ವಂಚನೆ ಮಾಡಿ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿ ಮಾಡಿದ ಆರ್ಥಿಕ ವಂಚನೆಯಿಂದಾಗಿ ನಷ್ಟ ಅನುಭವಿಸಿದ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ , 8,441 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವರ್ಗಾಯಿಸಿದೆ. ಇದುವರೆಗೆ ಒಟ್ಟು 9,371.17 ಕೋಟಿ ರೂ.ಗಳ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವರ್ಗಾಯಿಸಿದೆ.
ಪರಾರಿಯಾದ ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ, 22,586 ಕೋಟಿ ವಂಚಿಸಿದ್ದಾರೆ. ಅದರಲ್ಲಿ 80.45% (, 18,170 ಕೋಟಿ) ವಶಪಡಿಸಿಕೊಂಡಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಮೂವರು ವಂಚಕರಿಂದ 18,170.02 ಕೋಟಿ ರೂಗಳ (ಬ್ಯಾಂಕುಗಳ ಒಟ್ಟು ನಷ್ಟದ 80.45%) ಆಸ್ತಿಯನ್ನು ಪಿಎಂಎಲ್‌ಎ ಅಡಿಯಲ್ಲಿ ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ. ಈ ಪೈಕಿ, ಒಂದು ಭಾಗ (9,371.17 ಕೋಟಿ ರೂ)ದ ಆಸ್ತಿಯನ್ನು ಸರ್ಕಾರಿ ಬ್ಯಾಂಕುಗಳು ಮತ್ತು ಸರ್ಕಾರಕ್ಕೆ ಇಡಿ ವರ್ಗಾಯಿಸಿದೆ.
ಇದನ್ನೂ ಓದಿ: ತಲೆಬೋಳಿಸಿ, ಗಂಗಾಜಲದಿಂದ ಪ್ರಾಯಶ್ಚಿತ- ಮತ್ತೆ ಟಿಎಂಸಿ ಸೇರಿದ ಬಿಜೆಪಿ ಕಾರ್ಯಕರ್ತರು!
ಮುಂಬೈನ ವಿಶೇಷ ಮನಿ ಲಾಂಡರಿಂಗ್ ಕಾಯ್ದೆ (ಪಿಎಂಎಲ್‌ಎ) ಯ ಆದೇಶದ ಪ್ರಕಾರ ಸಂಸ್ಥೆಯು ಸುಮಾರು 6,600 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ಎಸ್‌ಬಿಐ ನೇತೃತ್ವದ ಒಕ್ಕೂಟ ಬ್ಯಾಂಕುಗಳಿಗೆ ವರ್ಗಾಯಿಸಿದೆ ಎಂದು ತಿಳಿಸಿದೆ. ಷೇರುಗಳ ಮಾರಾಟದಿಂದ 800 ಕೋಟಿ ರೂ.ಗಳ ಹೆಚ್ಚಿನ ಹಣವು ಜೂನ್ 25 ರೊಳಗೆ ದೊರೆಯುತ್ತದೆ ಎಂದು ನಿರೀಕ್ಷಿಸಲಾಗಿರುವುದಾಗಿ ಕೇಂದ್ರ ತನಿಖಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಎಸ್‌ಬಿಐ ನೇತೃತ್ವದ ಒಕ್ಕೂಟದ ಪರವಾಗಿ ಡಿಆರ್‌ಟಿ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್‌ನ ಷೇರುಗಳನ್ನು 5,824.50 ಕೋಟಿ ರೂ.ಗಳಿಗೆ ಮಾರಾಟ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.
ಮೂವರು ಆರೋಪಿಗಳು ವಾಸಿಸುತ್ತಿರುವ ದೇಶಗಳಿಗೆ ಹಸ್ತಾಂತರದ ಮನವಿಗಳನ್ನು ಕಳುಹಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ವಿಜಯ್ ಮಲ್ಯ ಮತ್ತು ನೀರವ್ ಮೋದಿ ಲಂಡನ್‌ನಲ್ಲಿ ವಾಸಿಸುತ್ತಿದ್ದರೆ, ಮೆಹುಲ್ ಚೋಕ್ಸಿ ಭಾರತದಿಂದ ಓಡಿಹೋದ ನಂತರ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಕಾಣಿಸಿಕೊಂಡಿದ್ದಾರೆ.
ಹಸ್ತಾಂತರ ಪ್ರಕ್ರಿಯೆ ಕುರಿತು ಯುಕೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ವಿಜಯ್ ಮಲ್ಯ ಅವರಿಗೆ ಅನುಮತಿ ನಿರಾಕರಿಸಲಾಗಿದ್ದು, ಅವರನ್ನು ಭಾರತಕ್ಕೆ ಹಸ್ತಾಂತರಿಸುವುದು ಬಹುತೇಕ ಅಂತಿಮವಾಗಿದೆ. ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸುವುದು ಕೂಡ ಅಂತಿಮವಾಗಿದೆ. ಆದರೆ, ಮೆಹುಲ್ ಚೋಕ್ಸಿ ಮಾತ್ರ ಹಸ್ತಾಂತರ ಪ್ರಕ್ರಿಯೆ ಕುರಿತು ಆಂಟಿಗುವಾದಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ: TRP ಹಗರಣದ 2ನೇ ಚಾರ್ಜ್‌ಶೀಟ್‌ನಲ್ಲಿ ಅರ್ನಾಬ್ ಗೋಸ್ವಾಮಿ ಆರೋಪಿ


