಜಾಬ್‌ನಲ್ಲಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ನಡುವಿನ ಸಂಬಂಧದಲ್ಲಿ ಸಾಕಷ್ಟು ಬಿರುಕು ಮೂಡಿದೆ. ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್  ಹಾಗೂ ಶಾಸಕ ನವಜೋತ್ ಸಿಂಗ್ ಸಿಧು ದೀರ್ಘ ಸಮಯದಿಂದ  ಪರಸ್ಪರ ಬಹಿರಂಗ ಆರೊಪಗಳಲ್ಲಿ ತೊಡಗಿದ್ದಾರೆ. ಈಗ ಸಿಧು ಮತ್ತು ಕ್ಯಾಪ್ಟನ್ ನಡುವಿನ ವಾಗ್ಯುದ್ದ ತಾರಕ್ಕೇರಿದ್ದು ಭಿನ್ನಮತದ ಸಮಸ್ಯೆ ದೆಹಲಿಯ ಅಂಗಳವನ್ನು ತಲುಪಿದೆ.

ಪಂಜಾಬ್ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ಪಕ್ಷದಲ್ಲಿನ ಭಿನ್ನಮತ ಕಾಂಗ್ರೆಸ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಕಾಂಗ್ರೆಸ್‌ ಹೈಕಮಾಂಡ್ ಭಿನ್ನಮತ ಶಮನಕ್ಕಾಗಿ ಅನೇಕ ಪ್ರಯತ್ನಗಳನ್ನು ಮಾಡುತ್ತಿದ್ದರೂ ಪಂಜಾಬ್ ಕಾಂಗ್ರೆಸ್‌ನ ಪರಿಸ್ಥಿತಿ ಮಾತ್ರ ಬಗೆಹರಿದಿಲ್ಲ. ಕಳೆದವಾರ ಕಾಂಗ್ರೆಸ್‌ ಅಧ್ಯಕ್ಷೆ ಸೊನಿಯಾಗಾಂಧಿ ಅವರು ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ದೆಹಲಿಗೆ ಕರೆಸಿಕೊಂಡು ಪಕ್ಷದಲ್ಲಿನ ಅಸಮಾಧಾನವನ್ನು ತಣ್ಣಗೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಇದೆಲ್ಲ ಬೆಳವಣಿಗೆಗಳ ನಂತರವೂ ಅಮರಿಂದರ್ ಸಿಂಗ್ ಮತ್ತು ಸಿಧು ನಡುವಿನ ಭಿನ್ನಮತ ತಣ್ಣಗಾದಂತೆ ಕಾಣುತ್ತಿಲ್ಲ. ಇಂದು ಮತ್ತೊಮ್ಮೆ ನವಜೋತ್ ಸಿಂಗ್ ಸಿಧು ಅವರು ಕ್ಯಾಪ್ಟನ್ ಅಮರಿಂದರ್ ಸಿಂಗ್ ವಿರುದ್ಧ ಪರೊಕ್ಷವಾಗಿ ದಾಳಿ ನಡೆಸಿದ್ದಾರೆ.

ಇಂದು ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಮೂರು ಜನರ ಕಾಂಗ್ರೆಸ್‌ ನಾಯಕರ ಸಮಿತಿಯನ್ನು ಭೇಟಿಯಾಗಲು ಅಮರಿಂದರ್ ಸಿಂಗ್ ದೆಹಲಿಗೆ ಭೇಟಿ ನೀಡಿದ್ದಾರೆ. ಈ ಸಮಿತಿ ಮುಂದೆ ಅಮರಿಂದರ್ ಸಿಂಗ್ ಪಂಜಾಬ್‌ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ವಿವರಿಸಲಿದ್ದಾರೆ.

ಇದರ ನಡುವೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ನವಜ್ಯೋತ್‌ ಸಿಂಗ್ ಸಿಧು ಪಂಜಾಬ್‌ನಲ್ಲಿ ಎರಡು ಕುಟುಂಬಗಳು ಮಾತ್ರ ಅಧಿಕಾರದ ಲಾಭವನ್ನು ಪಡೆಯುತ್ತಿವೆ ಎಂದು ಹೆಳುವ ಮುಲಕ ಕ್ಯಾಪ್ಟನ್ ಅಮರಿಂದರ್ ಸಿಂಗ್ ವಿರುದ್ಧ ಪರೋಕ್ಷವಾದ ಆರೊಪವನ್ನು ಮಾಡಿದ್ದಾರೆ.

2019 ರಲ್ಲಿ ನವಜೋತ್ ಸಿಂಗ್‌ ಸಿಧು ಅವರು ಕ್ಯಾಪ್ಟನ್ ಅಮರಿಂದರ್ ಸಿಂಗ್ ಸಚಿವ ಸಂಪುಟದಿಂದ ಹೊರಬಿದ್ದ ಗಳಿಗೆಯಿಂದಲೇ ಆರಂಭವಾದ ಸಿಧು ಮತ್ತು ಕ್ಯಾಪ್ಟನ್ ನಡುವಿನ ಮನಸ್ತಾಪ ಈಗ ತಿವ್ರ ಸ್ವರೂಪವನ್ನು ಪಡೆದುಕೊಂಡಿದೆ. 117 ಜನ ಶಾಸಕರನ್ನು ಹೊಂದಿರುವ ಪಂಜಾಬ್‌ ಕಾಂಗ್ರೆಸ್‌ನಲ್ಲಿ 73 ಜನರು ತಮ್ಮ ಪರವಾಗಿದ್ದಾರೆ. ತಾವು ಪಕ್ಷದಲ್ಲಿ ಯಾವುದೇ ಬಂಡಾಯ ಚಟುವಟಿಕೆಗಳನ್ನು ನಡೆಸುತ್ತಿಲ್ಲ. ಬದಲಾಗಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರು ದಿನನಿತ್ಯ ಒಂದೊಂದು ಹೊಸ ಸುಳ್ಳುಗಳನ್ನು ಹೇಳುತ್ತಾರೆ ಎಂದು ಸಿಧು ಆರೋಪಿಸಿದ್ದಾರೆ.

ಇದರ ನಡುವೆ ನವಜೋತ್ ಸಿಂಗ್ ಸಿಧು ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಕಾಂಗ್ರೆಸ್‌ ಹೈಕಮಾಂಡ್ ಸೂಚಿಸಿದ್ದು ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಿ ಬಂಡಾಯವನ್ನು ಶಮನಗೊಳಿಸಿಕೊಳ್ಳುವಂತೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಮುಂದೆ ಪರಿಹಾರ ಮಾರ್ಗೋಪಾಯಗಳನ್ನು ಇಟ್ಟಿದೆ. ಆದರೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ನವಜೋತ್ ಸಿಂಗ್ ಸಿಧು ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಮತ್ತು ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲು ಸಿದ್ಧರಿಲ್ಲ ಎಂದು ಮೂಲಗಳು ತಿಳಿಸಿವೆ.

ಚುನಾವಣೆಯ ಸಂದರ್ಭದಲ್ಲಿ ಮಾತ್ರ ಸಿಧು ಅವರನ್ನು ಅಮರಿಂದರ್ ಸಿಂಗ್ ಕರೆಯುತ್ತಾರೆ. ಪ್ರಚಾರ ಸಭೆಗಳಿಗೆ ಮಾತ್ರ ನವಜೋತ್ ಸಿಂಗ್ ಸಿಧು ಬೇಕು. ಅದರೆ ಸರ್ಕಾರ ನಡೆಸುವ ಸಂದರ್ಭದಲ್ಲಿ ಮಾತ್ರ ಸಿಧು ಮಾತಿಗೆ ಕ್ಯಾಪ್ಟನ್ ಯಾವ ಬೆಲೆಯನ್ನು ನೀಡುವುದಿಲ್ಲ. ತಮ್ಮನ್ನು ಒಂದು ರೀತಿಯಲ್ಲಿ ಪ್ರಚಾರಕ್ಕೆ ಮಾತ್ರ ಬಳಸಿಕೊಳ್ಳಲಾಗುತ್ತಿದೆ ಎಂದು ಸಿಧು ಕ್ಯಾಪ್ಟನ್ ಅಮರಿಂದರ್ ಸಿಂಗ್ ವಿರುದ್ಧ ಆರೋಪಿಸಿದ್ದಾರೆ.

ಸದ್ಯ ಅಮರಿಂದರ್ ಸಿಂಗ್ ದೆಹಲಿಯಲ್ಲಿ ಇದ್ದು ಹೈಕಮಾಂಡ್ ನಾಯಕರ ಭೇಟಿಯ ನಂತರ ನವಜೋತ್ ಸಿಂಗ್ ವಿಚಾರದಲ್ಲಿ ಅಮರಿಂದರ್ ಸಿಂಗ್‌ ನಿಲುವುಗಳು ಬದಲಾಗುವ ಸಾಧ್ಯತೆಗಳಿವೆ. ಕಳೆದವಾರ ದೆಹಲಿ ಭೇಟಿಯ ನಂತರ ಅಮರಿಂದರ್ ಸಿಂಗ್ ನವಜೋತ್ ಸಿಂಗ್ ಸಿದ್ಧು ಅವರಿಗೆ ಸೂಕ್ತ ಸ್ಥಾನಮಾನವನ್ನು ನೀಡಲು ಕೆಲವು ಕ್ರಮಗಳನ್ನು ಕೈಗೊಂಡಿದ್ದರು. ಅದರೆ ಸಿದ್ದು ಅವರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಒಪ್ಪಿರಲಿಲ್ಲ. ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಹೈಕಮಾಂಡ್ ಭೇಟಿ ಪಂಜಾಬ್‌ ಕಾಂಗ್ರೆಸ್‌ನ ಸಮಸ್ಯೆಗಳನ್ನು ಬಗೆಹರಿಸಲಿದೆಯೇ? ಅಥವಾ ಭಿನ್ನಮತಗಳು ಹೀಗೆ ಮುಂದುವರಿಯಲಿವೆಯೇ ಎಂಬುದರ ಕುರಿತು ಸದ್ಯಕ್ಕೆ ಏನನ್ನೂ ಹೇಳಲು ಸಾಧ್ಯವಿಲ್ಲ.


ಇದನ್ನೂ ಓದಿ : ಪತ್ರಕರ್ತೆ ರಾಣಾ ಅಯ್ಯೂಬ್ ಅವರ ಬಂಧನಕ್ಕೆ ಬಾಂಬೆ ಹೈಕೋರ್ಟ್‌ನಿಂದ 4 ವಾರಗಳ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...