Homeಕರ್ನಾಟಕಬಿಜೆಪಿಯ ಆಡಳಿತದಲ್ಲಿ ರಾಜ್ಯ ‘ನತದೃಷ್ಟ ಕರ್ನಾಟಕ’ವಾಗಿದೆ: ಕಾಂಗ್ರೆಸ್‌ ಕಿಡಿ

ಬಿಜೆಪಿಯ ಆಡಳಿತದಲ್ಲಿ ರಾಜ್ಯ ‘ನತದೃಷ್ಟ ಕರ್ನಾಟಕ’ವಾಗಿದೆ: ಕಾಂಗ್ರೆಸ್‌ ಕಿಡಿ

- Advertisement -
- Advertisement -

ಸದಾನಂದ ಗೌಡ ಅವರು ಒಕ್ಕೂಟ ಸರ್ಕಾರದ ಮಂತ್ರಿಯಾಗಿರುವುದೂ ಒಂದೇ ನಾಯಿ ಮೊಲೆಯಲ್ಲಿ ಹಾಲಿರುವುದೂ ಒಂದೇ ಎಂದು ಕರ್ನಾಟಕ ಕಾಂಗ್ರೆಸ್ ಬುಧವಾರ ಆಕ್ರೋಶ ವ್ಯಕ್ತಪಡಿಸಿದೆ. ರೈತರು ಗೊಬ್ಬರಕ್ಕಾಗಿ ಪರದಾಡುತ್ತಿದ್ದರೂ ತನ್ನ ಸ್ವಂತ ರಾಜ್ಯಕ್ಕೆ ಗೊಬ್ಬರ ಪೂರೈಸದೆ ನಗುತ್ತಲೇ ಜಾರಿಕೊಳ್ಳುವ ಇವರನ್ನು ಕರ್ನಾಟಕದವರು ಎನ್ನಲು ನಾಚಿಕೆಯಾಗುತ್ತದೆ. ಯಾವ ಪುರುಷಾರ್ಥಕ್ಕೆ ಇವರಿಗೆ ಮಂತ್ರಿಗಿರಿ? ಎಂದು ಕಾಂಗ್ರೆಸ್ ಹೇಳಿದೆ.

ಇಂದು ಪಕ್ಷದ ಅಧೀಕೃತ ಟ್ವಿಟರ್‌ ಖಾತೆಯಿಂದ ಟ್ವೀಟ್ ಮಾಡಿರುವ ಕಾಂಗ್ರೆಸ್, “ಡಿ.ವಿ. ಸದಾನಂದ ಗೌಡ ಅವರು ಒಕ್ಕೂಟ ಸರ್ಕಾರದ ಮಂತ್ರಿಯಾಗಿರುವುದೂ ಒಂದೇ ನಾಯಿ ಮೊಲೆಯಲ್ಲಿ ಹಾಲಿರುವುದೂ ಒಂದೇ. ರಾಜ್ಯದಲ್ಲಿ ರೈತರು ಗೊಬ್ಬರಕ್ಕಾಗಿ ಪರದಾಡುತ್ತಿದ್ದರೂ ತನ್ನ ಸ್ವಂತ ರಾಜ್ಯಕ್ಕೆ ಗೊಬ್ಬರ ಪೂರೈಸದೆ ನಗುತ್ತಲೇ ಜಾರಿಕೊಳ್ಳುವ ಇವರನ್ನು ಕರ್ನಾಟಕದವರು ಎನ್ನಲು ನಾಚಿಕೆಯಾಗುತ್ತದೆ. ಯಾವ ಪುರುಷಾರ್ಥಕ್ಕೆ ಇವರಿಗೆ ಮಂತ್ರಿಗಿರಿ?” ಎಂದು ಹೇಳಿದೆ.

ಇದನ್ನೂ ಓದಿ: ಕೊರೊನಾ ಹೆಸರಲ್ಲಿ ತಬ್ಲೀಘಿಗಳ ಅವಹೇಳನ: ಇಂದು ರಾತ್ರಿ ಕ್ಷಮೆ ಕೇಳಲಿರುವ ನ್ಯೂಸ್‌ 18 ಕನ್ನಡ!

“ಫಾರ್ಮಾಸೂಟಿಕಲ್ ಮಂತ್ರಿಯಾಗಿ ರಾಜ್ಯಕ್ಕೆ ರೆಮಿಡಿಸಿವಿರ್, ಲಸಿಕೆ ಹಾಗೂ ಅಂಪೊಟರಿಸನ್ ಹಂಚಿಕೆಯಲ್ಲಿ ನ್ಯಾಯ ಸಲ್ಲಿಸದ ಸದಾನಂದ ಗೌಡರು ರಸಗೊಬ್ಬರ ಸಚಿವರಾಗಿಯೂ ನಮ್ಮ ರೈತರಿಗೆ ಗೊಬ್ಬರ ಒದಗಿಸಲಾಗಲಿಲ್ಲ” ಎಂದು ಕಾಂಗ್ರೆಸ್‌ ಹೇಳಿದೆ.

“ಸದಾನಂದ ಗೌಡ ಅವರೇ, ಎಲ್ಲವೂ ಪಿಎಂ ಕಚೇರಿಯಲ್ಲಿ ನಿರ್ವಹಣೆಯಾಗುತ್ತಿದೆ, ನಿಮ್ಮ ಕೈಯಲ್ಲಿ ಏನೂ ಇಲ್ಲ ಎನ್ನುವ ಸತ್ಯವನ್ನಾದರೂ ಹೇಳಿಬಿಡಿ” ಎಂದು ಕಾಂಗ್ರೆಸ್ ಕಿಡಿ ಕಾರಿದೆ.

“ಬಿಜೆಪಿಯ ಆಡಳಿತದಲ್ಲಿ ರಾಜ್ಯವು ‘ನತದೃಷ್ಟ ಕರ್ನಾಟಕ’ವಾಗಿದೆ. ಕರೋನಾ ಸೋಂಕಿತರಿಗೆ ಆಕ್ಸಿಜನ್ ಕೊಡಲಿಲ್ಲ, ಬೆಡ್ ಒದಗಿಸಲಿಲ್ಲ, ರೆಮಿಡಿಸಿವಿರ್ ನೀಡಲಿಲ್ಲ, ಅಂಪೊಟರಿಸನ್ ಇಲ್ಲ, ಚಿಕಿತ್ಸೆ ಇಲ್ಲವೇ ಇಲ್ಲ, ಸಮರ್ಪಕ ಆರ್ಥಿಕ ಪ್ಯಾಕೇಜ್ ಇಲ್ಲ ಈಗ ಮುಂಗಾರಿನಲ್ಲಿ ರೈತರಿಗೆ ಗೊಬ್ಬರ ಕೊಡುತ್ತಿಲ್ಲ, ಬಿತ್ತನೆ ಬೀಜ ಇಲ್ಲವೇ ಇಲ್ಲ” ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ: ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...