Homeಕರ್ನಾಟಕಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

- Advertisement -
- Advertisement -

ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಸರ್ಕಾರವನ್ನು ತೊರೆದು ಬಿಜೆಪಿ ಸೇರಿ ಸರ್ಕಾರದಲ್ಲಿ ಮಂತ್ರಿಯಾಗಿರುವ ವಲಸೆ ಸಚಿವರಲ್ಲಿ ಈಗ ಅಭದ್ರತೆಯ ಭೀತಿ ಆರಂಭವಾಗಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬದಲಾವಣೆ ವಿಚಾರದಿಂದಲೇ ತಮ್ಮ ಸ್ಥಾನಗಳ ಕುರಿತು ಚಿಂತಿತರಾಗಿರುವ ವಲಸೆ ಸಚಿವರಿಗೆ ಸೋಮವಾರ ಸ್ಫೋಟಗೊಂಡಿರುವ ಅಬಕಾರಿ ಸಚಿವ ಕೆ.ಗೋಪಾಲಯ್ಯನವರ ಕುರಿತಾದ ಹಫ್ತಾ ಆಡಿಯೋ ಇನ್ನಷ್ಟು ಭೀತಿಯನ್ನು ಉಂಟುಮಾಡಿದೆ.

ಭ್ರಷ್ಟಾಚಾರ ವಿರೋಧಿ ಹೋರಾಟಗಾರ ರವಿಕೃಷ್ಣಾ ರೆಡ್ಡಿಯವರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಅಬಕಾರಿ ಸಚಿವ ಕೆ. ಗೋಪಾಲಯ್ಯನವರ ವಿರುದ್ಧ ಬೆಂಗಳೂರಿನ ಎಸಿಬಿಯಲ್ಲಿ ದೂರು ದಾಖಲಿಸಿದೆ. ಕರ್ನಾಟಕ ರಾಷ್ಟ್ರ ಸಮಿತಿಯ ಬೆಂಗಳೂರು ಘಟಕದ ಅಧ್ಯಕ್ಷ ಮಂಜುನಾಥ್ ಎಸ್‌, ರಾಜ್ಯ ಕಾರ್ಯದರ್ಶಿ ರಘುರಾಮ್ ಎಸ್‌ ಭಟ್ ಎಸಿಬಿಯ ಎಡಿಜಿಪಿಯವರಿಗೆ ನೀಡಿರುವ ದೂರಿನಲ್ಲಿ ಕೆ.ಗೋಪಾಲಯ್ಯನವರು ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಯುಪಿ ವಿಧಾನಸಭಾ ಚುನಾವಣೆ-ಆದಿತ್ಯನಾಥ್‌ ಮುಖ್ಯಮಂತ್ರಿ ಅಭ್ಯರ್ಥಿ‌: ಬಿಜೆಪಿ

ಹಿರಿಯ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ವಲಸೆ ಸಚಿವರಿಂದಲೆ ಸರ್ಕಾರ ದುರ್ಬಲವಾಗಿದೆ ಎಂಬ ಹೇಳಿಕೆಯನ್ನು ನೀಡಿ ಈಗಾಗಲೇ ಮೂಲ ಬಿಜೆಪಿಗರಿಗೆ ವಲಸೆ ಸಚಿವರ ಕುರಿತು ಇರುವ ಅಸಮಾಧಾನವನ್ನು ಹೊರಹಾಕಿದ್ದರು. ಈಗ ಕೆ. ಗೋಪಾಲಯ್ಯ ಅವರು ಜಿಲ್ಲೆಗಳಿಂದ ಪ್ರತಿ ತಿಂಗಳು 5 ಲಕ್ಷ ರೂಪಾಯಿ ಹಣ ಸಂಗ್ರಹಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಗೋಪಾಲಯ್ಯನವರು ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ 4 ಜನ ಅಧಿಕಾರಿಗಳನ್ನು ಅಮಾನತ್ತು ಮಾಡಿದ್ದಾರೆ. ಇಷ್ಟಕ್ಕೆ ಗೋಪಾಲಯ್ಯನವರ ಮೇಲಿನ ಲಂಚ ಸ್ವೀಕಾರ ಪ್ರಕರಣ ತಣ್ಣಗಾಗಿಲ್ಲ.

ಅಬಕಾರಿ ಸಚಿವ ಕೆ. ಗೋಪಾಲಯ್ಯನವರ ಮೇಲಿನ ಲಂಚ ಸ್ವೀಕಾರದ ಆಡಿಯೋ ಈಗ ವಿರೋಧ ಪಕ್ಷಗಳಿಗೆ ಮುಖ್ಯಮಂತ್ರಿ ಬಿ.ಎಸ್‌.ಯೆಡಿಯೂರಪ್ಪನವರ ಸರ್ಕಾರದ ಮೇಲೆ ಹರಿಹಾಯಲು ಒಳ್ಳೆಯ ಅಸ್ತ್ರವಾಗಿ ಮಾರ್ಪಟ್ಟಿದೆ. ಈಗಾಗಲೇ ಬಿಜೆಪಿಯ ವಿಧಾನಪರಿಷತ್ ಸದಸ್ಯ ಹೆಚ್‌.ವಿಶ್ವನಾಥ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ ವಿಜಯೇಂದ್ರ ಅವರ ಮೇಲೆ 20 ಸಾವಿರ ಕೋಟಿ ಭ್ರಷ್ಟಾಚಾರದ ಆರೋಪವನ್ನು ಮಾಡಿದ್ದಾರೆ. ಭಿನ್ನಮತ ಚಟುವಟಿಕೆ, ಮುಖ್ಯಮಂತ್ರಿ ಯಡಿಯೂರಪ್ಪನವರ ನಾಯಕತ್ವದ ಬಗೆಗಿನ ಅಸಮಾಧಾನದ ಜೊತೆಗೆ ಭ್ರಷ್ಟಾಚಾರದ ಆರೋಪಗಳು ಸರ್ಕಾರದ ವರ್ಚಸ್ಸಿಗೆ ಸರಿಪಡಿಸಲಾಗದ ಧಕ್ಕೆಯನ್ನು ಉಂಟುಮಾಡಿದೆ.

ಯಡಿಯೂರಪ್ಪನವರ ಸರ್ಕಾರ ಭ್ರಷ್ಟ ಸರ್ಕಾರ ಎಂಬ ಭಾವನೆ ಜನರಲ್ಲಿ ಬಲವಾಗಿ ಬೇರೂರ ತೊಡಗಿದ್ದು ವಿರೋಧ ಪಕ್ಷಗಳು ತಮ್ಮ ಆರೋಪಗಳ ಸುರಿಮಳೆಯ ಮೂಲಕ ಮೂಲಕ  ಮತ್ತೊಂದಿಷ್ಟು ತುಪ್ಪ ಸುರಿಯುತ್ತಿದ್ದಾರೆ. ಸರ್ಕಾರ ತನ್ನ ಮೇಲಿನ ಭ್ರಷ್ಟಾಚಾರದ ಆರೋಪಗಳಿಂದ ಹೊರಬರಲು ಅಬಕಾರಿ ಸಚಿವ ಕೆ. ಗೋಪಾಲಯ್ಯನವರ ತಲೆದಂಡವಾಗಬೇಕು ಎಂಬ ಕೂಗು ಬಿಜೆಪಿ ಸಚಿವರಿಂದಲೇ ಕೇಳಿಬಂದಿದೆ. ಕೆಲವು ಬಿಜೆಪಿ ನಾಯಕರು ಕೆ.ಗೋಪಾಲಯ್ಯನವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ಮುಖ್ಯ ಮಂತ್ರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ಮೊನ್ನೆ ಸೋಮವಾರ ಜೂನ್ 21 ರಂದು ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮೇಲಿನ ಅತ್ಯಾಚಾರದ ಪ್ರಕರಣದ ವಿಷಯ ಮತ್ತು ಗೋಪಲಾಯ್ಯನವರ ಆಡಿಯೋ ವಿಷಯ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. ಕ್ಯಾಬಿನೆಟ್ ಸಭೆ ಬಳಿಕ ಆರೋಗ್ಯ ಸಚಿವ ಕೆ ಸುಧಾಕರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಶ್ರೀಮಂತ್ ಪಾಟೀಲ್ ಸೇರಿ ಅನೇಕ ವಲಸೆ ಸಚಿವರು ಸಭೆ ಸೇರಿ ರಾಜ್ಯ ರಾಜಕೀಯದ ಬೆಳವಣಿಗೆ ಕುರಿತು ಚರ್ಚೆ ನಡೆಸಿದ್ದಾರೆ.

ಕಳೆದ ಜನವರಿ ನಂತರ ಅಂದರೆ ಹಿಂದಿನ 6 ತಿಂಗಳಿನಲ್ಲಿ ಕೆ.ನಾಗೇಶ್ ಮತ್ತು ರಮೇಶ್ ಜಾರಕಿಹೋಳಿ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಈ ಹಿಂದೆ ಅಬಕಾರಿ ಸಚಿವರಾಗಿದ್ದ ನಾಗೇಶ್ ಅವರನ್ನು ಕೂಡ ಭ್ರಷ್ಟಾಚಾರದ ಆರೋಪದ ಮೇಲೆ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಇದೆಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿರುವ ವಲಸೆ ಸಚಿವರಲ್ಲಿ ಸದ್ಯ ನಡುಕ ಆರಂಭವಾಗಿದ್ದು ತಮ್ಮ ತಮ್ಮ ಸಚಿವ ಸ್ಥಾನವನ್ನು ಉಳಿಸಿಕೊಳ್ಳುವುದು ಹೇಗೆ ಎಂಬ ಚಿಂತೆ ಕಾಡುತ್ತಿದೆ.

ಯಡಿಯೂರಪ್ಪನವರು ಇರುವ ವರೆಗೆ ನಮಗೆ ತೊಂದರೆಯಿಲ್ಲ. ಒಂದು ವೇಳೆ ಯಡಿಯೂರಪ್ಪನವರ ಬದಲಾವಣೆಯಾದರೆ ಮುಂದೆ ನಮ್ಮ ಕತೆ ಏನೆಂದು ತಿಳಿದಿಲ್ಲ ಎಂದು ಹೆಸರು ಹೇಳಲಿಚ್ಚಿಸದ ವಲಸೆ ಸಚಿವರೊಬ್ಬರು ಪ್ರತಿಕ್ರಿಯಿಸಿದ್ದಾರೆ ಎಂದು ವರದಿಯಾಗಿದೆ.

ಸರ್ಕಾರ ಕೆ. ಗೋಪಾಲಯ್ಯನವರಿಂದ ರಾಜೀನಾಮೆಯನ್ನು ಪಡೆಯುತ್ತದೆಯೇ ಎಂಬುದು ಸರ್ಕಾರಕ್ಕೆ ಬಿಟ್ಟ ವಿಚಾರ. ವಿರೋಧ ಪಕ್ಷಗಳು ಮಾತ್ರ ಕೆ.ಗೋಪಾಲಯ್ಯನವರ ರಾಜೀನಾಮೆಗೆ ಬಿಗಿ ಪಟ್ಟು ಹಿಡಿದಿವೆ. ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರ ಭ್ರಷ್ಟಾಚಾರಗಳಿಂದ ತುಂಬಿ ಹೋಗಿದೆ. ಲಂಚ ನೀಡಿದ ಅಧಿಕಾರಿಗಳಿಗೆ ಮಾತ್ರ ಯಾಕೆ ಶಿಕ್ಷೆ? ಹಫ್ತಾ ಪಡೆಯುವ ಸಚಿವರಿಗೆ ಯಾವುದೇ ಶಿಕ್ಷೆ ಇಲ್ಲವೇ ಎಂದು ಸರಣಿ ಟ್ವೀಟ್‌ಗಳ ಮೂಲಕ ಕೆ.ಗೋಪಲಯ್ಯನವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ ಕೂಡ ಕೆ.ಗೋಪಾಲಯ್ಯನವರ ಹಫ್ತಾ ಹಗರಣವನ್ನು ಗಂಭೀರವಾಗಿ  ಪರಿಗಣಿಸಿದ್ದು ಅಬಕಾರಿ ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿದೆ. ಉಗ್ರ ಹೋರಾಟದ ಎಚ್ಚರಿಕೆಯನ್ನೂ ಸಹ ನೀಡಿದೆ.

ಅಬಕಾರಿ ಸಚಿವ ಕೆ.ಗೋಪಾಲಯ್ಯನವರ ರಾಜೀನಾಮೆಗೆ ವಿರೋಧ ಪಕ್ಷಗಳ ಒತ್ತಡ, ಬಿಜೆಪಿಯ ಒಳಗಿನವರ ಒತ್ತಾಯ ತೀವ್ರಗೊಂಡಿರುವ ಈ ಹೊತ್ತಿನಲ್ಲಿ ವಲಸೆ ಸಚಿವರಲ್ಲಿ ಇನ್ನಿಲ್ಲದ ನಡುಕ ಆರಂಭವಾಗಿದೆ. ರಾಜ್ಯ ಸರ್ಕಾರದಲ್ಲಿ ತಮಗೆ ಹಿನ್ನಡೆಯಾಗುತ್ತಿರುವುದನ್ನು ಗಮನಿಸುತ್ತಿರುವ ಕೆಲ ವಲಸೆ ಸಚಿವರು ಸದ್ಯದಲ್ಲೇ ದೆಹಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಮುಂದೆ ಮೂಲ ಬಿಜೆಪಿಗರ ವಿರುದ್ಧ ದೂರನ್ನು ನೀಡಲು ನಿರ್ಧರಿಸಿದ್ದಾರೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕ ಭೇಟಿಯ ಸಂದರ್ಭದಲ್ಲಿ ನಾವು ನಮ್ಮ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ. ಅವರು ನಮಗೆ ದೆಹಲಿಗೆ ಬಂದು ಹೈಕಮಾಂಡ್ ಭೇಟಿಯಾಗಲು ಹೇಳಿದ್ದಾರೆ. ನಮ್ಮ ಸಮಸ್ಯೆಗಳನ್ನು ನಾವು ಹೈಕಮಾಂಡ್ ಮುಂದೆ ಇಡುತ್ತೇವೆ. ಕೆಲ ನಾಯಕರು ಬಿಜೆಪಿ ಸರ್ಕಾರ ರಚನೆಯಾಗಲು ನಮ್ಮ ಪಾತ್ರವೂ ಇರುವದನ್ನು ಮರೆತು ನಮ್ಮ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

-ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಮೈಸೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪತ್ತೆ: ಸಚಿವ ಸುಧಾಕರ್ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...